ಗಂಡು ಮಗುವಿಗೆ ಜನ್ಮ ನೀಡಿದ ‘ಮಂಗ್ಳೂರ್ ಹುಡ್ಗಿ’ ರಾಧಿಕಾ ರಾವ್

ಗಂಡು ಮಗುವಿಗೆ ಜನ್ಮ ನೀಡಿದ ‘ಮಂಗ್ಳೂರ್ ಹುಡ್ಗಿ’ ರಾಧಿಕಾ ರಾವ್

ನ್ಯೂಸ್ ಆ್ಯರೋ‌ : ಕನ್ನಡ, ತುಳು, ತಮಿಳು ಸಿನಿಮಾ, ಧಾರಾವಾಹಿಗಳಲ್ಲಿ ನಟಿಸಿದ್ದ ರಾಧಿಕಾ ರಾವ್ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಕರಾವಳಿ ಮೂಲದ ಈ ನಟಿ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಜು. 5ರಂದು ಗಂಡು ಮಗುವಿನ ತಾಯಿಯಾದರು.

2020ರಲ್ಲಿ ವಿವಾಹ

ಇಂಟರ್ ನ್ಯಾಷನಲ್ ಮ್ಯಾಜಿಷಿಯನ್-ಮೈಂಡ್ ರೀಡರ್ ಆಕರ್ಷ್ ಭಟ್ ಅವರನ್ನು ರಾಧಿಕಾ 2020ರಲ್ಲಿ ಮದುವೆಯಾಗಿದ್ದರು. ಪರಸ್ಪರ ಪ್ರೀತಿಸಿ ಬಳಿಕ ಎರಡೂ ಮನೆಯವರ ಒಪ್ಪಿಗೆ ಪಡೆದು ಈ ಜೋಡಿ ಸಪ್ತಪದಿ ತಿಳಿದಿತ್ತು. ಇತ್ತೀಚೆಗೆ ರಾಧಿಕಾ ಬೇಬಿ ಬಂಪ್ ಫೋಟೋ ಶೂಟ್ ಮಾಡಿಸಿ ಗಮನ ಸೆಳೆದಿದ್ದರು.

‘ಮಂಗ್ಳೂರ್ ಹುಡ್ಗಿ ಹುಬ್ಳಿ ಹುಡ್ಗ’, ‘ರಾಧಾ ಕಲ್ಯಾಣ’ ಧಾರಾವಾಹಿಗಳಲ್ಲಿ ಅಭಿನಯಿಸುವ ಮೂಲಕ ರಾಧಿಕಾ ಕಿರುತೆರೆ ಪ್ರೇಕ್ಷಕರ ಮನಸ್ಸು ಗೆದ್ದಿದ್ದರು. ಅಲ್ಲದೆ ‘ಪೊನ್ನುಕ್ಕ್ ತಂಗ ಮನಸ್’ ತಮಿಳು ಸೀರಿಯಲ್ ನಲ್ಲೂ ನಟಿಸಿದ್ದರು.

ತುಳು ಚಿತ್ರ ‘ಏಸ’ದಲ್ಲಿ ನಾಯಕಿ ಪಾತ್ರದ ಮೂಲಕ ಕೋಸ್ಟಲ್ ವುಡ್ ಪ್ರೇಕ್ಷಕರ ಗಮನ ಸೆಳೆದಿದ್ದರು. ಅಲ್ಲದೆ ‘ಪುದರ್ಗೊಂಜಿ ಬುಡೆದಿ’ ತುಳು ಚಿತ್ರದಲ್ಲೂ ಬಣ್ಣ ಹಚ್ಚಿದ್ದಾರೆ. ಕನ್ನಡದ ‘ಲುಂಗಿ’ ಚಿತ್ರದಲ್ಲೂ ಕಾಣಿಸಿಕೊಂಡಿದ್ದಾರೆ.

Related post

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ ಮದುವೆ

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ…

ನ್ಯೂಸ್ ಆರೋ: ಬರೋಬ್ಬರಿ 25 ವರ್ಷಗಳಿಂದ ಪ್ರೀತಿಸುತ್ತಿದ್ದ ಜೋಡಿಯೊಂದು ಮಂತ್ರ ಮಾಂಗಲ್ಯ ಮೂಲಕ ಮದುವೆಯಾಗುವ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಟ್ಟಿರುವ ಅಪರೂಪದ ಘಟನೆ ತುಮಕೂರಲ್ಲಿ ನಡೆದಿದೆ. ಹೌದು ಜನಾಂದೋಲನದಲ್ಲಿ…
ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು! ಏನಿದು ವಿಷಯ?

ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು!…

ನ್ಯೂಸ್ ಆರೋ: ಎಷ್ಟೋ ಬಾರಿ ನಾವು ಈ ಹೊಟೇಲ್ ಗಳಿಗೆ ಹೋದಾಗ, ಅಲ್ಲಿ ಜನರು ವೆಜ್ ಮಂಚೂರಿಯನ್ನು ಆರ್ಡರ್ ಮಾಡಿದರೆ ಚಿಕನ್ ಮಂಚೂರಿ ತಂದು ಟೇಬಲ್ ಮೇಲೆ ಇಟ್ಟಿರುವ…
ಮದ್ವೆಗೂ ಮುಂಚೆಯೇ ಐದು ಮಂದಿ ತಾರೆಯರ ಜೊತೆ ಡೇಟ್ ಮಾಡಿದ್ದ ವಿರಾಟ್..!

ಮದ್ವೆಗೂ ಮುಂಚೆಯೇ ಐದು ಮಂದಿ ತಾರೆಯರ ಜೊತೆ ಡೇಟ್ ಮಾಡಿದ್ದ ವಿರಾಟ್..!

ನ್ಯೂಸ್ ಆರೋ: ಬಾಲಿವುಡ್‌ನ ಖ್ಯಾತ ನಟಿ ಅನುಷ್ಕಾ ಶರ್ಮಾ ಹಾಗೂ ಟೀಂ ಇಂಡಿಯಾದ ಖ್ಯಾತ ಕ್ರಿಕೆಟಿಗ ವಿರಾಟ್ ಕೊಹ್ಲಿ ಅವರ ಪರಿಚಯ ಯಾರಿಗೂ ಅಗತ್ಯವಿಲ್ಲ. ಇತ್ತೀಚೆಗಷ್ಟೇ ಅಂದರೆ ಮೇ…

Leave a Reply

Your email address will not be published. Required fields are marked *