ಡಿ ಬಾಸ್ ಜತೆ ಮೇಘಾ ಶೆಟ್ಟಿ ಗ್ಯಾಂಗ್ ಬರ್ತ್’ಡೇ ಸೆಲೆಬ್ರೇಶನ್ – ಕಿರುತೆರೆ ನಟಿಯ ಕಿವಿಹಿಂಡಿದ ದರ್ಶನ್ ಪತ್ನಿ

ಡಿ ಬಾಸ್ ಜತೆ ಮೇಘಾ ಶೆಟ್ಟಿ ಗ್ಯಾಂಗ್ ಬರ್ತ್’ಡೇ ಸೆಲೆಬ್ರೇಶನ್ – ಕಿರುತೆರೆ ನಟಿಯ ಕಿವಿಹಿಂಡಿದ ದರ್ಶನ್ ಪತ್ನಿ

ನ್ಯೂಸ್‌ ಆ್ಯರೋ‌ : ಈಚೆಗೆ ನಟ ದರ್ಶನ್ ಅವರು ಬಹಳ ಅದ್ಧೂರಿಯಾಗಿ ತಮ್ಮ 46ನೇ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದಾರೆ. ಆದರೆ ಇನ್‌ಸ್ಟಾಗ್ರಾಮ್‌ನಲ್ಲಿ ದರ್ಶನ್ ಬರ್ತಡೇಯನ್ನು ಸ್ಪೆಷಲ್ ಆಗಿ ಆಚರಿಸಿದ ನಟಿ ಮೇಘಾ ಶೆಟ್ಟಿ ವಿರುದ್ಧ ವಿಜಯಲಕ್ಷ್ಮಿ ದರ್ಶನ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಫೆಬ್ರವರಿ 16ಕ್ಕೆ ಚಾಲೆಂಜಿಂಗ್ ಸ್ಟಾರ್ ದರ್ಶನ್ 46ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ನೆಚ್ಚಿನ ನಟನಿಗೆ ಸೋಶಿಯಲ್ ಮೀಡಿಯಾದಲ್ಲೂ ಅಭಿಮಾನಿಗಳು, ಚಿತ್ರರಂಗದ ತಾರೆಯರು, ರಾಜಕೀಯ ಮುಖಂಡರು ಹುಟ್ಟುಹಬ್ಬದ ಶುಭಾಶಯ ಕೋರಿದ್ದಾರೆ. ಅದಲ್ಲದೆ ನಟಿಯರಾದ ಮೇಘಾ ಶೆಟ್ಟಿ, ಪವಿತ್ರಾ ಗೌಡ, ಸೋನಲ್ ಮಂಥೇರೊ ಅವರು ದರ್ಶನ್ ಬರ್ತಡೇಯನ್ನು ಆಚರಿಸಿ ಕೇಕ್ ಕತ್ತರಿಸಿ ನಟ ದರ್ಶನ್‌ಗೆ ತಿನ್ನಿಸಿದ್ದಾರೆ.

ಈ ಸಂಭ್ರಮದ ವಿಡಿಯೋ ತುಣುಕನ್ನು ಮೇಘಾ ಶೆಟ್ಟಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಇದನ್ನು ನೋಡಿದ ವಿಜಯಲಕ್ಷ್ಮೀ ನಟಿಯರ ವಿರುದ್ಧ ಕೆಂಡಾಮಂಡಲವಾಗಿ, ನಟಿ ಮೇಘಾ ಶೆಟ್ಟಿಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ವಿಜಯಲಕ್ಷ್ಮಿ ಪೋಸ್ಟ್ ಮಾಡಿದ ಪೋಸ್ಟ್‌ನಲ್ಲಿ ಏನಿದೆ:

“ನನ್ನ ಕುಟುಂಬಕ್ಕೆ ಹಾನಿಯುಂಟು ಮಾಡುವ ವೀಡಿಯೊಗಳು, ಚಿತ್ರಗಳು ಮತ್ತು ಇತರ ವಿಷಯಗಳನ್ನು ಪೋಸ್ಟ್ ಮಾಡುವ ಮತ್ತು ಮರು ಪೋಸ್ಟ್ ಮಾಡುತ್ತಿರುವ ಜನರು ಮತ್ತು ಅಭಿಮಾನಿಗಳಿಗೆ ನನ್ನ ಪ್ರಾಮಾಣಿಕ ವಿನಂತಿ. ತಕ್ಷಣವೇ ಆ ರೀತಿಯಾದ ಪೋಸ್ಟ್‌ಗಳನ್ನು ನಿಲ್ಲಿಸಿ.

ಮಹಿಳೆಯಾಗಿ ಈ ವೀಡಿಯೊವನ್ನು ಪೋಸ್ಟ್ ಮಾಡುವ ಮೊದಲು ಒಬ್ಬರು ಎರಡು ಬಾರಿ ಯೋಚಿಸಬೇಕಾಗಿತ್ತು. ಏಕೆಂದರೆ, ಇದು ನನಗೆ ಮತ್ತು ನನ್ನ ಮಗನಿಗೆ ಅಪಾರ ನೋವನ್ನು ಉಂಟುಮಾಡಿದೆ. ನಿಮ್ಮ ಈ ಕೃತ್ಯ ನಿಮ್ಮ ನೈತಿಕತೆಯನ್ನು ತೋರಿಸುತ್ತದೆ. ವ್ಯಕ್ತಿತ್ವವನ್ನು ಗಮನಿಸಿ. ನನ್ನ ಮೌನದ ಅರ್ಥ ನಾನು ನಾನ್‌ಸೆನ್ಸ್ ಅನ್ನು ತಡೆದುಕೊಳ್ಳುತ್ತೇನೆ ಎಂದು ಅರ್ಥವಲ್ಲ” ಎಂದು ಬರೆದು ಮೇಘಾಶೆಟ್ಟಿಯನ್ನು ಟ್ಯಾಗ್ ಮಾಡಿದ್ದಾರೆ.

ವಿಜಯಲಕ್ಷ್ಮಿ ದರ್ಶನ್ ಬೆಂಬಲಕ್ಕೆ ಅಭಿಮಾನಿಗಳು ನಿಂತಿದ್ದಾರೆ. ಕಾಮೆಂಟ್ ಮಾಡುವ ಮೂಲಕ ಧೈರ್ಯ ತುಂಬಿದ್ದಾರೆ. ಆದರೆ ಮೇಘಾ ಶೆಟ್ಟಿ ಮಾತ್ರ ಸೈಲೆಂಟ್ ಆಗಿ ವಿಡಿಯೋವನ್ನು ಡಿಲೀಟ್‌ ಮಾಡಿದ್ದಾರೆ.

ಈ ಹಿಂದೆಯೂ ದರ್ಶನ್ ಜತೆ ಸಫಾರಿಗೆ ಹೋಗಿ ಬಂದ ಮೇಘಾ ಶೆಟ್ಟಿಯ ಫೋಟೋಗಳು ವೈರಲ್‌ ಆಗಿದ್ದವು. ಆದರೆ ಈ ಬಾರಿ ಸುಮ್ಮನಿರದ ವಿಜಯಲಕ್ಷ್ಮೀ ಸರಿಯಾಗಿ ತರಾಟೆಗೆ ತೆಗೆದುಕೊಂಡಿದ್ದಾರೆ. ತಮ್ಮ ಪೋಸ್ಟ್ ಇಷ್ಟೆಲ್ಲಾ ಸದ್ದು ಮಾಡುತ್ತಿದ್ದಂತೆ ಯಾಕೋ ದಿಢೀರನೇ ವಿಜಯಲಕ್ಷ್ಮಿ ಅದನ್ನು ಡಿಲೀಟ್ ಮಾಡಿದ್ದಾರೆ.

Related post

ದಿನ‌ ಭವಿಷ್ಯ 15-04-2024 ಸೋಮವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 15-04-2024 ಸೋಮವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮ ದಯಾಳು ಪ್ರಕೃತಿ ಇಂದು ಅನೇಕ ಸಂತೋಷದ ಕ್ಷಣಗಳನ್ನು ತರುತ್ತದೆ. ಲೋನ್ ತೆಗೆದುಕೊಂಡಿರುವ ಜನರಿಗೆ ಲೋನ್ ನ ಮೊತ್ತವನ್ನು ಮರುಪಾವತಿಸುವಲ್ಲಿ ತೊಂದರೆಗಳು ಉಂಟಾಗಬಹುದು. ಮನೆಯಲ್ಲಿ ನಿಮ್ಮ ಮಕ್ಕಳು ಅತಿಶಯೋಕ್ತಿಯಿರುವ…
ದಿನ‌ ಭವಿಷ್ಯ 14-04-2024 ಭಾನುವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 14-04-2024 ಭಾನುವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನೀವು ಧೀರ್ಘಕಾಲೀನ ಅನಾರೋಗ್ಯದಿಂದ ಬಳಲಬಹುದು. ಇಂದು ಯಾವುದೇ ಸಹಾಯವಿಲ್ಲದೆ, ನೀವು ಹಣವನ್ನು ಗಳಿಸುವಲ್ಲಿ ಸಾಮರ್ತ್ಯರಾಗಿರುತ್ತೀರಿ. ಯಾರಾದರೂ ನಿಮಗೆ ಹಾನಿ ಮಾಡಲು ಪ್ರಯತ್ನಿಸಬಹುದು – ಬಲವಾದ ಶಕ್ತಿಗಳು ನಿಮ್ಮ ವಿರುದ್ಧ…
ರಾಮೇಶ್ವರ ಕೆಫೆ ಬಾಂಬ್ ಸ್ಫೋಟ ಪ್ರಕರಣ – ಇಬ್ಬರು ಬಂಧಿತ ಉಗ್ರರನ್ನು ಬೆಂಗಳೂರಿಗೆ ಕರೆತಂದ NIA ಅಧಿಕಾರಿಗಳು

ರಾಮೇಶ್ವರ ಕೆಫೆ ಬಾಂಬ್ ಸ್ಫೋಟ ಪ್ರಕರಣ – ಇಬ್ಬರು ಬಂಧಿತ ಉಗ್ರರನ್ನು…

ನ್ಯೂಸ್ ಆ್ಯರೋ : ರಾಮೇಶ್ವರಂ ಕೆಫೆ ಬಾಂಬ್ ಬ್ಲಾಸ್ಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಉಗ್ರರನ್ನು NIA ಅಧಿಕಾರಿಗಳು ಬೆಂಗಳೂರಿಗೆ ಕರೆತಂದಿದ್ದಾರೆ. ಅಬ್ದುಲ್ ಮತೀನ್ ತಾಹಾ ಹಾಗೂ ಮುಜಾವಿರ್ ಹುಸೇನ್…

Leave a Reply

Your email address will not be published. Required fields are marked *