ಸ್ಯಾಂಡಲ್ ವುಡ್ ನ ಹಿರಿಯ ನಿರ್ದೇಶಕ ಎಸ್.ಕೆ. ಭಗವಾನ್ ನಿಧನ – ಅಣ್ಣಾವ್ರ 30 ಚಿತ್ರಗಳಿಗೆ ನಿರ್ದೇಶನ ಮಾಡಿದ್ದ ಮಹಾನ್ ಪ್ರತಿಭೆ ಇನ್ನು ನೆನಪು ಮಾತ್ರ

ಸ್ಯಾಂಡಲ್ ವುಡ್ ನ ಹಿರಿಯ ನಿರ್ದೇಶಕ ಎಸ್.ಕೆ. ಭಗವಾನ್ ನಿಧನ – ಅಣ್ಣಾವ್ರ 30 ಚಿತ್ರಗಳಿಗೆ ನಿರ್ದೇಶನ ಮಾಡಿದ್ದ ಮಹಾನ್ ಪ್ರತಿಭೆ ಇನ್ನು ನೆನಪು ಮಾತ್ರ

ನ್ಯೂಸ್ ಆ್ಯರೋ : ಸ್ಯಾಂಡಲ್ ವುಡ್ ಹಿರಿಯ ನಿರ್ದೇಶಕ ಎಸ್.ಕೆ. ಭಗವಾನ್ ಇಂದು ಮುಂಜಾನೆ ಕೊನೆಯುಸಿರೆಳೆದಿದ್ದಾರೆ. ಅವರಿಗೆ 90 ವರ್ಷ ವಯಸ್ಸಾಗಿತ್ತು.

ವಯೋ ಸಹಜ ಖಾಯಿಲೆಯಿಂದ ಬಳಲುತ್ತಿದ್ದ ಭಗವಾನ್ ಇಂದು ಮುಂಜಾನೆ 6 ಗಂಟೆಗೆ ಸಾವನ್ನಪ್ಪಿದ್ದಾರೆ. ಅವರ ಸಾವಿಗೆ ಚಿತ್ರರಂಗ ಕಂಬನಿ ಮಿಡಿಯುತ್ತಿದೆ.

ದೊರೆ ಭಗವಾನ್ ಖ್ಯಾತಿಯ ಎಸ್.ಕೆ. ಭಗವಾನ್ 55 ಚಿತ್ರಗಳನ್ನು ನಿರ್ದೇಶನ ಮಾಡಿದ್ದಾರೆ. 24 ಕಾದಂಬರಿಗಳನ್ನು ಸಿನಿಮಾ ಮಾಡಿದ ಹೆಗ್ಗಳಿಕೆ ಅವರಿಗಿದೆ. ‘ಸಂಧ್ಯಾ ರಾಗ’, ‘ಕಸ್ತೂರಿ ನಿವಾಸ’, ‘ಹೊಸ ಬೆಳಕು’, ‘ಜೀವನ ಚೈತ್ರ’, ‘ಎರಡು ಕನಸು’, ‘ಗಿರಿಕನ್ಯೆ’ ಮೊದಲಾದ ಚಿತ್ರಗಳನ್ನು ನಿರ್ದೇಶನ ಮಾಡಿದ್ದಾರೆ.

ಎಸ್..ಕೆ. ಭಗವಾನ್ (ಶ್ರೀನಿವಾಸ ಕೃಷ್ಣ ಅಯ್ಯಂಗಾರ್ ಭಗವಾನ್) ಕನ್ನಡ ಚಿತ್ರರಂಗದ ಒಬ್ಬ ಹಿರಿಯ ನಿರ್ದೇಶಕರು ಹಾಗೂ ನಿರ್ಮಾಪಕರು. ಮತ್ತೊಬ್ಬ ಹಿರಿಯ ನಿರ್ದೇಶಕ ದೊರೈರಾಜ್ ಅವರೊಡನೆ ಅವರ ಜೋಡಿ ದೊರೈ-ಭಗವಾನ್ ಎಂದೇ ಪ್ರಸಿದ್ಧ. ಇವರಿಬ್ಬರೂ ಸೇರಿ 55 ಕನ್ನಡ ಚಿತ್ರಗಳನ್ನು ನಿರ್ದೇಶಿಸಿದ್ದಾರೆ. ಸದಭಿರುಚಿಯ ಚಿತ್ರಗಳನ್ನು ಮಾಡಿರುವ ಅವರು 24 ಕಾದಂಬರಿಗಳನ್ನು ಸಿನೆಮಾಗೆ ಅಳವಡಿಸಿದ್ದಾರೆ. ಪ್ರಸ್ತುತ ಅವರು ‘ಆದರ್ಶ ಸಿನೆಮಾ ಇನ್ಸ್ಟಿಟ್ಯೂಟ್‍ನ’ ಪ್ರಾಂಶುಪಾಲರಾಗಿದ್ದು, ಸಿನೆಮಾ ನಿರ್ದೇಶನದಿಂದ ನಿವೃತ್ತಿ ಹೊಂದಿದ್ದಾರೆ.

ಎಸ್.ಕೆ. ಭಗವಾನ್ ಅವರು 1933 ಜುಲೈ 3ರಂದು ತಮಿಳು ಬ್ರಾಹ್ಮಣ ಅಯ್ಯರ್ ಕುಟುಂಬದಲ್ಲಿ ಜನಿಸಿದರು. ಬೆಂಗಳೂರು ಹೈಸ್ಕೂಲಿನಲ್ಲಿ ವಿದ್ಯಾಭ್ಯಾಸ ಮಾಡಿದರು. ಯುವಕರಾಗಿದ್ದಾಗ ‘ಹಿರಣ್ಣಯ್ಯ ಮಿತ್ರ ಮಂಡಳಿ’ಯಲ್ಲಿ ನಾಟಕಗಳನ್ನು ಮಾಡುತ್ತಿದ್ದರು. 1956ರಲ್ಲಿ ಕಣಗಾಲ್ ಪ್ರಭಾಕರ ಶಾಸ್ತ್ರಿಗಳಿಗೆ ಸಹಾಯಕರಾಗಿ ಸಿನೆಮಾ ಜೀವನ ಆರಂಭಿಸಿದರು.
1966 ರಲ್ಲಿ ಎಂ.ಸಿ. ನರಸಿಂಹಮೂರ್ತಿಯವರೊಡಗೂಡಿ ಸಂಧ್ಯಾರಾಗ ಸಿನೆಮಾ ನಿರ್ದೇಶಿಸಿದರು. ನಂತರ ದೊರೈ-ಭಗವಾನ್ ಜೋಡಿಯು ರಾಜಕುಮಾರ್ ನಾಯಕನಟನಾಗಿರುವ ‘ಜೇಡರ ಬಲೆ’ ಚಿತ್ರವನ್ನು ನಿರ್ದೆಶಿಸಿತು. ಇದು ಕನ್ನಡದಲ್ಲಿ ಜೇಮ್ಸ್ ಬಾಂಡ್‌ ಮಾದರಿಯ ಮೊದಲ ಚಿತ್ರವಾಗಿತ್ತು. ಮುಂದಿನ ಅವರ ಎಲ್ಲಾ ಚಿತ್ರಗಳನ್ನು ಈ ನಿರ್ದೇಶಕದ್ವಯರು ಜೋಡಿಯಾಗೇ ನಿರ್ದೇಶಿಸಿದರು.

‘ಕಸ್ತೂರಿ ನಿವಾಸ’, ‘ಎರಡು ಕನಸು’, ‘ಬಯಲು ದಾರಿ’, ‘ಗಿರಿ ಕನ್ಯೆ’, ‘ಚಂದನದ ಗೊಂಬೆ’, ‘ವಸಂತ ಗೀತ’, ‘ಆಪರೇಷನ್ ಡೈಮಂಡ್ ರಾಕೆಟ್’, ‘ಹೊಸಬೆಳಕು’, ‘ಯಾರಿವನು’ ಸೇರಿದಂತೆ ಹಲವು ಯಶಸ್ವಿ ಸಿನಿಮಾಗಳನ್ನು ನಿರ್ದೇಶಿಸಿದರು. ಇವರ 30 ಚಿತ್ರಗಳಲ್ಲಿ ಡಾ.ರಾಜಕುಮಾರ್ ನಾಯಕ ನಟರಾಗಿ ಅಭಿನಯಿಸಿದ್ದಾರೆ. ಕೆಲವು ಚಿತ್ರಗಳಲ್ಲಿ ಅನಂತನಾಗ್ ಮತ್ತು ಲಕ್ಷ್ಮಿ ಮುಖ್ಯಪಾತ್ರಗಳಲ್ಲಿ ನಟಿಸಿದ್ದಾರೆ. ಎಸ್.ಕೆ ಭಗವಾನ್ ಸಿನಿಮಾ ರಂಗದಲ್ಲಿ 65 ವರ್ಷದ ಸುದೀರ್ಘ ಅನುಭವ ಹೊಂದಿದ್ದಾರೆ.

ದೊರೈರಾಜರ ಮರಣದ ನಂತರ ಇವರು ನಿರ್ದೇಶನದಿಂದ ನಿವೃತ್ತಿ ಹೊಂದಿದರು. 1993ರ ‘ಮಾಂಗಲ್ಯ ಬಂಧನ’ ದೊರೈ-ಭಗವಾನ್ ಜೋಡಿ ನಿರ್ದೇಶನದ ಕೊನೆಯ ಚಿತ್ರವಾಗಿದೆ.

Related post

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ : ಎಲ್ಲಾ ಕಛೇರಿಗಳಿಗೂ ಬೀಳುತ್ತೆ ಬೀಗ..!

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ…

ನ್ಯೂಸ್ ಆ್ಯರೋ : ಇನ್ನೆರಡೇ ದಿನಗಳು ಅಂದರೆ ಏಪ್ರಿಲ್ 26ರಂದು ಲೋಕಸಭಾ ಚುನಾವಣೆಗೆ ಮೊದಲ ಹಂತದ ಮತದಾನ ನಡೆಯಲಿದ್ದು, ಅಂದು ಎಲ್ಲಾ ಕಾರ್ಮಿಕರು, ಅರ್ಹ ಮತದಾರರು ಮತದಾನ ಮಾಡುವ…
ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮಲ್ಲಿ ಇಂದು ಚುರುಕುತನವನ್ನು ನೋಡಬಹುದು. ನಿಮ್ಮ ಆರೋಗ್ಯವು ಇಂದು ನಿಮ್ಮನ್ನು ಸಂಪೂರ್ಣವಾಗಿ ಬೆಂಬಲಿಸುತ್ತದೆ. ನಿಮ್ಮ ಹೂಡಿಕೆಗಳು ಬಗ್ಗೆ ನಿಮ್ಮ ಭವಿಷ್ಯದ ಗುರಿಗಳ ಬಗ್ಗೆ ರಹಸ್ಯಮಯವಾಗಿರಿ. ಮನೆ ಅಥವಾ ಸಾಮಾಜಿಕ…
ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮ ಕೋಪ ಕಡ್ಡಿಯನ್ನು ಗುಡ್ಡ ಮಾಡಬಹುದು-ಇದು ನಿಮ್ಮ ಕುಟುಂಬದ ಸದಸ್ಯರ ಅಸಮಾಧಾನಕ್ಕೆ ಕಾರಣವಾಗುತ್ತದೆ. ಕೋಪವನ್ನು ನಿಯಂತ್ರಣದಲ್ಲಿಡುವುದನ್ನು ಕಲಿತ ಆ ಮಹಾನ್ ಆತ್ಮಗಳೇ ಅದೃಷ್ಟಶಾಲಿಗಳು. ನಿಮ್ಮ ಕೋಪ ನಿಮ್ಮನ್ನು ಸುಡುವ…

Leave a Reply

Your email address will not be published. Required fields are marked *