
ಮತ್ತೆ ತಂದೆ ಆಗಲಿದ್ದಾರೆ ಧ್ರುವ ಸರ್ಜಾ – ವೀಡಿಯೋ ಮೂಲಕ ಸಿಹಿ ಸುದ್ದಿ ಹಂಚಿಕೊಂಡ ನಟ
- ಮನರಂಜನೆ
- August 25, 2023
- No Comment
- 48
ನ್ಯೂಸ್ ಆ್ಯರೋ : ಸ್ಯಾಂಡಲ್ ವುಡ್ ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಬಹು ಬೇಡಿಕೆಯ ನಟರಲ್ಲಿ ಒಬ್ಬರು. ಅಳೆದು ತೂಗಿ ಚಿತ್ರಗಳನ್ನು ಆಯ್ಕೆ ಮಾಡುವ ಅವರು ಸದ್ಯ ‘ಮಾರ್ಟಿನ್’ ಮತ್ತು ‘ಕೆಡಿ’ ಚಿತ್ರಗಳಲ್ಲಿ ನಿರತರಾಗಿದ್ದಾರೆ. ಇದೀಗ ಅವರು ಸಿಹಿ ಸುದ್ದಿಯೊಂದನ್ನು ಸಾಮಾಜಿಕ ಜಾಲತಾಣಗಳ ಮೂಲಕ ಹಂಚಿಕೊಂಡಿದ್ದಾರೆ.
ಎರಡನೇ ಬಾರಿ ಅಪ್ಪ ಆಗುತ್ತಿದ್ದಾರೆ ಧ್ರುವ
ಹೌದು.. ಧ್ರುವ ಸರ್ಜಾ ಮತ್ತೊಮ್ಮೆ ಅಪ್ಪ ಆಗುತ್ತಿದ್ದಾರೆ. ಸೆಪ್ಟಂಬರ್ ನಲ್ಲಿ ಮಗುವಿನ ಆಗಮನದ ನಿರೀಕ್ಷೆಯಲ್ಲಿದ್ದಾರೆ ಧ್ರುವ-ಪ್ರೇರಣಾ ದಂಪತಿ. ವೀಡಿಯೋ ಮೂಲಕ ಧ್ರುವ ಈ ವಿಚಾರವನ್ನು ಹಂಚಿಕೊಂಡಿದ್ದಾರೆ.
2019ರಲ್ಲಿ ಧ್ರುವ ಮತ್ತು ಪ್ರೇರಣಾ ಮದುವೆಯಾಗಿದ್ದರು. ಕಳೆದ ವರ್ಷ ಅಕ್ಟೋಬರ್ 2ರಂದು ಅವರಿಗೆ ಹೆಣ್ಣು ಮಗು ಜನಿಸಿತ್ತು. ಸದ್ಯ
ಧ್ರುವ ದಂಪತಿಗೆ ಎಲ್ಲರೂ ಶುಭಾಶಯ ತಿಳಿಸುತ್ತಿದ್ದಾರೆ.
ಇನ್ನು ಸಿನಿಮಾ ವಿಚಾರಕ್ಕೆ ಬರುವುದಾದರೆ ಧ್ರುವ ನಟನೆಯ, ಎ.ಪಿ.ಅರ್ಜುನ್ ನಿರ್ದೇಶನದ ಆ್ಯಕ್ಷನ್ ಥ್ರಿಲ್ಲರ್ ಚಿತ್ರ ‘ಮಾರ್ಟಿನ್’ನ ಚಿತ್ರೀಕರಣ ಮುಗಿದಿದೆ. ಶೀಘ್ರದಲ್ಲಿ ತೆರೆ ಕಾಣುವ ನಿರೀಕ್ಷೆ ಇದೆ. ಇನ್ನು ಜೋಗಿ ಪ್ರೇಮ್ ನಿರ್ದೇಶನದ, ರೆಟ್ರೋ ಶೈಲಿಯ ‘ಕೆಡಿ’ ಚಿತ್ರದ ಕೆಲಸ ನಡೆಯುತ್ತಿದೆ. ವಿಶೇಷ ಎಂದರೆ ಇದರಲ್ಲಿ ಬಾಲಿವುಡ್ ನ ಸಂಜಯ್ ದತ್, ಶಿಲ್ಪಾ ಶೆಟ್ಟಿ, ಕ್ರೇಜಿ ಸ್ಟಾರ್ ರವಿಚಂದ್ರನ್ ಮತ್ತಿತರರು ಮುಖ್ಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಇದು ತಮಿಳು, ತೆಲುಗು, ಮಲೆಯಾಳಂ ಮತ್ತು ಹಿಂದಿಯಲ್ಲಿ ಬಿಡುಗಡೆಯಾಗಲಿದೆ.