
ರಿಜಿಸ್ಟರ್ ಮ್ಯಾರೇಜ್ ಗೆ ಸಜ್ಜಾದ ಅಮಿರ್ ಖಾನ್ ಪುತ್ರಿ – ಪ್ರಿಯಕರ ನೂಪುರ್ ಶಿಖಾರೆ ಜೊತೆ ದಾಂಪತ್ಯ ಜೀವನ ಆರಂಭಿಸಲಿದ್ದಾರೆ ಇರಾ ಖಾನ್..!!
- ಮನರಂಜನೆ
- September 15, 2023
- No Comment
- 74
ನ್ಯೂಸ್ ಆ್ಯರೋ : ನಟ ಅಮೀರ್ ಖಾನ್ ಪುತ್ರಿ ಇರಾ ಖಾನ್ ಕೆಲ ವರ್ಷಗಳಿಂದ ಪ್ರೀತಿಸುತ್ತಿದ್ದ ನೂಪುರ್ ಶಿಖಾರೆ ಜತೆ ಅಕ್ಟೋಬರ್‌ನಲ್ಲಿ ತಿಂಗಳಿನಲ್ಲಿ ಹೊಸ ಜೀವನಕ್ಕೆ ಕಾಲಿಡಲಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ.
ಇರಾ ಖಾನ್ ಕಳೆದ ವರ್ಷ ನವೆಂಬರ್ ನಲ್ಲಿ ನಿಶ್ಚಿತಾರ್ಥ ಮಾಡಿಕೊಂಡಿದ್ದರು. ತನ್ನ ಪ್ರಿಯಕರನಿಗೆ ಉಂಗುರ ತೊಡಿಸಿ, ಮುತ್ತಿಡುವ ಮೂಲಕ ಎಂಗೇಜ್ಡ್ ಆಗಿರುವುದಾಗಿ ಅವರು ಘೋಷಣೆ ಮಾಡಿದ್ದರು. ಇದೇ ಅಕ್ಟೋಬರ್ 3ರಂದು ಇರಾ ಮತ್ತು ನೂಪುರ್ ಶಿಖಾರೆ ರಿಜಿಸ್ಟರ್ ಮದುವೆ ಆಗಲಿದ್ದಾರೆ.
ರಿಜಿಸ್ಟರ್ ಮ್ಯಾರೇಜ್ ಬೆನ್ನಲ್ಲೇ ಉದಯಪುರದಲ್ಲಿ ಸಾಂಪ್ರದಾಯಿಕವಾಗಿ ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ. ಈ ಸಮಾರಂಭದಲ್ಲಿ ಬಾಲಿವುಡ್ ಮಂದಿ ಸೇರಿದಂತೆ ಖ್ಯಾತ ತಾರೆಗಳು ಆಗಮಿಸಲಿದ್ದಾರೆ.

ಕಳೆದ ಹಲವು ವರ್ಷಗಳಿಂದ ಒಟ್ಟಿಗೆ ವಾಸಿಸುತ್ತಿದ್ದ ಇರಾ ಖಾನ್ ಮತ್ತು ನೂಪುರ್ ಶಿಖಾರೆ ಈ ಬಂಧಕ್ಕೆ ಮದುವೆ ಎಂಬ ಸಂಬಂಧ ಬೆಸೆಯಲು ಮುಂದಾಗಿದ್ದಾರೆ. ಅಧಿಕೃತವಾಗಿ ಸತಿ- ಪತಿಯಾಗಲು ಈ ಜೋಡಿ ತಯಾರಾಗಿದೆ.
ಇರಾ ಹುಟ್ಟು ಹಬ್ಬವನ್ನು ಆಚರಿಸಿಕೊಂಡಾಗ ಮತ್ತು ಪೂಲ್ ಸೈಡ್ ಪಾರ್ಟಿ ಮಾಡಿದಾಗಲೂ ನೂಪುರ್ ಶಿಖಾರೆ ಜೊತೆಯಲ್ಲೇ ಇದ್ದರು. ಅಲ್ಲದೇ ಈಜುಕೊಳದಲ್ಲಿ ಇಬ್ಬರೂ ತಬ್ಬಿಕೊಂಡ ಫೋಟೋವನ್ನು ಸ್ವತ: ಇರಾ ಅವರೇ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದರು.

ನಿಶ್ಚಿತಾರ್ಥಕ್ಕಿಂತ ಮುಂಚೆನೇ ಈ ಜೋಡಿ ಸಖತ್ ಫೇಮಸ್ ಮತ್ತು ವೈರಲ್ ಕೂಡ ಆಗಿತ್ತು. ಬಹಿರಂಗವಾಗಿಯೇ ತಾವಿಬ್ಬರೂ ಪ್ರೀತಿಸುತ್ತಿರುವ ವಿಚಾರವನ್ನೂ ಅವರು ಹಂಚಿಕೊಂಡಿದ್ದರು. ಇದೀಗ ಈ ಜೋಡಿ ಹಸೆಮಣೆ ಏರಲು ಸಜ್ಜಾಗಿದ್ದು, ಅಭಿಮಾನಿಗಳು ಶುಭಕೋರಿದ್ದಾರೆ.