ಬಾಲಿವುಡ್‌ನಲ್ಲಿ ಮೊದಲ ದಿನವೇ ಧೂಳೆಬ್ಬಿಸಿದ ‘ಜವಾನ್‌’ – ಬಾಕ್ಸಾಫೀಸ್‌ನಲ್ಲಿ ಹೊಸ ದಾಖಲೆ ಬರೆದ ಬಾದ್‌ ಶಾ ಸಿನಿಮಾ ಗಳಿಸಿದ್ದೆಷ್ಟು?

ಬಾಲಿವುಡ್‌ನಲ್ಲಿ ಮೊದಲ ದಿನವೇ ಧೂಳೆಬ್ಬಿಸಿದ ‘ಜವಾನ್‌’ – ಬಾಕ್ಸಾಫೀಸ್‌ನಲ್ಲಿ ಹೊಸ ದಾಖಲೆ ಬರೆದ ಬಾದ್‌ ಶಾ ಸಿನಿಮಾ ಗಳಿಸಿದ್ದೆಷ್ಟು?

ನ್ಯೂಸ್ ಆ್ಯರೋ : ಬಾದ್ ಶಾ ಶಾರುಖ್ ಖಾನ್ ನಟನೆಯ ಬಹುನಿರೀಕ್ಷಿತ ಸಿನಿಮಾ ಜವಾನ್ (Jawan) ಬಿಡುಗಡೆಗೊಂಡ ದಿನವೇ ಹೊಸ ದಾಖಲೆಯನ್ನು ಬರೆದಿದೆ. ಈ ಸಿನಿಮಾ ಗುರುವಾರ ಬಿಡುಗಡೆಯಾಗಿದ್ದು, ಒಂದೇ ದಿನದಲ್ಲೇ ₹126.6 ಕೋಟಿ ಗಳಿಕೆ (Box office collection) ಮಾಡಿಕೊಂಡಿದೆ. ಈ ಮೂಲಕ ಹಿಂದಿ ಚಿತ್ರರಂಗದ ಇತಿಹಾಸದಲ್ಲೇ ವಿಶ್ವದಾದ್ಯಂತ ಮೊದಲ ದಿನದ ಅತ್ಯಧಿಕ ಗಳಿಕೆ ಎಂಬ ಪೋಸ್ಟರ್‌ ಅನ್ನು ಚಿತ್ರ ಹಂಚಿಕೊಂಡಿದೆ.

ಈ ಸಂಬಂಧ ಸಾಮಾಜಿಕ ಜಾಲತಾಣ ಎಕ್ಸ್‌ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿರುವ ಚಿತ್ರ ನಿರ್ಮಾಣ ಸಂಸ್ಥೆ ರೆಡ್ ಚಿಲ್ಲೀಸ್ ಎಂಟರ್‌ಟೈನ್‌ಮೆಂಟ್, ಇದು ಕೇವಲ ಆರಂಭ ಮಾತ್ರ. ಇಷ್ಟು ದೊಡ್ಡ ಪ್ರೀತಿ ನೀಡಿದ್ದಕ್ಕೆ ಧನ್ಯವಾದಗಳು ಎಂದು ಬರೆದುಕೊಂಡಿದೆ. ಮೊದಲ ದಿನ ₹129.6 ಕೋಟಿ ಗಳಿಸಿದ ಜವಾನ್. ಹಿಂದಿ ಚಿತ್ರರಂಗದ ಇತಿಹಾಸದಲ್ಲೇ ವಿಶ್ವದಾದ್ಯಂತ ಮೊದಲ ದಿನದ ಅತ್ಯಧಿಕ ಗಳಿಕೆ ಎಂಬ ಪೋಸ್ಟರ್ ಅನ್ನು ಹಂಚಿಕೊಳ್ಳಲಾಗಿದೆ ಎಂದು ಬರೆದುಕೊಂಡಿದ್ದಾರೆ.

ಚಿತ್ರರಂಗದ ಉದ್ಯಮ ವಿಶ್ಲೇಷಕ ತರನ್ ಆದರ್ಶ್ ಸಹ ವಿದೇಶಗಳಲ್ಲಿ ಜವಾನ್ ಗಳಿಕೆಯ ಎಕ್ಸ್‌ಕ್ಲೂಸಿವ್ ಮಾಹಿತಿ ಹಂಚಿಕೊಡಿದ್ದಾರೆ.

ಅಂತರರಾಷ್ಟ್ರೀಯ ಬಾಕ್ಸ್ ಆಫೀಸ್‌ನಲ್ಲಿ ಜವಾನ್ ಉತ್ತಮ ಗಳಿಕೆ ಮೂಲಕ ವಿದೇಶಗಳಲ್ಲಿಯೂ ಶಾರುಖ್ ತಮ್ಮ ಸಾರ್ವಭೌಮತೆಯನ್ನು ಸಾಬೀತು ಮಾಡಿದ್ದಾರೆ. ಆಸ್ಟ್ರೇಲಿಯಾದಲ್ಲಿ 3,98,030 ಡಾಲರ್(₹2.11 ಕೋಟಿ), ನ್ಯೂಜಿಲೆಂಡ್ 79,805 ಡಾಲರ್ (₹ 39.13 ಲಕ್ಷ), ಜರ್ಮನಿಯಲ್ಲಿ ₹1.3 ಕೋಟಿ, ಬ್ರಿಟನ್‌ನಲ್ಲಿ ₹2.16 ಕೋಟಿ ಗಳಿಕೆ ಕಂಡಿದೆ ಎಂದು ಅವರು ಹೇಳಿದ್ದಾರೆ.

ಜವಾನ್ ಸಿನೆಮಾದಲ್ಲಿ ನಾಯಕನಾಗಿ ಶಾರುಖ್ ಖಾನ್, ನಾಯಕಿಯಾಗಿ ನಯನತಾರಾ, ವಿಜಯ್ ಸೇತುಪತಿ, ಸಾನ್ಯಾ ಮಲ್ಹೋತ್ರಾ, ಪ್ರಿಯಾಮಣಿ ಹಾಹೂ ಯೋಗಿ ಬಾಬು ಸೇರಿದಂತೆ ದೊಡ್ಡ ತಾರಾ ಬಳಗವಿದೆ.

ಜವಾನ್ ಸಿನೆಮಾವನ್ನು ಖ್ಯಾತ ನಿರ್ದೇಶಕ ಆಟ್ಲಿ ಕುಮಾರ್ ಅವರು ನಿರ್ದೇಶನ ಮಾಡಿದ್ದಾರೆ. ಈ ಸಿನೆಮಾವನ್ನು ಶಾರುಖ್ ಪತ್ನಿ ಗೌರಿ ಖಾನ್ ಅವರು ನಿರ್ಮಾಣ ಮಾಡಿದ್ದು, ಸಿನೆಮಾ ಹಿಂದಿ, ತಮಿಳು ಹಾಗೂ ತೆಲುಗು ಭಾಷೆಯಲ್ಲಿ ಬಿಡುಗಡೆಗೊಂಡಿದೆ. ಸಿನೆಮಾವನ್ನು ಯಶ್ ರಾಜ್ ಫಿಲ್ಮ್ಸ್, ರೆಂಡ್ ಜಿಯಂಟ್‌ ಮೂವಿಸ್, ಎಸ್‌ವಿಎಫ್, ಪೆನ್‌ ಸ್ಡೂಡಿಯೋಸ್, ಶ್ರೀ ವೆಂಕಟೇಶ್ವರ ಕ್ರಿಯೇಶನ್ಸ್ ಅವರು ಹಂಚಿಕೆ ಹಕ್ಕನ್ನು ಪಡೆದುಕೊಂಡಿದ್ದಾರೆ

Related post

ದಿನ‌ ಭವಿಷ್ಯ 29-09-2023 ಶುಕ್ರವಾರ | ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 29-09-2023 ಶುಕ್ರವಾರ | ಇಂದಿನ ರಾಶಿಫಲ ಹೀಗಿದೆ..

ಮೇಷಮಕ್ಕಳ ನಿಮ್ಮ ಸಂಜೆಯನ್ನು ಉಲ್ಲಾಸಮಯವಾಗಿಸುತ್ತಾರೆ. ಮಂಕು ಕವಿದ ಮತ್ತು ಒತ್ತಡದ ದಿನಕ್ಕೆ ಮಂಗಳ ಹಾಡಲು ಒಂದು ಸಂತೋಷಕೂಟವನ್ನು ಯೋಜಿಸಿ. ಮಕ್ಕಳ ಸಾಂಗತ್ಯ ನಿಮ್ಮ ದೇಹವನ್ನು ಪುನಃಶ್ಚೇತನಗೊಳಿಸುತ್ತದೆ. ನೀವು ನಿಮ್ಮನ್ನು…
ಸುಬ್ರಹ್ಮಣ್ಯ : ವಿವಾಹಿತ ಮಹಿಳೆಯ ಜೊತೆ ಲಾಡ್ಜ್ ನಲ್ಲಿ ಕಾಮಕೇಳಿ, ಫೋಟೋ ವಿಡಿಯೋ ತೆಗೆದು ಬ್ಲ್ಯಾಕ್ ಮೇಲ್ – ಗ್ರಾಮ ಪಂಚಾಯತ್ ಮಾಜಿ ಸದಸ್ಯ ಪ್ರಶಾಂತ್ ಭಟ್ ಮಾಣಿಲ ಕಾರವಾರದಲ್ಲಿ ಅರೆಸ್ಟ್…!!

ಸುಬ್ರಹ್ಮಣ್ಯ : ವಿವಾಹಿತ ಮಹಿಳೆಯ ಜೊತೆ ಲಾಡ್ಜ್ ನಲ್ಲಿ ಕಾಮಕೇಳಿ, ಫೋಟೋ…

ನ್ಯೂಸ್ ಆ್ಯರೋ : ವಿವಾಹಿತ ಮಹಿಳೆಗೆ ಆರ್ಕೆಸ್ಟ್ರಾದಲ್ಲಿ ಅವಕಾಶ ಕೊಡಿಸುವುದಾಗಿ ನಂಬಿಸಿ ಲೈಂಗಿಕವಾಗಿ ಬಳಸಿಕೊಂಡಿದ್ದಲ್ಲದೇ ಆಕೆಯ ನಗ್ನ ಚಿತ್ರ ಸೆರೆಹಿಡಿದು ಹಲವರಿಗೆ ಶೇರ್ ಮಾಡಿದ್ದು, ಲಕ್ಷಾಂತರ ರೂಪಾಯಿ ಹಣ…
ಗೂಗಲ್‌ನಲ್ಲಿ ಆತ್ಮಹತ್ಯೆಗೆ ದಾರಿ ಹುಡುಕಾಡಿದ ಯುವಕ – ಸೈಬರ್‌ ಪೊಲೀಸರ ಬಲೆಗೆ ಬಿದ್ದವನ ಕಥೆ ಮುಂದೇನಾಯ್ತು ಗೊತ್ತಾ?

ಗೂಗಲ್‌ನಲ್ಲಿ ಆತ್ಮಹತ್ಯೆಗೆ ದಾರಿ ಹುಡುಕಾಡಿದ ಯುವಕ – ಸೈಬರ್‌ ಪೊಲೀಸರ ಬಲೆಗೆ…

ನ್ಯೂಸ್‌ ಆ್ಯರೋ : ಈ ಆಧುನಿಕ ಯುಗದಲ್ಲಿ ಎಲ್ಲನೂ ತಂತ್ರಜ್ಞಾನದ ಮೂಲಕವೇ ನಡೆಯುತ್ತದೆ. ಇನ್ನೂ ಗೂಗಲ್ ಮುಖೇನಾ ನಮಗೆ ಬೇಕಾದ ಎಲ್ಲ ವಿಷಯಗಳನ್ನು ತಿಳಿದುಕೊಳ್ಳಬಹುದಾಗಿದೆ. ಯಾವ ವಿಷಯದ ಬಗ್ಗೆನೂ…

Leave a Reply

Your email address will not be published. Required fields are marked *