ಸಿಂಹಪ್ರಿಯಾ ಜೋಡಿಯ ಮದುವೆಯ ಡೇಟ್ ಫಿಕ್ಸ್ – ಮೈಸೂರಿನಲ್ಲಿ ನಡೆಯಲಿದೆ ಸ್ಯಾಂಡಲ್ ವುಡ್ ಜೋಡಿಹಕ್ಕಿಗಳ ವಿವಾಹ

ಸಿಂಹಪ್ರಿಯಾ ಜೋಡಿಯ ಮದುವೆಯ ಡೇಟ್ ಫಿಕ್ಸ್ – ಮೈಸೂರಿನಲ್ಲಿ ನಡೆಯಲಿದೆ ಸ್ಯಾಂಡಲ್ ವುಡ್ ಜೋಡಿಹಕ್ಕಿಗಳ ವಿವಾಹ

ನ್ಯೂಸ್ ಆ್ಯರೋ : ಸ್ಯಾಂಡಲ್ ವುಡ್ ನಟ ವಸಿಷ್ಠ ಸಿಂಹ ಹಾಗೂ ನಟಿ ಹರಿಪ್ರಿಯಾ ಇತ್ತೀಚೆಗೆ ನಿಶ್ಚಿತಾರ್ಥ ಮಾಡಿಕೊಂಡಿರುವುದು ಸಿನಿಪ್ರಿಯರಿಗೆ ತಿಳಿದ ವಿಚಾರ. ಈ ಜೋಡಿ ಪ್ರೀತಿಯಲ್ಲಿದ್ದಾರೆ ಎಂದು ಮೊದಲ ಬಾರಿ ತಿಳಿದಾಗ ಎಲ್ಲರೂ ಆಶ್ಚರ್ಯ ವ್ಯಕ್ತಪಡಿಸಿದ್ದರು. ಆದಷ್ಟು ಬೇಗ ಗುಡ್‌ ನ್ಯೂಸ್‌ ಕೊಡಿ ಎಂದು ಸೋಷಿಯಲ್‌ ಮೀಡಿಯಾ ಮೂಲಕ ಬೇಡಿಕೆ ಇಡುತ್ತಿದ್ದರು. ಈ ಜೋಡಿ ಇದೇ ತಿಂಗಳು ದಾಂಪತ್ಯ ಜೀವನಕ್ಕೆ ಕಾಲಿಡುತ್ತಿದ್ದಾರೆ.

ಹೌದು.. ಸ್ಯಾಂಡಲ್​ವುಡ್​ನ ‘ಸಿಂಹಪ್ರಿಯಾ’ ಜೋಡಿಗೆ ಕಂಕಣ ಭಾಗ್ಯ ಕೂಡಿ ಬಂದಿದ್ದು, ಈ ಸ್ಟಾರ್ ಮದುವೆ ಡೇಟ್ ಹೊರಬಿದ್ದಿದೆ. ಇತ್ತೀಚೆಗಷ್ಟೇ ಸರಳವಾಗಿ ನಿಶ್ಚಿತಾರ್ಥ ಮಾಡಿಕೊಂಡಿದ್ದ ಈ ಜೋಡಿ ಹಕ್ಕಿಗಳು ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಹಸೆಮಣೆ ಏರಲು ಸಜ್ಜಾಗಿವೆ.

ಮೈಸೂರು ಸಂಸದ ಪ್ರತಾಪ್​ ಸಿಂಹ ತಮ್ಮ ಟ್ವಿಟರ್​ ಖಾತೆಯಲ್ಲಿ ವಸಿಷ್ಠ ಸಿಂಹ ಮತ್ತು ಹರಿಪ್ರಿಯಾ ಅವರ ಮದುವೆ ದಿನಾಂಕದ ಬಗ್ಗೆ ಮಾಹಿತಿ ನೀಡಿದ್ದಾರೆ. ‘ಖ್ಯಾತ ಚಲನಚಿತ್ರ ನಟರಾದ ವಸಿಷ್ಠ ಸಿಂಹ ಮತ್ತು ಹರಿಪ್ರಿಯಾ ಅವರ ವಿವಾಹ ಮೈಸೂರಿನ ಗಣಪತಿ ಸಚ್ಚಿದಾನಂದ ಆಶ್ರಮದಲ್ಲಿ ಇದೇ ತಿಂಗಳ 26 ರಂದು ನಡೆಯಲಿದೆ’ ಎಂದು ಅವರು ತಿಳಿಸಿದ್ದಾರೆ.

ಇನ್ನೂ ನಿಶ್ಚಿತಾರ್ಥಕ್ಕೂ ಮೊದಲು ‘ಚಿನ್ನ ನಿನ್ನ ತೋಳಿನಲ್ಲಿ ಕಂದ ನಾನು’ ಎಂದು ಹುಲಿ ಕೈಯಲ್ಲಿ ಮಲಗಿರುವ ಮಗುವಿನ ಫೋಟೋ ಹಂಚಿಕೊಂಡು ಹರಿಪ್ರಿಯ, ವಸಿಷ್ಠ ಸಿಂಹ ಅವರನ್ನು ಪ್ರೀತಿಸುತ್ತಿರುವ ಬಗ್ಗೆ ಡಿಸೆಂಬರ್​ 3ರಂದು ವಿಭಿನ್ನವಾಗಿಯೇ ತಿಳಿಸಿದ್ದರು. ಇದಕ್ಕೆ ಪ್ರತಿಕ್ರಿಯೆ ರೀತಿಯಲ್ಲಿ ವಸಿಷ್ಠ ಸಿಂಹ ಅವರು, ‘ಎಂದೂ ನಿನ್ನ ನೆರಳಾಗಿ ಕಾಯುವೆ ನಾನು’ ಎಂದು ಟ್ವೀಟ್ ಮಾಡಿದ್ದರು.

ನಂತರದ ಕೆಲದಿನಗಳಲ್ಲಿ ನಟ ಮತ್ತು ನಟಿ ತಮ್ಮ ಟ್ವಿಟರ್​ ಖಾತೆಯಲ್ಲಿ ನಿಶ್ಚಿತಾರ್ಥದ ಫೋಟೋ ಹಂಚಿಕೊಂಡಿದ್ದರು. ಆದರೆ ಮದುವೆಯ ದಿನಾಂಕ ಬಹಿರಂಗವಾಗಿರಲಿಲ್ಲ. ಅಲ್ಲದೇ ಮದುವೆ ದಿನಾಂಕದ ಬಗ್ಗೆ ಬಹಳಷ್ಟು ಊಹಾಪೋಹಗಳು ಓಡಾಡುತ್ತಿದ್ದವು. ಇದಕ್ಕೀಗ ತೆರೆಬಿದ್ದಿದೆ.

ನಿಶ್ಚಿತಾರ್ಥದ ನಂತರ ವಸಿಷ್ಠ ಸಿಂಹ ಹಾಗೂ ಹರಿಪ್ರಿಯಾ ತಾರಾ ಜೋಡಿ ಉಡುಪಿ ಕೃಷ್ಣ ಮಠಕ್ಕೆ ಭೇಟಿ ನೀಡಿ ಕನಕ ನವಗ್ರಹ ಕಿಂಡಿ ಮೂಲಕ ದೇವರ ದರ್ಶನ ಪಡೆದು, ವಿಶೇಷ ಪೂಜೆ ಸಲ್ಲಿಸಿದ್ದರು. ಅಲ್ಲಿ ಮಠಾಧೀಶರಾದ ವಿದ್ಯಾವಲ್ಲಭ ಶ್ರೀಗಳು ಅನುಗ್ರಹ ಮಂತ್ರಾಕ್ಷತೆ ನೀಡಿ ನವ ಜೋಡಿಯನ್ನು ಗೌರವಿಸಿ ಆಶೀರ್ವದಿಸಿದ್ದರು. ಬಳಿಕ ಕೃಷ್ಣ ಮಠದ ರಥಬೀದಿಯಲ್ಲಿರುವ ಕಾಣಿಯೂರು ಮಠಕ್ಕೂ ಭೇಟಿ ಕೊಟ್ಟಿದ್ದರು.

ಸದ್ಯದಲ್ಲಿಯೇ ಹಸೆಮಣೆ ಏರಲಿರುವ ಸಿಂಹ ರೌಡಿಸಂ ಕಥಾಹಂದರದೊಂದಿಗೆ ರೊಮ್ಯಾಂಟಿಕ್​ ಲವ್​ ಸ್ಟೋರಿ ಇರುವ ಕನ್ನಡದ ಕಮರ್ಶಿಯಲ್​ ಚಿತ್ರ ಲವ್​ ಲಿಯಲ್ಲಿ ನಾಯಕ ನಟನಾಗಿ ಅಭಿನಯಿಸುತ್ತಿದ್ದಾರೆ. ಚಿತ್ರೀಕರಣ ಶೇ 80 ರಷ್ಟು ಮುಗಿದಿದ್ದು, ಚಿತ್ರತಂಡ ಲಂಡನ್​ನಲ್ಲೂ ಶೂಟಿಂಗ್​ ನಡೆಸಲು ಸಿದ್ಧವಾಗಿದೆ.

Related post

ದಿನ‌ ಭವಿಷ್ಯ 15-04-2024 ಸೋಮವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 15-04-2024 ಸೋಮವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮ ದಯಾಳು ಪ್ರಕೃತಿ ಇಂದು ಅನೇಕ ಸಂತೋಷದ ಕ್ಷಣಗಳನ್ನು ತರುತ್ತದೆ. ಲೋನ್ ತೆಗೆದುಕೊಂಡಿರುವ ಜನರಿಗೆ ಲೋನ್ ನ ಮೊತ್ತವನ್ನು ಮರುಪಾವತಿಸುವಲ್ಲಿ ತೊಂದರೆಗಳು ಉಂಟಾಗಬಹುದು. ಮನೆಯಲ್ಲಿ ನಿಮ್ಮ ಮಕ್ಕಳು ಅತಿಶಯೋಕ್ತಿಯಿರುವ…
ದಿನ‌ ಭವಿಷ್ಯ 14-04-2024 ಭಾನುವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 14-04-2024 ಭಾನುವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನೀವು ಧೀರ್ಘಕಾಲೀನ ಅನಾರೋಗ್ಯದಿಂದ ಬಳಲಬಹುದು. ಇಂದು ಯಾವುದೇ ಸಹಾಯವಿಲ್ಲದೆ, ನೀವು ಹಣವನ್ನು ಗಳಿಸುವಲ್ಲಿ ಸಾಮರ್ತ್ಯರಾಗಿರುತ್ತೀರಿ. ಯಾರಾದರೂ ನಿಮಗೆ ಹಾನಿ ಮಾಡಲು ಪ್ರಯತ್ನಿಸಬಹುದು – ಬಲವಾದ ಶಕ್ತಿಗಳು ನಿಮ್ಮ ವಿರುದ್ಧ…
ರಾಮೇಶ್ವರ ಕೆಫೆ ಬಾಂಬ್ ಸ್ಫೋಟ ಪ್ರಕರಣ – ಇಬ್ಬರು ಬಂಧಿತ ಉಗ್ರರನ್ನು ಬೆಂಗಳೂರಿಗೆ ಕರೆತಂದ NIA ಅಧಿಕಾರಿಗಳು

ರಾಮೇಶ್ವರ ಕೆಫೆ ಬಾಂಬ್ ಸ್ಫೋಟ ಪ್ರಕರಣ – ಇಬ್ಬರು ಬಂಧಿತ ಉಗ್ರರನ್ನು…

ನ್ಯೂಸ್ ಆ್ಯರೋ : ರಾಮೇಶ್ವರಂ ಕೆಫೆ ಬಾಂಬ್ ಬ್ಲಾಸ್ಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಉಗ್ರರನ್ನು NIA ಅಧಿಕಾರಿಗಳು ಬೆಂಗಳೂರಿಗೆ ಕರೆತಂದಿದ್ದಾರೆ. ಅಬ್ದುಲ್ ಮತೀನ್ ತಾಹಾ ಹಾಗೂ ಮುಜಾವಿರ್ ಹುಸೇನ್…

Leave a Reply

Your email address will not be published. Required fields are marked *