ಇಹಲೋಕ ತ್ಯಜಿಸಿದ ಕನ್ನಡ ಚಿತ್ರರಂಗದ ಕಾಮಧೇನು ಇವರು – ‘ರಾಣಿಹೊನ್ನಮ್ಮ’ ನಾಗಿದ್ದ ಲೀಲಾವತಿ ಬಗ್ಗೆ ನಿಮಗೆಷ್ಟು ಗೊತ್ತು…?

ಇಹಲೋಕ ತ್ಯಜಿಸಿದ ಕನ್ನಡ ಚಿತ್ರರಂಗದ ಕಾಮಧೇನು ಇವರು – ‘ರಾಣಿಹೊನ್ನಮ್ಮ’ ನಾಗಿದ್ದ ಲೀಲಾವತಿ ಬಗ್ಗೆ ನಿಮಗೆಷ್ಟು ಗೊತ್ತು…?

ನ್ಯೂಸ್ ಆ್ಯರೋ : ಕನ್ನಡ ಚಿತ್ರರಂಗದ ಅನೇಕ ಘಟಾನುಘಟಿಗಳು ಇಹಲೋಕ ತ್ಯಜಿಸಿದ್ದಾರೆ. ಅವರ ಸಾಧನೆಯಂತೂ ಪದಗಳಲ್ಲಿ ವಿವರಿಸಲು ಸಾಧ್ಯವಿಲ್ಲ. ಇತ್ತೀಚೆಗಂತೂ ಅನೇಕ ಲೆಜೆಂಡರಿ ಸೆಲೆಬ್ರೆಟಿಗಳು ಸಾವನ್ನಪ್ಪಿರುವುದು ದುರಂತ. ಇದೀಗ ಮತ್ತೆ ಸ್ಯಾಂಡಲ್ ವುಡ್ ಗೆ ನಟಿ ಲೀಲಾವತಿ ಅವರ ಸಾವು ಕೂಡಾ ಶಾಕ್ ನೀಡಿದೆ. ಕನ್ನಡ ಚಿತ್ರರಂಗದ ಜನಪ್ರಿಯ ನಟಿ ಲೀಲಾವತಿ ನಿನ್ನೆ ಇಹಲೋಕ ತ್ಯಜಿಸಿದರು. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಲೇ ಕೊನೆಯುಸಿರೆಳೆದಿದ್ದಾರೆ.

ತಮ್ಮ 600 ಚಿತ್ರಗಳ ಸಾಧನೆಯಿಂದ ಬೆಳ್ಳಿತೆರೆಯ ಮೇಲೆ ಮಿಂಚಿದ್ದ ಲೀಲಾವತಿ ಅವರು ತಮ್ಮದೇ ಆದ ವಿಶೇಷ ಮನ್ನಣೆ ಗಳಿಸಿದ್ದರು. ಅವರು ಕನ್ನಡ, ತಮಿಳು, ತೆಲುಗು ಮತ್ತು ಮಲಯಾಳಂ ಭಾಷೆಗಳಲ್ಲಿ ನಟಿಸಿದ್ದಾರೆ. ಲೀಲಾವತಿ ಅವರು 400ಕ್ಕೂ ಹೆಚ್ಚು ಕನ್ನಡ ಚಿತ್ರಗಳಲ್ಲಿ ನಟಿಸಿದ್ದಾರೆ. “ಭಕ್ತ ಕುಂಬಾರ, ರಾಣಿ ಹೊನ್ನಮ್ಮ, ಸಂತ ತುಕಾರಾಂ” ಮುಂತಾದ ಅಪ್ರತಿಮ ಚಿತ್ರಗಳಲ್ಲಿನ ಅವರ ಅಸಾಧಾರಣ ಅಭಿನಯವು ಶಾಶ್ವತವಾಗಿ ನೆನಪಿನಲ್ಲಿ ಉಳಿಯುವಂತಿದೆ.

ಕನ್ನಡ ಚಿತ್ರರಂಗದ ಅದ್ಭುತ ನಟಿ ಲೀಲಾವತಿ:

ಲೀಲಾವತಿಯವರ ವೃತ್ತಿಜೀವನವು ಆರು ದಶಕಗಳಿಗೂ ಹೆಚ್ಚು ವ್ಯಾಪಿಸಿದೆ. ಅವರು ಕನ್ನಡ, ತಮಿಳು, ತೆಲುಗು ಮತ್ತು ಮಲಯಾಳಂ ಭಾಷೆಗಳಲ್ಲಿ ಸುಮಾರು 600 ಚಿತ್ರಗಳಲ್ಲಿ ನಟಿಸಿದ್ದಾರೆ. ತಮ್ಮ ಬಹುಮುಖ ನಟನೆಯಿಂದ ಚಿತ್ರರಂಗದಲ್ಲಿ ವಿಶೇಷ ಹೆಸರು ಮಾಡಿದ್ದಾರೆ. ತಮ್ಮ ಅಸಾಧಾರಣ ಅಭಿನಯಕ್ಕಾಗಿ 1999-2000 ರಲ್ಲಿ ಪ್ರತಿಷ್ಠಿತ ಡಾ.ರಾಜ್ ಕುಮಾರ್ ಜೀವಮಾನ ಸಾಧನೆ ಪ್ರಶಸ್ತಿ ಅಲ್ಲದೆ, 2008 ರಲ್ಲಿ ತುಮಕೂರು ವಿಶ್ವವಿದ್ಯಾನಿಲಯದಿಂದ ಗೌರವ ಡಾಕ್ಟರೇಟ್ ಸೇರಿದಂತೆ ಅನೇಕ ಪ್ರಶಸ್ತಿಗಳನ್ನು ಪಡೆದಿದ್ದಾರೆ.

ಕರ್ನಾಟಕದ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯಲ್ಲಿ ಜನಿಸಿದ ಲೀಲಾವತಿಯವರು ಚಿಕ್ಕ ವಯಸ್ಸಿನಲ್ಲೇ ರಂಗಭೂಮಿಯತ್ತ ಒಲವು ಬೆಳೆಸಿಕೊಂಡರು. ನಟನೆಗೆ ಸಂಪೂರ್ಣವಾಗಿ ಬದ್ಧರಾಗುವ ಮೊದಲು, ಅವರು ಮನೆಯ ಜವಾಬ್ದಾರಿಯನ್ನು ವಹಿಸಿಕೊಂಡಿದ್ದರು.

ನಟಿ ಲೀಲಾವತಿ ವೈಯಕ್ತಿಕ ಬದುಕು:

ಇನ್ನು ನಟಿ 1949 ರಲ್ಲಿ ಪಾದಾರ್ಪಣೆ ಮಾಡಿದರು ಮತ್ತು ನಂತರ ಕನ್ನಡ ಚಿತ್ರರಂಗದಲ್ಲಿ ಜನಪ್ರಿಯ ನಟಿಯಾದರು. ಲೀಲಾವತಿ ಅವರಿಗೆ ವಿನೋದ್ ರಾಜ್ ಎಂಬ ಮಗನಿದ್ದಾನೆ. ಇವರು ಸಹ ಕನ್ನಡ ಚಿತ್ರರಂಗದ ಖ್ಯಾತ ನಟ. 1949 ರಲ್ಲಿ ಶಂಕರ್ ನಾಗ್ ಅವರ ನಾಗಕನ್ನಿಕೆ ಚಿತ್ರದ ಮೂಲಕ ಲೀಲಾವತಿ ಸಿನಿರಂಗಕ್ಕೆ ಪಾದಾರ್ಪಣೆ ಮಾಡಿದರು. ಇದಲ್ಲದೇ ಮಹಾಲಿಂಗ ಭಾಗವತರ ನಾಟಕ ಕಂಪನಿಯಲ್ಲಿ ಸುಬ್ಬಯ್ಯ ನಾಯ್ಡು ಅವರ ಒಡನಾಡಿಯಾಗಿ ಹಲವಾರು ನಾಟಕಗಳಲ್ಲಿ ಇವರು ನಟಿಸಿದ್ದಾರೆ.

ಸುಬ್ಬಯ್ಯ ನಾಯ್ಡು ನಿರ್ದೇಶನದ ಭಕ್ತ ಪ್ರಹ್ಲಾದ ಚಿತ್ರದಲ್ಲಿ ಅವರು ಸಖಿ ಪಾತ್ರವನ್ನು ನಿರ್ವಹಿಸಿದ್ದಾರೆ. ಹಲವು ಸಿನಿಮಾಗಳಲ್ಲಿ ಸಣ್ಣಪುಟ್ಟ ಪಾತ್ರಗಳನ್ನು ಮಾಡಿದ ನಂತರ ನಾಯಕಿಯಾಗಿ ನಟಿಸುವ ಅವಕಾಶ ಸಿಕ್ಕಿದ್ದು ಮಾಂಗಲ್ಯ ಯೋಗ ಚಿತ್ರದಲ್ಲಿ…!

ಲೀಲಾವತಿಯವರು ಪಡೆದ ಪ್ರಶಸ್ತಿಗಳು ಮತ್ತು ವಿಶೇಷ ಬಹುಮಾನಗಳಿವು:

2008 – ವಿಶ್ವವಿದ್ಯಾನಿಲಯದಿಂದ ಗೌರವ ಡಾಕ್ಟರೇಟ್
2006 – ಅತ್ಯುತ್ತಮ ಪೋಷಕ ನಟಿ-ಫಿಲ್ಮ್‌ಫೇರ್ ಪ್ರಶಸ್ತಿ
1999-2000 – ಡಾ. ರಾಜ್‌ಕುಮಾರ್ ಜೀವಮಾನ ಸಾಧನೆ ಪ್ರಶಸ್ತಿ
ಅವರ ಅತ್ಯುತ್ತಮ ಅಭಿನಯಕ್ಕಾಗಿ ಮೂರು ಬಾರಿ ಕರ್ನಾಟಕ ರಾಜ್ಯ ಚಲನಚಿತ್ರ ಪ್ರಶಸ್ತಿಗಳನ್ನು ಪಡೆದರು.

ಒಟ್ಟಾರೆಯಾಗಿ ಕನ್ನಡ ಚಿತ್ರರಂಗದ ಹಿರಿಯ ಕೊಂಡಿ ಕಳಚಿ ಬಿತ್ತು. ತಾಯಿಯನ್ನು ಉಸಿರಂತೆ ಪ್ರೀತಿಯಿಂದ ನೋಡಿಕೊಂಡಿರುವ ನಟ ವಿನೋದ್ ರಾಜ್ ದುಃಖದ ಸಾಗರದಲ್ಲಿ ಮೀಯುತ್ತಿದ್ದಾರೆ. ಚಿತ್ರರಂಗದ ಪ್ರಮುಖರು, ಕುಟುಂಬಸ್ಥರು ನಟಿ ಲೀಲಾವತಿ ನಿಧನಕ್ಕೆ ಸಂತಾಪ ವ್ಯಕ್ತಪಡಿಸಿದ್ದಾರೆ.

Related post

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ : ಎಲ್ಲಾ ಕಛೇರಿಗಳಿಗೂ ಬೀಳುತ್ತೆ ಬೀಗ..!

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ…

ನ್ಯೂಸ್ ಆ್ಯರೋ : ಇನ್ನೆರಡೇ ದಿನಗಳು ಅಂದರೆ ಏಪ್ರಿಲ್ 26ರಂದು ಲೋಕಸಭಾ ಚುನಾವಣೆಗೆ ಮೊದಲ ಹಂತದ ಮತದಾನ ನಡೆಯಲಿದ್ದು, ಅಂದು ಎಲ್ಲಾ ಕಾರ್ಮಿಕರು, ಅರ್ಹ ಮತದಾರರು ಮತದಾನ ಮಾಡುವ…
ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮಲ್ಲಿ ಇಂದು ಚುರುಕುತನವನ್ನು ನೋಡಬಹುದು. ನಿಮ್ಮ ಆರೋಗ್ಯವು ಇಂದು ನಿಮ್ಮನ್ನು ಸಂಪೂರ್ಣವಾಗಿ ಬೆಂಬಲಿಸುತ್ತದೆ. ನಿಮ್ಮ ಹೂಡಿಕೆಗಳು ಬಗ್ಗೆ ನಿಮ್ಮ ಭವಿಷ್ಯದ ಗುರಿಗಳ ಬಗ್ಗೆ ರಹಸ್ಯಮಯವಾಗಿರಿ. ಮನೆ ಅಥವಾ ಸಾಮಾಜಿಕ…
ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮ ಕೋಪ ಕಡ್ಡಿಯನ್ನು ಗುಡ್ಡ ಮಾಡಬಹುದು-ಇದು ನಿಮ್ಮ ಕುಟುಂಬದ ಸದಸ್ಯರ ಅಸಮಾಧಾನಕ್ಕೆ ಕಾರಣವಾಗುತ್ತದೆ. ಕೋಪವನ್ನು ನಿಯಂತ್ರಣದಲ್ಲಿಡುವುದನ್ನು ಕಲಿತ ಆ ಮಹಾನ್ ಆತ್ಮಗಳೇ ಅದೃಷ್ಟಶಾಲಿಗಳು. ನಿಮ್ಮ ಕೋಪ ನಿಮ್ಮನ್ನು ಸುಡುವ…

Leave a Reply

Your email address will not be published. Required fields are marked *