ಥಾಯ್ಲೆಂಡ್‌ನಲ್ಲಿ ಸ್ಯಾಂಡಲ್‌ವುಡ್‌ನ ಸಹೋದರಿಯರ ಮೋಜು ಮಸ್ತಿ – ಜಾಲತಾಣಗಳಲ್ಲಿ ಹರಿದಾಡುತ್ತಿವೆ ನಟಿಯರ ಫೋಟೊಗಳು..

ಥಾಯ್ಲೆಂಡ್‌ನಲ್ಲಿ ಸ್ಯಾಂಡಲ್‌ವುಡ್‌ನ ಸಹೋದರಿಯರ ಮೋಜು ಮಸ್ತಿ – ಜಾಲತಾಣಗಳಲ್ಲಿ ಹರಿದಾಡುತ್ತಿವೆ ನಟಿಯರ ಫೋಟೊಗಳು..

ನ್ಯೂಸ್‌ ಆ್ಯರೋ : ಸ್ಯಾಂಡಲ್‌ವುಡ್‌ನ ಸಹೋದರಿಯರಾದ ನೇಹಾ ಗೌಡ ಹಾಗೂ ಕಿರುತೆರೆ ನಟಿ ನೇಹಾ ಗೌಡ ಥಾಯ್ಲೆಂಡ್‌ಗೆ ಪ್ರವಾಸಕ್ಕೆ ತೆರಳಿದ್ದು, ಮೋಜು ಮಸ್ತಿಯ ಫೋಟೊಗಳು ಜಾಲತಾಣಗಳಲ್ಲಿ ಹರಿದಾಡುತ್ತಿವೆ.

ಅಕ್ಕ– ತಂಗಿಯರು ತಮ್ಮ ಸ್ನೇಹಿತರೊಂದಿಗೆ ಥಾಯ್ಲೆಂಡ್‌ ಬೀಚ್‌ನಲ್ಲಿ ಎಂಜಾಯ್‌ ಮಾಡಿದ್ದಾರೆ. ಸ್ಕೂಬಾ ಡೈವಿಂಗ್‌ ಮಾಡಿದ್ದಾರೆ. ಈ ಸುಂದರ ಫೋಟೋಗಳನ್ನು ಸೋನು ಗೌಡ ಹಾಗೂ ನೇಹಾ ಗೌಡ ಇಬ್ಬರೂ ತಮ್ಮ ಸೋಷಿಯಲ್‌ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ನೇಹಾ ಗೌಡ ಕಿರುತೆರೆಯಲ್ಲಿ ಲಕ್ಷ್ಮಿ ಬಾರಮ್ಮ ಧಾರಾವಾಹಿ ಹಾಗೂ ಬಿಗ್‌ ಬಾಸ್‌ ಸ್ಪರ್ಧಿಯಾಗಿ ಬಹಳ ಫೇಮಸ್.‌ ಸೋನು ಗೌಡ ಅವರು ಗುಳ್ಟೂ, ಇಂತಿ ನಿನ್ನ ಪ್ರೀತಿಯ ಸಿನಿಮಾಗಳ ಮೂಲಕ ಬಹಳ ಫೇಮಸ್.‌ ಅಕ್ಕ ಬೆಳ್ಳಿ ಪರದೆ ಮೇಲೆ ಮಿಂಚುತ್ತಿದ್ದರೆ, ತಂಗಿ ಕಿರುತೆರೆಯಲ್ಲಿ ಹೆಸರಾಗಿದ್ದಾರೆ.

ಥಾಯ್ಲೆಂಡ್‌ ಸುಂದರ ತಾಣಗಳಲ್ಲಿ ಕ್ಲಿಕ್ಕಿಸಿರುವ ಫೋಟೋಗಳನ್ನು ಸೋನು ಹಾಗೂ ಸ್ನೇಹ ಅಭಿಮಾನಿಗಳು ಬಹಳ ಇಷ್ಟಪಟ್ಟಿದ್ದಾರೆ. ನೇಹಾ ಗೌಡ 2 ವರ್ಷಗಳ ನಂತರ ಮತ್ತೆ ಕಿರುತೆರೆಗೆ ಕಂ ಬ್ಯಾಕ್‌ ಮಾಡಿದ್ದಾರೆ.

ಸ್ಟಾರ್‌ ಸುವರ್ಣ ವಾಹಿನಿಯಲ್ಲಿ ನೇಹಾ ಅಭಿನಯದ ಹೊಸ ಧಾರಾವಾಹಿ ‘ನಮ್ಮ ಲಚ್ಚಿ’ ಪ್ರಸಾರವಾಗುತ್ತಿದೆ. ವಿಜಯ್‌ ಸೂರ್ಯ ಕೂಡಾ ಈ ಧಾರಾವಾಹಿಯಲ್ಲಿ ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದಾರೆ.

ಸೋನು ಗೌಡ ಕಳೆದ ವರ್ಷ ತೆರೆ ಕಂಡ ಕನ್ನಡದ ಡಿಯರ್‌ ವಿಕ್ರಮ್‌, ತಮಿಳಿನ ವಾರ್ಡ್‌ 126 ನಂತರ ಹೊಸ ಸಿನಿಮಾ ಅನೌನ್ಸ್‌ ಮಾಡಿಲ್ಲ.

Related post

ದಿನ‌ ಭವಿಷ್ಯ 22-04-2024 ಸೋಮವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 22-04-2024 ಸೋಮವಾರ| ಇಂದಿನ ರಾಶಿಫಲ ಹೀಗಿದೆ..

ಮೇಷತುಂಬಾ ಚಿಂತೆ ಮಾನಸಿಕ ಶಾಂತಿಗೆ ಭಂಗ ತರಬಹುದು. ಆತಂಕ, ಉದ್ವೇಗದ ಪ್ರತೀ ತುಣುಕೂ ದೇಹದ ಮೇಲೆ ಪ್ರತಿಕೂಲ ಪರಿಣಾಮ ಬೀರುವುದರಿಂದ ಇದನ್ನು ತಡೆಯಿರಿ. ಬಯಸದೆ ಇರುವ ಯಾವುದೇ ಅತಿಥಿ…
Loksabha Election 2024 : ಇಂದು ಮೊದಲ ಹಂತದ ಮತದಾನ ಆರಂಭ – 102 ಕ್ಷೇತ್ರಗಳಲ್ಲಿ ಅದೃಷ್ಟ ಪರೀಕ್ಷೆಗಿಳಿದ 1625 ಅಭ್ಯರ್ಥಿಗಳು

Loksabha Election 2024 : ಇಂದು ಮೊದಲ ಹಂತದ ಮತದಾನ ಆರಂಭ…

ನ್ಯೂಸ್ ಆ್ಯರೋ : ದೇಶದ ಚುಕ್ಕಾಣಿ ಹಿಡಿಯಲು ಐದು ವರ್ಷಗಳಿಗೊಮ್ಮೆ ನಡೆಯುವ ಲೋಕಸಭಾ ಚುನಾವಣೆಯಲ್ಲಿ ಈ ಬಾರಿಯ 7 ಹಂತದ ಸಾರ್ವತ್ರಿಕ ಲೋಕಸಭೆ ಚುನಾವಣೆಗೆ ಶುಕ್ರವಾರ ಚಾಲನೆ ಸಿಗಲಿದ್ದು,…
ದಿನ‌ ಭವಿಷ್ಯ 19-04-2024 ಶುಕ್ರವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 19-04-2024 ಶುಕ್ರವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮ ಆಹಾರವನ್ನು ನಿಯಂತ್ರಣದಲ್ಲಿರಿಸಿಕೊಳ್ಳಿ ಮತ್ತು ಫಿಟ್ ಆಗಿ ಉಳಿಯಲು ವ್ಯಾಯಾಮ ಮಾಡಿ. ದಿನದಲ್ಲಿ ನಂತರ ಹಣಕಾಸು ಪರಿಸ್ಥಿತಿಗಳು ಸುಧಾರಿಸುತ್ತವೆ. ಒಂದು ಒಳ್ಳೆಯ ಸುದ್ದಿ ಪಡೆಯುವ ಸಾಧ್ಯತೆಯಿದ್ದು ಇದು ನಿಮ್ಮನ್ನಷ್ಟೇ…

Leave a Reply

Your email address will not be published. Required fields are marked *