ಆಸ್ಪತ್ರೆಗೆ ದಾಖಲಾದ ಬಾಲಿವುಡ್‌ನ ಡ್ರಾಮಾ ಕ್ವೀನ್ ನಟಿ ರಾಖಿ ಸಾವಂತ್; ಸಾಮಾಜಿಕ ಜಾಲತಾಣದಲ್ಲಿ ಫೋಟೊ ವೈರಲ್‌..!

ಆಸ್ಪತ್ರೆಗೆ ದಾಖಲಾದ ಬಾಲಿವುಡ್‌ನ ಡ್ರಾಮಾ ಕ್ವೀನ್ ನಟಿ ರಾಖಿ ಸಾವಂತ್; ಸಾಮಾಜಿಕ ಜಾಲತಾಣದಲ್ಲಿ ಫೋಟೊ ವೈರಲ್‌..!

ನ್ಯೂಸ್ ಆರೋ:  ಬಿಗ್ ಬಾಸ್ ಖ್ಯಾತಿಯ ರಾಖಿ ಸಾವಂತ್ ವೈಯಕ್ತಿಕ ವಿಚಾರಕ್ಕೆ ಸದಾ ಸುದ್ದಿಯಲ್ಲಿರುತ್ತಾರೆ. ಲವ್​, ಮದುವೆ, ಬ್ರೇಕಪ್ ಅಂತ ಸದಾ ಸುದ್ದಿಯಲ್ಲಿರುವ ರಾಖಿ ಸಾವಂತ್​, ಬಾಲಿವುಡ್‌ನ ಡ್ರಾಮಾ ಕ್ವೀನ್ ಎಂದೇ ಫೇಮಸ್​ ಆಗಿದ್ದಾರೆ. ತನ್ನದೇ ಫ್ಯಾಷನ್‌ನಿಂದಲೂ ನಟಿ ಅಭಿಮಾನಿಗಳ ಹೃದಯ ಗೆದ್ದಿದ್ದಾರೆ. ಮಾಡಿದ್ದಾಳೆ. ಮಾಜಿ ಪತಿ ಆದಿಲ್ ದುರಾನಿ ಅವರೊಂದಿಗಿನ ವಿವಾದದಿಂದ ರಾಖಿ ಸಿಕ್ಕಾಪಟ್ಟೆ ಸುದ್ದಿ ಆಗಿದ್ರು. ಇದೀಗ ರಾಖಿ ಸಾವಂತ್ ಆರೋಗ್ಯದಲ್ಲಿ ಏರುಪೇರಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎನ್ನಲಾಗಿದೆ.

ಹೌದು ಸಾಮಾಜಿಕ ಜಾಲತಾಣದಲ್ಲಿ ರಾಖಿ ಸಾವಂತ್ ಆಸ್ಪತ್ರೆಗೆ ದಾಖಲಾಗಿರುವ ಫೋಟೊ ವೈರಲ್‌ ಆಗುತ್ತಿದ್ದು, ಮಾಧ್ಯಮಗಳ ವರದಿ ಪ್ರಕಾರ, ರಾಖಿ ಹೃದಯ ಸಂಬಂಧಿ ಕಾಯಿಲೆಗೆ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದು ಬಂದಿದೆ.

ರಾಖಿ ಸಾವಂತ್ ಅವರು ಹೃದಯ ಸಂಬಂಧಿ ಕಾಯಿಲೆಗೆ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಬಗ್ಗೆ ರಾಖಿ ಸಾವಂತ್ ಪಾಪರಾಜಿವೊಬ್ಬರಿಗೆ ಸಂದೇಶ ಕಳಿಸಿದ್ದಾರಂತೆ. ಮಾಜಿ ಪತಿ ರಿತೇಶ್ ಅವರು ಶೀಘ್ರದಲ್ಲೇ ಅವರ ಆರೋಗ್ಯದ ಬಗ್ಗೆ ತಿಳಿಸುವುದಾಗಿ ಮಾಧ್ಯಮವೊಂದಕ್ಕೆ ಹೇಳಿಕೆ ನೀಡಿದ್ದಾರೆ.

ಇನ್ನು ಈ ವಿಷಯ ತಿಳಿಯುತ್ತಿದ್ದಂತೆ ರಾಖಿ ಸಾವಂತ್ ಅಭಿಮಾನಿಗಳು ಬೇಸರಗೊಂಡಿದ್ದು, ʻಬೇಗ ಚೇತರಿಸಿಕೊಳ್ಳಿʼ ಎಂದು ಕಮೆಂಟ್‌ ಮಾಡಿದ್ದರೆ, ಇನ್ನೂ ಕೆಲವರು ಪ್ರಚಾರಕ್ಕಾಗಿ ಹೀಗೆ ಮಾಡುತ್ತಿದ್ದಾರೆ ಎಂದು ಕಮೆಂಟ್‌ ಮಾಡಿದ್ದಾರೆ.

ಇದಕ್ಕೂ ಮುಂಚೆ ರಾಖಿ ಅವರು ಕೆಂಪು ಟವೆಲ್ ಧರಿಸಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಸುದ್ದಿ ಮಾಡಿದರು. ಪಾಪರಾಜಿಗಳೊಂದಿಗೆ ತಮಾಷೆಯ ವಿಡಿಯೊಗಳು ಬಹಳಷ್ಟು ಸದ್ದು ಮಾಡಿತ್ತು. ಸದಾ ತಮ್ಮ ವಿಭಿನ್ನ ಉಡುಗೆ ಮತ್ತು ಲುಕ್‌ಗಳಿಗೆ ಹೆಸರುವಾಸಿಯಾಗಿರುವ ರಾಖಿ ಸಾವಂತ್ ಇತ್ತೀಚೆಗೆ ಈವೆಂಟ್‌ನಲ್ಲಿ ವಿಶಿಷ್ಟವಾದ ‘ಟವೆಲ್’ ಉಡುಪನ್ನು ಧರಿಸಿ ಅಭಿಮಾನಿಗಳನ್ನು ಬೆರಗುಗೊಳಿಸಿದರು. ಟವೆಲ್‌ ಧರಿಸಿ ರೆಡ್ ಕಾರ್ಪೆಟ್‌ನಲ್ಲಿ ನಡೆಯುವ ಫೋಟೊ ಹಾಗೂ ವಿಡಿಯೊಗಳು ವೈರಲ್‌ ಆಗಿತ್ತು.

ಇನ್ನು ರಾಖಿಯ ಮಾಜಿ ಪತಿ, ಮೈಸೂರಿನ ಆದಿಲ್, ಇನ್​ಸ್ಟಾಗ್ರಾಂನಲ್ಲಿ ವಿಡಿಯೋ ಒಂದನ್ನು ಹಂಚಿಕೊಂಡಿದ್ದು, ಇದು ತಮ್ಮ ಪಾಲಿನ ಅತ್ಯಂತ ಖುಷಿಯ ದಿನ ಎಂದು ಬರೆದುಕೊಂಡಿದ್ದಾರೆ. ರಾಖಿ ಸಾವಂತ್​ಗೆ ನೀಡಲಾಗಿದ್ದ ನಿರೀಕ್ಷಣಾ ಜಾಮೀನನ್ನು ರದ್ದು ಮಾಡಿರುವ ಸುಪ್ರೀಂಕೋರ್ಟ್, ಇನ್ನು ನಾಲ್ಕು ವಾರಗಳ ಒಳಗಾಗಿ ರಾಖಿ ಸಾವಂತ್ ಮುಂಬೈ ಪೊಲೀಸರಿಗೆ ಶರಣಾಗಬೇಕು ಎಂದು ಸೂಚಿಸಿದೆ ಎಂದಿದ್ದಾರೆ. ಸುಪ್ರೀಂಕೋರ್ಟ್​ನ ಆದೇಶ ಬಂದಿದ್ದಕ್ಕೆಂದೇ ರಾಖಿ ಸಾವಂತ್ ಆಸ್ಪತ್ರೆಗೆ ದಾಖಲಾದರೆ ಎಂಬ ಅನುಮಾನವೂ ಮೂಡಿದೆ.

‘ರಾಖಿ ಸಾವಂತ್ ಸುಪ್ರೀಂ ಕೋರ್ಟ್‌ನ ಆದೇಶಗಳಿಗೆ ಬದ್ಧರಾಗಿದ್ದರೆ ಮಾತ್ರ ರಾಖಿ ಅವರ ಜಾಮೀನು ಅರ್ಜಿಯನ್ನು ನ್ಯಾಯಾಲಯವು ಅಂಗೀಕರಿಸುತ್ತದೆ, ಇಲ್ಲದಿದ್ದರೆ, ಅಲ್ಲಿಯವರೆಗೆ ಯಾವುದೇ ಜಾಮೀನು ಇರುವುದಿಲ್ಲ’ ಎಂದು ಸುಪ್ರೀಂಕೋರ್ಟ್ ಹೇಳಿರುವುದಾಗಿ ಆದಿಲ್ ದುರಾನಿ ಹೇಳಿದ್ದಾರೆ. ಮೈಸೂರಿನ ಆದಿಲ್ ಹಾಗೂ ರಾಖಿ ಸಾವಂತ್ ವಿವಾಹವಾಗಿದ್ದರು. ಆದರೆ ರಾಖಿ ಸಾವಂತ್ ಆದಿಲ್ ವಿರುದ್ಧ ಹಲವು ಆರೋಪಗಳನ್ನು ಮಾಡಿ ವಿವಾದ ಎಬ್ಬಿಸಿದ್ದರು, ರಾಖಿಯ ದೂರು ಆಧರಿಸಿ ಆದಿಲ್ ಬಂಧನವೂ ಆಗಿತ್ತು. ಇದೀಗ ಆದಿಲ್, ರಾಖಿ ವಿರುದ್ಧ ದೂರು ನೀಡಿದ್ದಾರೆ.

ರಾಖಿ ಸಾವಂತ್ ಅವರ ಮಾಜಿ ಪತಿ ಆದಿಲ್ ಖಾನ್ ದುರಾನಿ ಈಗಾಗಲೇ ಮತ್ತೊಮ್ಮೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಆದಿಲ್ ಖಾನ್ ಇತ್ತೀಚೆಗೆ ಜೈಪುರದಲ್ಲಿ ಹಿಂದಿ ಬಿಗ್ ಬಾಸ್ 12ರ ಖ್ಯಾತಿಯ ಸೋಮಿ ಖಾನ್ ಅವರನ್ನು ವಿವಾಹವಾಗಿದ್ದಾರೆ. ಈ ಮದುವೆಯಲ್ಲಿ ಆಪ್ತರು ಮಾತ್ರ ಹಾಜರಿದ್ದರು. ಸೋಮಿ ಅವರು ಸಬಾ ಖಾನ್ ಅವರ ಸಹೋದರಿ. ಕಳೆದ ಕೆಲವು ತಿಂಗಳುಗಳಿಂದ ಆದಿಲ್ ಹಾಗೂ ಸೋಮಿ ಇಬ್ಬರೂ ತಮ್ಮ ಸಂಬಂಧವನ್ನು ರಹಸ್ಯವಾಗಿ ಇಟ್ಟಿದ್ದರು ಎನ್ನಲಾಗಿದೆ. ಸಲ್ಮಾನ್ ಖಾನ್ ನಡೆಸಿಕೊಡುವ ‘ಬಿಗ್ ಬಾಸ್ ಹಿಂದಿ ಸೀಸನ್ 12’ರಲ್ಲಿ ಸೋಮಿ ಮತ್ತು ಸಬಾ ಖಾನ್ ಇಬ್ಬರೂ ಸ್ಪರ್ಧಿಗಳಾಗಿ ಭಾಗವಹಿಸಿದ್ದರು.

Related post

ದಿನ‌ ಭವಿಷ್ಯ 21-05-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 21-05-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ಮೇಷಸಂತೃಪ್ತಿಯ ಜೀವನಕ್ಕಾಗಿ ನಿಮ್ಮ ಮಾನಸಿಕ ದೃಢತೆಯನ್ನು ಸುಧಾರಿಸಿ. ನೀವು ಇಂದು ಗಣನೀಯ ಪ್ರಮಾಣದ ಹಣವನ್ನು ಸಹ ಹೊಂದಿರುತ್ತೀರಿ ಮತ್ತು ಅದರೊಂದಿಗೆ ಮನಸ್ಸಿನ ಶಾಂತಿ ಇರುತ್ತದೆ. ಸ್ನೇಹಿತರು ಸಂತೋಷದ ಸಂಜೆಗಾಗಿ…
ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ ಮದುವೆ

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ…

ನ್ಯೂಸ್ ಆರೋ: ಬರೋಬ್ಬರಿ 25 ವರ್ಷಗಳಿಂದ ಪ್ರೀತಿಸುತ್ತಿದ್ದ ಜೋಡಿಯೊಂದು ಮಂತ್ರ ಮಾಂಗಲ್ಯ ಮೂಲಕ ಮದುವೆಯಾಗುವ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಟ್ಟಿರುವ ಅಪರೂಪದ ಘಟನೆ ತುಮಕೂರಲ್ಲಿ ನಡೆದಿದೆ. ಹೌದು ಜನಾಂದೋಲನದಲ್ಲಿ…
ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು! ಏನಿದು ವಿಷಯ?

ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು!…

ನ್ಯೂಸ್ ಆರೋ: ಎಷ್ಟೋ ಬಾರಿ ನಾವು ಈ ಹೊಟೇಲ್ ಗಳಿಗೆ ಹೋದಾಗ, ಅಲ್ಲಿ ಜನರು ವೆಜ್ ಮಂಚೂರಿಯನ್ನು ಆರ್ಡರ್ ಮಾಡಿದರೆ ಚಿಕನ್ ಮಂಚೂರಿ ತಂದು ಟೇಬಲ್ ಮೇಲೆ ಇಟ್ಟಿರುವ…

Leave a Reply

Your email address will not be published. Required fields are marked *