‘ಪುಷ್ಪ 2’ ಚಿತ್ರದ ಆಡಿಯೋ ರೈಟ್ಸ್ ದಾಖಲೆ ಮೊತ್ತಕ್ಕೆ ಮಾರಾಟ – ಇದುವರೆಗಿನ ಎಲ್ಲಾ ರೆಕಾರ್ಡ್ ಉಡೀಸ್..!!

‘ಪುಷ್ಪ 2’ ಚಿತ್ರದ ಆಡಿಯೋ ರೈಟ್ಸ್ ದಾಖಲೆ ಮೊತ್ತಕ್ಕೆ ಮಾರಾಟ – ಇದುವರೆಗಿನ ಎಲ್ಲಾ ರೆಕಾರ್ಡ್ ಉಡೀಸ್..!!

ನ್ಯೂಸ್ ಆ್ಯರೋ‌ : ಸದ್ಯ ದಕ್ಷಿಣ ಭಾರತದ ಚಿತ್ರಗಳು ದೇಶಾದ್ಯಂತ ಸದ್ದು ಮಾಡುತ್ತಿವೆ. ಅದರಲ್ಲೂ ‘ಆರ್.ಆರ್.ಆರ್.’, ‘ಕೆ.ಜಿ.ಎಫ್.-2’, ‘ಕಾಂತಾರ’, ‘ವಿಕ್ರಾಂತ್ ರೋಣ’, ‘ಪುಷ್ಪ’ ಚಿತ್ರಗಳು ಬಾಕ್ಸ್ ಆಫೀಸ್ ನಲ್ಲಿ ಸೂಪರ್ ಹಿಟ್ ಆದ ಬಳಿಕ ಇಲ್ಲಿನ ಚಿತ್ರಗಳಿಗೆ ಬೇಡಿಕೆ ಹೆಚ್ಚಾಗಿದೆ. ಪ್ರಸ್ತುತ ಚಿತ್ರೀಕರಣ ಹಂತದಲ್ಲಿರುವಾಗಲೇ ‘ಪುಷ್ಪ 2’ ಚಿತ್ರಕ್ಕೆ ಸಖತ್ ಬೇಡಿಕೆ ಸೃಷ್ಟಿಯಾಗಿದೆ. ತೆಲುಗು ಮೂಲದ ಈ ಪ್ಯಾನ್ ಇಂಡಿಯಾ ಚಿತ್ರದ ಆಡಿಯೋ ರೈಟ್ಸ್ ದಾಖಲೆಯ ಮೊತ್ತಕ್ಕೆ ಮರಾಟವಾಗಿ ಇತಿಹಾಸ ನಿರ್ಮಿಸಿದೆ ಎನ್ನಲಾಗುತ್ತಿದೆ.

2021ರಲ್ಲಿ ತೆರೆಕಂಡ ‘ಪುಷ್ಪ’ ಚಿತ್ರದ ಮುಂದುವರಿದ ಭಾಗ ಇದಾಗಿದೆ. ಮೊದಲ ಭಾಗ ಸೂಪರ್ ಹಿಟ್ ಆಗಿದ್ದರಿಂದ ಈ ಚಿತ್ರದ ಮೇಲೆ ಸಹಜವಾಗಿಯೇ ನಿರೀಕ್ಷೆ ಹೆಚ್ಚಾಗಿದೆ. ಮೊದಲ ಭಾಗದಲ್ಲಿ ಸುಕುಮಾರ್ ನಿರ್ದೇಶನ, ಅಲ್ಲು ಅರ್ಜುನ್-ರಶ್ಮಿಕಾ ಮಂದಣ್ಣ ಜೋಡಿ, ದೇವಿಶ್ರೀ ಪ್ರಸಾದ್ ಸಂಗೀತ, ಫಹಾದ್ ಫಸೀಲ್ ಎಂಟ್ರಿ ಗಮನ ಸೆಳೆದಿತ್ತು. ಇವೆಲ್ಲ ಅಂಶ ಎರಡನೇ ಭಾಗದಲ್ಲೂ ಮುಂದುವರಿದಿದ್ದು, ಅಭಿಮಾನಿಗಳ ಕಾತುರ ಹೆಚ್ಚಿಸಿದೆ.

ಇದೀಗ ‘ಪುಷ್ಪ-2’ ಚಿತ್ರದ ಚಿತ್ರದ ಎಲ್ಲಾ ಭಾಷೆಗಳ ಆಡಿಯೋ ರೈಟ್ಸ್‌ನ ಟೀ- ಸೀರಿಸ್ ಸಂಸ್ಥೆ ಬರೋಬ್ಬರಿ 65 ಕೋಟಿ ರೂ.ಗೆ ಕೊಂಡುಕೊಂಡಿದೆ ಎನ್ನಲಾಗುತ್ತಿದೆ. ಸುದ್ದಿ ನಿಜವಾಗಿದ್ದರೆ ಇದು ದಾಖಲೆಯೇ ಸರಿ.

ಈ ಹಿಂದೆ ರಾಜಮೌಳಿ ನಿರ್ದೇಶನದ ‘ಆರ್.ಆರ್.ಆರ್.’ ಆಡಿಯೋ 26 ಕೋಟಿ ರೂ.ಗೆ ಮಾರಾಟವಾಗಿ ದಾಖಲೆ ಬರೆದಿತ್ತು. ಈವರೆಗೆ ಅದೇ ದೊಡ್ಡ ಮೊತ್ತ ಎನ್ನಲಾಗುತ್ತಿತ್ತು. ಆದರೆ ಅದಕ್ಕಿಂತ 2 ಪಟ್ಟು ಹೆಚ್ಚು ಮೊತ್ತಕ್ಕೆ ‘ಪುಷ್ಪ-2’ ಹಕ್ಕು ಮಾರಾಟವಾದಂತಾಗಿದೆ. ಇನ್ನು ‘ಪೊನ್ನಿಯಿನ್ ಸೆಲ್ವನ್’ ಆಡಿಯೋ 24 ಕೋಟಿ ರೂ., ‘ಸಾಹೋ’ 22 ಕೋಟಿ ರೂ., ‘ಲಿಯೋ’ 16 ಕೋಟಿ ರೂ.ಗೆ ಮಾರಾಟವಾಗಿತ್ತು.

ಸರಣಿಯ ಮೊದಲ ಚಿತ್ರಕ್ಕಿಂತ ಹಲವು ಪಟ್ಟು ದೊಡ್ಡದಾಗಿ 2ನೇ ಚಿತ್ರವನ್ನು ತೆರೆಗೆ ತರಲಾಗುತ್ತಿದೆ. 1,000 ಕೋಟಿ ರೂ. ಕಲೆಕ್ಷನ್ ಟಾರ್ಗೆಟ್ ಮಾಡಿ ಸಿನಿಮಾ ಶೂಟಿಂಗ್, ಪ್ರಮೋಷನ್, ರಿಲೀಸ್ ಪ್ಲಾನ್ ನಡೆಯುತ್ತಿದೆ. ಮುಂದಿನ ವರ್ಷ ಸಿನಿಮಾ ತೆರೆಗೆ ಬರುವ ಸಾಧ್ಯತೆಯಿದೆ.

Related post

ಡೈರೆಕ್ಟರ್​ ಹುದ್ದೆಗೆ ಅರ್ಜಿ ಆಹ್ವಾನಿಸಿದ UIDAI; ತಿಂಗಳಿಗೆ 2 ಲಕ್ಷಕ್ಕೂ ಅಧಿಕ ಸಂಬಳ

ಡೈರೆಕ್ಟರ್​ ಹುದ್ದೆಗೆ ಅರ್ಜಿ ಆಹ್ವಾನಿಸಿದ UIDAI; ತಿಂಗಳಿಗೆ 2 ಲಕ್ಷಕ್ಕೂ ಅಧಿಕ…

ನ್ಯೂಸ್ ಆರೋ: ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 3 ಡೈರೆಕ್ಟರ್, ಅಸಿಸ್ಟೆಂಟ್ ಡೈರೆಕ್ಟರ್​ ಹುದ್ದೆಗಳು…
ಅರವಿಂದ್ ಕೇಜ್ರಿವಾಲ್‌ಗೆ ಮಧ್ಯಂತರ ಜಾಮೀನು ನೀಡಿ ಸುಪ್ರೀಂ ಕೋರ್ಟ್ ಆದೇಶ

ಅರವಿಂದ್ ಕೇಜ್ರಿವಾಲ್‌ಗೆ ಮಧ್ಯಂತರ ಜಾಮೀನು ನೀಡಿ ಸುಪ್ರೀಂ ಕೋರ್ಟ್ ಆದೇಶ

ನ್ಯೂಸ್ ಆ್ಯರೋ : ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್‌ ಅವರಿಗೆ ಮಧ್ಯಂತರ ಜಾಮೀನು ನೀಡಿ ಇಂದು…
ಆರೋಗ್ಯ ಸಮಸ್ಯೆ; 14 ತಿಂಗಳ ಬಳಿಕ ಸ್ಯಾಂಟ್ರೋ ರವಿಗೆ ಜಾಮೀನು ನೀಡಿದ ನ್ಯಾಯಾಲಯ

ಆರೋಗ್ಯ ಸಮಸ್ಯೆ; 14 ತಿಂಗಳ ಬಳಿಕ ಸ್ಯಾಂಟ್ರೋ ರವಿಗೆ ಜಾಮೀನು ನೀಡಿದ…

ನ್ಯೂಸ್ ಆ್ಯರೋ : ಅತ್ಯಾಚಾರ, ಕೊಲೆ ಬೆದರಿಕೆ ಪ್ರಕರಣದ ಆರೋಪಿ ಕೆ.ಎಸ್.ಮಂಜುನಾಥ್ ಅಲಿಯಾಸ್ ಸ್ಯಾಂಟ್ರೋ ರವಿಗೆ ಮೈಸೂರಿನ ಆರನೇ ಹೆಚ್ಚುವರಿ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಪ್ರಕರಣದಲ್ಲಿ ಬಂಧಿತನಾಗಿ…

Leave a Reply

Your email address will not be published. Required fields are marked *