ಅರ್ಪಿತಾ ಕರಿಮಣಿ ಮಾಲೀಕ ನಾನಲ್ಲ ಎಂದ ಕಿರಿಕ್ ಕೀರ್ತಿ – ಅರ್ಪಿತಾಗೆ ಡೈವೋರ್ಸ್ ಕೊಟ್ಟ ಬಗ್ಗೆ ಫೇಸ್‌ಬುಕ್‌ ನಲ್ಲಿ ಹೇಳಿಕೊಂಡ ಕೀರ್ತಿ

ಅರ್ಪಿತಾ ಕರಿಮಣಿ ಮಾಲೀಕ ನಾನಲ್ಲ ಎಂದ ಕಿರಿಕ್ ಕೀರ್ತಿ – ಅರ್ಪಿತಾಗೆ ಡೈವೋರ್ಸ್ ಕೊಟ್ಟ ಬಗ್ಗೆ ಫೇಸ್‌ಬುಕ್‌ ನಲ್ಲಿ ಹೇಳಿಕೊಂಡ ಕೀರ್ತಿ

ನ್ಯೂಸ್ ಆ್ಯರೋ : ಬಿಗ್ ಬಾಸ್ ಸ್ಪರ್ಧಿಯಾಗಿದ್ದ ಕಿರಿಕ್ ಕೀರ್ತಿ ಮಹತ್ವದ ಘೋಷಣೆ ಮಾಡಿದ್ದಾರೆ. ತಮ್ಮ ವೈವಾಹಿಕ ಜೀವನ ಮುಕ್ತಾಯಗೊಂಡಿರುವುನ್ನು ಬಹಿರಂಗಪಡಿಸಿದ್ದಾರೆ.

ಬಿಗ್ ಬಾಸ್’ ಸೀಸನ್ 4, ‘ಜೋಡಿ ನಂಬರ್ 1’ ರಿಯಾಲಿಟಿ ಶೋಗಳಲ್ಲಿ ಸ್ಪರ್ಧಿಯಾಗಿದ್ದ ನಟ ಹಾಗೂ ನಿರೂಪಕ ಕಿರಿಕ್ ಕೀರ್ತಿ ಪತ್ನಿಯಿಂದ ವಿಚ್ಛೇದನ ಪಡೆದುಕೊಂಡಿರುವ ಬಗ್ಗೆ ಬಹಿರಂಗಪಡಿಸಿದ್ದಾರೆ.

ಸಾಮಾಜಿಕ ಜಾಲತಾಣ ಫೇಸ್ಬುಕ್ ನಲ್ಲಿ ಪೋಸ್ಟ್ ಹಾಕಿರುವ ಕೀರ್ತಿ, ಕಾನೂನಿನ ಪ್ರಕಾರ ಇವತ್ತು ನನ್ನ ಮತ್ತು ಅರ್ಪಿತಾ ಜೊತೆಗಿನ ಪತಿ-ಪತ್ನಿಯ ಸಂಬಂಧಕ್ಕೆ ಪೂರ್ಣ ವಿರಾಮ ಸಿಕ್ಕಿದೆ.

ಇನ್ನು ಮುಂದೆ ನನ್ನ ವೈಯಕ್ತಿಕ, ವ್ಯವಹಾರಿಕ ವಿಚಾರಗಳಿಗೂ ಅವಳಿಗೂ ಯಾವುದೇ ಸಂಬಂಧ ಇರುವುದಿಲ್ಲ. ಕಾರಣ ಇಷ್ಟೇ, ಅಧಿಕೃತವಾಗಿ ಇನ್ನು ಮುಂದೆ ಕರಿಮಣಿ ಮಾಲೀಕ ನಾನಲ್ಲ.
ಒಂದೊಳ್ಳೆಯ ಬದುಕು ಅವಳಿಗೂ ಸಿಗಲಿ. ಕಹಿ ನೆನಪುಗಳು ಮರೆತು ಹೊಸ ಜೀವನಕ್ಕೆ ನಾಂದಿ ಹಾಡಲಿ. ನನಗೂ ನಿಮ್ಮ ಪ್ರೀತಿ ಹಾರೈಕೆ ಮುಂದುವರೆಯಲಿ ಎಂದು ಕಿರಿಕ್ ಕೀರ್ತಿ ಪೋಸ್ಟ್ ಹಾಕಿದ್ದಾರೆ.

ಈ ಪೋಸ್ಟ್ ಗೆ ಅವರು ‘ಸಕಲವೂ ಸನ್ಮಂಗಳವಾಗಲಿ’ ಎಂದು ಕ್ಯಾಪ್ಶನ್ ಸಹ ಬರೆದಿದ್ದಾರೆ. ತಮ್ಮ ಮತ್ತೊಂದು ಪೋಸ್ಟ್ ನಲ್ಲಿ ಅವರು ಪುತ್ರನ ಜೊತೆಗಿರುವ ಫೋಟೋವೊಂದನ್ನು ಹಂಚಿಕೊಂಡಿದ್ದಾರೆ. ಈ ಹಿಂದೆ ಕೆಲ ಕಾರಣಗಳಿಂದ ಡೆತ್ ನೋಟ್​ ಬರೆದು ಆತ್ಮಹತ್ಯೆಗೆ ಯತ್ನಿಸಿದ್ದೆ ಅನ್ನೋ ಮಾಹಿತಿಯನ್ನು ಕಿರಿಕ್ ಕೀರ್ತಿ ತಿಳಿಸಿದ್ದರು.

Related post

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ : ಎಲ್ಲಾ ಕಛೇರಿಗಳಿಗೂ ಬೀಳುತ್ತೆ ಬೀಗ..!

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ…

ನ್ಯೂಸ್ ಆ್ಯರೋ : ಇನ್ನೆರಡೇ ದಿನಗಳು ಅಂದರೆ ಏಪ್ರಿಲ್ 26ರಂದು ಲೋಕಸಭಾ ಚುನಾವಣೆಗೆ ಮೊದಲ ಹಂತದ ಮತದಾನ ನಡೆಯಲಿದ್ದು, ಅಂದು ಎಲ್ಲಾ ಕಾರ್ಮಿಕರು, ಅರ್ಹ ಮತದಾರರು ಮತದಾನ ಮಾಡುವ…
ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮಲ್ಲಿ ಇಂದು ಚುರುಕುತನವನ್ನು ನೋಡಬಹುದು. ನಿಮ್ಮ ಆರೋಗ್ಯವು ಇಂದು ನಿಮ್ಮನ್ನು ಸಂಪೂರ್ಣವಾಗಿ ಬೆಂಬಲಿಸುತ್ತದೆ. ನಿಮ್ಮ ಹೂಡಿಕೆಗಳು ಬಗ್ಗೆ ನಿಮ್ಮ ಭವಿಷ್ಯದ ಗುರಿಗಳ ಬಗ್ಗೆ ರಹಸ್ಯಮಯವಾಗಿರಿ. ಮನೆ ಅಥವಾ ಸಾಮಾಜಿಕ…
ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮ ಕೋಪ ಕಡ್ಡಿಯನ್ನು ಗುಡ್ಡ ಮಾಡಬಹುದು-ಇದು ನಿಮ್ಮ ಕುಟುಂಬದ ಸದಸ್ಯರ ಅಸಮಾಧಾನಕ್ಕೆ ಕಾರಣವಾಗುತ್ತದೆ. ಕೋಪವನ್ನು ನಿಯಂತ್ರಣದಲ್ಲಿಡುವುದನ್ನು ಕಲಿತ ಆ ಮಹಾನ್ ಆತ್ಮಗಳೇ ಅದೃಷ್ಟಶಾಲಿಗಳು. ನಿಮ್ಮ ಕೋಪ ನಿಮ್ಮನ್ನು ಸುಡುವ…

Leave a Reply

Your email address will not be published. Required fields are marked *