ಸಂಕ್ರಾಂತಿಯಂದು ಮನೆ ಮನೆಗೆ ಬರಲಿದೆ ಕಾಂತಾರ: ಸ್ಟಾರ್ ಸುವರ್ಣದಲ್ಲಿ ವಲ್ಡ್ ಟೆಲಿವಿಷನ್ ಪ್ರೀಮಿಯರ್

ಸಂಕ್ರಾಂತಿಯಂದು ಮನೆ ಮನೆಗೆ ಬರಲಿದೆ ಕಾಂತಾರ: ಸ್ಟಾರ್ ಸುವರ್ಣದಲ್ಲಿ ವಲ್ಡ್ ಟೆಲಿವಿಷನ್ ಪ್ರೀಮಿಯರ್

ನ್ಯೂಸ್ ಆ್ಯರೋ: ಕೆಲ‌ದಿನಗಳ ಹಿಂದೆ ಒಟಿಟಿಯಲ್ಲಿ ಪ್ರಸಾರವಾಗಿದ್ದ‌ 2022 ‌ರ ಕನ್ನಡದ ಸೂಪರ್‌ ಹಿಟ್‌ ಸಿನಿಮಾ ‘ಕಾಂತಾರ’ ಇದೀಗ‌ ಸ್ಟಾರ್ ಸುವರ್ಣ ಟಿವಿಯಲ್ಲಿ ಪ್ರಸಾರಗೊಳ್ಳಲಿದೆ.

ಹೊಸ ವರ್ಷದ ಮೊದಲ ಹಬ್ಬ ಸಂಕ್ರಾಂತಿಯಂದು ಅಂದರೆ ಜನವರಿ 15ರ ಸಂಜೆ 6ಗಂಟೆಗೆ ಸ್ಟಾರ್ ಸುವರ್ಣ ವಾಹಿನಿಯಲ್ಲಿ ಕಾಂತಾರ ಸಿನಿಮಾ ವರ್ಲ್ಡ್ ಟೆಲಿವಿಷನ್ ಪ್ರೀಮಿಯರ್ ಆಗಲಿದೆ.

ಕನ್ನಡದ ಸಿನಿಮಾ ಕೇವಲ ಕನ್ನಡಿಗರನ್ನು ಮಾತ್ರವಲ್ಲದೆ, ಪರಭಾಷಿಕರನ್ನೂ ಕಾಂತಾರ ಸೆಳೆದಿತ್ತು. ಆರಂಭದಲ್ಲಿ ಕನ್ನಡದಲ್ಲಿ ಬಿಡುಗಡೆಯಾದ ಈ ಸಿನಿಮಾ ಜನರ ಪ್ರತಿಕ್ರಿಯೆ ನೋಡಿ‌ ಚಿತ್ರತಂಡ ಪರಭಾಷೆಗಳಿಗೂ ಡಬ್‌ ಮಾಡಿತು.

ಕೋಟಿ ಕೋಟಿ ಕಮಾಯಿ ಮಾಡಿದ ಈ ಸಿನಿಮಾ ಒಟಿಟಿ ಅಂಗಳದಲ್ಲಿಯೂ ಸ್ಟ್ರೀಮ್‌ ಆಗಿ ಮೆಚ್ಚುಗೆ ಪಡೆಯಿತು. ಇದೀಗ ಈ ಸಿನಿಮಾ ಕಿರುತೆರೆ ಅಂಗಳಕ್ಕೂ ಆಗಮಿಸಲು ಸಜ್ಜಾಗಿದ್ದು, ಸ್ಟಾರ್ ಸುವರ್ಣ ಟಿವಿಯಲ್ಲಿ ಪ್ರಸಾರವಾಗಲಿದೆ.

ಸಿನಿಮಾ ರಿಲೀಸ್ ಆದ ದಿನದಿಂದ ಇಲ್ಲಿಯವರೆಗೆ ‘ಕಾಂತಾರ’ ಎಲ್ಲರ ಮನದಲ್ಲಿ ಅಚ್ಚಳಿಯದೆ ಉಳಿದಿದೆ. ರಿಷಬ್ ಶೆಟ್ಟಿ ನಿರ್ದೇಶನ‌ ಮಾಡಿ ಅಭಿನಯಿಸಿದ ಈ ಚಿತ್ರಕ್ಕೆ ಸಿಕ್ಕ ಮೆಚ್ಚುಗೆ ಅಷ್ಟಿಷ್ಟಲ್ಲ.

ಈಗಾಗಲೇ ಸ್ಟಾರ್ ಸುವರ್ಣ ವಾಹಿನಿಯು ವಿಭಿನ್ನ ರೀತಿಯ ಕಾರ್ಯಕ್ರಮಗಳನ್ನು ನೀಡುತ್ತಿದೆ. ಹಲವಾರು ಧಾರವಾಹಿಗಳು ಜನಮನ್ನಣೆಯನ್ನು ಗಳಿಸಿದೆ. ಅಷ್ಟೇ ಅಲ್ಲದೆ ವಾಹಿನಿಯಲ್ಲಿರುವ ಜೇಮ್ಸ್, ಲಕ್ಕಿಮ್ಯಾನ್, RRR ನಂತಹ ಸೂಪರ್ ಹಿಟ್ ಸಿನಿಮಾಗಳ ಸಾಲಿಗೆ ‘ಕಾಂತಾರ’ ಎಂಬ ದಂತಕಥೆಯೂ ಸೇರ್ಪಡೆಯಾಗಲಿದೆ.

ಸಿನಿಮಾದ ಮುಖ್ಯಭೂಮಿಕೆಯಲ್ಲಿ ರಿಷಬ್‌ ಶೆಟ್ಟಿ ಹಾಗೂ ಸಪ್ತಮಿ ಗೌಡ ನಟಿಸಿದ್ದಾರೆ. ದೀಪಕ್ ರೈ, ಗುರು ಸುನಿಲ್‌, ಪ್ರಕಾಶ್‌ ತುಮಿನಾಡು, ರಂಜನ್‌, ಕಿಶೋರ್‌, ಅಚ್ಯುತ್‌ ಕುಮಾರ್‌, ಪ್ರಮೋದ್‌ ಶೆಟ್ಟಿ, ಮಾನಸಿ ಸುಧೀರ್‌ ಸೇರಿ ಇನ್ನು ಅನೇಕರು ಅಭಿನಯಿಸಿದ್ದಾರೆ.

Related post

ದಿನ‌ ಭವಿಷ್ಯ 22-04-2024 ಸೋಮವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 22-04-2024 ಸೋಮವಾರ| ಇಂದಿನ ರಾಶಿಫಲ ಹೀಗಿದೆ..

ಮೇಷತುಂಬಾ ಚಿಂತೆ ಮಾನಸಿಕ ಶಾಂತಿಗೆ ಭಂಗ ತರಬಹುದು. ಆತಂಕ, ಉದ್ವೇಗದ ಪ್ರತೀ ತುಣುಕೂ ದೇಹದ ಮೇಲೆ ಪ್ರತಿಕೂಲ ಪರಿಣಾಮ ಬೀರುವುದರಿಂದ ಇದನ್ನು ತಡೆಯಿರಿ. ಬಯಸದೆ ಇರುವ ಯಾವುದೇ ಅತಿಥಿ…
Loksabha Election 2024 : ಇಂದು ಮೊದಲ ಹಂತದ ಮತದಾನ ಆರಂಭ – 102 ಕ್ಷೇತ್ರಗಳಲ್ಲಿ ಅದೃಷ್ಟ ಪರೀಕ್ಷೆಗಿಳಿದ 1625 ಅಭ್ಯರ್ಥಿಗಳು

Loksabha Election 2024 : ಇಂದು ಮೊದಲ ಹಂತದ ಮತದಾನ ಆರಂಭ…

ನ್ಯೂಸ್ ಆ್ಯರೋ : ದೇಶದ ಚುಕ್ಕಾಣಿ ಹಿಡಿಯಲು ಐದು ವರ್ಷಗಳಿಗೊಮ್ಮೆ ನಡೆಯುವ ಲೋಕಸಭಾ ಚುನಾವಣೆಯಲ್ಲಿ ಈ ಬಾರಿಯ 7 ಹಂತದ ಸಾರ್ವತ್ರಿಕ ಲೋಕಸಭೆ ಚುನಾವಣೆಗೆ ಶುಕ್ರವಾರ ಚಾಲನೆ ಸಿಗಲಿದ್ದು,…
ದಿನ‌ ಭವಿಷ್ಯ 19-04-2024 ಶುಕ್ರವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 19-04-2024 ಶುಕ್ರವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮ ಆಹಾರವನ್ನು ನಿಯಂತ್ರಣದಲ್ಲಿರಿಸಿಕೊಳ್ಳಿ ಮತ್ತು ಫಿಟ್ ಆಗಿ ಉಳಿಯಲು ವ್ಯಾಯಾಮ ಮಾಡಿ. ದಿನದಲ್ಲಿ ನಂತರ ಹಣಕಾಸು ಪರಿಸ್ಥಿತಿಗಳು ಸುಧಾರಿಸುತ್ತವೆ. ಒಂದು ಒಳ್ಳೆಯ ಸುದ್ದಿ ಪಡೆಯುವ ಸಾಧ್ಯತೆಯಿದ್ದು ಇದು ನಿಮ್ಮನ್ನಷ್ಟೇ…

Leave a Reply

Your email address will not be published. Required fields are marked *