
ಶೂಟಿಂಗ್ ಸ್ಪಾಟ್ ನಲ್ಲಿ ಶುಭಾ ಪೂಂಜಾ ಕೈಹಿಡಿದೆಳೆದು ಯುವಕರ ಪುಂಡಾಟ – ಶೂಟಿಂಗ್ ಸೆಟ್ ಗೂ ಹಾನಿ, ಚಿತ್ರೀಕರಣವನ್ನೇ ಸ್ಥಗಿತಗೊಳಿಸಿದ ಚಿತ್ರತಂಡ
- ಮನರಂಜನೆ
- October 28, 2023
- No Comment
- 67
ನ್ಯೂಸ್ ಆ್ಯರೋ : ಸ್ಯಾಂಡಲ್ ವುಡ್ ನಟಿ, ಮಾಜಿ ಬಿಗ್ ಬಾಸ್ ಸ್ಪರ್ಧಿ ಶುಭಾ ಪೂಂಜಾರೊಂದಿಗೆ ಕಿಡಿಗೇಡಿಗಳು ಅಸಭ್ಯ ವರ್ತನೆ ನಡೆಸಿರುವ ಘಟನೆ ನಡೆದಿದೆ.
ಹಾಡಿನ ಚಿತ್ರೀಕರಣದ ವೇಳೆ ಕಿಡಿಗೇಡಿಗಳಿಂದ ಈ ಕೃತ್ಯ ನಡೆದಿದ್ದು ಶೂಟಿಂಗ್ ಸೆಟ್ ಧ್ವಂಸಗೊಳಿಸಿದ್ದಾರೆ. ಕಳಸ ಸಮೀಪದ ಮೈಂದಾಡಿಗುಡ್ಡ ಪ್ರದೇಶದಲ್ಲಿ ಕೊರಗಜ್ಜ ಚಿತ್ರದ ಹಾಡಿನ ಚಿತ್ರೀಕರಣದ ವೇಳೆ ಈ ಘಟನೆ ನಡೆದಿದೆ.
ಘಟನೆಯ ಕುರಿತು ಹೇಳಿಕೆ ನೀಡಿದ ನಿರ್ದೇಶಕ ಸುಧೀರ್ ಅತ್ತಾವರ, ಮೈದಾಡಿ ಗುಡ್ಡದಲ್ಲಿ ಚಿತ್ರೀಕರಣ ನಡೆಯುವ ವೇಳೆ ಯುವಕರು ನಡೆದ ರೀತಿ ಮನಸ್ಸಿಗೆ ಅತ್ಯಂತ ನೋವು ಉಂಟು ಮಾಡಿದೆ. ಯಾವುದೋ ಉದ್ದೇಶದಿಂದ ಯುವಕರು ಅಸಭ್ಯ ವರ್ತನೆ ಮಾಡಿದ್ರು, ಇದರಿಂದ ಚಿತ್ರಿಕರಣವನ್ನೇ ನಿಲ್ಲಿಸಬೇಕಾದಂತ ಪರಿಸ್ಥಿತಿ ನಿರ್ಮಾಣವಾಯಿತು. ಹಾಡಿನ ಚಿತ್ರೀಕರಣಕ್ಕಾಗಿ 50 ಜನ ಕಲಾವಿದರು, ಖ್ಯಾತ ಕೊರಿಯೋಗ್ರಾಫರ್ ಗಣೇಶ ಆಚಾರ್ಯ ಕೂಡ ಇದ್ದರು ಎಂದು ಹೇಳಿದ್ದಾರೆ.
ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಕುದುರೆಮುಖ ಠಾಣಾ ವ್ಯಾಪ್ತಿಯಲ್ಲಿ ನಡೆದಿರುವ ಘಟನೆಯಾಗಿದ್ದು, ಸದ್ಯ ಘಟನೆ ಕುರಿತು ಯಾವುದೇ ದೂರು ದಾಖಲಿಸಿಲ್ಲ ಎಂದು ಅವರು ಹೇಳಿದ್ದಾರೆ.