ರಿಲಯನ್ಸ್ ಫೌಂಡೇಶನ್ ನಿಂದ 5 ಸಾವಿರ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ – ಪ್ರತಿಯೊಬ್ಬರಿಗೂ ಸಿಗಲಿದೆ ತಲಾ ಎರಡು ಲಕ್ಷ ರೂಪಾಯಿ..!!

ರಿಲಯನ್ಸ್ ಫೌಂಡೇಶನ್ ನಿಂದ 5 ಸಾವಿರ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ – ಪ್ರತಿಯೊಬ್ಬರಿಗೂ ಸಿಗಲಿದೆ ತಲಾ ಎರಡು ಲಕ್ಷ ರೂಪಾಯಿ..!!

ನ್ಯೂಸ್ ಆ್ಯರೋ‌ : 2022-23ನೇ ಸಾಲಿನ ರಿಲಯನ್ಸ್ ಫೌಂಡೇಶನ್ ಪದವಿ ಪೂರ್ವ ವಿದ್ಯಾರ್ಥಿ ವೇತನಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳ ಪಟ್ಟಿ ಬಿಡುಗಡೆ ಮಾಡಲಾಗಿದೆ. ಈ ವಿದ್ಯಾರ್ಥಿ ವೇತನಕ್ಕೆ 27 ರಾಜ್ಯಗಳು ಮತ್ತು ನಾಲ್ಕು ಕೇಂದ್ರಾಡಳಿತ ಪ್ರದೇಶಗಳಿಂದ ಒಟ್ಟು 5 ಸಾವಿರ ವಿದ್ಯಾರ್ಥಿಗಳನ್ನು ಆಯ್ಕೆಯಾಗಿದ್ದಾರೆ.

ಪ್ರಸ್ತುತ ಪ್ರಥಮ ವರ್ಷದ ಪದವಿ ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಲಾಗಿದ್ದು, ಅವರಿಗೆ 2 ಲಕ್ಷ ರೂ.ವರೆಗೆ ಸ್ಕಾಲರ್‌ಶಿಪ್ ಸಿಗಲಿದೆ. 2022-23ನೇ ಸಾಲಿನಲ್ಲಿ 4,984 ಕ್ಕೂ ಹೆಚ್ಚು ಶಿಕ್ಷಣ ಸಂಸ್ಥೆಗಳಲ್ಲಿ ಅಧ್ಯಯನ ಮಾಡುತ್ತಿರುವ ಸುಮಾರು 40,000 ವಿದ್ಯಾರ್ಥಿಗಳ ಅರ್ಜಿಸಲ್ಲಿಸಿದ್ದು, ಇದರಲ್ಲಿ 5,000 ವಿದ್ಯಾರ್ಥಿಗಳನ್ನು ಆಯ್ಕೆ ಮಾಡಲಾಗಿದೆ. ಅದರಲ್ಲಿ 51% ಹುಡುಗಿಯರೇ ಇದ್ದಾರೆ.

ಈ ಕುರಿತು ಮಾಹಿತಿ ನೀಡಿರುವ ರಿಲಯನ್ಸ್ ಫೌಂಡೇಶನ್ ಸಿಇಒ ಶ್ರೀ ಜಗನ್ನಾಥ ಕುಮಾರ್, “ಉತ್ತಮ ಶಿಕ್ಷಣವನ್ನು ಪಡೆಯುವ ಯುವ ಜನರ ಕನಸಿಗೆ ರಿಲಯನ್ಸ್ ಫೌಂಡೇಶನ್ ವಿದ್ಯಾರ್ಥಿ ವೇತನವು ರೆಕ್ಕೆಗಳನ್ನು ನೀಡಲಿದೆ. ವಿವಿಧ ಅಧ್ಯಯನ ವಿಭಾಗಗಳಿಂದ, ಭಾರತದ ಬಹುತೇಕ ಎಲ್ಲಾ ರಾಜ್ಯಗಳಿಂದ ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ. ಆಯ್ಕೆಯಾದ ಪ್ರತಿಯೊಬ್ಬರನ್ನು ಅಭಿನಂದಿಸುತ್ತೇವೆ ಮತ್ತು ಅವರು ಭಾರತದ ಪ್ರಗತಿಗೆ ಕೊಡುಗೆ ನೀಡುವುದರೊಂದಿಗೆ ತಮಗಾಗಿ ಶಕ್ತವಾದ ಭವಿಷ್ಯವನ್ನು ನಿರ್ಮಿಸಿಕೊಳ್ಳುತ್ತಾರೆ ಎಂಬ ವಿಶ್ವಾಸವಿದೆ” ಎಂದಿದ್ದಾರೆ.

ಈ ಆಯ್ಕೆ ಪ್ರಕ್ರಿಯೆ ಸಾಮರ್ಥ್ಯ ಪರೀಕ್ಷೆ, 12ನೇ ತರಗತಿ ಅಂಕಗಳು ಮತ್ತು ಇತರ ಅರ್ಹತಾ ಮಾನದಂಡಗಳನ್ನು ಒಳಗೊಂಡಿವೆ. 99 ವಿಶೇಷ ಚೇತನ ವಿದ್ಯಾರ್ಥಿಗಳನ್ನು ವಿದ್ಯಾರ್ಥಿವೇತನಕ್ಕಾಗಿ ಆಯ್ಕೆ ಮಾಡಿರುವುದು ವಿಶೇಷ.

ಫಲಿತಾಂಶ ಹೀಗೆ ನೋಡಿ

ರಿಲಯನ್ಸ್ ಫೌಂಡೇಶನ್ ಮುಂದಿನ 10 ವರ್ಷಗಳಲ್ಲಿ 50,000 ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನವನ್ನು ನೀಡುವುದಾಗಿ ಘೋಷಿಸಿದೆ. ರಿಲಯನ್ಸ್ ಫೌಂಡೇಶನ್ ಪದವಿ ಪೂರ್ವ ವಿದ್ಯಾರ್ಥಿ ವೇತನಕ್ಕೆ ಡಿಸೆಂಬರ್ ನಿಂದ ಫೆಬ್ರವರಿ ವರೆಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಿತ್ತು. ಫಲಿತಾಂಶವನ್ನು ತಿಳಿಯಲು www.reliancefoundation.org ಗೆ ಭೇಟಿ ನೀಡಬಹುದು.

2022-23ಕ್ಕೆ ಆಯ್ಕೆಯಾದ ರಿಲಯನ್ಸ್ ಫೌಂಡೇಶನ್ ಸ್ನಾತಕ್ಕೋತ್ತರ ವಿದ್ಯಾರ್ಥಿವೇತನ ಆಯ್ಕೆ ಪಟ್ಟಿಯನ್ನು ಜುಲೈನಲ್ಲಿ ಪ್ರಕಟಿಸಲಾಗುವುದು. ಪದವಿ ವಿದ್ಯಾರ್ಥಿ ವೇತನದ 2023-24 ಸಾಲಿನ ಅರ್ಜಿಗಳನ್ನು ಮುಂಬರುವ ತಿಂಗಳುಗಳಲ್ಲಿ ನೀಡಲಾಗುವುದು ಎಂದು ಪ್ರಕಟಣೆ ತಿಳಿಸಿದೆ.

Related post

ಪ್ರೇಯಸಿ ನಿಮ್ಮನ್ನು ನಿರ್ಲಕ್ಷಿಸುತ್ತಿದ್ದಾಳಾ? – ಈ ತಪ್ಪುಗಳು ನಿಮ್ಮಲ್ಲೂ ಇರಬಹುದು ಗಮನಿಸಿ…

ಪ್ರೇಯಸಿ ನಿಮ್ಮನ್ನು ನಿರ್ಲಕ್ಷಿಸುತ್ತಿದ್ದಾಳಾ? – ಈ ತಪ್ಪುಗಳು ನಿಮ್ಮಲ್ಲೂ ಇರಬಹುದು ಗಮನಿಸಿ…

ನ್ಯೂಸ್ ಆ್ಯರೋ‌ : ನಾವು ಪ್ರೀತಿಸುವ ಜೀವಗಳು ನಮ್ಮನ್ನು ದೂರ ಮಾಡಿದರೆ, ನಮ್ಮನ್ನು ನಿರ್ಲಕ್ಷ್ಯ ಮಾಡಿದರೆ ಅದರಿಂದಾಗುವ ನೋವು ಅಪಾರ. ಅದರಲ್ಲೂ ಪ್ರೇಯಸಿ ದೂರ ಮಾಡುತ್ತಿದ್ದರೆ ಅದನ್ನು ಸಹಿಸಲು…
ಮಲಗುವ ವಿಚಾರಕ್ಕೆ ಮಗಳಿಗೆ 25 ಬಾರಿ ಚೂರಿಯಿಂದ ಇರಿದು ಕೊಂದ ಅಪ್ಪ – ಸಿಸಿಟಿವಿಯಲ್ಲಿ ಘೋರ ಕೃತ್ಯ ಸೆರೆ, ವಿಡಿಯೋ ವೈರಲ್…!!

ಮಲಗುವ ವಿಚಾರಕ್ಕೆ ಮಗಳಿಗೆ 25 ಬಾರಿ ಚೂರಿಯಿಂದ ಇರಿದು ಕೊಂದ ಅಪ್ಪ…

ನ್ಯೂಸ್ ಆ್ಯರೋ : ಮಲಗುವ ವಿಚಾರಕ್ಕೆ ಉಂಟಾದ ಜಗಳದ ಹಿನ್ನೆಲೆಯಲ್ಲಿ ಸೂರತ್‌ನ ವ್ಯಕ್ತಿಯೊಬ್ಬ ತನ್ನ ಮಗಳಿಗೆ 25 ಬಾರಿ ಇರಿದು ಕೊಂದಿರುವ ಘಟನೆ ನಡೆದಿದೆ. ಇಡೀ ಕೃತ್ಯ ಸಿಸಿಟಿವಿಯಲ್ಲಿ…
ಕೊರಗಜ್ಜ ಮೂಲಸ್ಥಾನ ಕುತ್ತಾರಿಗೆ ಭೇಟಿ ನೀಡಿದ ರಚಿತಾ ರಾಮ್ – ಕೊರಗಜ್ಜನ ಕಾರಣಿಕದಿಂದಾಗಿಯೇ ಇಲ್ಲಿಗೆ ಬಂದೆ ಎಂದ ಗುಳಿಕೆನ್ನೆ ಬೆಡಗಿ..

ಕೊರಗಜ್ಜ ಮೂಲಸ್ಥಾನ ಕುತ್ತಾರಿಗೆ ಭೇಟಿ ನೀಡಿದ ರಚಿತಾ ರಾಮ್ – ಕೊರಗಜ್ಜನ…

ನ್ಯೂಸ್ ಆ್ಯರೋ : ಸ್ಯಾಂಡಲ್ ವುಡ್ ಬೆಡಗಿ, ಗುಳಿಕೆನ್ನೆ ಚೆಲುವೆ ರಚಿತಾ ರಾಮ್ ಅವರು ಬುಧವಾರ ಮಂಗಳೂರು ಸಮೀಪದ ಕುತ್ತಾರು ದೆಕ್ಕಾಡಿನ ಕೊರಗಜ್ಜ ದೈವದ ಆದಿ ಸ್ಥಳಕ್ಕೆ ಭೇಟಿ…

Leave a Reply

Your email address will not be published. Required fields are marked *