ಅಭಿಷೇಕ್ ಅಂಬರೀಷ್-ಅವಿವಾ ಬಿದ್ದಪ್ಪ ವಿವಾಹ – ಕಾರ್ಯಕ್ರಮದಲ್ಲಿ ಬಿಗ್ ಸ್ಟಾರ್ ಗಳ ದಂಡು

ಅಭಿಷೇಕ್ ಅಂಬರೀಷ್-ಅವಿವಾ ಬಿದ್ದಪ್ಪ ವಿವಾಹ – ಕಾರ್ಯಕ್ರಮದಲ್ಲಿ ಬಿಗ್ ಸ್ಟಾರ್ ಗಳ ದಂಡು

ನ್ಯೂಸ್ ಆ್ಯರೋ‌ : ಸ್ಯಾಂಡಲ್ ವುಡ್ ರೆಬಲ್ ಸ್ಟಾರ್ ದಿ.ಅಂಬರೀಷ್ ಮತ್ತು ಸಂಸದೆ, ನಟಿ ಸುಮಲತಾ ಅವರ ಪುತ್ರ ಅಭಿಷೇಕ್ ಅಂಬರೀಷ್ ಇಂದು ಹಸೆಮಣೆಗೇರಿದರು. ಬೆಂಗಳೂರಿನ ಮಾಣಿಕ್ಯ ಚಾಮರ ವಜ್ರದಲ್ಲಿ ನಡೆದ ಸಮಾರಂಭದಲ್ಲಿ ಫ್ಯಾಷನ್ ಲೋಕದ ದಿಗ್ಗಜ ಪ್ರಸಾದ್ ಬಿದ್ದಪ್ಪ ಪುತ್ರಿ ಅವಿವಾ ಬಿದ್ದಪ್ಪ ಅವರನ್ನು ಅಭಿಷೇಕ್ ವರಿಸಿದರು. ಅನೇಕ ಸೆಲೆಬ್ರಿಟಿಗಳು ಈ ಸಂದರ್ಭದಲ್ಲಿ ಹಾಜರಿದ್ದರು.

ಒಕ್ಕಲಿಗರ ಸಂಪ್ರದಾಯದಂತೆ ಮದುವೆ ಶಾಸ್ತ್ರಗಳು ನೆರವೇರಿವೆ. ಮಾಜಿ ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು, ಸೂಪರ್‌ ಸ್ಟಾರ್‌ ರಜನಿಕಾಂತ್‌, ಟಾಲಿವುಡ್‌ ನಟ ಮೋಹನ್‌ ಬಾಬು, ಯಶ್‌, ಉಪೇಂದ್ರ, ನರೇಶ್‌, ಪವಿತ್ರಾ ಲೋಕೇಶ್‌, ಸುಂದರ್‌ ರಾಜ್‌, ಮೇಘನಾ ರಾಜ್, ಅಶ್ವಿನಿ ಪುನೀತ್‌ ರಾಜ್‌ ಕುಮಾರ್‌, ಸುಹಾಸಿನಿ, ಸಚಿವ ಮಧು ಬಂಗಾರಪ್ಪ, ಅನಿಲ್‌ ಕುಂಬ್ಳೆ ಸೇರಿದಂತೆ ಅನೇಕ ಗಣ್ಯರು ಆಗಮಿಸಿ ನೂತನ ವಧು ವರರನ್ನು ಹಾರೈಸಿದ್ದಾರೆ.

ಜೂ. 7ರಂದು ಬೆಂಗಳೂರಿನ ಪ್ಯಾಲೇಸ್‌ ಗ್ರೌಂಡ್‌ನ ತ್ರಿಪುರ ವಾಸಿನಿ ಹಾಲ್‌ನಲ್ಲಿ ಅಭಿಷೇಕ್‌ ಹಾಗೂ ಅವಿವಾ ಅದ್ದೂರಿ ಆರತಕ್ಷತೆ ನಡೆಯಲಿದೆ. ಆ ಕಾರ್ಯಕ್ರಮಕ್ಕೆ ಕೂಡಾ ಚಿತ್ರರಂಗದಿಂದ ಅನೇಕ ಸೆಲೆಬ್ರಿಟಿಗಳು ಹಾಜರಾಗುವ ಸಾಧ್ಯತೆ ಇದೆ.

ಅಂಬರೀಷ್ ಹುಟ್ಟೂರು ಮಂಡ್ಯದಲ್ಲಿ ಜೂ. 16ರಂದು ಬೀಗರ ಔತಣ ಕಾರ್ಯಕ್ರಮ ಇದೆ. ಈ ಕಾರ್ಯಕ್ರಮದಲ್ಲಿ ಲಕ್ಷಕ್ಕೂ ಹೆಚ್ಚು ಮಂದಿ ಪಾಲ್ಗೊಳ್ಳುವ ಸಾಧ್ಯತೆ ಇದೆ. ಕಳೆದ ವರ್ಷ ಡಿ. 11ರಂದು ಈ ಜೋಡಿಯ ನಿಶ್ವಿತಾರ್ಥ ನಡೆದಿತ್ತು.

Related post

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ ಮದುವೆ

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ…

ನ್ಯೂಸ್ ಆರೋ: ಬರೋಬ್ಬರಿ 25 ವರ್ಷಗಳಿಂದ ಪ್ರೀತಿಸುತ್ತಿದ್ದ ಜೋಡಿಯೊಂದು ಮಂತ್ರ ಮಾಂಗಲ್ಯ ಮೂಲಕ ಮದುವೆಯಾಗುವ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಟ್ಟಿರುವ ಅಪರೂಪದ ಘಟನೆ ತುಮಕೂರಲ್ಲಿ ನಡೆದಿದೆ. ಹೌದು ಜನಾಂದೋಲನದಲ್ಲಿ…
ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು! ಏನಿದು ವಿಷಯ?

ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು!…

ನ್ಯೂಸ್ ಆರೋ: ಎಷ್ಟೋ ಬಾರಿ ನಾವು ಈ ಹೊಟೇಲ್ ಗಳಿಗೆ ಹೋದಾಗ, ಅಲ್ಲಿ ಜನರು ವೆಜ್ ಮಂಚೂರಿಯನ್ನು ಆರ್ಡರ್ ಮಾಡಿದರೆ ಚಿಕನ್ ಮಂಚೂರಿ ತಂದು ಟೇಬಲ್ ಮೇಲೆ ಇಟ್ಟಿರುವ…
ಮದ್ವೆಗೂ ಮುಂಚೆಯೇ ಐದು ಮಂದಿ ತಾರೆಯರ ಜೊತೆ ಡೇಟ್ ಮಾಡಿದ್ದ ವಿರಾಟ್..!

ಮದ್ವೆಗೂ ಮುಂಚೆಯೇ ಐದು ಮಂದಿ ತಾರೆಯರ ಜೊತೆ ಡೇಟ್ ಮಾಡಿದ್ದ ವಿರಾಟ್..!

ನ್ಯೂಸ್ ಆರೋ: ಬಾಲಿವುಡ್‌ನ ಖ್ಯಾತ ನಟಿ ಅನುಷ್ಕಾ ಶರ್ಮಾ ಹಾಗೂ ಟೀಂ ಇಂಡಿಯಾದ ಖ್ಯಾತ ಕ್ರಿಕೆಟಿಗ ವಿರಾಟ್ ಕೊಹ್ಲಿ ಅವರ ಪರಿಚಯ ಯಾರಿಗೂ ಅಗತ್ಯವಿಲ್ಲ. ಇತ್ತೀಚೆಗಷ್ಟೇ ಅಂದರೆ ಮೇ…

Leave a Reply

Your email address will not be published. Required fields are marked *