ಹರ್ಷಿಕಾ-ಭುವನ್ ಜೋಡಿಗೆ ಕೊಡವ ಸಂಪ್ರದಾಯದಂತೆ ವಿವಾಹ – ಮದುವೆ ಬಗ್ಗೆ ಹರ್ಷಿಕಾ ಕೊಟ್ರು ಅಧಿಕೃತ ಮಾಹಿತಿ

ಹರ್ಷಿಕಾ-ಭುವನ್ ಜೋಡಿಗೆ ಕೊಡವ ಸಂಪ್ರದಾಯದಂತೆ ವಿವಾಹ – ಮದುವೆ ಬಗ್ಗೆ ಹರ್ಷಿಕಾ ಕೊಟ್ರು ಅಧಿಕೃತ ಮಾಹಿತಿ

ನ್ಯೂಸ್ ಆ್ಯರೋ : ಸ್ಯಾಂಡಲ್‌ವುಡ್ ಮತ್ತೊಂದು ಮದುವೆಗೆ ಸಜ್ಜಾಗಿದೆ. ಕನ್ನಡದ ನಟಿ ಹರ್ಷಿಕಾ ಪೂಣಚ್ಚ ಹಸೆಮಣೆ ಏರಲು ಸಜ್ಜಾಗಿದ್ದಾರೆ. ಬಹುಕಾಲದ ಗೆಳೆಯ ಭುವನ್ ಪೊನ್ನಣ್ಣ ಜೊತೆ ಹರ್ಷಿಕಾ ದಾಂಪತ್ಯ ಜೀವನಕ್ಕೆ ಕಾಲಿಡುತ್ತಿದ್ದಾರೆ. ಇಬ್ಬರೂ ಅನೇಕ ವರ್ಷಗಳ ಸ್ನೇಹಿತರು. ಇದೇ ಸ್ನೇಹ ಪ್ರೀತಿಯಾಗಿ ಇದೀಗ ವೈವಾಹಿಕ ಜೀವನಕ್ಕೆ ಕಾಲಿಡುತ್ತಿದ್ದಾರೆ. ಅಂದಹಾಗೆ ಇಬ್ಬರ ಮದುವೆ ಆಗಸ್ಟ್​ 24ರಂದು ನಡೆಯುತ್ತಿದೆ. ತಮ್ಮ ಹುಟ್ಟೂರಿನಲ್ಲೇ ಈ ಜೋಡಿ ಅದ್ಧೂರಿಯಾಗಿ ವೈವಾಹಿಕ ಜೀವನಕ್ಕೆ ಕಾಲಿಡುತ್ತಿದ್ದಾರೆ.

ಕೊಡವ ಸಂಪ್ರದಾಯದಂತೆ ಈ ಮದುವೆ ನಡೆಯಲಿದ್ದು, ಇದೀಗ ನಟಿ ಹರ್ಷಿಕಾ ತಮ್ಮ ಹಾಗೂ ಭುವನ್​ರ ಮದುವೆ ಸುದ್ದಿಯನ್ನು ಅಧಿಕೃತಗೊಳಿಸಿದ್ದಾರೆ.

ಹೌದು.‌. ತಾಯ್ತ ಸಿನಿಮಾದ ಆಡಿಯೋ ಲಾಂಚ್​ನಲ್ಲಿ ಭಾಗವಹಿಸಿದ್ದ ನಟಿ ಹರ್ಷಿಕಾ ಪೂಣಚ್ಚ ತಾವು ಹಾಗೂ ಭುವನ್ ವಿವಾಹವಾಗಲು ನಿಶ್ಚಯಿಸಿರುವುದಾಗಿ ಹೇಳಿದ್ದು, ಆ. 23 ಹಾಗೂ 24 ವಿರಾಜಪೇಟೆಯ ಅಮ್ಮತ್ತಿಯಲ್ಲಿ ಹರ್ಷಿಕಾ ಮತ್ತು ಭುವನ್​ ಜೋಡಿಯ ಮದುವೆ ನಡೆಯುತ್ತಿದೆ. ಈಗಾಗಲೇ ಇಬ್ಬರ ವಿವಾಹದ ಆಮಂತ್ರಣ ಪತ್ರಿಕೆ ಲಭ್ಯವಾಗಿದ್ದು, ಕೊಡವ ಭಾಷೆಯಲ್ಲಿ ಮಂಗಳ ಪತ್ರ ಮುದ್ರಿಸಲಾಗಿರುವುದು ವಿಶೇಷವಾಗಿದೆ.

ಕಳೆದ ಆರು ವರ್ಷಗಳಿಂದ ಪ್ರೀತಿಸುತ್ತಿದ್ದ ನಟ ಭುವನ್ ಪೊನ್ನಣ್ಣ ಹಾಗೂ ಹರ್ಷಿಕಾ ಪೂಣಚ್ಚ ತಮ್ಮ ಪ್ರೀತಿಯನ್ನು ಗೌಪ್ಯವಾಗಿಟ್ಟಿದ್ದರು. ಕೋವಿಡ್ ಸಮಯದಲ್ಲಿ ಈ ಇಬ್ಬರೂ ಸೇರಿ ಸಮಾಜ ಮುಖಿ ಕಾರ್ಯದಲ್ಲಿಯೂ ತೊಡಗಿಕೊಂಡಿದ್ದರು. ಈಗ ಆರು ವರ್ಷದ ತರುವಾಯ ಪ್ರೀತಿಯನ್ನು ವಿವಾಹಕ್ಕೆ ಬಡ್ತಿ ಮಾಡಿಕೊಳ್ಳುತ್ತಿದ್ದಾರೆ. ಇವರಿಬ್ಬರ ವಿವಾಹದ ಕುರಿತು ಈ ಹಿಂದೆಯೇ ಸುದ್ದಿಯಾಗಿತ್ತು, ಆದರೆ ಈಗ ಖಾತ್ರಿಯಾಗಿದೆ.

ಹರ್ಷಿಕಾ ಪೂಣಚ್ಚ 2008ರಲ್ಲಿ ಬಣ್ಣದ ಲೋಕಕ್ಕೆ ಕಾಲಿಟ್ಟರು. PUC ಸಿನಿಮಾ ಮೂಲಕ ಹರ್ಷಿಕಾ ಮಿಂಚಿದರು. ಬಳಿಕ ಕೊಡವ ಸಿನಮಾಗಳಲ್ಲೂ ನಟಿಸಿದ್ದಾರೆ. ಕನ್ನಡ ಮಾತ್ರವಲ್ಲದೇ ತೆಲುಗು ಸಿನಿಮಾಗಳಲ್ಲಿ ನಟಿಸಿದ್ದಾರೆ. ಭೋಜ್ ಪುರಿ ಮತ್ತು ತಮಿಳು ಸಿನಿಮಾಗಳಲ್ಲಿ ಹರ್ಷಿಕಾ ಮಿಂಚಿದ್ದಾರೆ. ಕೊನೆಯದಾಗಿ ಹರ್ಷಿಕಾ ಬೇರ ಸಿನಿಮಾ ಮೂಲಕ ಅಭಿಮಾನಿಗಳ ಮುಂದೆ ಬಂದಿದ್ದಾರೆ.

ಭುವನ್ ಪೊನ್ನಣ್ಣ ಸಿನಿಮಾ ಜೀವನದ ಬಗ್ಗೆ ಹೇಳುವುದಾದರೆ, ಜಸ್ಟ್ ಮಾತ್ ಮಾತಲ್ಲಿ ಸಿನಿಮಾ ಮೂಲಕ ಮೊದಲ ಬಾರಿಗೆ ತೆರೆಮೇಲೆ ಮಿಂಚಿದರು. 2010ರಲ್ಲಿ ಸಿನಿಮಾ ರಿಲೀಸ್ ಆಗಿತ್ತು. ಕೂಲ್ ಸಖತ್ ಹಾಟ್ ಮಗ, ಕುಚಿಕು ಕುಚಿಕು ಸೇರಿದಂತೆ ಅನೇಕ ಸಿನಿಮಾಗಳಲ್ಲಿ ನಟಿಸಿದ್ದಾರೆ. ಕೊನೆಯದಾಗಿ ರಾಂಧವ ಸಿನಿಮಾ ಮೂಲಕ ಅಭಿಮಾನಿಗಳ ಮುಂದೆ ಬಂದಿದ್ದರು. ಬಳಿಕ ಮತ್ತೆ ಭುವನ್ ತೆರೆಮೇಲೆ ಕಾಣಿಸಿಕೊಂಡಿಲ್ಲ. ಇದೀಗ ಹರ್ಷಿಕಾ ಜೊತೆ ದಾಂಪತ್ಯಕ್ಕೆ ಕಾಲಿಡುತ್ತಿದ್ದಾರೆ.

Related post

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ ಮದುವೆ

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ…

ನ್ಯೂಸ್ ಆರೋ: ಬರೋಬ್ಬರಿ 25 ವರ್ಷಗಳಿಂದ ಪ್ರೀತಿಸುತ್ತಿದ್ದ ಜೋಡಿಯೊಂದು ಮಂತ್ರ ಮಾಂಗಲ್ಯ ಮೂಲಕ ಮದುವೆಯಾಗುವ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಟ್ಟಿರುವ ಅಪರೂಪದ ಘಟನೆ ತುಮಕೂರಲ್ಲಿ ನಡೆದಿದೆ. ಹೌದು ಜನಾಂದೋಲನದಲ್ಲಿ…
ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು! ಏನಿದು ವಿಷಯ?

ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು!…

ನ್ಯೂಸ್ ಆರೋ: ಎಷ್ಟೋ ಬಾರಿ ನಾವು ಈ ಹೊಟೇಲ್ ಗಳಿಗೆ ಹೋದಾಗ, ಅಲ್ಲಿ ಜನರು ವೆಜ್ ಮಂಚೂರಿಯನ್ನು ಆರ್ಡರ್ ಮಾಡಿದರೆ ಚಿಕನ್ ಮಂಚೂರಿ ತಂದು ಟೇಬಲ್ ಮೇಲೆ ಇಟ್ಟಿರುವ…
ಮದ್ವೆಗೂ ಮುಂಚೆಯೇ ಐದು ಮಂದಿ ತಾರೆಯರ ಜೊತೆ ಡೇಟ್ ಮಾಡಿದ್ದ ವಿರಾಟ್..!

ಮದ್ವೆಗೂ ಮುಂಚೆಯೇ ಐದು ಮಂದಿ ತಾರೆಯರ ಜೊತೆ ಡೇಟ್ ಮಾಡಿದ್ದ ವಿರಾಟ್..!

ನ್ಯೂಸ್ ಆರೋ: ಬಾಲಿವುಡ್‌ನ ಖ್ಯಾತ ನಟಿ ಅನುಷ್ಕಾ ಶರ್ಮಾ ಹಾಗೂ ಟೀಂ ಇಂಡಿಯಾದ ಖ್ಯಾತ ಕ್ರಿಕೆಟಿಗ ವಿರಾಟ್ ಕೊಹ್ಲಿ ಅವರ ಪರಿಚಯ ಯಾರಿಗೂ ಅಗತ್ಯವಿಲ್ಲ. ಇತ್ತೀಚೆಗಷ್ಟೇ ಅಂದರೆ ಮೇ…

Leave a Reply

Your email address will not be published. Required fields are marked *