DMDK ಸ್ಥಾಪಕ, ನಟ ವಿಜಯಕಾಂತ್ ಕೋವಿಡ್ ಗೆ ಬಲಿ – ವೆಂಟಿಲೇಟರ್ ನಿಂದ ಎದ್ದು ಬಾರದ “ಚಿನ್ನ ಗೌಂಡರ್”..!!

DMDK ಸ್ಥಾಪಕ, ನಟ ವಿಜಯಕಾಂತ್ ಕೋವಿಡ್ ಗೆ ಬಲಿ – ವೆಂಟಿಲೇಟರ್ ನಿಂದ ಎದ್ದು ಬಾರದ “ಚಿನ್ನ ಗೌಂಡರ್”..!!

ನ್ಯೂಸ್ ಆ್ಯರೋ : ದೇಸಿಯ ಮುರ್ಪೊಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಸಂಸ್ಥಾಪಕ ವಿಜಯಕಾಂತ್ ಅವರು ಅನಾರೋಗ್ಯದ ಹಿನ್ನೆಲೆಯಲ್ಲಿ ಚೆನ್ನೈನಲ್ಲಿ ಗುರುವಾರ (ಡಿ.28) ನಿಧನರಾಗಿದ್ದಾರೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.

ಇಂದು ಮುಂಜಾನೆ ಅವರ ಡಿಎಂಡಿಕೆ ಪಕ್ಷ ಅಧಿಕೃತ ಮಾಹಿತಿಯನ್ನು ಹಂಚಿಕೊಂಡಿದೆ. ವಿಜಯಕಾಂತ್ ಅವರಿಗೆ 71 ವರ್ಷ ವಯಸಾಗಿತ್ತು. ಅವರನ್ನು ವೆಂಟಿಲೇಟರ್‌ನಲ್ಲಿ ಇರಿಸಲಾಗಿತ್ತು. ಕೋವಿಡ್‌ನಿಂದ ಬಳಲುತ್ತಿದ್ದ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

ಕೋವಿಡ್ ನಂತರ ಅವರಿಗೆ ಚೆನ್ನೈನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಕೆಲವು ದಿನಗಳಿಂದ ಅಸ್ವಸ್ಥರಾಗಿದ್ದು, ಅವರ ಪತ್ನಿ ಪ್ರೇಮಲತಾ ಅವರು ಕೆಲವು ಹಿಂದೆ ಪಕ್ಷದ ಅಧಿಕಾರವನ್ನು ವಹಿಸಿಕೊಂಡಿದ್ದರು.

ಕಾಜಾ ನಿರ್ದೇಶಿಸಿದ ಇನಿಕ್ಕುಮ್ ಇಳಮೈ (1979) ಸಿನಿಮಾ ಮೂಲಕ ಎಂಟ್ರಿ ಕೊಟ್ಟಿದ್ದರು. ವೃತ್ತಿಜೀವನದಲ್ಲಿ, ವಿಜಯಕಾಂತ್ ಅವರು ಅಮ್ಮನ್ ಕೋಯಿಲ್ ಕಿಜಕ್ಕಲೆ, ಚಿನ್ನ ಗೌಂಡರ್, ವೈದೇಗಿ ಕತಿರುಂಡಾಲ್, ವಲ್ಲರಸು, ವನತೈ ಪೋಲಾ, ಕ್ಯಾಪ್ಟನ್ ಪ್ರಭಾಕರನ್, ಉಳವು ತುರೈ, ಕಣ್ಣುಪಾದ ಪೋಕುತಯ್ಯ, ರಮಣ, ಹೀಗೆ ಅನೇಕ ಸಿನಿಮಾಗಳಲ್ಲಿ ನಟಿಸಿದ್ದಾರೆ. 2015ರ ತಮಿಳು ಚಲನಚಿತ್ರ ‘ಸಗಪ್ತಂ’ನಲ್ಲಿ ಕೊನೆಯದಾಗಿ ಕಾಣಿಸಿಕೊಂಡಿದ್ದರು.

Related post

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ : ಎಲ್ಲಾ ಕಛೇರಿಗಳಿಗೂ ಬೀಳುತ್ತೆ ಬೀಗ..!

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ…

ನ್ಯೂಸ್ ಆ್ಯರೋ : ಇನ್ನೆರಡೇ ದಿನಗಳು ಅಂದರೆ ಏಪ್ರಿಲ್ 26ರಂದು ಲೋಕಸಭಾ ಚುನಾವಣೆಗೆ ಮೊದಲ ಹಂತದ ಮತದಾನ ನಡೆಯಲಿದ್ದು, ಅಂದು ಎಲ್ಲಾ ಕಾರ್ಮಿಕರು, ಅರ್ಹ ಮತದಾರರು ಮತದಾನ ಮಾಡುವ…
ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮಲ್ಲಿ ಇಂದು ಚುರುಕುತನವನ್ನು ನೋಡಬಹುದು. ನಿಮ್ಮ ಆರೋಗ್ಯವು ಇಂದು ನಿಮ್ಮನ್ನು ಸಂಪೂರ್ಣವಾಗಿ ಬೆಂಬಲಿಸುತ್ತದೆ. ನಿಮ್ಮ ಹೂಡಿಕೆಗಳು ಬಗ್ಗೆ ನಿಮ್ಮ ಭವಿಷ್ಯದ ಗುರಿಗಳ ಬಗ್ಗೆ ರಹಸ್ಯಮಯವಾಗಿರಿ. ಮನೆ ಅಥವಾ ಸಾಮಾಜಿಕ…
ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮ ಕೋಪ ಕಡ್ಡಿಯನ್ನು ಗುಡ್ಡ ಮಾಡಬಹುದು-ಇದು ನಿಮ್ಮ ಕುಟುಂಬದ ಸದಸ್ಯರ ಅಸಮಾಧಾನಕ್ಕೆ ಕಾರಣವಾಗುತ್ತದೆ. ಕೋಪವನ್ನು ನಿಯಂತ್ರಣದಲ್ಲಿಡುವುದನ್ನು ಕಲಿತ ಆ ಮಹಾನ್ ಆತ್ಮಗಳೇ ಅದೃಷ್ಟಶಾಲಿಗಳು. ನಿಮ್ಮ ಕೋಪ ನಿಮ್ಮನ್ನು ಸುಡುವ…

Leave a Reply

Your email address will not be published. Required fields are marked *