Upendra Controversy : ಜಾತಿನಿಂದನೆ ಪ್ರಕರಣ, ನಟ ಉಪೇಂದ್ರಗೆ ಬಿಗ್ ರಿಲೀಫ್ – ಎಫ್ಐಆರ್ ಗೆ ತಡೆ ನೀಡಿದ ಹೈಕೋರ್ಟ್

Upendra Controversy : ಜಾತಿನಿಂದನೆ ಪ್ರಕರಣ, ನಟ ಉಪೇಂದ್ರಗೆ ಬಿಗ್ ರಿಲೀಫ್ – ಎಫ್ಐಆರ್ ಗೆ ತಡೆ ನೀಡಿದ ಹೈಕೋರ್ಟ್

ನ್ಯೂಸ್ ಆ್ಯರೋ‌ : ಫೇಸ್‌ಬುಕ್‌ ಲೈವ್ ಒಂದರಲ್ಲಿ ನಟ ಉಪೇಂದ್ರ ಅವರು ನೀಡಿದ್ದ ಹೇಳಿಕೆ ಸಂಬಂಧ ಅವರ ವಿರುದ್ಧ ದಾಖಲಾದ ಅಟ್ರಾಸಿಟಿ ಕೇಸ್ ರದ್ದು ಕೋರಿ ಅವರು ಹೈಕೋರ್ಟ್ ಮೊರೆ ಹೋಗಿದ್ದು, ಇಂದು ಹೈಕೋರ್ಟ್ ಎಫ್‌ಐಆರ್ ಗೆ ತಡೆ ನೀಡುವ ಮೂಲಕ ಬಿಗ್ ರಿಲೀಫ್ ನೀಡಿದೆ.

ನಟ ಉಪೇಂದ್ರ ವಿರುದ್ಧ ಜಾತಿ ನಿಂದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರು ಎಫ್‌ಐಆರ್ ರದ್ದು ಕೋರಿ ಹೈಕೋರ್ಟ್ ಮೊರೆ ಹೋಗಿದ್ದು, ಮಧ್ಯಂತರ ತಡೆಯಾಜ್ಞೆ ನೀಡಿ ಎಂದು ಅರ್ಜಿಯಲ್ಲಿ ಮನವಿ ಮಾಡಿದ್ದರು.

ಈ ಕುರಿತು ಉಪೇಂದ್ರ ಅವರು ‘ಸಮುದಾಯದ ವಿರುದ್ಧ ನಾನು ಅವಹೇಳನಕಾರಿ ಹೇಳಿಕೆ ನೀಡಿಲ್ಲ.
ಒಳ್ಳೆಯದನ್ನು ಮಾಡುವಾಗ ಟೀಕಿಸುವರು ಇದ್ದೇ ಇರುತ್ತಾರೆ. ಈ ಮಾತಿಗೆ ಪೂರಕವಾಗಿ ಮಾತ್ರವೇ ಗಾದೆ ಬಳಸಲಾಗಿದೆ ಹೊರತು ಆಕ್ಷೇಪ ವ್ಯಕ್ತವಾದ ಕೂಡಲೇ ಡಿಲೀಟ್ ಮಾಡಿ ಕ್ಷಮೆ ಕೇಳಿದ್ದೇನೆ.

ಹಳೆಯ ಗಾದೆ ಮಾತನ್ನು ಉಲ್ಲೇಖಿಸಿದ್ದು ಜಾತಿ ನಿಂದನೆ ಅಲ್ಲ. ಪ್ರಚಾರ ಪಡೆಯಲೆಂದು ನನ್ನ ವಿರುದ್ಧ ದೂರು ದಾಖಲಿಸಿದ್ದಾರೆ. ವಾಟ್ಸಪ್ ಮೂಲಕ ಪೊಲೀಸರು ನೋಟಿಸ್ ಕಳುಹಿಸಿದ್ದಾರೆ. ಹೀಗಾಗಿ FIR ರದ್ದು ಕೋರಿ ಮನವಿ ಮಾಡಿದ್ದರು.

ಇದಕ್ಕೂ ಮುಂಚೆ ಸಿಕೆ ಅಚ್ಚುಕಟ್ಟು ಪೊಲೀಸ್ ಠಾಣೆಯಿಂದ ದೂರುದಾರರ ಸಮ್ಮುಖದಲ್ಲಿ ಉಪೇಂದ್ರ ಅವರ ನಿವಾಸದಲ್ಲಿ ಪೊಲೀಸರು ಸ್ಥಳ ಮಹಜರು ನಡೆಸಿದ್ದರು.

Related post

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ ಮದುವೆ

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ…

ನ್ಯೂಸ್ ಆರೋ: ಬರೋಬ್ಬರಿ 25 ವರ್ಷಗಳಿಂದ ಪ್ರೀತಿಸುತ್ತಿದ್ದ ಜೋಡಿಯೊಂದು ಮಂತ್ರ ಮಾಂಗಲ್ಯ ಮೂಲಕ ಮದುವೆಯಾಗುವ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಟ್ಟಿರುವ ಅಪರೂಪದ ಘಟನೆ ತುಮಕೂರಲ್ಲಿ ನಡೆದಿದೆ. ಹೌದು ಜನಾಂದೋಲನದಲ್ಲಿ…
ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು! ಏನಿದು ವಿಷಯ?

ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು!…

ನ್ಯೂಸ್ ಆರೋ: ಎಷ್ಟೋ ಬಾರಿ ನಾವು ಈ ಹೊಟೇಲ್ ಗಳಿಗೆ ಹೋದಾಗ, ಅಲ್ಲಿ ಜನರು ವೆಜ್ ಮಂಚೂರಿಯನ್ನು ಆರ್ಡರ್ ಮಾಡಿದರೆ ಚಿಕನ್ ಮಂಚೂರಿ ತಂದು ಟೇಬಲ್ ಮೇಲೆ ಇಟ್ಟಿರುವ…
ಮದ್ವೆಗೂ ಮುಂಚೆಯೇ ಐದು ಮಂದಿ ತಾರೆಯರ ಜೊತೆ ಡೇಟ್ ಮಾಡಿದ್ದ ವಿರಾಟ್..!

ಮದ್ವೆಗೂ ಮುಂಚೆಯೇ ಐದು ಮಂದಿ ತಾರೆಯರ ಜೊತೆ ಡೇಟ್ ಮಾಡಿದ್ದ ವಿರಾಟ್..!

ನ್ಯೂಸ್ ಆರೋ: ಬಾಲಿವುಡ್‌ನ ಖ್ಯಾತ ನಟಿ ಅನುಷ್ಕಾ ಶರ್ಮಾ ಹಾಗೂ ಟೀಂ ಇಂಡಿಯಾದ ಖ್ಯಾತ ಕ್ರಿಕೆಟಿಗ ವಿರಾಟ್ ಕೊಹ್ಲಿ ಅವರ ಪರಿಚಯ ಯಾರಿಗೂ ಅಗತ್ಯವಿಲ್ಲ. ಇತ್ತೀಚೆಗಷ್ಟೇ ಅಂದರೆ ಮೇ…

Leave a Reply

Your email address will not be published. Required fields are marked *