ಚಾಲೆಂಜಿಂಗ್ ಸ್ಟಾರ್ ದರ್ಶನ್ ವಿರುದ್ಧ ಪ್ರಕರಣ ದಾಖಲು – FIR ನಲ್ಲಿ ಪತ್ನಿ ವಿಜಯಲಕ್ಷ್ಮಿ, ಮ್ಯಾನೇಜರ್ ಹೆಸರೂ ಉಲ್ಲೇಖ

ಚಾಲೆಂಜಿಂಗ್ ಸ್ಟಾರ್ ದರ್ಶನ್ ವಿರುದ್ಧ ಪ್ರಕರಣ ದಾಖಲು – FIR ನಲ್ಲಿ ಪತ್ನಿ ವಿಜಯಲಕ್ಷ್ಮಿ, ಮ್ಯಾನೇಜರ್ ಹೆಸರೂ ಉಲ್ಲೇಖ

ನ್ಯೂಸ್ ಆ್ಯರೋ : ಸ್ಯಾಂಡಲ್ ವುಡ್ ನ ಬಾಕ್ಸಾಫೀಸ್ ಸುಲ್ತಾನ, ಚಾಲೆಂಜಿಂಗ್ ಸ್ಟಾರ್ ದರ್ಶನ್ ವಿರುದ್ಧ ಪ್ರಕರಣ ದಾಖಲಾಗಿದೆ.

Forest squad raids actor Darshan's farmhouse and case filed against him

ದರ್ಶನ್ ಅಲ್ಲದೇ ಅವರ ಪತ್ನಿ ವಿಜಯಲಕ್ಷ್ಮಿ ಹಾಗೂ ಮ್ಯಾನೇಜರ್ ನಾಗರಾಜ್ ವಿರುದ್ಧ ಅರಣ್ಯಾಧಿಕಾರಿಗಳು ಪ್ರಕರಣ ದಾಖಲಿಸಿದ್ದು, ಭಾರೀ ಚರ್ಚೆಗೆ ಕಾರಣವಾಗಿದೆ.

ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ಸಂರಕ್ಷಿತವೆಂದು ಗುರುತಿಸಲಾದ ಪಟ್ಟೆ ತಲೆ ಹೆಬ್ಬಾತುಗಳನ್ನು ಕೂಡಿಹಾಕಿ ಸಾಕಿದ ಆರೋಪದ ಮೇಲೆ ನಟ ದರ್ಶನ್, ಫಾರ್ಮ್ ಹೌಸ್ ಒಡತಿ ವಿಜಯಲಕ್ಷ್ಮಿ ಹಾಗೂ ಮ್ಯಾನೇಜರ್ ನಾಗರಾಜ್ ಅವರ ವಿರುದ್ಧ ಪ್ರಕರಣ ದಾಖಲಿಸಲಾಗಿದ್ದು, ಕಳೆದ ಶುಕ್ರವಾರ ರಾತ್ರಿ ಅರಣ್ಯ ಇಲಾಖೆ ಅಧಿಕಾರಿಗಳು ಫಾರ್ಮ್ ಹೌಸ್ ಮೇಲೆ ದಾಳಿ ಮಾಡಿದ್ದಾರೆ.

ಮಂಗೋಲಿಯಾ ಮೂಲದ ವಲಸೆ ಹಕ್ಕಿಗಳಾದ 4 ಪಟ್ಟೆ ತಲೆ ಹೆಬ್ಬಾತುಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ನಾಲ್ಕು ವಿದೇಶಿ ಹಕ್ಕಿಗಳನ್ನು ರಕ್ಷಣೆ ಮಾಡಲಾಗಿದ್ದು, ಮೂವರ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಈ ಕುರಿತು ತನಿಖೆ ನಡೆಸಲಾಗುವುದು ಎಂದು ಅರಣ್ಯಾಧಿಕಾರಿಗಳು ಹೇಳಿದ್ದಾರೆ.

ಇವು ವಿರಳವಾದ ಪಕ್ಷಿಗಳಾಗಿದ್ದು, ಖಜಕಿಸ್ತಾನ, ಮಂಗೋಲಿಯಾ ಭಾಗದಲ್ಲಿ ಕಂಡುಬರುತ್ತವೆ. ಆ ಪ್ರದೇಶಗಳಲ್ಲಿ ಶೀತದ ವಾತಾವರಣ ಹೆಚ್ಚಿದಾಗ ರಕ್ಷಣೆಗಾಗಿ ಹಿಮಾಲಯ ದಾಟಿ ದಕ್ಷಿಣ ರಾಜ್ಯಗಳಿಗೆ ಬರುತ್ತವೆ. ಇವುಗಳನ್ನು ಸೆರೆಹಿಡಿದು ಸಾಕುವುದು ವನ್ಯಜೀವಿ ಸಂರಕ್ಷಣಾ ಕಾಯ್ದೆಯ ಪ್ರಕಾರ ಅಪರಾಧವಾಗಿದ್ದು, ಈ ಹಿನ್ನೆಲೆಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಹೇಳಲಾಗಿದೆ.

Related post

ದಿನ‌ ಭವಿಷ್ಯ 15-04-2024 ಸೋಮವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 15-04-2024 ಸೋಮವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮ ದಯಾಳು ಪ್ರಕೃತಿ ಇಂದು ಅನೇಕ ಸಂತೋಷದ ಕ್ಷಣಗಳನ್ನು ತರುತ್ತದೆ. ಲೋನ್ ತೆಗೆದುಕೊಂಡಿರುವ ಜನರಿಗೆ ಲೋನ್ ನ ಮೊತ್ತವನ್ನು ಮರುಪಾವತಿಸುವಲ್ಲಿ ತೊಂದರೆಗಳು ಉಂಟಾಗಬಹುದು. ಮನೆಯಲ್ಲಿ ನಿಮ್ಮ ಮಕ್ಕಳು ಅತಿಶಯೋಕ್ತಿಯಿರುವ…
ದಿನ‌ ಭವಿಷ್ಯ 14-04-2024 ಭಾನುವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 14-04-2024 ಭಾನುವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನೀವು ಧೀರ್ಘಕಾಲೀನ ಅನಾರೋಗ್ಯದಿಂದ ಬಳಲಬಹುದು. ಇಂದು ಯಾವುದೇ ಸಹಾಯವಿಲ್ಲದೆ, ನೀವು ಹಣವನ್ನು ಗಳಿಸುವಲ್ಲಿ ಸಾಮರ್ತ್ಯರಾಗಿರುತ್ತೀರಿ. ಯಾರಾದರೂ ನಿಮಗೆ ಹಾನಿ ಮಾಡಲು ಪ್ರಯತ್ನಿಸಬಹುದು – ಬಲವಾದ ಶಕ್ತಿಗಳು ನಿಮ್ಮ ವಿರುದ್ಧ…
ರಾಮೇಶ್ವರ ಕೆಫೆ ಬಾಂಬ್ ಸ್ಫೋಟ ಪ್ರಕರಣ – ಇಬ್ಬರು ಬಂಧಿತ ಉಗ್ರರನ್ನು ಬೆಂಗಳೂರಿಗೆ ಕರೆತಂದ NIA ಅಧಿಕಾರಿಗಳು

ರಾಮೇಶ್ವರ ಕೆಫೆ ಬಾಂಬ್ ಸ್ಫೋಟ ಪ್ರಕರಣ – ಇಬ್ಬರು ಬಂಧಿತ ಉಗ್ರರನ್ನು…

ನ್ಯೂಸ್ ಆ್ಯರೋ : ರಾಮೇಶ್ವರಂ ಕೆಫೆ ಬಾಂಬ್ ಬ್ಲಾಸ್ಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಉಗ್ರರನ್ನು NIA ಅಧಿಕಾರಿಗಳು ಬೆಂಗಳೂರಿಗೆ ಕರೆತಂದಿದ್ದಾರೆ. ಅಬ್ದುಲ್ ಮತೀನ್ ತಾಹಾ ಹಾಗೂ ಮುಜಾವಿರ್ ಹುಸೇನ್…

Leave a Reply

Your email address will not be published. Required fields are marked *