KPSC ಪರೀಕ್ಷೆ ವೇಳೆ ವಿವಾಹಿತ ಮಹಿಳೆಯರ ತಾಳಿ, ಕಾಲುಂಗುರ ತೆಗೆಸಿದ ಅಧಿಕಾರಿಗಳು – ದುರ್ನಡತೆಯನ್ನು ಕಟುವಾಗಿ ಟೀಕಿಸಿದ ಜೆಡಿಎಸ್..!!

KPSC ಪರೀಕ್ಷೆ ವೇಳೆ ವಿವಾಹಿತ ಮಹಿಳೆಯರ ತಾಳಿ, ಕಾಲುಂಗುರ ತೆಗೆಸಿದ ಅಧಿಕಾರಿಗಳು – ದುರ್ನಡತೆಯನ್ನು ಕಟುವಾಗಿ ಟೀಕಿಸಿದ ಜೆಡಿಎಸ್..!!

ನ್ಯೂಸ್ ಆ್ಯರೋ : ಕಲಬುರಗಿಯಲ್ಲಿ ಭಾನುವಾರ ನಡೆದ ಕೆ‌ಪಿ‌ಎಸ್‌ಸಿಯ ಗ್ರೂಪ್ ಸಿ ಹುದ್ದೆಗಳ ಪ್ರವೇಶ ಪರೀಕ್ಷೆಯ ವೇಳೆ ವಿವಾಹಿತ ಮಹಿಳಾ ಅಭ್ಯರ್ಥಿಗಳ ಮಂಗಳಸೂತ್ರ, ಕಾಲುಂಗುರ ತೆಗೆದಿದ್ದು ದುರ್ನಡತೆ ಪರಮಾವಧಿ ಎಂದು ಜೆಡಿಎಸ್ ಆಕ್ರೋಶ ವ್ಯಕ್ತಪಡಿಸಿದೆ.

ಕಲಬುರಗಿಯಲ್ಲಿ ಭಾನುವಾರ ನಡೆದ ಕೆ‌ಪಿ‌ಎಸ್‌ಸಿ ಪರೀಕ್ಷೆಯಲ್ಲಿ ಸ್ತ್ರೀಯರಿಗೆ ಘೋರ ಅಪಮಾನ ಎಸಗಿರುವುದು ಎಷ್ಟರ ಮಟ್ಟಿಗೆ ಸರಿ ಎಂದು ಮಾಧ್ಯಮ ಪ್ರಕಟಣೆಯ ಮೂಲಕ ಪ್ರಶ್ನಿಸಿರುವ ಜೆಡಿಎಸ್, ಕಾಂಗ್ರೆಸ್ ಸರ್ಕಾರವನ್ನು ಘೋರವಾಗಿ ಟೀಕಿಸಿದೆ.

ಕಾಂಗ್ರೆಸ್ ಸರ್ಕಾರವು ಒಂದೆಡೆ ಗೃಹಲಕ್ಷ್ಮಿ ಯೋಜನೆಗೆ ಜಾರಿ ತಂದಿದ್ದು, ಅದೇ ಗೃಹಲಕ್ಷ್ಮಿಯರ ಸೌಭಾಗ್ಯ ಮತ್ತು ಸಾಂಸ್ಕೃತಿಕ, ಧಾರ್ಮಿಕ ನಂಬಿಕೆಗಳಿಗೆ ಧಕ್ಕೆ ಉಂಟು ಮಾಡುತ್ತಿದೆ. ಕರ್ನಾಟಕ ಮಾದರಿ ಎಂದರೆ ತಾಯಂದಿರ ಮುತ್ತೈದೆತನಕ್ಕೇ ಕುತ್ತು ತರುವುದಾ? ಎಂದು ಪ್ರಶ್ನಿಸುವ ಮೂಲಕ ನಮ್ಮ ಸಂಸ್ಕೃತಿ, ಪರಂಪರೆಯನ್ನು ನಿರ್ನಾಮ ಮಾಡುವ ಕೃತ್ಯ ಎಗ್ಗಿಲ್ಲದೆ ನಡೆಯುತ್ತಿದೆ ಎಂದು ಟೀಕಿಸಿದೆ.

ಗ್ರೂಪ್ ಸಿ ಹುದ್ದೆಗಳ ಪ್ರವೇಶ ಪರೀಕ್ಷೆಯ ವೇಳೆ ಮಹಿಳೆಯರ ಮಂಗಳಸೂತ್ರ, ಕಾಲುಂಗುರ ತೆಗೆಸಿರುವ ಘಟನೆ ಅಕ್ಷಮ್ಯ. ಇದು ಸ್ತ್ರೀಯರ ಹಕ್ಕುಗಳನ್ನು ಹತ್ತಿಕ್ಕುವ ಪ್ರಯತ್ನ. ಇಷ್ಟಕ್ಕೂ ಪರೀಕ್ಷಾ ಸಿಬ್ಬಂದಿಗೆ ಮಹಿಳಾ ಅಭ್ಯರ್ಥಿಗಳ ತಾಳಿ, ಕಾಲುಂಗುರ ತೆಗೆಸುವಂತೆ ಆದೇಶ ಕೊಟ್ಟವರು ಯಾರು? ಅವರಿಗೆ ಅಷ್ಟೊಂದು ಸೂಕ್ಷ್ಮ ಪ್ರಜ್ಞೆಯ ಕೊರತೆ ಇದೆಯೇ? ಪರೀಕ್ಷೆಗೆ ಮೊದಲೇ ಆ ಮಹಿಳೆಯರಿಗೆ ಅದೆಷ್ಟು ಮಾನಸಿಕ ಆಘಾತ ಉಂಟಾಗುತ್ತದೆ ಎಂಬ ಅರಿವು ಬೇಡವೇ? ಎಂದು ಪ್ರಶ್ನಿಸಿದ್ದಾರೆ.

ಈ ಕುರಿತು ಪರೀಕ್ಷಾರ್ಥಿಗಳು, ಪರೀಕ್ಷಾ ನಿಯಮಗಳ ಪಟ್ಟಿಯಲ್ಲಿ ಕಾಲುಂಗುರ, ಮಂಗಳಸೂತ್ರ ತೆಗೆಯಬೇಕು ಎನ್ನುವ ಸೂಚನೆಯೇ ಇರಲಿಲ್ಲ. ಪರೀಕ್ಷಾ ಸಂದರ್ಭದಲ್ಲಿ ಪರೀಕ್ಷಾ ಕೇಂದ್ರಕ್ಕೆ ಬಂದ ವಿವಾಹಿತ ಮಹಿಳಾ ಅಭ್ಯರ್ಥಿಗಳ ಮಂಗಳಸೂತ್ರ, ಕಾಲುಂಗುರವನ್ನು ಬಲವಂತವಾಗಿ ತೆಗೆಸಿದ್ದಾರೆ ಎಂದು ತಿಳಿಸಿದ್ದಾರೆ.

ಕೆ‌ಪಿ‌ಎಸ್‌ಸಿ ಹಾಗೂ ರಾಜ್ಯ ಸರಕಾರ ಕೂಡಲೇ ನೊಂದ ಮಹಿಳೆಯರ ಕ್ಷಮೆ ಯಾಚಿಸಬೇಕು ಹಾಗೂ ಇಂಥ ಆಘಾತಕಾರಿ ಘಟನೆಗೆ ಕಾರಣರಾದ ಅಧಿಕಾರಿಗಳನ್ನು ಕೂಡಲೇ ಅಮಾನತು ಮಾಡಬೇಕು. ಮತ್ತೆಂದೂ ಈ ರೀತಿಯ ಘಟನೆ ಮರುಕಳಿಸದಂತೆ ಎಚ್ಚರಿಕೆ ವಹಿಸಬೇಕು ಎಂದು ಜೆಡಿಎಸ್ ಈ ಮೂಲಕ ಒತ್ತಾಯಿಸಿದೆ.

Related post

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ : ಎಲ್ಲಾ ಕಛೇರಿಗಳಿಗೂ ಬೀಳುತ್ತೆ ಬೀಗ..!

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ…

ನ್ಯೂಸ್ ಆ್ಯರೋ : ಇನ್ನೆರಡೇ ದಿನಗಳು ಅಂದರೆ ಏಪ್ರಿಲ್ 26ರಂದು ಲೋಕಸಭಾ ಚುನಾವಣೆಗೆ ಮೊದಲ ಹಂತದ ಮತದಾನ ನಡೆಯಲಿದ್ದು, ಅಂದು ಎಲ್ಲಾ ಕಾರ್ಮಿಕರು, ಅರ್ಹ ಮತದಾರರು ಮತದಾನ ಮಾಡುವ…
ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮಲ್ಲಿ ಇಂದು ಚುರುಕುತನವನ್ನು ನೋಡಬಹುದು. ನಿಮ್ಮ ಆರೋಗ್ಯವು ಇಂದು ನಿಮ್ಮನ್ನು ಸಂಪೂರ್ಣವಾಗಿ ಬೆಂಬಲಿಸುತ್ತದೆ. ನಿಮ್ಮ ಹೂಡಿಕೆಗಳು ಬಗ್ಗೆ ನಿಮ್ಮ ಭವಿಷ್ಯದ ಗುರಿಗಳ ಬಗ್ಗೆ ರಹಸ್ಯಮಯವಾಗಿರಿ. ಮನೆ ಅಥವಾ ಸಾಮಾಜಿಕ…
ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮ ಕೋಪ ಕಡ್ಡಿಯನ್ನು ಗುಡ್ಡ ಮಾಡಬಹುದು-ಇದು ನಿಮ್ಮ ಕುಟುಂಬದ ಸದಸ್ಯರ ಅಸಮಾಧಾನಕ್ಕೆ ಕಾರಣವಾಗುತ್ತದೆ. ಕೋಪವನ್ನು ನಿಯಂತ್ರಣದಲ್ಲಿಡುವುದನ್ನು ಕಲಿತ ಆ ಮಹಾನ್ ಆತ್ಮಗಳೇ ಅದೃಷ್ಟಶಾಲಿಗಳು. ನಿಮ್ಮ ಕೋಪ ನಿಮ್ಮನ್ನು ಸುಡುವ…

Leave a Reply

Your email address will not be published. Required fields are marked *