ಆಪ್ತರ ಸಮ್ಮುಖದಲ್ಲಿ ಸರಳವಾಗಿ ನೆರವೇರಿತು ಅಭಿಷೇಕ್‌ ಮತ್ತು ಅವಿವಾ ಎಂಗೇಜ್‌ಮೆಂಟ್ – ಅಂಬಿ ಮನೆಯ ಸೊಸೆಯಾಗಲಿದ್ದಾರೆ ಫ್ಯಾಷನ್ ಡಿಸೈನರ್ ಪುತ್ರಿ

ಆಪ್ತರ ಸಮ್ಮುಖದಲ್ಲಿ ಸರಳವಾಗಿ ನೆರವೇರಿತು ಅಭಿಷೇಕ್‌ ಮತ್ತು ಅವಿವಾ ಎಂಗೇಜ್‌ಮೆಂಟ್ – ಅಂಬಿ ಮನೆಯ ಸೊಸೆಯಾಗಲಿದ್ದಾರೆ ಫ್ಯಾಷನ್ ಡಿಸೈನರ್ ಪುತ್ರಿ

ನ್ಯೂಸ್ ಆ್ಯರೋ : ಜೂ.ರೆಬೆಲ್‌ ಸ್ಟಾರ್‌ ಅಭಿಷೇಕ್‌ ಅಂಬರೀಶ್‌ – ಅವಿವಾ ಬಿದ್ದಪ್ಪ ಅವರ ನಿಶ್ಚಿತಾರ್ಥ ಕುಟುಂಬಸ್ಥರ ಸಮ್ಮುಖದಲ್ಲಿ ಬೆಂಗಳೂರಿನ ಖಾಸಗಿ ಹೊಟೇಲ್‌ ನಲ್ಲಿ ಇಂದು ನೆರವೇರಿದೆ.

ಖ್ಯಾತ ಫ್ಯಾಷನ್‌ ಡಿಸೈನರ್‌ ಆಗಿರುವ ಪ್ರಸಾದ್‌ ಬಿದ್ದಪ್ಪ ಅವರ ಪುತ್ರಿ ಅವಿವಾ ಬಿದ್ದಪ್ಪ ಅವರೊಂದಿಗೆ ಜೂ. ರೆಬೆಲ್‌ ಸ್ಟಾರ್‌ ಉಂಗುರವನ್ನು ತೊಡಗಿಸುವ ಮೂಲಕ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ.

ಅಂಬಿ – ಬಿದ್ದಪ್ಪ ಕುಟುಂಬದಲ್ಲಿ ಸಂಭ್ರಮ ಮನೆ ಮಾಡಿದೆ. ಈ ಸುಂದರ ಕ್ಷಣದಲ್ಲಿ ಎರಡೂ ಕುಟುಂಬದ ಆಪ್ತರು ಜೊತೆಯಾಗಿ, ಮಕ್ಕಳ ಸಂತಸದಲ್ಲಿ ಭಾಗಿಯಾದ್ದಾರೆ.

ನಿರ್ಮಾಪಕ ರಾಕ್‌ ಲೈನ್‌ ವೆಂಕಟೇಶ್‌, ನಟ ದರ್ಶನ್‌, ಯಶ್‌ ದಂಪತಿ ಸೇರಿದಂತೆ, ಅಭಿಷೇಕ್‌ ಅವರ ಮುಂದಿನ ಸಿನಿಮಾವನ್ನು ನಿರ್ದೇಶನ ಮಾಡಲಿರುವ ನಿರ್ದೇಶಕ ಮಹೇಶ್‌ ಕುಮಾರ್‌ ಅವರು ಭಾಗಿಯಾಗಿದ್ದಾರೆ. ಅನೇಕರು ಅಭಿಷೇಕ್‌ – ಅವಿವಾ ಅವರಿಗೆ ಶುಭಾಶಯವನ್ನು ಕೋರಿದ್ದಾರೆ.

ಎಂಗೇಜ್ಮೆಂಟ್‌ ಪೋಟೋದಲ್ಲಿ ಅವಿವಾ – ಅಭಿಷೇಕ್‌ ಇಬ್ಬರು ಸುಂದರವಾಗಿ ಕಾಣುತ್ತಿದ್ದು, ಸೋಶಿಯಲ್ ಮೀಡಿಯಾದಲ್ಲಿ ಈ ಪೋಟೋಗಳು ಸದ್ದು ಮಾಡುತ್ತಿದೆ. ಅಭಿಷೇಕ್‌ ಹಾಗೂ ಅವಿವಾ ಅನೇಕ ವರ್ಷಗಳಿಂದ ಸ್ನೇಹಿತರು ಅವರ ಸ್ನೇಹಕ್ಕೆ ಈಗ ನಿಶ್ಚಿತಾರ್ಥ ಮೂಲಕ ಹೊಸ ಅರ್ಥ ಕೊಟ್ಟಿದ್ದಾರೆ.

Related post

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ : ಎಲ್ಲಾ ಕಛೇರಿಗಳಿಗೂ ಬೀಳುತ್ತೆ ಬೀಗ..!

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ…

ನ್ಯೂಸ್ ಆ್ಯರೋ : ಇನ್ನೆರಡೇ ದಿನಗಳು ಅಂದರೆ ಏಪ್ರಿಲ್ 26ರಂದು ಲೋಕಸಭಾ ಚುನಾವಣೆಗೆ ಮೊದಲ ಹಂತದ ಮತದಾನ ನಡೆಯಲಿದ್ದು, ಅಂದು ಎಲ್ಲಾ ಕಾರ್ಮಿಕರು, ಅರ್ಹ ಮತದಾರರು ಮತದಾನ ಮಾಡುವ…
ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮಲ್ಲಿ ಇಂದು ಚುರುಕುತನವನ್ನು ನೋಡಬಹುದು. ನಿಮ್ಮ ಆರೋಗ್ಯವು ಇಂದು ನಿಮ್ಮನ್ನು ಸಂಪೂರ್ಣವಾಗಿ ಬೆಂಬಲಿಸುತ್ತದೆ. ನಿಮ್ಮ ಹೂಡಿಕೆಗಳು ಬಗ್ಗೆ ನಿಮ್ಮ ಭವಿಷ್ಯದ ಗುರಿಗಳ ಬಗ್ಗೆ ರಹಸ್ಯಮಯವಾಗಿರಿ. ಮನೆ ಅಥವಾ ಸಾಮಾಜಿಕ…
ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮ ಕೋಪ ಕಡ್ಡಿಯನ್ನು ಗುಡ್ಡ ಮಾಡಬಹುದು-ಇದು ನಿಮ್ಮ ಕುಟುಂಬದ ಸದಸ್ಯರ ಅಸಮಾಧಾನಕ್ಕೆ ಕಾರಣವಾಗುತ್ತದೆ. ಕೋಪವನ್ನು ನಿಯಂತ್ರಣದಲ್ಲಿಡುವುದನ್ನು ಕಲಿತ ಆ ಮಹಾನ್ ಆತ್ಮಗಳೇ ಅದೃಷ್ಟಶಾಲಿಗಳು. ನಿಮ್ಮ ಕೋಪ ನಿಮ್ಮನ್ನು ಸುಡುವ…

Leave a Reply

Your email address will not be published. Required fields are marked *