ಪ್ರೇಮ ವಿವಾಹಕ್ಕೆ ರೆಡಿಯಾದ ಗಿಚ್ಚಿ ಗಿಲಿಗಿಲಿ ಪ್ರಿಯಾಂಕ ಕಾಮತ್ – ನಿಶ್ಚಿತಾರ್ಥ ಆಗಿದ್ದು ಯಾರೊಂದಿಗೆ ಗೊತ್ತಾ?

ಪ್ರೇಮ ವಿವಾಹಕ್ಕೆ ರೆಡಿಯಾದ ಗಿಚ್ಚಿ ಗಿಲಿಗಿಲಿ ಪ್ರಿಯಾಂಕ ಕಾಮತ್ – ನಿಶ್ಚಿತಾರ್ಥ ಆಗಿದ್ದು ಯಾರೊಂದಿಗೆ ಗೊತ್ತಾ?

ನ್ಯೂಸ್ ಆ್ಯರೋ : ಇದೀಗ ಕನ್ನಡ ಸಿನಿಮಾ ರಂಗ ಹಾಗೂ ಟಿವಿ ರಿಯಾಲಿಟಿ ಶೋ ಗಳಲ್ಲಿನ‌ ಸೆಲೆಬ್ರಿಟಿಗಳ ವಿವಾಹ ಪರ್ವ ಆರಂಭವಾದಂತಿದೆ‌. ಚಂದನವನದ ಚಂದದ ಜೋಡಿಗಳಾದ ವಸಿಷ್ಠ ಸಿಂಹ ಹಾಗೂ ಹರಿಪ್ರಿಯಾ ಇತ್ತೀಚೆಗೆ ನಿಶ್ಚಿತಾರ್ಥ ಮಾಡಿಸಿಕೊಂಡು ಮದುವೆ ತಯಾರಿಯಲ್ಲಿದ್ದಾರೆ. ಇದೀಗ ಗಿಚ್ಚಿ ಗಿಲಿಗಿಲಿ ಕಾರ್ಯಕ್ರಮದ ಪ್ರಿಯಾಂಕ ಕಾಮತ್ ತಾನು ಪ್ರೀತಿಸಿದ ಹುಡುಗನ‌ ಜೊತೆ ನಿಶ್ಚಿತಾರ್ಥ ಮಾಡಿಸಿಕೊಂಡು ಸುದ್ದಿಯಲ್ಲಿದ್ದಾರೆ.

ಕನ್ನಡ ಕಿರುತೆರೆಯಲ್ಲಿ ಮನೆಮಾತಾಗಿದ್ದ ಮಜಾಭಾರತ, ಪ್ಯಾಟೆ ಹುಡ್ಗೀರ್ ಹಳ್ಳಿ ಲೈಫು, ಗಿಚ್ಚಿ ಗಲಿಗಿಲಿ ಮುಂತಾದ ಕಾರ್ಯಕ್ರಮಗಳಲ್ಲಿ ಭಾಗವಹಿಸಿ, ಪ್ರೇಕ್ಷಕರನ್ನು ನಗೆಗಡಲಲ್ಲಿ ತೇಲಿಸಿದ ನಟಿ ಪ್ರಿಯಾಂಕ ಇದೀಗ ತಮ್ಮ ಪ್ರೀತಿಯ ಹುಡುಗ ಅಮಿತ್‌ ಜೊತೆಗೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ.

ಶೀಘ್ರದಲ್ಲಿಯೇ ಅಮಿತ್ ನಾಯಕ್ ಜೊತೆಗೆ ಹಸೆಮಣೆ ಏರಲಿರುವ ಪ್ರಿಯಾಂಕ ಇದೀಗ ನಿಶ್ಚಿತಾರ್ಥ ಮಾಡಿಕೊಂಡಿದ್ದು, ಈ ವಿಚಾರವನ್ನು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡು ಫೋಟೋ ಪೋಸ್ಟ್ ಮಾಡಿದ್ದಾರೆ.

ಸದ್ಯ, ಈ ಫೋಟೋಗಳು ಬಾರಿ ವೈರಲ್ ಆಗುತ್ತಿದೆ. ಇದರೊಂದಿಗೆ ಪ್ರಿಯಾಂಕ ತಮ್ಮ ಅನಾರೋಗ್ಯದ ವೇಳೆ ಅಮಿತ್ ನಾಯಕ್ ಕಾಳಜಿ ವಹಿಸಿರುವ ವಿಡಿಯೋವೊಂದನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೋ ಮತ್ತು‌ ನಿಶ್ಚಿತಾರ್ಥದ ಫೋಟೋಗಳಿಗೆ ನೆಟ್ಟಿಗರಿಂದ ಬಾರಿ ಮೆಚ್ಚುಗೆ ವ್ಯಕ್ತವಾಗುತ್ತಿದೆ.

Related post

ದಿನ‌ ಭವಿಷ್ಯ 15-04-2024 ಸೋಮವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 15-04-2024 ಸೋಮವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮ ದಯಾಳು ಪ್ರಕೃತಿ ಇಂದು ಅನೇಕ ಸಂತೋಷದ ಕ್ಷಣಗಳನ್ನು ತರುತ್ತದೆ. ಲೋನ್ ತೆಗೆದುಕೊಂಡಿರುವ ಜನರಿಗೆ ಲೋನ್ ನ ಮೊತ್ತವನ್ನು ಮರುಪಾವತಿಸುವಲ್ಲಿ ತೊಂದರೆಗಳು ಉಂಟಾಗಬಹುದು. ಮನೆಯಲ್ಲಿ ನಿಮ್ಮ ಮಕ್ಕಳು ಅತಿಶಯೋಕ್ತಿಯಿರುವ…
ದಿನ‌ ಭವಿಷ್ಯ 14-04-2024 ಭಾನುವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 14-04-2024 ಭಾನುವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನೀವು ಧೀರ್ಘಕಾಲೀನ ಅನಾರೋಗ್ಯದಿಂದ ಬಳಲಬಹುದು. ಇಂದು ಯಾವುದೇ ಸಹಾಯವಿಲ್ಲದೆ, ನೀವು ಹಣವನ್ನು ಗಳಿಸುವಲ್ಲಿ ಸಾಮರ್ತ್ಯರಾಗಿರುತ್ತೀರಿ. ಯಾರಾದರೂ ನಿಮಗೆ ಹಾನಿ ಮಾಡಲು ಪ್ರಯತ್ನಿಸಬಹುದು – ಬಲವಾದ ಶಕ್ತಿಗಳು ನಿಮ್ಮ ವಿರುದ್ಧ…
ರಾಮೇಶ್ವರ ಕೆಫೆ ಬಾಂಬ್ ಸ್ಫೋಟ ಪ್ರಕರಣ – ಇಬ್ಬರು ಬಂಧಿತ ಉಗ್ರರನ್ನು ಬೆಂಗಳೂರಿಗೆ ಕರೆತಂದ NIA ಅಧಿಕಾರಿಗಳು

ರಾಮೇಶ್ವರ ಕೆಫೆ ಬಾಂಬ್ ಸ್ಫೋಟ ಪ್ರಕರಣ – ಇಬ್ಬರು ಬಂಧಿತ ಉಗ್ರರನ್ನು…

ನ್ಯೂಸ್ ಆ್ಯರೋ : ರಾಮೇಶ್ವರಂ ಕೆಫೆ ಬಾಂಬ್ ಬ್ಲಾಸ್ಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಉಗ್ರರನ್ನು NIA ಅಧಿಕಾರಿಗಳು ಬೆಂಗಳೂರಿಗೆ ಕರೆತಂದಿದ್ದಾರೆ. ಅಬ್ದುಲ್ ಮತೀನ್ ತಾಹಾ ಹಾಗೂ ಮುಜಾವಿರ್ ಹುಸೇನ್…

Leave a Reply

Your email address will not be published. Required fields are marked *