ಕಿರುತೆರೆಯಲ್ಲಿ ಅನಿರುದ್ಧ್ ಹೊಸ ಜರ್ನಿ ಶುರು – ‘ಸೂರ್ಯವಂಶ’ ಧಾರಾವಾಹಿಗೆ ಆರ್ಯವರ್ಧನ್  ನಾಯಕ..!!

ಕಿರುತೆರೆಯಲ್ಲಿ ಅನಿರುದ್ಧ್ ಹೊಸ ಜರ್ನಿ ಶುರು – ‘ಸೂರ್ಯವಂಶ’ ಧಾರಾವಾಹಿಗೆ ಆರ್ಯವರ್ಧನ್ ನಾಯಕ..!!

ನ್ಯೂಸ್ ಆ್ಯರೋ : ಸಾಹಸಸಿಂಹ ವಿಷ್ಣುವರ್ಧನ್ ಅಳಿಯ ನಟ ಅನಿರುದ್ಧ್ ‘ಸೂರ್ಯವಂಶ’ ಧಾರಾವಾಹಿ ಮೂಲಕ ಮತ್ತೆ ತೆರೆ ಮೇಲೆ ಕಾಣಿಸಿಕೊಳ್ಳಲಿದ್ದಾರೆ. ಜೊತೆ ಜೊತೆಯಲಿ ಧಾರಾವಾಹಿಯಿಂದ ಹೊರ ನಡೆದ ನಂತರ ನಟ ಅನಿರುದ್ಧ್ ಅಭಿಮಾನಿಗಳು ಬೇಸರಗೊಂಡಿದ್ದರು. ಮತ್ತೆ ಜೊತೆ ಜೊತೆಯಲಿ ಧಾರಾವಾಹಿಗೆ ಅನಿರುದ್ಧ್ ಬರಬೇಕು ಅಂತ ಆಗ್ರಹಿಸಿದ್ದರು. ಆದ್ರೀಗ ಹೊಸತೊಂದು ಧಾರಾವಾಹಿ ಮೂಲಕ ಮತ್ತೆ ಕಿರುತೆರೆಗೆ ಅನಿರುದ್ಧ್ ಎಂಟ್ರಿಯಾಗುತ್ತಿರುವ ಸುದ್ದಿ ಕೇಳಿ ಫ್ಯಾನ್ಸ್ ಖುಷಿಯಾಗಿದ್ದಾರೆ.ತುಂಟಾಟ, ಜೇಷ್ಠ, ನೀನೆಲ್ಲೋ ನಾನಲ್ಲೆ ಸೇರಿದಂತೆ ಸಾಕಷ್ಟು ಸಿನಿಮಾಗಳಲ್ಲಿ ಹೀರೋ ಆಗಿ ಕಾಣಿಕೊಂಡಿದ್ದ ನಟ ಅನಿರುದ್ಧ್ ಬಳಿಕ ಚಿತ್ರರಂಗದಿಂದ ದೂರ ಉಳಿದಿದ್ದರು. ಜೀ ಕನ್ನಡದಲ್ಲಿ ಪ್ರಸಾರವಾಗುತ್ತಿರುವ ಜೊತೆ ಜೊತೆಯಲಿ ಧಾರಾವಾಹಿ ಮೂಲಕ ಬಣ್ಣದ ಲೋಕದಲ್ಲಿ ತಮ್ಮ ಸೆಕೆಂಡ್ ಇನ್ನಿಂಗ್ಸ್ ಪ್ರಾರಂಭಿಸಿದ್ದ ಅನಿರುದ್ಧ್ ಆರ್ಯವರ್ಧನ್ ಪಾತ್ರದ ಮೂಲಕ ಪ್ರೇಕ್ಷಕರ ಮನಸೆಳೆದಿದ್ದರು. ಎಷ್ಟೋ ಮಂದಿ ಅನಿರುದ್ಧ್’ಗಾಗಿಯೇ ಸೀರಿಯಲ್ ನೋಡುತ್ತಿದ್ದರು. ಆ ಮಟ್ಟಿಗೆ ಆರ್ಯ ಪಾತ್ರದ ಮೂಲಕ ಅನಿರುದ್ಧ್ ಜನರನ್ನು ಮೋಡಿ ಮಾಡಿದ್ದರು. ಮಾತ್ರವಲ್ಲ, ಟಿಆರ್‌ಪಿ ವಿಚಾರದಲ್ಲೂ ಜೊತೆ ಜೊತೆಯಲಿ ಧಾರವಾಹಿ ಮುಂದಿತ್ತು.ಆದ್ರೆ ಸೆಟ್’ನಲ್ಲಿ ಆದ ಕಿರಿಕ್’ನಿಂದಾಗಿ ಜೊತೆ ಜೊತೆಯಲಿ ಧಾರಾವಾಹಿಯಿಂದ ಹೊರ ನಡೆದ ನಂತರ ನಟ ಅನಿರುದ್ಧ್ ಮುಂದೇನು ಮಾಡುತ್ತಾರೆ ಎನ್ನುವ ಕುತೂಹಲ ಸಹಜವಾಗಿಯೇ ಇತ್ತು. ಕಿರುತೆರೆ ನಿರ್ಮಾಪಕರ ಸಂಘವು ಅನಿರುದ್ಧ್’ಗಾಗಿ ಯಾರೂ ಧಾರಾವಾಹಿ ಮಾಡಬಾರದು ಅಂತ ಹೇಳಿದ್ದರು. ಯಾವುದೇ ವಾಹಿನಿಗಳು ಕೂಡ ಇವರಿಗೆ ಕೆಲಸ ಕೊಡದಂತೆ ಮನವಿ ಮಾಡಿಕೊಳ್ಳಲಾಗಿತ್ತು.

ಈ ಎಲ್ಲಾ ಬೆಳವಣಿಗೆಗಳಿಂದ ಅನಿರುದ್ಧ್ ಮತ್ತೆ ಕಿರುತೆರೆಯಲ್ಲಿ ಕಾಣಿಸಿಕೊಳ್ಳುವುದಿಲ್ಲ ಅಂತ ಫ್ಯಾನ್ಸ್ ಬೇಸರಗೊಂಡಿದ್ರು. ಆದ್ರೆ ಇದೀಗ ಪ್ರೇಕ್ಷಕರ ಮೆಚ್ಚಿನ ಆರ್ಯವರ್ಧನ್ ಸೂರ್ಯವಂಶ ಧಾರಾವಾಹಿಯಲ್ಲಿ ಹೀರೋ ಆಗಿ ಕಾಣಿಸಿಕೊಳ್ಳುತ್ತಿರುವ ಬಗ್ಗೆ ಸುದ್ದಿ ಹೊರಬಿದ್ದಿದೆ.ಕಿರುತೆರೆ ನಿರ್ಮಾಪಕರ ಸಂಘ ಮಾಡಿದ್ದ ಮನವಿಯನ್ನು ತಳ್ಳಿ ಹಾಕಿರುವ ಉದಯ ವಾಹಿನಿ ಸೂರ್ಯವಂಶ ಧಾರಾವಾಹಿಗೆ ಅನಿರುದ್ಧ್ ಅವರನ್ನು ಪ್ರಮುಖ ಪಾತ್ರಕ್ಕೆ ಆಯ್ಕೆ ಮಾಡಿದೆ. ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಶೇರ್ ಮಾಡಿರುವ ಅನಿರುದ್ಧ್ ತಾವು ಸೂರ್ಯವಂಶ ಧಾರಾವಾಹಿಯಲ್ಲಿ ನಟಿಸುತ್ತಿರುವುದಾಗಿ ತಿಳಿಸಿದ್ದಾರೆ.‘ಅತ್ಯಂತ ಸಂತೋಷದಿಂದ ತಮ್ಮೆಲ್ಲರ ಜೊತೆ ಒಂದು ಸಿಹಿ ಸುದ್ದಿ ಹಂಚಿಕೊಳ್ಳುತ್ತಾ ಇದ್ದೇನೆ. ನಮ್ಮೆಲ್ಲರ ನೆಚ್ಚಿನ ಉದಯ ವಾಹಿನಿಯಲ್ಲಿ ಅತಿ ಶೀಘ್ರದಲ್ಲಿ ಪ್ರಸಾರವಾಗಲಿರುವ ಕಲಾ ಸಾಮ್ರಾಟ್ ಎಸ್. ನಾರಾಯಣ್ ಅವರ ರಚನೆ ಹಾಗೂ ನಿರ್ದೇಶನದ ಹೊಸ ಧಾರಾವಾಹಿ ‘ಸೂರ್ಯವಂಶ’ದಲ್ಲಿ ನಾನು ಪ್ರಮುಖ ಪಾತ್ರದಲ್ಲಿ ಅಭಿನಯಿಸುತ್ತಾ ಇದ್ದೇನೆ. ಇದು ತಮ್ಮೆಲ್ಲರ ಹಾರೈಕೆ, ಆಶೀರ್ವಾದಗಳ ಫಲ. ತಮ್ಮ ಪ್ರೀತಿ, ಪ್ರೋತ್ಸಾಹ ನನ್ನ ಮೇಲೆ ಸದಾ ಇರುತ್ತೆ ಅನ್ನೋ ಭರವಸೆ ನನಗಿದೆ’ ಎಂದು ಅವರು ಬರೆದುಕೊಂಡಿದ್ದಾರೆ.ಸೂರ್ಯವಂಶ ಅಂದ್ರೆ ವಿಷ್ಣುವರ್ಧನ್ ನೆನಪಾಗುತ್ತಾರೆ. ಅದೆಷ್ಟು ಬಾರಿ ನೋಡಿದರೂ ಮತ್ತೆ ನೋಡಬೇಕನಿಸುವ ಸಿನಿಮಾ ಸೂರ್ಯವಂಶ. ಇದೀಗ ವಿಷ್ಣು ಅಳಿಯ ಅನಿರುದ್ಧ್ ಅವರು ಸೂರ್ಯವಂಶ ಧಾರಾವಾಹಿ ಮೂಲಕ ಪ್ರೇಕ್ಷಕರ ಮುಂದೆ ಬರಲಿದ್ದಾರೆ. ಆದ್ರೆ ಕಥೆ ಏನು? ಎನ್ನುವ ಬಗ್ಗೆ ಇನ್ನೂ ಮಾಹಿತಿ ಬಿಟ್ಟು ಕೊಟ್ಟಿಲ್ಲ. ಈ ಮಧ್ಯೆ ಅನಿರುದ್ಧ್ ಮತ್ತೆ ಧಾರಾವಾಹಿಯಲ್ಲಿ ನಟಿಸುತ್ತಿರುವ ಸುದ್ದಿ ಕೇಳಿ ಖುಷಿಯಾಗಿರುವ ಫ್ಯಾನ್ಸ್ ಅವರ ಮುಂದಿನ ಜರ್ನಿಗೆ ಶುಭ ಹಾರೈಸಿದ್ದಾರೆ.

Related post

ದಿನ‌ ಭವಿಷ್ಯ 15-04-2024 ಸೋಮವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 15-04-2024 ಸೋಮವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮ ದಯಾಳು ಪ್ರಕೃತಿ ಇಂದು ಅನೇಕ ಸಂತೋಷದ ಕ್ಷಣಗಳನ್ನು ತರುತ್ತದೆ. ಲೋನ್ ತೆಗೆದುಕೊಂಡಿರುವ ಜನರಿಗೆ ಲೋನ್ ನ ಮೊತ್ತವನ್ನು ಮರುಪಾವತಿಸುವಲ್ಲಿ ತೊಂದರೆಗಳು ಉಂಟಾಗಬಹುದು. ಮನೆಯಲ್ಲಿ ನಿಮ್ಮ ಮಕ್ಕಳು ಅತಿಶಯೋಕ್ತಿಯಿರುವ…
ದಿನ‌ ಭವಿಷ್ಯ 14-04-2024 ಭಾನುವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 14-04-2024 ಭಾನುವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನೀವು ಧೀರ್ಘಕಾಲೀನ ಅನಾರೋಗ್ಯದಿಂದ ಬಳಲಬಹುದು. ಇಂದು ಯಾವುದೇ ಸಹಾಯವಿಲ್ಲದೆ, ನೀವು ಹಣವನ್ನು ಗಳಿಸುವಲ್ಲಿ ಸಾಮರ್ತ್ಯರಾಗಿರುತ್ತೀರಿ. ಯಾರಾದರೂ ನಿಮಗೆ ಹಾನಿ ಮಾಡಲು ಪ್ರಯತ್ನಿಸಬಹುದು – ಬಲವಾದ ಶಕ್ತಿಗಳು ನಿಮ್ಮ ವಿರುದ್ಧ…
ರಾಮೇಶ್ವರ ಕೆಫೆ ಬಾಂಬ್ ಸ್ಫೋಟ ಪ್ರಕರಣ – ಇಬ್ಬರು ಬಂಧಿತ ಉಗ್ರರನ್ನು ಬೆಂಗಳೂರಿಗೆ ಕರೆತಂದ NIA ಅಧಿಕಾರಿಗಳು

ರಾಮೇಶ್ವರ ಕೆಫೆ ಬಾಂಬ್ ಸ್ಫೋಟ ಪ್ರಕರಣ – ಇಬ್ಬರು ಬಂಧಿತ ಉಗ್ರರನ್ನು…

ನ್ಯೂಸ್ ಆ್ಯರೋ : ರಾಮೇಶ್ವರಂ ಕೆಫೆ ಬಾಂಬ್ ಬ್ಲಾಸ್ಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಉಗ್ರರನ್ನು NIA ಅಧಿಕಾರಿಗಳು ಬೆಂಗಳೂರಿಗೆ ಕರೆತಂದಿದ್ದಾರೆ. ಅಬ್ದುಲ್ ಮತೀನ್ ತಾಹಾ ಹಾಗೂ ಮುಜಾವಿರ್ ಹುಸೇನ್…

Leave a Reply

Your email address will not be published. Required fields are marked *