ನೀಟ್ ಪರೀಕ್ಷೆ ವಿರುದ್ಧ ಗುಡುಗಿದ ತಮಿಳುನಾಡು ಸಿಎಂ ಸ್ಟಾಲಿನ್ – ಪರೀಕ್ಷೆಯನ್ನೇ ತೆಗೆದು ಹಾಕುವುದಾಗಿ ವಿದ್ಯಾರ್ಥಿಗಳಿಗೆ ಭರವಸೆ

ನೀಟ್ ಪರೀಕ್ಷೆ ವಿರುದ್ಧ ಗುಡುಗಿದ ತಮಿಳುನಾಡು ಸಿಎಂ ಸ್ಟಾಲಿನ್ – ಪರೀಕ್ಷೆಯನ್ನೇ ತೆಗೆದು ಹಾಕುವುದಾಗಿ ವಿದ್ಯಾರ್ಥಿಗಳಿಗೆ ಭರವಸೆ

ನ್ಯೂಸ್ ಆ್ಯರೋ‌ : ವೈದ್ಯಕೀಯ ಅಧ್ಯಯನ ಪ್ರವೇಶಕ್ಕೆ ನಡೆಸುವ ನೀಟ್ ಪರೀಕ್ಷೆಯ ವಿರುದ್ಧ ಹಿಂದಿನಿಂದಲೂ ಆಕ್ರೋಶ ವ್ಯಕ್ತಪಡಿಸುತ್ತಿದ್ದ ತಮಿಳುನಾಡು ಮತ್ತೊಮ್ಮೆ ಈ ವಿಚಾರ ಪ್ರಸ್ತಾವಿಸಿದೆ. ವಿದ್ಯಾರ್ಥಿಗಳ ಗುರಿಗೆ ತೊಡಕಾಗಿರುವ ನೀಟ್ ಪರೀಕ್ಷೆಯನ್ನು ಖಂಡಿತವಾಗಿಯೂ ತೆಗೆದು ಹಾಕುತ್ತೇವೆ ಎಂದು ಅಲ್ಲಿನ ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಭರವಸೆ ನೀಡಿದ್ದಾರೆ.

ಕಾರಣವೇನು?

ಕ್ರೋಮ್ ಪೇಟ್ ನಲ್ಲಿ ನೀಟ್ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡ ಹಿನ್ನೆಲೆಯಲ್ಲಿ ಅವರು ಈ ರೀತಿ ಹೇಳಿಕೆ ನೀಡಿದ್ದಾರೆ. ಯಾರೂ ಕೂಡ ಯಾವುದೇ ಕಾರಣಕ್ಕೂ ಆತ್ಮಹತ್ಯೆ ಮಾಡಿಕೊಳ್ಳಬಾರದು ಎಂದು ವಿದ್ಯಾರ್ಥಿಗಳ ಬಳಿ ಸ್ಟಾಲಿನ್ ಮನವಿ ಮಾಡಿದ್ದಾರೆ.

ನಿಮ್ಮ ಗುರಿಗೆ ತೊಡಕಾಗಿರುವ ನೀಟ್ ಪರೀಕ್ಷೆಯನ್ನು ತೆಗೆದು ಹಾಕುತ್ತೇವೆ. ತಮಿಳುನಾಡು ಸರಕಾರ ಈ ಬಗ್ಗೆ ಕಾನೂನು ಕ್ರಮ ತೆಗೆದುಕೊಳ್ಳುವ ನಿಟ್ಟಿನಲ್ಲಿ ಕಾರ್ಯ ಪ್ರವೃತ್ತವಾಗಿದೆ ಎಂದು ಹೇಳಿದ್ದಾರೆ.

ನೀಟ್ ಅಭ್ಯರ್ಥಿ ಜಗದೀಶ್ವರನ್ ಮತ್ತು ಆತನ ತಂದೆ ಸೆಲ್ವಶೇಖರ್ ಆತ್ಮಹತ್ಯೆ ಮಾಡಿಕೊಂಡಿರುವುದು ಕೇಳಿ ಆಘಾತವಾಯಿತು. ವೈದ್ಯನಾಗುವ ಕನಸು ಕಂಡಿದ್ದ ಬುದ್ದಿವಂತ ಹುಡುಗ ನೀಟ್‍ನಿಂದ ಆತ್ಮಹತ್ಯೆ ಮಾಡಿಕೊಂಡವರ ಸಾಲಿಗೆ ಸೇರಿದ್ದು ದುರಂತ ಎಂದು ವಿಷಾದ ವ್ಯಕ್ತಪಡಿಸಿದ್ದಾರೆ.

Related post

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ : ಎಲ್ಲಾ ಕಛೇರಿಗಳಿಗೂ ಬೀಳುತ್ತೆ ಬೀಗ..!

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ…

ನ್ಯೂಸ್ ಆ್ಯರೋ : ಇನ್ನೆರಡೇ ದಿನಗಳು ಅಂದರೆ ಏಪ್ರಿಲ್ 26ರಂದು ಲೋಕಸಭಾ ಚುನಾವಣೆಗೆ ಮೊದಲ ಹಂತದ ಮತದಾನ ನಡೆಯಲಿದ್ದು, ಅಂದು ಎಲ್ಲಾ ಕಾರ್ಮಿಕರು, ಅರ್ಹ ಮತದಾರರು ಮತದಾನ ಮಾಡುವ…
ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮಲ್ಲಿ ಇಂದು ಚುರುಕುತನವನ್ನು ನೋಡಬಹುದು. ನಿಮ್ಮ ಆರೋಗ್ಯವು ಇಂದು ನಿಮ್ಮನ್ನು ಸಂಪೂರ್ಣವಾಗಿ ಬೆಂಬಲಿಸುತ್ತದೆ. ನಿಮ್ಮ ಹೂಡಿಕೆಗಳು ಬಗ್ಗೆ ನಿಮ್ಮ ಭವಿಷ್ಯದ ಗುರಿಗಳ ಬಗ್ಗೆ ರಹಸ್ಯಮಯವಾಗಿರಿ. ಮನೆ ಅಥವಾ ಸಾಮಾಜಿಕ…
ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮ ಕೋಪ ಕಡ್ಡಿಯನ್ನು ಗುಡ್ಡ ಮಾಡಬಹುದು-ಇದು ನಿಮ್ಮ ಕುಟುಂಬದ ಸದಸ್ಯರ ಅಸಮಾಧಾನಕ್ಕೆ ಕಾರಣವಾಗುತ್ತದೆ. ಕೋಪವನ್ನು ನಿಯಂತ್ರಣದಲ್ಲಿಡುವುದನ್ನು ಕಲಿತ ಆ ಮಹಾನ್ ಆತ್ಮಗಳೇ ಅದೃಷ್ಟಶಾಲಿಗಳು. ನಿಮ್ಮ ಕೋಪ ನಿಮ್ಮನ್ನು ಸುಡುವ…

Leave a Reply

Your email address will not be published. Required fields are marked *