
ತನಿಖೆಯಲ್ಲಿ ಸ್ಪಷ್ಟ ಮಾಹಿತಿ ನೀಡದ ಬಿಗ್ ಬಾಸ್ ಸ್ಪರ್ಧಿ ವರ್ತೂರ್ ಸಂತೋಷ್ – ಹುಲಿ ಉಗುರು ಪ್ರಕರಣದಲ್ಲಿ ಮತ್ತಿಬ್ಬರಿಗೆ ಎದುರಾಗಿದೆ ಸಂಕಷ್ಟ
- ಮನರಂಜನೆ
- October 24, 2023
- No Comment
- 98
ನ್ಯೂಸ್ ಆ್ಯರೋ : ಬಿಗ್ ಬಾಸ್ ಇತಿಹಾಸದಲ್ಲೇ ಮೊದಲ ಬಾರಿ ಹುಲಿ ಉಗುರಿನ ಲಾಕೆಟ್ ಧರಿಸಿದ ಆರೋಪದಡಿಯಲ್ಲಿ ಕನ್ನಡ ಬಿಗ್‌ಬಾಸ್ ಸೀಸನ್ 10ರ ಸ್ಪರ್ಧಿ ವರ್ತೂರು ಸಂತೋಷ್ ಅವರನ್ನು ಬಂಧಿಸಲಾಗಿದೆ. ಇದೀಗ ಈ ಪ್ರಕರಣ ಸಂಬಂಧ ಮತ್ತಿಬ್ಬರಿಗೆ ಸಂಕಷ್ಟ ಎದುರಾಗಿದೆ.
ಹುಲಿ ಉಗುರಿನ ಪೆಂಡೆಂಟ್ ಪ್ರಕರಣದಲ್ಲಿ ಸಂತೋಷ್ ಆಪ್ತ ರಂಜಿತ್ ಹಾಗೂ ಚಿನ್ನದಂಗಡಿ ಮಾಲೀಕನಿಗೆ ಅರಣ್ಯ ಇಲಾಖೆ ನೊಟೀಸ್ ಕಳುಹಿಸಿದೆ. ಹೆಚ್ಚಿನ ತನಿಖೆಯನ್ನು ನಡೆಸಲು ಮುಂದಾಗಿದೆ.
ಇನ್ನು ಬಂಧಿತ ಸಂತೋಷ್ ತನಿಖೆ ವೇಳೆ ಅಸ್ಪಷ್ಟ ಮಾಹಿತಿ ನೀಡಿದ್ದಾರೆ ಎಂಬ ಸಂಗತಿ ಹೊರಬಿದ್ದಿದೆ. ಸಂತೋಷ್ ಧರಿಸಿದ್ದ ಹುಲಿ ಉಗುರಿನ ಮೂಲ ಕೆದಕಲು ಅರಣ್ಯ ಇಲಾಖೆ ಅಧಿಕಾರಿಗಳು ಮುಂದಾಗಿದ್ದು, ಇನ್ನಷ್ಟು ಮಾಹಿತಿ ಲಭಿಸಬೇಕಿದೆ.
ಇದೀಗ ಲಾಕೆಟ್ ಮಾಡಿಕೊಟ್ಟ ವರ್ತೂರು ಮೂಲದ ಚಿನ್ನದ ಅಂಗಡಿ ಮಾಲೀಕನಿಗೂ ಇದೀಗ ಸಂಕಷ್ಟ ಎದುರಾಗಿದ್ದು, ಪೋಲಿಸರು ಆತನ ಬೆನ್ನು ಬೀಳುವ ಸಾಧ್ಯತೆ ಇದೆ ಎನ್ನಲಾಗಿದೆ.