ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರದಿಂದ ಗುಡ್‌ ನ್ಯೂಸ್ – ಇನ್ಮುಂದೆ ಪಿಯುಸಿ, ಪದವಿ, ಇಂಜಿನಿಯರಿಂಗ್ ಕಾಲೇಜಿಗೆ ಉಚಿತ ಪ್ರವೇಶ

ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರದಿಂದ ಗುಡ್‌ ನ್ಯೂಸ್ – ಇನ್ಮುಂದೆ ಪಿಯುಸಿ, ಪದವಿ, ಇಂಜಿನಿಯರಿಂಗ್ ಕಾಲೇಜಿಗೆ ಉಚಿತ ಪ್ರವೇಶ

ನ್ಯೂಸ್ ಆ್ಯರೋ : ಸರ್ಕಾರಗಳು ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದವರಿಗೆ ಹೊಸ ಯೋಜನೆಗಳನ್ನು ಪರಿಚಯಿಸುತ್ತಲೇ ಬರುತ್ತಿದ್ದು, ಇದೀಗ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ ಮತ್ತೊಂದು ಯೋಜನೆಯನ್ನು ಜಾರಿ ಮಾಡಿದೆ. ಈ ಮೂಲಕ ರಾಜ್ಯದ ಪರಿಶಿಷ್ಟ ಜಾತಿಯ ಎಲ್ಲಾ ಅರ್ಹ ವಿದ್ಯಾರ್ಥಿಗಳಿಗೆ ಆರ್ಥಿಕ ನೆರವು ನೀಡುವ ಉದ್ದೇಶದಿಂದ ಸಮಾಜ ಕಲ್ಯಾಣ ಇಲಾಖೆಯಿಂದ ಈ ಯೋಜನೆಯನ್ನು ಜಾರಿಗೆ ಮಾಡಲಾಗಿದೆ.

ರಾಜ್ಯದ ಮೆಟ್ರಿಕ್ ನಂತರದ ಕೋರ್ಸ್ ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಹಾಗೂ ವಾರ್ಷಿಕ ಆದಾಯ ಮಿತಿ 2.5 ಲಕ್ಷ ಒಳಗಿರುವ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ ಕೇಂದ್ರ ಪುರಸ್ಕೃತ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನ ನೀಡಲಾಗುತ್ತಿದೆ. ಮುಖ್ಯವಾಗಿ ಎಲ್ಲಾ ಅರ್ಹ ಅರ್ಜಿದಾರರಿಗೆ ಮಂಜೂರು ಮಾಡಲಾಗುವುದು ಎಂದು ಹೇಳಲಾಗಿದೆ.

ರಾಜ್ಯದ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗಾಗಿ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಆರ್ಥಿಕ ನೆರವು ನೀಡಲು ವಿದ್ಯಾರ್ಥಿಗಳಿಗೆ ಉಚಿತ ಪ್ರವೇಶ ಕಾಲೇಜುಗಳಿಗೆ ಮತ್ತು 2.5 ಲಕ್ಷಕ್ಕಿಂತ ಕಡಿಮೆ ಆದಾಯ ಹೊಂದಿರುವ ಕುಟುಂಬದ ವಿದ್ಯಾರ್ಥಿಗೆ ಸಮಾಜ ಕಲ್ಯಾಣ ಇಲಾಖೆಯಿಂದ ಹೊಸ ವಿದ್ಯಾರ್ಥಿ ವೇತನ ನೀಡಲು ನಿರ್ಧರಿಸಿದ್ದು ಇದೀಗ ಯೋಜನೆಯ ಬಿಡುಗಡೆಗೆ ಸರ್ಕಾರ ಆದೇಶ ನೀಡಿದೆ.

ಪಿಯುಸಿ, ಪದವಿ, ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಉಚಿತ ಪ್ರವೇಶ?

ಕರ್ನಾಟಕ ರಾಜ್ಯ ಸಮಾಜ ಕಲ್ಯಾಣ ಇಲಾಖೆಯು ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ ಮತ್ತಷ್ಟು ಆರ್ಥಿಕ ನೆರವು ನೀಡಲು ಮೆಟ್ರಿಕ್ ನಂತರದ ವಿದ್ಯಾಭ್ಯಾಸಕ್ಕೆ ಉಚಿತ ಪ್ರವೇಶ ಮತ್ತು ಇಲಾಖೆಯಿಂದ ವಿದ್ಯಾರ್ಥಿ ವೇತನ ನೀಡಲು ನಿರ್ಧರಿಸಿದೆ.

ಅರ್ಜಿ ಸಲ್ಲಿಕೆಗೂ ಮುನ್ನಾ ತಿಳಿದಿರಬೇಕಾದ ವಿಷಯಗಳು:

ವಿದ್ಯಾರ್ಥಿಯ ಕುಟುಂಬದ ವಾರ್ಷಿಕ ಆದಾಯ 2.5 ಲಕ್ಷದ ಒಳಗಿರುವ ಪರಿಶಿಷ್ಟ ಜಾತಿಯ ಎಲ್ಲ ವಿದ್ಯಾರ್ಥಿಗಳಿಗೆ ಎಲ್ಲಾ ಮೆಟ್ರಿಕ್ ನಂತರದ ಕೋರ್ಸ್ ಗಳಿಗೆ ಉಚಿತ ಪ್ರವೇಶವನ್ನು ನೀಡಲಾಗುತ್ತಿದೆ
ಸರ್ಕಾರವು ಆಯಾ ಕೋರ್ಸಿಗೆ ನಿಗದಿಪಡಿಸಿದ್ದ ದರಗಳಲ್ಲಿ ಶುಲ್ಕವನ್ನು ಇಲಾಖೆಯಿಂದ ವಿದ್ಯಾರ್ಥಿಗಳಿಗೆ ಮರುಪಾವತಿ ಮಾಡಲಾಗುವುದು. ಯಾವುದೇ ಶಿಕ್ಷಣ ಸಂಸ್ಥೆಯು ಪರಿಶಿಷ್ಟ ಜ್ಯೋತಿ ವಿದ್ಯಾರ್ಥಿಯಿಂದ ಆರಂಭದಲ್ಲಿಯೇ ಶುಲ್ಕ ಪಾವತಿ ಮಾಡುವಂತೆ ಒತ್ತಾಯ ಮಾಡತಕ್ಕದ್ದಲ್ಲ ಎಂಬ ಹೊಸ ನಿಯಮವನ್ನು ತರಲಾಗಿದೆ.

ಅರ್ಜಿ ಸಲ್ಲಿಸಿ ಯೋಜನೆಯ ಪ್ರಯೋಜನ ಪಡೆದುಕೊಳ್ಳಿ:

ಉಚಿತ ಕಾಲೇಜು ಪ್ರವೇಶ ಪಡೆಯಲು ವಿದ್ಯಾರ್ಥಿಯು ಮೆಟ್ರಿಕ್ ನಂತರದಲ್ಲಿ ಅರ್ಜಿಯನ್ನು ಕಡ್ಡಾಯವಾಗಿ ಸಲ್ಲಿಸಬೇಕು. ಅಂತಹ ವಿದ್ಯಾರ್ಥಿಗಳಿಗೆ ಮಾತ್ರ ಯಾವುದೇ ಕಾಲೇಜಿನಲ್ಲಿಯೂ ಕೂಡ ಉಚಿತ ಪ್ರವೇಶವನ್ನು ನೀಡಲಾಗುತ್ತದೆ ಎಂದು ತಿಳಿಸಲಾಗಿದೆ. https://ssp.postmatric.karnataka.gov.in/2324_SA/signin.aspx ಲಿಂಕ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ಬೇಕಾಗಿರುವ ದಾಖಲೆಗಳು:

ವಿದ್ಯಾರ್ಥಿಯ ಆಧಾರ್ ಸಂಖ್ಯೆ
ವಿದ್ಯಾರ್ಥಿಯ ಮೊಬೈಲ್ ಸಂಖ್ಯೆ ಮತ್ತು ಇಮೇಲ್ ಐಡಿ
ವಿದ್ಯಾರ್ಥಿಯ ಆದಾಯ ಮತ್ತು ಜಾತಿ ಪ್ರಮಾಣ ಪತ್ರ
ವಿದ್ಯಾರ್ಥಿಯ ಎಸ್ ಎಸ್ ಎಲ್ ಸಿ ಅಂಕಪಟ್ಟಿ
ಯೂನಿವರ್ಸಿಟಿ ಅಥವಾ ಮಂಡಳಿ ನೋಂದಣಿ ಸಂಖ್ಯೆ
ವಿದ್ಯಾರ್ಥಿಯ ಭಾವಚಿತ್ರ ಮತ್ತು ಇನ್ನಿತರ ಕೆಲವು ದಾಖಲೆಗಳನ್ನು ಸಲ್ಲಿಸಬೇಕು.

Related post

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ : ಎಲ್ಲಾ ಕಛೇರಿಗಳಿಗೂ ಬೀಳುತ್ತೆ ಬೀಗ..!

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ…

ನ್ಯೂಸ್ ಆ್ಯರೋ : ಇನ್ನೆರಡೇ ದಿನಗಳು ಅಂದರೆ ಏಪ್ರಿಲ್ 26ರಂದು ಲೋಕಸಭಾ ಚುನಾವಣೆಗೆ ಮೊದಲ ಹಂತದ ಮತದಾನ ನಡೆಯಲಿದ್ದು, ಅಂದು ಎಲ್ಲಾ ಕಾರ್ಮಿಕರು, ಅರ್ಹ ಮತದಾರರು ಮತದಾನ ಮಾಡುವ…
ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮಲ್ಲಿ ಇಂದು ಚುರುಕುತನವನ್ನು ನೋಡಬಹುದು. ನಿಮ್ಮ ಆರೋಗ್ಯವು ಇಂದು ನಿಮ್ಮನ್ನು ಸಂಪೂರ್ಣವಾಗಿ ಬೆಂಬಲಿಸುತ್ತದೆ. ನಿಮ್ಮ ಹೂಡಿಕೆಗಳು ಬಗ್ಗೆ ನಿಮ್ಮ ಭವಿಷ್ಯದ ಗುರಿಗಳ ಬಗ್ಗೆ ರಹಸ್ಯಮಯವಾಗಿರಿ. ಮನೆ ಅಥವಾ ಸಾಮಾಜಿಕ…
ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮ ಕೋಪ ಕಡ್ಡಿಯನ್ನು ಗುಡ್ಡ ಮಾಡಬಹುದು-ಇದು ನಿಮ್ಮ ಕುಟುಂಬದ ಸದಸ್ಯರ ಅಸಮಾಧಾನಕ್ಕೆ ಕಾರಣವಾಗುತ್ತದೆ. ಕೋಪವನ್ನು ನಿಯಂತ್ರಣದಲ್ಲಿಡುವುದನ್ನು ಕಲಿತ ಆ ಮಹಾನ್ ಆತ್ಮಗಳೇ ಅದೃಷ್ಟಶಾಲಿಗಳು. ನಿಮ್ಮ ಕೋಪ ನಿಮ್ಮನ್ನು ಸುಡುವ…

Leave a Reply

Your email address will not be published. Required fields are marked *