
ರಿಲೀಸ್ ಆಗಿ ಎರಡೇ ದಿನಕ್ಕೆ 100 ಕೋಟಿ ಕಲೆಕ್ಷನ್: ಹೌಸ್‌ಫುಲ್ ಪ್ರದರ್ಶನನೊಂದಿಗೆ ಬಾಕ್ಸ್‌ಆಫೀಸ್‌ನಲ್ಲಿ ಧೂಳೆಬ್ಬಿಸುತ್ತಿದೆ ‘ಕಬ್ಜ’
- ಮನರಂಜನೆ
- March 20, 2023
- No Comment
- 248
ನ್ಯೂಸ್ ಆ್ಯರೋ : ನಟ ಸುದೀಪ್, ರಿಯಲ್ ಸ್ಟಾರ್ ಉಪೇಂದ್ರ ಅಭಿನಯದ, ನಿರ್ದೇಶಕ ಆರ್.ಚಂದ್ರು ನಿರ್ದೇಶನದ ‘ಕಬ್ಜ’ ಸಿನಿಮಾ ರಿಲೀಸ್ ಆದ ಎರಡೇ ದಿನಕ್ಕೆ 100 ಕೋಟಿ ಕಲೆಕ್ಷನ್ ಮಾಡುವ ಮೂಲಕ ದಾಖಲೆ ಮಾಡಿದೆ.
ಈ ಬಗ್ಗೆ ಚಿತ್ರತಂಡ ಪತ್ರಿಕಾಗೋಷ್ಠಿಯಲ್ಲಿ ಅಧಿಕೃತವಾಗಿಯೇ ಮಾಹಿತಿಯನ್ನು ಹಂಚಿಕೊಂಡಿದೆ. ಕಬ್ಜ ನೂರು ಕೋಟಿ ಗಳಿಸಿ ಮುನ್ನುಗ್ಗುತ್ತಿರುವುದಕ್ಕೆ ಸ್ಯಾಂಡಲ್‌ವುಡ್ ಮಂದಿ ಚಿತ್ರತಂಡಕ್ಕೆ ಶುಭಕೋರಿದ್ದಾರೆ.
ಸಿನಿಮಾದ ಯಶಸ್ಸಿನ ಕುರಿತು ಮಾತನಾಡಿರುವ ಉಪೇಂದ್ರ, ‘ಇದು ನಿರೀಕ್ಷೆಗೂ ಮೀರಿ ಬಂದ ಪ್ರತಿಕ್ರಿಯೆ. ಒಂದು ಸಿನಿಮಾ ಗೆದ್ದರೆ ಉದ್ಯಮ ಉಸಿರಾಡುತ್ತದೆ’ ಎಂದಿದ್ದಾರೆ.
ಸದ್ಯ ಕನ್ನಡದ ಕೆಜಿಎಫ್, ಚಾರ್ಲಿ, ಕಾಂತಾರ ಸಿನಿಮಾದ ನಂತರ ಕಬ್ಜ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಸದ್ದು ಮಾಡುತ್ತಿದೆ. ಇನ್ನೂ ಆರ್ ಚಂದ್ರೂ ಅವರಿಗೆ ಬಾಲಿವುಡ್ ಚಿತ್ರರಂಗದಿಂದ ಕರೆ ಬಂದಿರುವುದು ಮೂಲಗಳಿಂದ ತಿಳಿದುಬಂದಿದೆ.
ವಿತರಕ ಮೋಹನ್ ಅವರು ಮಾತನಾಡಿ, ಕರ್ನಾಟಕದಲ್ಲೇ 300ಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ಕಬ್ಜ ಸಿನಿಮಾ ರಿಲೀಸ್ ಆಗಿದ್ದು, ವೀಕೆಂಡ್ ನಲ್ಲಿ ಬಹುತೇಕ ಚಿತ್ರಮಂದಿರಗಳು ಹೌಸ್ ಫುಲ್ ಪ್ರದರ್ಶನ ಕಾಣಿದೆ. ರಾಷ್ಟ್ರಮಟ್ಟದಲ್ಲಿ ಕಬ್ಜ ಗುರುತಿಸಿಕೊಳ್ಳಲಿದೆ ಎಂದರು.