ನಟ ಸುದೀಪ್ ಗೆ ಬೆದರಿಕೆ ಹಾಕಿದ್ದ ಆರೋಪಿಯ ಬಂಧನ – ಬೆನ್ನಿಗೆ ಚೂರಿ ಹಾಕಿದ ಆಪ್ತ, ಸುದೀಪ್ ಮೇಲೆ ಅಂಥಾ ದ್ವೇಷವೇನಿತ್ತು?

ನಟ ಸುದೀಪ್ ಗೆ ಬೆದರಿಕೆ ಹಾಕಿದ್ದ ಆರೋಪಿಯ ಬಂಧನ – ಬೆನ್ನಿಗೆ ಚೂರಿ ಹಾಕಿದ ಆಪ್ತ, ಸುದೀಪ್ ಮೇಲೆ ಅಂಥಾ ದ್ವೇಷವೇನಿತ್ತು?

ನ್ಯೂಸ್ ಆ್ಯರೋ‌ : ಅಭಿನಯ ಚಕ್ರವರ್ತಿ, ನಟ ಸುದೀಪ್ ಅವರಿಗೆ ಇತ್ತೀಚೆಗೆ ಅಪರಿಚಿತ ಬೆದರಿಕೆ ಪತ್ರವೊಂದು ಬಂದಿದ್ದು ಭಾರೀ ಸಂಚಲನ ಸೃಷ್ಟಿಸಿತ್ತು. ಇದೀಗ ಪ್ರಕರಣವನ್ನು ಸಿಸಿಬಿ ಪೊಲೀಸರು ಭೇದಿಸಿದ್ದಾರೆ. ಅಚ್ಚರಿ ಎಂದರೆ ಸುದೀಪ್​ ಆಪ್ತ, ನಿರ್ದೇಶಕ ರಮೇಶ್ ಕಿಟ್ಟಿ ಆರೋಪಿ ಎಂದು ಗುರುತಿಸಲಾಗಿದೆ.

ಕಿಚ್ಚ ಸುದೀಪ ಚಾರಿಟೇಬಲ್​ ಟ್ರಸ್ಟ್​ನ ಅಧ್ಯಕ್ಷರಾಗಿದ್ದ ರಮೇಶ್ ಕಿಟ್ಟಿ ಸುದೀಪ್ ಜೊತೆಗೆ ಹಣಕಾಸು ವಿಷಯವಕ್ಕೆ ಭಿನ್ನಾಭಿಪ್ರಾಯ ಉಂಟಾದ ಹಿನ್ನಲೆಯಲ್ಲಿ ಅನಾಮಧೇಯ ಬೆದರಿಕೆ ಪತ್ರ ಬರೆದಿದ್ದಾರೆ ಎನ್ನಲಾಗಿದೆ. ಚಾರಿಟೇಬಲ್ ಟ್ರಸ್ಟ್​ಗೆ ರಮೇಶ್ ಎರಡು ಕೋಟಿ ರೂ. ಹೂಡಿಕೆ ಮಾಡಿದ್ದರಂತೆ. ಆ ಹಣವನ್ನು ವಾಪಸ್ ಕೇಳಿದಾಗ ಸುದೀಪ್ ಕೊಡಲಿಲ್ಲ ಎಂಬ ಕಾರಣಕ್ಕೆ ಸುದೀಪ್​ಗೆ ಅನಾಮಧೇಯ ಬೆದರಿಕೆ ಪತ್ರ ಬರೆದಿದ್ದಾರೆ. ತಾವೇ ಬೆದರಿಕೆ ಪತ್ರ ಬರೆದಿರುವುದಾಗಿ ಸಿಸಿಬಿ ಪೊಲೀಸರ ಬಳಿ ರಮೇಶ್ ಕಿಟ್ಟಿ ಒಪ್ಪಿಕೊಂಡಿದ್ದಾರೆಂದು ಹೇಳಲಾಗುತ್ತಿದೆ. ತನಿಖೆ ಮುಂದುವರಿದಿದೆ.

ಪ್ರಕರಣದ ಹಿನ್ನೆಲೆ

ಇತ್ತೀಚೆಗೆ ಸುದೀಪ್​ಗೆ ಎರಡು ಬೆದರಿಕೆ ಪತ್ರಗಳು ಬಂದಿದ್ದವು. ಖಾಸಗಿ ವೀಡಿಯೋ ಲೀಕ್ ಮಾಡುವುದಾಗಿ ಬೆದರಿಕೆ ಹಾಕಲಾಗಿತ್ತು. ಅಲ್ಲದೆ ಅವಾಚ್ಯ ಶಬ್ದಗಳನ್ನು ಸಹ ಬಳಸಲಾಗಿತ್ತು. ಈ ಬಗ್ಗೆ ಸುದೀಪ್​ ಆಪ್ತ, ನಿರ್ಮಾಪಕ ಜಾಕ್ ಮಂಜು ಪುಟ್ಟೇನಹಳ್ಳಿ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಆರಂಭದಲ್ಲಿ ಸುದೀಪ್ ಬಿಜೆಪಿ ಸೇರ್ಪಡೆ ಹಿನ್ನೆಲೆಯಲ್ಲಿ ಈ ರೀತಿಯ ಬೆಳವಣಿಗೆ ನಡೆದಿದೆ ಎನ್ನುವ ಮಾತು ಕೇಳಿ ಬಂದಿತ್ತು. ಆದರೆ ಇದನ್ನು ತಳ್ಳಿ ಹಾಕಿದ್ದ ಸುದೀಪ್​, ”ಇದು ರಾಜಕೀಯದವರ ಕೃತ್ಯ ಅಲ್ಲ. ಇದನ್ನು ನಮ್ಮವರೇ ಮಾಡಿದ್ದಾರೆ. ಅದು ಯಾರೆಂದು ಗೊತ್ತಿದೆ. ಅವರಿಗೆ ಕಾನೂನಾತ್ಮಕವಾಗಿ ತಕ್ಕ ಉತ್ತರವನ್ನೇ ನೀಡಲಿದ್ದೇನೆ” ಎಂದಿದ್ದರು.

ತನಿಖೆ ಮುಂದುವರಿಸಿದ ಸಿಸಿಬಿ ಪೊಲೀಸರು, ಆಪ್ತರೇ ಈ ಕೃತ್ಯ ಎಸಗಿರುವುದಾಗಿ ಸುದೀಪ್ ಅನುಮಾನ ವ್ಯಕ್ತಪಡಿಸಿದ್ದ ಕಾರಣ ವಿಚಾರಣೆ ನಡೆಸಿದಾಗ ರಮೇಶ್ ಕಿಟ್ಟಿ ಸಿಕ್ಕಿ ಬಿದ್ದಿದ್ದು, ಅವರನ್ನು ಇದೀಗ ಬಂಧಿಸಲಾಗಿದೆ. ಈ ಹಿಂದೆ ಹಲವು ಸಿನಿಮಾಗಳಲ್ಲಿ ಸಹಾಯಕ ನಿರ್ದೇಶಕನಾಗಿ ಕೆಲಸ ಮಾಡಿದ್ದ ರಮೇಶ್ ಕಿಟ್ಟಿ, 2004ರಲ್ಲಿ ಒಂದು ಕನ್ನಡ ಸಿನಿಮಾ ನಿರ್ದೇಶನವನ್ನೂ ಮಾಡಿದ್ದಾರೆ. ಆ ಬಳಿಕ ಕಿಚ್ಚ ಸುದೀಪ ಚಾರಿಟೇಬಲ್ ಟ್ರಸ್ಟ್​ ಅಧ್ಯಕ್ಷರಾಗಿದ್ದರು.

Related post

ಡೈರೆಕ್ಟರ್​ ಹುದ್ದೆಗೆ ಅರ್ಜಿ ಆಹ್ವಾನಿಸಿದ UIDAI; ತಿಂಗಳಿಗೆ 2 ಲಕ್ಷಕ್ಕೂ ಅಧಿಕ ಸಂಬಳ

ಡೈರೆಕ್ಟರ್​ ಹುದ್ದೆಗೆ ಅರ್ಜಿ ಆಹ್ವಾನಿಸಿದ UIDAI; ತಿಂಗಳಿಗೆ 2 ಲಕ್ಷಕ್ಕೂ ಅಧಿಕ…

ನ್ಯೂಸ್ ಆರೋ: ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 3 ಡೈರೆಕ್ಟರ್, ಅಸಿಸ್ಟೆಂಟ್ ಡೈರೆಕ್ಟರ್​ ಹುದ್ದೆಗಳು…
ಅರವಿಂದ್ ಕೇಜ್ರಿವಾಲ್‌ಗೆ ಮಧ್ಯಂತರ ಜಾಮೀನು ನೀಡಿ ಸುಪ್ರೀಂ ಕೋರ್ಟ್ ಆದೇಶ

ಅರವಿಂದ್ ಕೇಜ್ರಿವಾಲ್‌ಗೆ ಮಧ್ಯಂತರ ಜಾಮೀನು ನೀಡಿ ಸುಪ್ರೀಂ ಕೋರ್ಟ್ ಆದೇಶ

ನ್ಯೂಸ್ ಆ್ಯರೋ : ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್‌ ಅವರಿಗೆ ಮಧ್ಯಂತರ ಜಾಮೀನು ನೀಡಿ ಇಂದು…
ಆರೋಗ್ಯ ಸಮಸ್ಯೆ; 14 ತಿಂಗಳ ಬಳಿಕ ಸ್ಯಾಂಟ್ರೋ ರವಿಗೆ ಜಾಮೀನು ನೀಡಿದ ನ್ಯಾಯಾಲಯ

ಆರೋಗ್ಯ ಸಮಸ್ಯೆ; 14 ತಿಂಗಳ ಬಳಿಕ ಸ್ಯಾಂಟ್ರೋ ರವಿಗೆ ಜಾಮೀನು ನೀಡಿದ…

ನ್ಯೂಸ್ ಆ್ಯರೋ : ಅತ್ಯಾಚಾರ, ಕೊಲೆ ಬೆದರಿಕೆ ಪ್ರಕರಣದ ಆರೋಪಿ ಕೆ.ಎಸ್.ಮಂಜುನಾಥ್ ಅಲಿಯಾಸ್ ಸ್ಯಾಂಟ್ರೋ ರವಿಗೆ ಮೈಸೂರಿನ ಆರನೇ ಹೆಚ್ಚುವರಿ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಪ್ರಕರಣದಲ್ಲಿ ಬಂಧಿತನಾಗಿ…

Leave a Reply

Your email address will not be published. Required fields are marked *