ಬಾಲಿವುಡ್ ನಟ ಆದಿತ್ಯ ಸಿಂಗ್ ರಜಪೂತ್ ಅಸಹಜ ಸಾವು – ಬಾತ್ ರೂಂ ನಲ್ಲಿ ಶವವಾಗಿ ಪತ್ತೆಯಾದ ಯುವನಟ..!!

ಬಾಲಿವುಡ್ ನಟ ಆದಿತ್ಯ ಸಿಂಗ್ ರಜಪೂತ್ ಅಸಹಜ ಸಾವು – ಬಾತ್ ರೂಂ ನಲ್ಲಿ ಶವವಾಗಿ ಪತ್ತೆಯಾದ ಯುವನಟ..!!

ನ್ಯೂಸ್ ಆ್ಯರೋ : ಬಾಲಿವುಡ್​​ ನಟ ಹಾಗೂ ರೂಪದರ್ಶಿ ಆದಿತ್ಯ ಸಿಂಗ್ ರಜಪೂತ್, ಸೋಮವಾರ ಮುಂಬೈನ ಅಂಧೇರಿಯಲ್ಲಿರುವ ತಮ್ಮ ಮನೆಯ ಸ್ನಾನಗೃಹದಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಆತನ ಸಾವಿನ ಕಾರಣ ಇನ್ನು ನಿಗೂಢವಾಗಿಯೇ ಉಳಿದಿದೆ.

ಆದಿತ್ಯ ಸಿಂಗ್ ವಾಸಿಸುತ್ತಿದ್ದ ಮುಂಬೈನ 11ನೇ ಮಹಡಿಯ ವಾಶ್ ರೂಂನಲ್ಲಿ ಆತನ ಶವವಾಗಿ ಪತ್ತೆಯಾಗಿದ್ದು, ಇಂದು ಮಧ್ಯಾಹ್ನ ಅವನ ಸ್ನೇಹಿತ ಮನೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಘಟನೆ ಬೆಳಕಿಗೆ ಬಂದಿದೆ. ತಕ್ಷಣವೇ ಆದಿತ್ಯನನ್ನು, ಸೆಕ್ಯೂರಿಟಿಯ ಸಹಾಯದಿಂದ ಆಸ್ಪತ್ರೆಗೆ ಕರೆದೊಯ್ದರೂ ಸಹ ಅಷ್ಟೋತ್ತಿಗೆ ಆತ ಮೃತಪಟ್ಟಿದ್ದ ಎಂದು ತಿಳಿಸಿದ್ದಾರೆ.

ಅವರ ಸಾವಿಗೆ ನಿಖರವಾದ ಕಾರಣ ಇನ್ನೂ ತಿಳಿದಿಲ್ಲವಾದರೂ, ‘ಓವರ್ ಡೋಸ್” ಇದ್ದಿರಬಹುದು ಎಂದು ವರದಿಯಾಗಿದೆ. ಅವರ ನಿಧನದಿಂದ ನಟನ ಅಭಿಮಾನಿಗಳು ಸೇರಿದಂತೆ ಚಿತ್ರರಂಗದ ಉಳಿದವರು ತೀವ್ರ ಆಘಾತಕ್ಕೊಳಗಾಗಿದ್ದಾರೆ. ಮುಂಬೈ ಪೊಲೀಸರ ಒಶಿವಾರ ಪೊಲೀಸರ ತಂಡವನ್ನು ಆಸ್ಪತ್ರೆಗೆ ಕಳುಹಿಸಲಾಗಿದೆ. ಪ್ರಕರಣದಲ್ಲಿ ಶಂಕಿತರನ್ನು ಗುರುತಿಸಿದ ನಂತರ ಹೆಚ್ಚುವರಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

ಆದಿತ್ಯ ಸಿಂಗ್ ರಜಪೂತ್ ರಾತ್ರಿಯನ್ನು ತಮ್ಮ ಸ್ನೇಹಿತರೊಂದಿಗೆ ಮನೆಯಲ್ಲಿಯೇ ಕಳೆದಿದ್ದರು. ಅವರು ತಮ್ಮ ಅಪಾರ್ಟ್ಮೆಂಟ್ ನಲ್ಲಿನ ಫೋಟೋವನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾರೆ. ಅವರ ಇನ್ಸ್ಟಾಗ್ರಾಮ್ ಖಾತೆಯಲ್ಲಿ 5 ಲಕ್ಷ 20 ಸಾವಿರ ಫಾಲೋವರ್ಸ್ ಇದ್ದಾರೆ. ಅವರ ಇತ್ತೀಚಿನ Instagram ಪೋಸ್ಟ್ನಲ್ಲಿ, ಐದು ದಿನಗಳ ಹಿಂದೆ, ಆದಿತ್ಯ ಸಿಂಗ್ ರಜಪೂತ್ ಸಂತೋಷದ ಬಗ್ಗೆ ಮಾತನಾಡುವ ಕ್ಲಿಪ್ ಅನ್ನು ಹಂಚಿಕೊಂಡಿದ್ದಾರೆ.

Related post

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ : ಎಲ್ಲಾ ಕಛೇರಿಗಳಿಗೂ ಬೀಳುತ್ತೆ ಬೀಗ..!

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ…

ನ್ಯೂಸ್ ಆ್ಯರೋ : ಇನ್ನೆರಡೇ ದಿನಗಳು ಅಂದರೆ ಏಪ್ರಿಲ್ 26ರಂದು ಲೋಕಸಭಾ ಚುನಾವಣೆಗೆ ಮೊದಲ ಹಂತದ ಮತದಾನ ನಡೆಯಲಿದ್ದು, ಅಂದು ಎಲ್ಲಾ ಕಾರ್ಮಿಕರು, ಅರ್ಹ ಮತದಾರರು ಮತದಾನ ಮಾಡುವ…
ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮಲ್ಲಿ ಇಂದು ಚುರುಕುತನವನ್ನು ನೋಡಬಹುದು. ನಿಮ್ಮ ಆರೋಗ್ಯವು ಇಂದು ನಿಮ್ಮನ್ನು ಸಂಪೂರ್ಣವಾಗಿ ಬೆಂಬಲಿಸುತ್ತದೆ. ನಿಮ್ಮ ಹೂಡಿಕೆಗಳು ಬಗ್ಗೆ ನಿಮ್ಮ ಭವಿಷ್ಯದ ಗುರಿಗಳ ಬಗ್ಗೆ ರಹಸ್ಯಮಯವಾಗಿರಿ. ಮನೆ ಅಥವಾ ಸಾಮಾಜಿಕ…
ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮ ಕೋಪ ಕಡ್ಡಿಯನ್ನು ಗುಡ್ಡ ಮಾಡಬಹುದು-ಇದು ನಿಮ್ಮ ಕುಟುಂಬದ ಸದಸ್ಯರ ಅಸಮಾಧಾನಕ್ಕೆ ಕಾರಣವಾಗುತ್ತದೆ. ಕೋಪವನ್ನು ನಿಯಂತ್ರಣದಲ್ಲಿಡುವುದನ್ನು ಕಲಿತ ಆ ಮಹಾನ್ ಆತ್ಮಗಳೇ ಅದೃಷ್ಟಶಾಲಿಗಳು. ನಿಮ್ಮ ಕೋಪ ನಿಮ್ಮನ್ನು ಸುಡುವ…

Leave a Reply

Your email address will not be published. Required fields are marked *