ಸೈಟ್ ಖರೀದಿಯಲ್ಲಿ ಮಾಸ್ಟರ್ ಆನಂದ್ ಅವರಿಗೆ 18.50 ಲಕ್ಷ ವಂಚನೆ – ರಿಯಲ್ ಎಸ್ಟೇಟ್ ಸಂಸ್ಥೆ ವಿರುದ್ಧ ದೂರು ದಾಖಲು

ಸೈಟ್ ಖರೀದಿಯಲ್ಲಿ ಮಾಸ್ಟರ್ ಆನಂದ್ ಅವರಿಗೆ 18.50 ಲಕ್ಷ ವಂಚನೆ – ರಿಯಲ್ ಎಸ್ಟೇಟ್ ಸಂಸ್ಥೆ ವಿರುದ್ಧ ದೂರು ದಾಖಲು

ನ್ಯೂಸ್ ಆ್ಯರೋ‌ : ಸ್ಯಾಂಡಲ್ ವುಡ್ ಜನಪ್ರಿಯ ನಟ, ನಿರೂಪಕ ಮಾಸ್ಟರ್ ಆನಂದ್ ಅವರಿಗೆ 18.5 ಲಕ್ಷ ರೂ. ವಂಚಿಸಿರುವ ಪ್ರಕರಣ ಬೆಳಕಿಗೆ ಬಂದಿದೆ. ನಿವೇಶನ ಕೊಡಿಸುವುದಾಗಿ ನಂಬಿಸಿ ಮೋಸ ಮಾಡಲಾಗಿದೆ ಎಂದು ಮಲ್ಟಿ ಲೀಪ್ ವೆಂಚರ್ಸ್ ಕಂಪೆನಿ ವಿರುದ್ಧ ಚಂದ್ರ ಲೇಔಟ್ ಠಾಣೆಯಲ್ಲಿ ಆನಂದ್ ದೂರು ನೀಡಿದ್ದಾರೆ.

ಪ್ರಕರಣದ ಹಿನ್ನೆಲೆ

ಬೆಂಗಳೂರಿನ ಕೊಮ್ಮಘಟ್ಟದ ರಾಮಸಂದ್ರ ಹಳ್ಳಿಯಲ್ಲಿ ರಿಯಲ್ ಎಸ್ಟೇಟ್ ಕಂಪೆನಿ ಮಲ್ಟಿ ವೆಂಚರ್ಸ್ ಲೀಪ್ ಲೇಔಟ್ ನಿರ್ಮಿಸಿತ್ತು. 2021ರಲ್ಲಿ ಆನಂದ್ 200 ಚ.ಮೀ. ಅಳತೆಯ ಸೈಟ್ ಖರೀದಿಸಿದ್ದರು. 70 ಲಕ್ಷ ರೂ.ಗೆ ಒಪ್ಪಂದವಾಗಿತ್ತು. 18.50 ಲಕ್ಷ ರೂ. ಮುಂಗಡ ಪಡೆದು ಕಂಪೆನಿ ಆನಂದ್ ಮತ್ತು ಅವರ ಪತ್ನಿ ಯಶಸ್ವಿನಿ ಹೆಸರಿನಲ್ಲಿ ಖರೀದಿ ಕರಾರು ಪತ್ರ ಮಾಡಿಕೊಟ್ಟಿತ್ತು.

ಈ ನಡುವೆ ಕಂಪೆನಿ ನಿವೇಶನವನ್ನು ಬೇರೆಯವರಿಗೆ ಮಾರಾಟ ಮಾಡಿದೆ. ಈ ಬಗ್ಗೆ ಆನಂದ್ ವಿಚಾರಿಸಿದಾಗ ಸೂಕ್ತವಾಗಿ ಸ್ಪಂದಿಸದ ಕಂಪೆನಿ ಎರಡು ವರ್ಷ ಕಳೆದರೂ ಮುಂಗಡ ಹಣವನ್ನೂ ಪಾವತಿಸಲಿಲ್ಲ. ಹೀಗಾಗಿ ಆನಂದ್ ಠಾಣೆ ಮೆಟ್ಟಿಲೇರಿದ್ದಾರೆ. ಚಂದ್ರ ಲೇಔಟ್ ಪೊಲೀಸರು ಎಫ್.ಐ.ಆರ್. ದಾಖಲಿಸಿದ್ದಾರೆ.

ಸೈಟ್ ಖರೀದಿ ವ್ಯವಹಾರಕ್ಕೆ ಸಂಬಂಧಿಸಿ ಮುಂಗಡ ಹಣ ನೀಡಿ ರಿಜಿಸ್ಟ್ರೇಷನ್ ವೇಳೆ ಪೂರ್ತಿ ಹಣ ಕೊಡುವುದಾಗಿ ಮಾತುಕತೆ ನಡೆದಿದ್ದು, ಆ ಬಗ್ಗೆ ಕರಾರು ಪತ್ರ ಸಹ ಆಗಿತ್ತು ಎಂದು ಆನಂದ್ ಆಪ್ತರು ಹೇಳಿದ್ದಾರೆ.

Related post

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ ಮದುವೆ

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ…

ನ್ಯೂಸ್ ಆರೋ: ಬರೋಬ್ಬರಿ 25 ವರ್ಷಗಳಿಂದ ಪ್ರೀತಿಸುತ್ತಿದ್ದ ಜೋಡಿಯೊಂದು ಮಂತ್ರ ಮಾಂಗಲ್ಯ ಮೂಲಕ ಮದುವೆಯಾಗುವ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಟ್ಟಿರುವ ಅಪರೂಪದ ಘಟನೆ ತುಮಕೂರಲ್ಲಿ ನಡೆದಿದೆ. ಹೌದು ಜನಾಂದೋಲನದಲ್ಲಿ…
ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು! ಏನಿದು ವಿಷಯ?

ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು!…

ನ್ಯೂಸ್ ಆರೋ: ಎಷ್ಟೋ ಬಾರಿ ನಾವು ಈ ಹೊಟೇಲ್ ಗಳಿಗೆ ಹೋದಾಗ, ಅಲ್ಲಿ ಜನರು ವೆಜ್ ಮಂಚೂರಿಯನ್ನು ಆರ್ಡರ್ ಮಾಡಿದರೆ ಚಿಕನ್ ಮಂಚೂರಿ ತಂದು ಟೇಬಲ್ ಮೇಲೆ ಇಟ್ಟಿರುವ…
ಮದ್ವೆಗೂ ಮುಂಚೆಯೇ ಐದು ಮಂದಿ ತಾರೆಯರ ಜೊತೆ ಡೇಟ್ ಮಾಡಿದ್ದ ವಿರಾಟ್..!

ಮದ್ವೆಗೂ ಮುಂಚೆಯೇ ಐದು ಮಂದಿ ತಾರೆಯರ ಜೊತೆ ಡೇಟ್ ಮಾಡಿದ್ದ ವಿರಾಟ್..!

ನ್ಯೂಸ್ ಆರೋ: ಬಾಲಿವುಡ್‌ನ ಖ್ಯಾತ ನಟಿ ಅನುಷ್ಕಾ ಶರ್ಮಾ ಹಾಗೂ ಟೀಂ ಇಂಡಿಯಾದ ಖ್ಯಾತ ಕ್ರಿಕೆಟಿಗ ವಿರಾಟ್ ಕೊಹ್ಲಿ ಅವರ ಪರಿಚಯ ಯಾರಿಗೂ ಅಗತ್ಯವಿಲ್ಲ. ಇತ್ತೀಚೆಗಷ್ಟೇ ಅಂದರೆ ಮೇ…

Leave a Reply

Your email address will not be published. Required fields are marked *