ಡಾಲಿ ಧನಂಜಯ್ ಹುಟ್ಟುಹಬ್ಬಕ್ಕೆ ಅಭಿಮಾನಿಗಳಿಂದ ವಿಶೇಷ ಸೆಲೆಬ್ರೇಶನ್ – ‘ಡಾಲಿ ಉತ್ಸವ’ದ ಮೆನುವಿನಲ್ಲಿ ಏನೇನಿದೆ ಸ್ಪೆಷಲ್ ಐಟಂಗಳು?

ಡಾಲಿ ಧನಂಜಯ್ ಹುಟ್ಟುಹಬ್ಬಕ್ಕೆ ಅಭಿಮಾನಿಗಳಿಂದ ವಿಶೇಷ ಸೆಲೆಬ್ರೇಶನ್ – ‘ಡಾಲಿ ಉತ್ಸವ’ದ ಮೆನುವಿನಲ್ಲಿ ಏನೇನಿದೆ ಸ್ಪೆಷಲ್ ಐಟಂಗಳು?

ನ್ಯೂಸ್‌ ಆ್ಯರೋ : ಇಂದು ನಟ ಡಾಲಿ ಧನಂಜಯ್ ಅವರು 37 ವರ್ಷದ ಹುಟ್ಟು ಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ. ನಟನಿಗೆ ಶುಭಾಶಯಗಳ ಸುರಿಮಳೆಯೇ ಹರಿದುಬರುತ್ತಿದ್ದು, ಅಭಿಮಾನಿಗಳು ತಮ್ಮ ನೆಚ್ಚಿನ ನಟನ ಹುಟ್ಟು ಹಬ್ಬವನ್ನು ಆಚರಿಸಲು ‘ಡಾಲಿ ಉತ್ಸವ’ ಹೆಸರಿನಲ್ಲಿ ಕಾರ್ಯಕ್ರಮವನ್ನೇ ಆಯೋಜನೆ ಮಾಡಿದ್ದಾರೆ.

ಈ ಉತ್ಸವದಲ್ಲಿ ಪಾಲ್ಗೊಳ್ಳುವವರಿಗೆ ವಿಶೇಷ ಮೆನು ರೆಡಿಯಾಗಿದ್ದು, ಉತ್ತರ ಕರ್ನಾಟಕ ಮತ್ತು ಸೌತ್ ಇಂಡಿಯನ್ ಶೈಲಿಯಲ್ಲಿ ಫುಡ್ ರೆಡಿಯಾಗಲಿದೆ. ಅದರಲ್ಲೂ ರಾಯಚೂರು, ಸಿಂಧನೂರಿನ ಅಭಿಮಾನಿಗಳಿಗೆ ಖಡಕ್ ರೊಟ್ಟಿ, ಎಣ್ಣೆ ಬದನೆಕಾಯಿ, ಪುಂಡೆ ಪಲ್ಯೆ, ಬೂಂದಿ, ಶೇಂಗ ಹಿಂಡಿ , ಮೆಣಸಿನಕಾಯಿ ಒಳಗೊಂಡ ಊಟದ ವ್ಯವಸ್ಥೆ ಮಾಡಿದ್ದಾರೆ. ಉತ್ತರ ಕರ್ನಾಟಕದ ಊಟದ ವ್ಯವಸ್ಥೆಯನ್ನು ಧನಂಜಯ್ ಅವರ ಅಭಿಮಾನಿ ಶಿವರಾಜ್ ಪಾಟೀಲ್ ಗುಂಜಳ್ಳಿ ಅವರು ವ್ಯವಸ್ಥೆ ಮಾಡಿದ್ದಾರೆ.

ಈ ಸಂಬಂಧ ಮಾತನಾಡಿದ ನಟ ಡಾಲಿ ಧನಂಜಯ್, ಕಾರಣಾಂತರಗಳಿಂದ ಕಳೆದ 3-4 ವರ್ಷಗಳಿಂದ ನಾನು ಹುಟ್ಟು ಹಬ್ಬವನ್ನು ಆಚರಿಸಿಕೊಂಡಿಲ್ಲ. ಈ ವರ್ಷ ಅಭಿಮಾನಿಗಳ ಜೊತೆ ಆಚರಣೆ ಮಾಡಿದ್ದು ತುಂಬಾ ಖುಷಿಯಾಗಿದೆ.

ರಾತ್ರಿಯಿಂದಲೇ ಅಭಿಮಾನಿಗಳು ನನ್ನ ಏಳಿಗೆಯನ್ನು ಬಯಸಿ ಹಾರೈಸುತ್ತಿದ್ದಾರೆ. ಅದಕ್ಕಿಂತ ದೊಡ್ಡ ಸಂಪಾದನೆ ಯಾವುದು ಇಲ್ಲ. ಅದನ್ನ ಕಾಪಾಡಿಕೊಳ್ಳೋಕೆ ಕೆಲಸ ಮಾಡ್ತೀನಿ. ಜನರ ಪ್ರೀತಿಗೆ ನಾನ್ಯಾವತ್ತೂ ಬೆಲೆ ಕಟ್ಟೋದಕ್ಕೆ ಆಗಲ್ಲ. ಅಣ್ಣಾ ಫ್ರಮ್ ಮೆಕ್ಸಿಕೋ ಸಿನಿಮಾ ಬಹಳ ಡಿಫರೆಂಟ್ ಆಗಿದೆ. ಅಭಿಮಾನಿಗಳಿಗೆ ಇಷ್ಟವಾಗುವಂತಹ ಪಾತ್ರವನ್ನು ಮಾಡ್ತಾ ಇದ್ದೀನಿ ಎಂದು ಖುಷಿ ವ್ಯಕ್ತ ಪಡಿಸಿದರು.

Related post

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ ಮದುವೆ

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ…

ನ್ಯೂಸ್ ಆರೋ: ಬರೋಬ್ಬರಿ 25 ವರ್ಷಗಳಿಂದ ಪ್ರೀತಿಸುತ್ತಿದ್ದ ಜೋಡಿಯೊಂದು ಮಂತ್ರ ಮಾಂಗಲ್ಯ ಮೂಲಕ ಮದುವೆಯಾಗುವ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಟ್ಟಿರುವ ಅಪರೂಪದ ಘಟನೆ ತುಮಕೂರಲ್ಲಿ ನಡೆದಿದೆ. ಹೌದು ಜನಾಂದೋಲನದಲ್ಲಿ…
ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು! ಏನಿದು ವಿಷಯ?

ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು!…

ನ್ಯೂಸ್ ಆರೋ: ಎಷ್ಟೋ ಬಾರಿ ನಾವು ಈ ಹೊಟೇಲ್ ಗಳಿಗೆ ಹೋದಾಗ, ಅಲ್ಲಿ ಜನರು ವೆಜ್ ಮಂಚೂರಿಯನ್ನು ಆರ್ಡರ್ ಮಾಡಿದರೆ ಚಿಕನ್ ಮಂಚೂರಿ ತಂದು ಟೇಬಲ್ ಮೇಲೆ ಇಟ್ಟಿರುವ…
ಮದ್ವೆಗೂ ಮುಂಚೆಯೇ ಐದು ಮಂದಿ ತಾರೆಯರ ಜೊತೆ ಡೇಟ್ ಮಾಡಿದ್ದ ವಿರಾಟ್..!

ಮದ್ವೆಗೂ ಮುಂಚೆಯೇ ಐದು ಮಂದಿ ತಾರೆಯರ ಜೊತೆ ಡೇಟ್ ಮಾಡಿದ್ದ ವಿರಾಟ್..!

ನ್ಯೂಸ್ ಆರೋ: ಬಾಲಿವುಡ್‌ನ ಖ್ಯಾತ ನಟಿ ಅನುಷ್ಕಾ ಶರ್ಮಾ ಹಾಗೂ ಟೀಂ ಇಂಡಿಯಾದ ಖ್ಯಾತ ಕ್ರಿಕೆಟಿಗ ವಿರಾಟ್ ಕೊಹ್ಲಿ ಅವರ ಪರಿಚಯ ಯಾರಿಗೂ ಅಗತ್ಯವಿಲ್ಲ. ಇತ್ತೀಚೆಗಷ್ಟೇ ಅಂದರೆ ಮೇ…

Leave a Reply

Your email address will not be published. Required fields are marked *