Kantara : ಕೊನೆಗೂ ಬಗೆಹರಿದ ವರಾಹ ರೂಪಂ ಹಾಡಿನ ವಿವಾದ –  ಟ್ವೀಟ್ ಮಾಡಿದ ರಿಷಬ್ ಶೆಟ್ಟಿ ಹೇಳಿದ್ದೇನು..!?

Kantara : ಕೊನೆಗೂ ಬಗೆಹರಿದ ವರಾಹ ರೂಪಂ ಹಾಡಿನ ವಿವಾದ – ಟ್ವೀಟ್ ಮಾಡಿದ ರಿಷಬ್ ಶೆಟ್ಟಿ ಹೇಳಿದ್ದೇನು..!?

ನ್ಯೂಸ್ ಆ್ಯರೋ : ಭಾರೀ ಸುದ್ದಿಯಾಗಿದ್ದ ʼಕಾಂತಾರʼ ಚಿತ್ರದ ʼವರಾಹ ರೂಪಂʼ ಹಾಡಿನ ವಿವಾದ ಕೊನೆಗೂ ಬಗೆಹರಿದಿದ್ದು, ಶೀಘ್ರದಲ್ಲಿ ಹಾಡನ್ನು ಓಟಿಟಿಯಲ್ಲಿ ಪ್ರಸಾರ ಮಾಡುತ್ತೇವೆ ಎಂದು ನಟ, ನಿರ್ದೇಶಕ ರಿಷಬ್‌ ಶೆಟ್ಟಿ ಅವರು ಸ್ವತಃ ಟ್ವೀಟ್‌ ಮಾಡಿ ತಿಳಿಸಿದ್ದಾರೆ.



‘ವರಾಹ ರೂಪಂ’ ಹಾಡಿನ ವಿರುದ್ಧ ಕೇರಳದ ಮ್ಯೂಸಿಕ್‌ ಬ್ಯಾಂಡ್‌ ಥೈಕುಡಂ ಬ್ರಿಡ್ಜ್ ಸಲ್ಲಿಸಿದ್ದ ಅರ್ಜಿಗೆ ಸಂಬಂಧಿಸಿ ಕಲ್ಲಿಕೋಟೆ ಜಿಲ್ಲಾ ನ್ಯಾಯಾಲಯ ನೀಡಿದ್ದ ಆದೇಶಕ್ಕೆ ಕೇರಳ ಹೈಕೋರ್ಟ್‌ ಶುಕ್ರವಾರ ತಡೆಯಾಜ್ಞೆ ತಂದಿತ್ತು.



8ರವರೆಗೆ ತಡೆಯಾಜ್ಞೆ ನೀಡಿರುವ ಹೈಕೋರ್ಟ್‌ ನ್ಯಾ.ಪಿ. ಸೋಮರಾಜನ್‌ ಅವರು, ಹೊಂಬಾಳೆ ಫಿಲಂಸ್‌, ರಿಷಭ್‌ ಶೆಟ್ಟಿ, ಸಂಗೀತ ನಿರ್ದೇಶಕ ಬಿ.ಎಲ್‌.ಅಜನೀಶ್‌, ಪೃಥ್ವಿರಾಜ್‌ ಫಿಲಂಸ್‌, ಅಮೆಜಾನ್‌ ಸೆಲ್ಲರ್‌ ಸರ್ವಿಸ್‌ ಪ್ರೈವೇಟ್‌ ಲಿ., ಗೂಗಲ್‌ ಇಂಡಿಯಾ ಪ್ರಧಾನ ಕಚೇರಿ, ಸ್ಫೋಟಿಫೈ ಇಂಡಿಯಾ ಪ್ರೈ.ಲಿ. ಮತ್ತು ಪೃಥ್ವಿರಾಜ್‌ ಸುಕುಮಾರನ್‌ ಮತ್ತಿತರರಿಗೆ ನೋಟಿಸ್‌ ಕೂಡ ಜಾರಿ ಮಾಡಿತ್ತು.



ಇದೀಗ ವಿವಾದ ಬಗೆ ಹರಿದಿದ್ದು, ಈ ಬಗ್ಗೆ ಸ್ವತಃ ರಿಷಬ್‌ ಶೆಟ್ಟಿ ಅವರೇ ಟ್ವೀಟ್‌ ಮಾಡಿದ್ದಾರೆ. ದೈವಾನುದೈವಗಳ ಆಶೀರ್ವಾದ ಹಾಗು ಜನರ ಅಭಿಮಾನದಿಂದ ವರಾಹರೂಪಂ ಕೇಸ್ ಗೆದ್ದಿದ್ದೇವೆ. ಜನರ ಕೋರಿಕೆಯನ್ನು ಪರಿಗಣಿಸಿ ಅತಿ ಶೀಘ್ರದಲ್ಲಿ OTT platform ನಲ್ಲಿ ಹಾಡನ್ನು ಬದಲಾಯಿಸಲಿದ್ದೇವೆ ಎಂದಿದ್ದಾರೆ.

Related post

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ : ಎಲ್ಲಾ ಕಛೇರಿಗಳಿಗೂ ಬೀಳುತ್ತೆ ಬೀಗ..!

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ…

ನ್ಯೂಸ್ ಆ್ಯರೋ : ಇನ್ನೆರಡೇ ದಿನಗಳು ಅಂದರೆ ಏಪ್ರಿಲ್ 26ರಂದು ಲೋಕಸಭಾ ಚುನಾವಣೆಗೆ ಮೊದಲ ಹಂತದ ಮತದಾನ ನಡೆಯಲಿದ್ದು, ಅಂದು ಎಲ್ಲಾ ಕಾರ್ಮಿಕರು, ಅರ್ಹ ಮತದಾರರು ಮತದಾನ ಮಾಡುವ…
ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮಲ್ಲಿ ಇಂದು ಚುರುಕುತನವನ್ನು ನೋಡಬಹುದು. ನಿಮ್ಮ ಆರೋಗ್ಯವು ಇಂದು ನಿಮ್ಮನ್ನು ಸಂಪೂರ್ಣವಾಗಿ ಬೆಂಬಲಿಸುತ್ತದೆ. ನಿಮ್ಮ ಹೂಡಿಕೆಗಳು ಬಗ್ಗೆ ನಿಮ್ಮ ಭವಿಷ್ಯದ ಗುರಿಗಳ ಬಗ್ಗೆ ರಹಸ್ಯಮಯವಾಗಿರಿ. ಮನೆ ಅಥವಾ ಸಾಮಾಜಿಕ…
ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮ ಕೋಪ ಕಡ್ಡಿಯನ್ನು ಗುಡ್ಡ ಮಾಡಬಹುದು-ಇದು ನಿಮ್ಮ ಕುಟುಂಬದ ಸದಸ್ಯರ ಅಸಮಾಧಾನಕ್ಕೆ ಕಾರಣವಾಗುತ್ತದೆ. ಕೋಪವನ್ನು ನಿಯಂತ್ರಣದಲ್ಲಿಡುವುದನ್ನು ಕಲಿತ ಆ ಮಹಾನ್ ಆತ್ಮಗಳೇ ಅದೃಷ್ಟಶಾಲಿಗಳು. ನಿಮ್ಮ ಕೋಪ ನಿಮ್ಮನ್ನು ಸುಡುವ…

Leave a Reply

Your email address will not be published. Required fields are marked *