
ಚಾಲೆಂಜಿಂಗ್ ಸ್ಟಾರ್ ದರ್ಶನ್ ನಿವಾಸಕ್ಕೆ ಅರಣ್ಯಾಧಿಕಾರಿಗಳ ದಾಳಿ – ಹುಲಿ ಉಗುರಿಗಾಗಿ ಹುಡುಕಾಟ, ದರ್ಶನ್ ಬಂಧನ ಸಾಧ್ಯತೆ..!!
- ಮನರಂಜನೆ
- October 25, 2023
- No Comment
- 106
ನ್ಯೂಸ್ ಆ್ಯರೋ : ವರ್ತೂರು ಸಂತೋಷ್ ಬಂಧನದ ಬಳಿಕ ಭಾರೀ ಚರ್ಚೆಯಾಗಿದ್ದ ಹುಲಿ ಉಗುರು ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ನಿವಾಸಕ್ಕೆ ಅರಣ್ಯಾಧಿಕಾರಿಗಳು ದೌಡಾಯಿಸಿ ಪರಿಶೀಲನೆ ನಡೆಸುತ್ತಿದ್ದಾರೆ ಎನ್ನಲಾದ ಮಾಹಿತಿ ಹೊರಬಿದ್ದಿದೆ.
ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿ ಇರುವ ದರ್ಶನ್ (Darshan) ಅವರ ನಿವಾಸದಲ್ಲಿ ಅರಣ್ಯಾಧಿಕಾರಿಗಳು ತಪಾಸಣೆ ನಡೆಸುತ್ತಿದ್ದಾರೆ. ದರ್ಶನ್ ಬಳಿ ಇರುವುದು ನಿಜವಾದ ಹುಲಿ ಉಗುರು (Tiger Claw Pendant) ಹೌದೋ ಅಥವಾ ಅಲ್ಲವೋ ಎಂಬುದು ಗೊತ್ತಾಗಬೇಕಿದೆ. ಒಂದು ವೇಳೆ ಹುಲಿ ಉಗುರು ಇರುವುದು ಖಚಿತವಾದರೆ ಅವರನ್ನು ವಶಕ್ಕೆ ಪಡೆಯುವ ಸಾಧ್ಯತೆ ಇದೆ.
ಯಾರೆಲ್ಲಾ ಬಳಿ ಹುಲಿ ಉಗುರು ಇದೆಯೋ ಅವರಿಗೆ ನೋಟಿಸ್ ನೀಡಿದ್ದೇವೆ ಎಂದು ಬೆಂಗಳೂರಿನಲ್ಲಿ ವನ್ಯ ಜೀವಿ ಅರಣ್ಯಾಧಿಕಾರಿ ರವೀಂದ್ರ ಹೇಳಿದ್ದಾರೆ.
ಬೆಂಗಳೂರಿನ ಅರಣ್ಯ ಭವನದಲ್ಲಿ ವನ್ಯ ಜೀವಿ ಸಂರಕ್ಷಣಾ ಅಧಿಕಾರಿಗಳಿಗೆ ನಾಗೇಶ್ ಫೋಟೋ ದಾಖಲೆ ಸಮೇತ ದೂರು ಕೊಟ್ಟಿದ್ದು, ನಟ ದರ್ಶನ್ ಕೊರಳಿನಲ್ಲಿ ಹುಲಿ ಉಗುರು ಧರಿಸಿದ್ದಾರೆ ಎಂದು ಫೋಟೋ ಸಮೇತ ದಾಖಲೆಗಳನ್ನೂ ನೀಡಿದ್ದಾರೆ. ಈಗಾಲಾದ್ರೂ ನಟ ದರ್ಶನ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ. ನಟ ದರ್ಶನ್ ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ನಾಗೇಶ್ ಅವರು ಬೆಂಗಳೂರಿನ ಅರಣ್ಯ ಭವನದಲ್ಲಿ ಪ್ರತಿಭಟನೆಯನ್ನೂ ಸಹ ಮಾಡಿದ್ದಾರೆ.