ಹೈಟೆಕ್ ವೇಶ್ಯಾವಾಟಿಕೆ ಪ್ರಕರಣದಲ್ಲಿ ಅರೆಸ್ಟ್ ವಿಚಾರ – ಬಹುದಿನಗಳ ಬಳಿಕ ಮೌನ ಮುರಿದ ಬಹುಭಾಷಾ ನಟಿ ಯಮುನಾ ಹೇಳಿದ್ದೇನು?

ಹೈಟೆಕ್ ವೇಶ್ಯಾವಾಟಿಕೆ ಪ್ರಕರಣದಲ್ಲಿ ಅರೆಸ್ಟ್ ವಿಚಾರ – ಬಹುದಿನಗಳ ಬಳಿಕ ಮೌನ ಮುರಿದ ಬಹುಭಾಷಾ ನಟಿ ಯಮುನಾ ಹೇಳಿದ್ದೇನು?

ನ್ಯೂಸ್ ಆ್ಯರೋ : ಹೈಟೆಕ್ ವೇಶ್ಯಾವಾಟಿಕೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ನಟಿ ಯಮುನಾ ಮತ್ತೆ ಸುದ್ದಿಯಲ್ಲಿದ್ದಾರೆ. ಇನ್‌ಸ್ಟಾಗ್ರಾಂನಲ್ಲಿ ವಿಡಿಯೋ ಮಾಡಿ, ಹಳೆ ಪ್ರಕರಣದಲ್ಲಿ ನಾನು ನಿರ್ದೋಷಿ ಎಂದು ಸಾಬೀತಾದಾರೂ ಸೋಷಿಯಲ್ ಮೀಡಿಯಾದಲ್ಲಿ ನನ್ನ ಬಗ್ಗೆ ಅಪಪ್ರಚಾರ ಮಾಡಲಾಗುತ್ತಿದೆ. ನಾನು ಸತ್ತರೂ ಇವರು ನನ್ನನ್ನು ಬಿಡುವಂತೆ ಕಾಣುತ್ತಿಲ್ಲ ಎಂದು ಬಹುಭಾಷಾ ನಟಿ ಯಮುನಾ ಬೇಸರ ವ್ಯಕ್ತಪಡಿಸಿದ್ದಾರೆ.

ಕಳೆದ 12 ವರ್ಷಗಳ ಹಿಂದೆ ನಡೆದ ಘಟನೆಯಿದು. ಹೈಟೆಕ್ ವೇಶ್ಯಾವಾಟಿಕೆ ಪ್ರಕರಣದಲ್ಲಿ ನಟಿ ಯಮುನಾ ಬಂಧನವಾಗಿತ್ತು. ಬೆಂಗಳೂರಿನ ವಿಠಲ್ ಮಲ್ಯ ರಸ್ತೆಯಲ್ಲಿರುವ ಐಟಿಸಿ ರಾಯಲ್ ಗಾರ್ಡೇನಿಯಾ ಹೋಟೆಲ್‌ ಮೇಲೆ ಪೊಲೀಸರು ದಾಳಿ ನಡೆಸಿದ್ದರು. ಹೋಟೆಲ್‌ನ 4ನೇ ಮಹಡಿಯಲ್ಲಿ ಕೊಠಡಿ ಬಾಡಿಗೆ ಪಡೆದು ವೇಶ್ಯಾವಾಟಿಕೆಯಲ್ಲಿ ತೊಡಗಿದ್ದರು ಎಂದು ಆರೋಪಿಸಲಾಗಿತ್ತು. ಇದೇ ಪ್ರಕರಣದಲ್ಲಿ ನಟಿ ಯಮುನಾರನ್ನು ಅರೆಸ್ಟ್ ಮಾಡಲಾಗಿತ್ತು.

ಆದ್ರೆ ಬಳಿಕ ಈ ಪ್ರಕರಣದಲ್ಲಿ ನಟಿ ಯಮುನಾಗೆ ಕೋರ್ಟ್ ಕ್ಲೀನ್ ಚಿಟ್ ನೀಡಿತ್ತು. ಸದ್ಯ ಈ ಪ್ರಕರಣದ ಬಗ್ಗೆ ಮಾತನಾಡಿರುವ ನಟಿ ಬೇಸರ ಹೊರಹಾಕಿದ್ದಾರೆ. ಈ ಪ್ರಕರಣದಲ್ಲಿ ನನ್ನದೇನು ತಪ್ಪಿಲ್ಲ. ನ್ಯಾಯಸ್ಥಾನವೇ ನನ್ನನ್ನು ನಿರ್ದೋಷಿ ಎಂದು ಹೇಳಿದೆ. ಆದರೆ ಸೋಶಿಯಲ್ ಮೀಡಿಯಾದಲ್ಲಿ ಮಾತ್ರ ಏನೇನೋ ಥಂಬ್‌ನೇಲ್ ಹಾಕಿ ಇಂದಿಗೂ ಸುಳ್ಳು ಸುದ್ದಿ ಹರಡುತ್ತಿದ್ದಾರೆ ಎಂದು ಅಳಲು ತೋಡಿಕೊಂಡಿದ್ದಾರೆ.

ಇನ್‌ಸ್ಟಾಗ್ರಾಂನಲ್ಲಿ ವಿಡಿಯೋ ಹಂಚಿಕೊಂಡಿರುವ ನಟಿ, ಪ್ರಕರಣ ನಡೆದು ಇಷ್ಟು ವರ್ಷ ಕಳೆದರೂ, ನಾನು ನಿರಪರಾಧಿ ಎಂದು ಸಾಬೀತಾದರೂ ಜನರು ನನ್ನ ಬಗ್ಗೆ ಅಪಪ್ರಚಾರ ಮಾಡುವುದನ್ನು ನಿಲ್ಲಿಸುತ್ತಿಲ್ಲ. ನಾನು ಸತ್ತರೂ ಇವರು ನನ್ನ ಬಗ್ಗೆ ಕೆಟ್ಟದಾಗಿ ಕಮೆಂಟ್ ಮಾಡುವುದನ್ನು ನಿಲ್ಲಿಸುವುದಿಲ್ಲ ಎಂದು ಅಸಮಾಧಾನ ಹೊರಹಾಕಿದ್ದಾರೆ.

ನನ್ನನ್ನು ನಾನು ಎಷ್ಟು ಮೋಟಿವೇಟ್ ಮಾಡಿಕೊಂಡರೂ ನನ್ನಲ್ಲಿ ಆ ನೋವು ಹಾಗೆ ಉಳಿದುಬಿಟ್ಟಿದೆ. ಅದು ಕೂಡ ಸೋಶಿಯಲ್ ಮೀಡಿಯಾ ಕಾರಣದಿಂದ. ನಾನು ಬಹಳ ಹಿಂದೆಯೇ ಒಂದು ಸಮಸ್ಯೆಯಿಂದ ಹೊರಬಂದು ಈಗ ನಿಶ್ಚಿಂತೆಯಿಂದ ಇದ್ದೀನಿ. ನಾನು ಆ ಸಮಸ್ಯೆಯಲ್ಲಿ ಸಿಲುಕಿದ್ದು ಯಾಕೆ ಎಂದು ಈಗಾಗಲೇ ಸಂದರ್ಶನಗಳಲ್ಲಿ ಕ್ಲಾರಿಟಿ ಕೊಟ್ಟಿದ್ದೇನೆ.

ಕೋರ್ಟ್’ನಲ್ಲಿಯೂ ನನಗೆ ಗೆಲುವು ಸಿಕ್ಕಿದೆ. ನನ್ನ ಬಗ್ಗೆ ಸುಳ್ಳು ಪ್ರಚಾರ ಮಾಡುವುದನ್ನು ದಯವಿಟ್ಟು ನಿಲ್ಲಿಸಿ, ನನ್ನನ್ನು ನನ್ನ ಪಾಡಿಗೆ ಬಿಟ್ಟುಬಿಡಿ ಎಂದು ಮನವಿ ಮಾಡಿಕೊಂಡಿದ್ದಾರೆ. ಇನ್ನು ಯಮುನಾ ವಿಡಿಯೋ ನೋಡಿದ ಅಭಿಮಾನಿಗಳು ಧೈರ್ಯ ತುಂಬುತ್ತಿದ್ದಾರೆ.

ಬೆಂಗಳೂರಿನಲ್ಲಿ ಹುಟ್ಟಿ ಬೆಳೆದ ಯಮುನಾ ದಕ್ಷಿಣ ಭಾರತದ 4 ಭಾಷೆಯ ಸಿನಿಮಾಗಳಲ್ಲಿ ನಟಿಸಿದ್ದಾರೆ. 1987ರಲ್ಲಿ ತಮಿಳು ಸಿನಿಮಾ ಮೂಲಕ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟ ಯಮುನಾ ಮೋಡದ ಮರೆಯಲ್ಲಿ, ಚಿನ್ನ, ಶ್ರೀಮಂಜುನಾಥ, ಹಾಗೆ ಸುಮ್ಮನೆ, ಕಂಠೀರವ, ದಿಲ್ ರಂಗೀಲಾ ಸೇರಿದಂತೆ ಹಲವು ಸಿನಿಮಾಗಳಲ್ಲಿ ನಟಿಸಿದ್ದಾರೆ. ಸದ್ಯ ಕಿರುತೆರೆ ಧಾರಾವಾಹಿಗಳಲ್ಲಿ ಯಮುನಾ ಬ್ಯುಸಿಯಾಗಿದ್ದಾರೆ.

Related post

ದಿನ‌ ಭವಿಷ್ಯ 21-05-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 21-05-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ಮೇಷಸಂತೃಪ್ತಿಯ ಜೀವನಕ್ಕಾಗಿ ನಿಮ್ಮ ಮಾನಸಿಕ ದೃಢತೆಯನ್ನು ಸುಧಾರಿಸಿ. ನೀವು ಇಂದು ಗಣನೀಯ ಪ್ರಮಾಣದ ಹಣವನ್ನು ಸಹ ಹೊಂದಿರುತ್ತೀರಿ ಮತ್ತು ಅದರೊಂದಿಗೆ ಮನಸ್ಸಿನ ಶಾಂತಿ ಇರುತ್ತದೆ. ಸ್ನೇಹಿತರು ಸಂತೋಷದ ಸಂಜೆಗಾಗಿ…
ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ ಮದುವೆ

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ…

ನ್ಯೂಸ್ ಆರೋ: ಬರೋಬ್ಬರಿ 25 ವರ್ಷಗಳಿಂದ ಪ್ರೀತಿಸುತ್ತಿದ್ದ ಜೋಡಿಯೊಂದು ಮಂತ್ರ ಮಾಂಗಲ್ಯ ಮೂಲಕ ಮದುವೆಯಾಗುವ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಟ್ಟಿರುವ ಅಪರೂಪದ ಘಟನೆ ತುಮಕೂರಲ್ಲಿ ನಡೆದಿದೆ. ಹೌದು ಜನಾಂದೋಲನದಲ್ಲಿ…
ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು! ಏನಿದು ವಿಷಯ?

ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು!…

ನ್ಯೂಸ್ ಆರೋ: ಎಷ್ಟೋ ಬಾರಿ ನಾವು ಈ ಹೊಟೇಲ್ ಗಳಿಗೆ ಹೋದಾಗ, ಅಲ್ಲಿ ಜನರು ವೆಜ್ ಮಂಚೂರಿಯನ್ನು ಆರ್ಡರ್ ಮಾಡಿದರೆ ಚಿಕನ್ ಮಂಚೂರಿ ತಂದು ಟೇಬಲ್ ಮೇಲೆ ಇಟ್ಟಿರುವ…

Leave a Reply

Your email address will not be published. Required fields are marked *