ನನಗೂ ಆಫರ್ ನೀಡಿ ದೈಹಿಕವಾಗಿ ಸಹಕರಿಸಿ ಎಂದಿದ್ದರು – ಕಾಸ್ಟಿಂಗ್ ಕೌಚ್ ಕರಾಳ ಅನುಭವ ಬಿಚ್ಚಿಟ್ಟ ನಟಿ ನಯನತಾರಾ..!!

ನನಗೂ ಆಫರ್ ನೀಡಿ ದೈಹಿಕವಾಗಿ ಸಹಕರಿಸಿ ಎಂದಿದ್ದರು – ಕಾಸ್ಟಿಂಗ್ ಕೌಚ್ ಕರಾಳ ಅನುಭವ ಬಿಚ್ಚಿಟ್ಟ ನಟಿ ನಯನತಾರಾ..!!

ನ್ಯೂಸ್‌ ಆ್ಯರೋ : ವೃತ್ತಿ ಜೀವನದ ಆರಂಭದಲ್ಲಿ ಲೇಡಿ ಸೂಪರ್ ಸ್ಟಾರ್‌ ನಯನತಾರಾ ಅನುಭವಿಸಿದ ಕರಾಳ ಕಾಸ್ಟಿಂಗ್‌ ಕೌಚ್ ಬಗ್ಗೆ ಹಂಚಿಕೊಂಡಿದ್ದಾರೆ.

ನಿರ್ದೇಶಕರೊಬ್ಬರು ದೊಡ್ಡ ಚಲನಚಿತ್ರವೊಂದಕ್ಕೆ ಆಫರ್ ನೀಡಿ, ದೈಹಿಕವಾಗಿ ಸಹಕರಿಸುವಂತೆ ಹೇಳಿಕೊಂಡಿದ್ದರು. ನನ್ನ ನಟನಾ ಸಾಮರ್ಥ್ಯದ ಮೇಲೆ ನನಗೆ ವಿಶ್ವಾಸವಿದೆ. ಚಿತ್ರದಲ್ಲಿ ಪ್ರಮುಖ ಪಾತ್ರ ನೀಡುವುದಾಗಿ ಹೇಳಿ ಬೇರೆ ರೀತಿ ನನ್ನಿಂದ ಏನನ್ನೂ ನಿರೀಕ್ಷಿಸಬೇಡಿ ಅಂತ ಮುಖದ ಮೇಲೆ ಅವರಿಗೆ ಹೇಳಿದ್ದೇನೆ ಎಂದು ಕರಾಳ ದಿನದ ಬಗ್ಗೆ ಮನಸ್ಸು ಬಿಚ್ಚಿ ಮಾತನಾಡಿದ್ದಾರೆ.

ತಮ್ಮ ಅಮೋಘ ನಟನೆಯ ಮೂಲಕ ಮಲಯಾಳಂ ಚಿತ್ರರಂಗದಿಂದ ನಾಯಕಿಯಾಗಿ ಬಣ್ಣದ ಲೋಕಕ್ಕೆ ಕಾಲಿಟ್ಟ ನಟಿ ನಯನತಾರಾ ಕನ್ನಡ, ತೆಲುಗು, ತಮಿಳು ಭಾಷೆಗಳಲ್ಲಿ ಇಂದು ನಂಬರ್‌ ವನ್ ನಾಯಕಿಯಾಗಿ ಮಿಂಚುತ್ತಿದ್ದಾರೆ.

ಸದ್ಯ ʼಜವಾನ್ʼ ಚಿತ್ರದ ಮೂಲಕ ಬಾಲಿವುಡ್‌ನಲ್ಲಿ ಶಕ್ತಿ ಪ್ರದರ್ಶನ ತೋರಲು ಮುಂದಾಗಿದ್ದಾರೆ. ಈ ಚಿತ್ರದಲ್ಲಿ ನಯನತಾರಾ ಶಾರುಖ್ ಖಾನ್ ಜೊತೆಗೆ ವಿಜಯ್ ಸೇತುಪತಿ, ದೀಪಿಕಾ ಪಡುಕೋಣೆ, ಪ್ರಿಯಾಮಣಿ, ಸೋನಿಯಾ ಮಲ್ಹೋತ್ರಾ ಮತ್ತು ಸುನಿಲ್ ಗ್ರೋವರ್ ಪ್ರಮುಖ ಪಾತ್ರಗಳನ್ನು ಕಾಣಿಸಿಕೊಳ್ಳಲಿದ್ದಾರೆ.

ಕಳೆದ ಕೆಲವು ದಿನಗಳ ಹಿಂದೆ ನಯನತಾರಾ ನಟನೆಯ ‘ಕನೆಕ್ಟ್ʼ ಚಿತ್ರ ಬಿಡುಗಡೆಯಾಗಿತ್ತು. ಆದರೆ ಹಾರರ್ ಥ್ರಿಲ್ಲರ್ ಸಿನಿಮಾ ಕತೆ ಜನರಿಗೆ ಅಷ್ಟೆನೂ ಇಷ್ಟವಾಗಿರಲಿಲ್ಲ.

ಕಳೆದ ವರ್ಷ ನಯನತಾರಾ ಅವರು ನಿರ್ದೇಶಕ ವಿಘ್ನೇಶ್ ಶಿವನ್ ಅವರನ್ನು ಮದುವೆಯಾಗಿದ್ದರು. ಈಚೆಗೆ ಅವಳಿ ಮಕ್ಕಳ ತಾಯಿಯಾಗಿದ್ದಾರೆ.

Related post

ದಿನ‌ ಭವಿಷ್ಯ 15-04-2024 ಸೋಮವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 15-04-2024 ಸೋಮವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮ ದಯಾಳು ಪ್ರಕೃತಿ ಇಂದು ಅನೇಕ ಸಂತೋಷದ ಕ್ಷಣಗಳನ್ನು ತರುತ್ತದೆ. ಲೋನ್ ತೆಗೆದುಕೊಂಡಿರುವ ಜನರಿಗೆ ಲೋನ್ ನ ಮೊತ್ತವನ್ನು ಮರುಪಾವತಿಸುವಲ್ಲಿ ತೊಂದರೆಗಳು ಉಂಟಾಗಬಹುದು. ಮನೆಯಲ್ಲಿ ನಿಮ್ಮ ಮಕ್ಕಳು ಅತಿಶಯೋಕ್ತಿಯಿರುವ…
ದಿನ‌ ಭವಿಷ್ಯ 14-04-2024 ಭಾನುವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 14-04-2024 ಭಾನುವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನೀವು ಧೀರ್ಘಕಾಲೀನ ಅನಾರೋಗ್ಯದಿಂದ ಬಳಲಬಹುದು. ಇಂದು ಯಾವುದೇ ಸಹಾಯವಿಲ್ಲದೆ, ನೀವು ಹಣವನ್ನು ಗಳಿಸುವಲ್ಲಿ ಸಾಮರ್ತ್ಯರಾಗಿರುತ್ತೀರಿ. ಯಾರಾದರೂ ನಿಮಗೆ ಹಾನಿ ಮಾಡಲು ಪ್ರಯತ್ನಿಸಬಹುದು – ಬಲವಾದ ಶಕ್ತಿಗಳು ನಿಮ್ಮ ವಿರುದ್ಧ…
ರಾಮೇಶ್ವರ ಕೆಫೆ ಬಾಂಬ್ ಸ್ಫೋಟ ಪ್ರಕರಣ – ಇಬ್ಬರು ಬಂಧಿತ ಉಗ್ರರನ್ನು ಬೆಂಗಳೂರಿಗೆ ಕರೆತಂದ NIA ಅಧಿಕಾರಿಗಳು

ರಾಮೇಶ್ವರ ಕೆಫೆ ಬಾಂಬ್ ಸ್ಫೋಟ ಪ್ರಕರಣ – ಇಬ್ಬರು ಬಂಧಿತ ಉಗ್ರರನ್ನು…

ನ್ಯೂಸ್ ಆ್ಯರೋ : ರಾಮೇಶ್ವರಂ ಕೆಫೆ ಬಾಂಬ್ ಬ್ಲಾಸ್ಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಉಗ್ರರನ್ನು NIA ಅಧಿಕಾರಿಗಳು ಬೆಂಗಳೂರಿಗೆ ಕರೆತಂದಿದ್ದಾರೆ. ಅಬ್ದುಲ್ ಮತೀನ್ ತಾಹಾ ಹಾಗೂ ಮುಜಾವಿರ್ ಹುಸೇನ್…

Leave a Reply

Your email address will not be published. Required fields are marked *