ಎಂಡೊಮೆಟ್ರಿಯೊಸಿಸ್ ಕಾಯಿಲೆಗೆ ತುತ್ತಾದ ಶಿಲ್ಪಾ ಶೆಟ್ಟಿ ಸಹೋದರಿ ಶಮಿತಾ ಶೆಟ್ಟಿ..!; ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ ಬೆಡ್​ ಮೇಲಿನ ವಿಡಿಯೋ

ಎಂಡೊಮೆಟ್ರಿಯೊಸಿಸ್ ಕಾಯಿಲೆಗೆ ತುತ್ತಾದ ಶಿಲ್ಪಾ ಶೆಟ್ಟಿ ಸಹೋದರಿ ಶಮಿತಾ ಶೆಟ್ಟಿ..!; ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ ಬೆಡ್​ ಮೇಲಿನ ವಿಡಿಯೋ

ನ್ಯೂಸ್ ಆ್ಯರೋ :ಬಾಲಿವುಡ್​​ ನಟಿ ಶಿಲ್ಪಾ ಶೆಟ್ಟಿ ಸಹೋದರಿ, ನಟಿ ಶಮಿತಾ ಶೆಟ್ಟಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಎಂಡೊಮೆಟ್ರಿಯೊಸಿಸ್ ಸಮಸ್ಯೆ ಇರುವುದು ಪತ್ತೆಯಾಗಿದ್ದು, ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದಾರೆ. ಇಂದು ಸಾಮಾಜಿಕ ಜಾಲತಾಣದಲ್ಲಿ ಈ ಕುರಿತು ವಿಡಿಯೋ ಹಂಚಿಕೊಂಡು, ತಮ್ಮ ಅನಾರೋಗ್ಯದ ಬಗ್ಗೆ ಮಾಹಿತಿ ನೀಡಿದ್ದಾರೆ.

ಶಮಿತಾ ಶೆಟ್ಟಿ ತಮ್ಮ ಅಧಿಕೃತ ಇನ್‌ಸ್ಟಾಗ್ರಾಮ್‌ನಲ್ಲಿ ಆಸ್ಪತ್ರೆಯಲ್ಲಿರುವ ವಿಡಿಯೋವನ್ನು ಪೋಸ್ಟ್ ಮಾಡಿದ್ದಾರೆ. ವಿಡಿಯೋ ಮತ್ತು ಕ್ಯಾಪ್ಷನ್​ನಲ್ಲಿ ಆಸ್ಪತ್ರೆಗೆ ದಾಖಲಾಗಿರುವ ಕಾರಣವನ್ನು ವಿವರಿಸಿದ್ದಾರೆ. ಜೊತೆಗೆ ಹೊರಗಿರುವ ಎಲ್ಲಾ ಮಹಿಳೆಯರಿಗೂ ಈ ಬಗ್ಗೆ ಜಾಗೃತರಾಗಿರುವಂತೆ, ಪರೀಕ್ಷೆ ಮಾಡಿಸಿಕೊಳ್ಳಲು ಸಲಹೆ ನೀಡಿದ್ದಾರೆ. ವಿಡಿಯೋದಲ್ಲಿ ಅಕ್ಕ, ನಟಿ ಶಿಲ್ಪಾ ಶೆಟ್ಟಿ ಅವರ ದನಿ ಕೇಳುತ್ತಿದೆ.

ಆಸ್ಪತ್ರೆಯಿಂದ ತಮ್ಮ ವಿಡಿಯೋ ಶೇರ್ ಮಾಡಿಕೊಂಡ ಶಮಿತಾ ಶೆಟ್ಟಿ, ”ಸುಮಾರು ಶೇ. 40ರಷ್ಟು ಮಹಿಳೆಯರು ಎಂಡೊಮೆಟ್ರಿಯೊಸಿಸ್‌ನಿಂದ ಬಳಲುತ್ತಿದ್ದಾರೆ ಎಂಬುದು ನಿಮಗೆ ತಿಳಿದಿದೆಯೇ. ನಮ್ಮಲ್ಲಿ ಹೆಚ್ಚಿನವರಿಗೆ ಈ ಕಾಯಿಲೆ ಬಗ್ಗೆ ತಿಳಿದಿಲ್ಲ. ನನ್ನ ನೋವಿನ ಮೂಲ ಕಾರಣವನ್ನು ಕಂಡುಕೊಳ್ಳುವವರೆಗೂ ಕೆಲಸ ನಿಲ್ಲಿಸದ ನನ್ನ ವೈದ್ಯರಾದ ಡಾ. ನೀತಾ ವಾರ್ತಿ ಮತ್ತು ಡಾ. ಸುನೀತಾ ಬ್ಯಾನರ್ಜಿ ಇಬ್ಬರಿಗೂ ಧನ್ಯವಾದ ಅರ್ಪಿಸಲು ಬಯಸುತ್ತೇನೆ. ಸದ್ಯ ಶಸ್ತ್ರಚಿಕಿತ್ಸೆಯಿಂದ ರೋಗಮುಕ್ತಳಾಗಿದ್ದೇನೆ. ಉತ್ತಮ ಆರೋಗ್ಯಕ್ಕಾಗಿ, ನೋವು ಮುಕ್ತ ದಿನಗಳಿಗಾಗಿ ಎದುರು ನೋಡುತ್ತಿದ್ದೇನೆ” ಎಂದು ಬರೆದುಕೊಂಡಿದ್ದಾರೆ.

ಶಮಿತಾ ಅವರ ವಿಡಿಯೋ ಸಂದೇಶ ಹೊರಬೀಳುತ್ತಿದ್ದಂತೆ, ಸೆಲೆಬ್ರಿಟಿಗಳಿಂದ ಹಿಡಿದು ಅಭಿಮಾನಿಗಳವರೆಗೆ ಎಲ್ಲರೂ ತಮ್ಮ ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ. ಶೀಘ್ರ ಚೇತರಿಕೆಗೆ ಪ್ರಾರ್ಥಿಸುತ್ತಿದ್ದಾರೆ.

ಇನ್ನು ಕೆಲ ದಿನಗಳ ಹಿಂದೆಯಷ್ಟೇ ಶಮಿತಾ ತಾಯಿ ಸುನಂದಾ ಶೆಟ್ಟಿ ಮತ್ತು ಸಹೋದರಿ ನಟಿ ಶಿಲ್ಪಾ ಶೆಟ್ಟಿ ಅವರೊಂದಿಗೆ ಜಮ್ಮು ಮತ್ತು ಕಾಶ್ಮೀರದ ವೈಷ್ಣೋ ದೇವಿ ದೇವಸ್ಥಾನಕ್ಕೆ ಭೇಟಿ ನೀಡಿದ್ದರು. ಶಿಲ್ಪಾ ಅವರು ಪ್ರವಾಸದ ಫೋಟೋಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದರು. ಜಾರಿ ನಿರ್ದೇಶನಾಲಯ ಶಿಲ್ಪಾ ಶೆಟ್ಟಿ ಅವರಿಗೆ 98 ಕೋಟಿ ರೂಪಾಯಿ ಮೌಲ್ಯದ ಆಸ್ತಿ ವಶ ಪಡಿಸಿಕೊಂಡ ಪ್ರಕರಣ ತನಿಖೆ ಹಂತದಲ್ಲೇ, ಮತ್ತೊಂದು ವೈಯಕ್ತಿಕ ಸಮಸ್ಯೆ ಎದುರಾಗಿದೆ.

ಏನಿದು ಎಂಡೊಮೆಟ್ರಿಯೊಸಿಸ್‌?
ಎಂಡೊಮೆಟ್ರಿಯೊಸಿಸ್ ಒಂದು ಕಾಯಿಲೆಯಾಗಿದ್ದು, ಇದರಲ್ಲಿ ಗರ್ಭಾಶಯದ ಒಳಪದರವನ್ನು ಹೋಲುವ ಅಂಗಾಂಶವು ಗರ್ಭಾಶಯದ ಹೊರಗೆ ಬೆಳೆಯಲು ಪ್ರಾರಂಭಿಸುತ್ತದೆ. ಈ ಕಾಯಿಲೆಯಿಂದ ಸೊಂಟದಲ್ಲಿ ತೀವ್ರವಾದ ನೋವನ್ನು ಉಂಟುಮಾಡುತ್ತದೆ. ಜೊತೆಗೆ ಗರ್ಭಿಣಿಯಾಗಲು ಮಹಿಳೆಯರಿಗೆ ಕಷ್ಟವಾಗುತ್ತದೆ. ಎಂಡೊಮೆಟ್ರಿಯೊಸಿಸ್​ಗೆ ತುತ್ತಾದ ಮಹಿಳೆಯರ ಮೊದಲ ಮುಟ್ಟಿನ ಅವಧಿಯಲ್ಲಿ ಪ್ರಾರಂಭವಾಗಬಹುದು ಅದು ಋತುಬಂಧದವರೆಗೆ ಇರುತ್ತದೆ.

Related post

ದಿನ‌ ಭವಿಷ್ಯ 21-05-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 21-05-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ಮೇಷಸಂತೃಪ್ತಿಯ ಜೀವನಕ್ಕಾಗಿ ನಿಮ್ಮ ಮಾನಸಿಕ ದೃಢತೆಯನ್ನು ಸುಧಾರಿಸಿ. ನೀವು ಇಂದು ಗಣನೀಯ ಪ್ರಮಾಣದ ಹಣವನ್ನು ಸಹ ಹೊಂದಿರುತ್ತೀರಿ ಮತ್ತು ಅದರೊಂದಿಗೆ ಮನಸ್ಸಿನ ಶಾಂತಿ ಇರುತ್ತದೆ. ಸ್ನೇಹಿತರು ಸಂತೋಷದ ಸಂಜೆಗಾಗಿ…
ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ ಮದುವೆ

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ…

ನ್ಯೂಸ್ ಆರೋ: ಬರೋಬ್ಬರಿ 25 ವರ್ಷಗಳಿಂದ ಪ್ರೀತಿಸುತ್ತಿದ್ದ ಜೋಡಿಯೊಂದು ಮಂತ್ರ ಮಾಂಗಲ್ಯ ಮೂಲಕ ಮದುವೆಯಾಗುವ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಟ್ಟಿರುವ ಅಪರೂಪದ ಘಟನೆ ತುಮಕೂರಲ್ಲಿ ನಡೆದಿದೆ. ಹೌದು ಜನಾಂದೋಲನದಲ್ಲಿ…
ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು! ಏನಿದು ವಿಷಯ?

ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು!…

ನ್ಯೂಸ್ ಆರೋ: ಎಷ್ಟೋ ಬಾರಿ ನಾವು ಈ ಹೊಟೇಲ್ ಗಳಿಗೆ ಹೋದಾಗ, ಅಲ್ಲಿ ಜನರು ವೆಜ್ ಮಂಚೂರಿಯನ್ನು ಆರ್ಡರ್ ಮಾಡಿದರೆ ಚಿಕನ್ ಮಂಚೂರಿ ತಂದು ಟೇಬಲ್ ಮೇಲೆ ಇಟ್ಟಿರುವ…

Leave a Reply

Your email address will not be published. Required fields are marked *