ಹಸೆಮಣೆ ಏರಲು ಸಜ್ಜಾದ ನಟಿ ತ್ರಿಷಾ ಕೃಷ್ಣನ್ – ಮುದ್ದು ಮುಖದ ಚೆಲುವೆಯ ವರಿಸಲಿರೋ ವರ ಯಾರು?

ಹಸೆಮಣೆ ಏರಲು ಸಜ್ಜಾದ ನಟಿ ತ್ರಿಷಾ ಕೃಷ್ಣನ್ – ಮುದ್ದು ಮುಖದ ಚೆಲುವೆಯ ವರಿಸಲಿರೋ ವರ ಯಾರು?

ನ್ಯೂಸ್ ಆ್ಯರೋ : ‘ಪೊನ್ನಿಯನ್ ಸೆಲ್ವನ್’ ಚಿತ್ರದ ಯಶಸ್ಸಿನ ಬೆನ್ನಲ್ಲೇ ಸಾಲು ಸಾಲು ಬಿಗ್ ಪ್ರಾಜೆಕ್ಟ್‌ಗಳಿಗೆ ಸಹಿ ಹಾಕಿರುವ ನಟಿ ತ್ರಿಷಾ ಕೃಷ್ಣನ್ ಈಗ ತಮ್ಮ ಬದುಕಿನ ನಾಯಕನನ್ನೂ ಆಯ್ಕೆ ಮಾಡಿದ್ದಾರೆ.

ಕನ್ನಡದ ಪವರ್ ಚಿತ್ರದಲ್ಲಿ ಪುನೀತ್ ರಾಜ್ ಕುಮಾರ್ ಅವರ ನಾಯಕಿಯಾಗಿ ನಟಿಸಿದ್ದ ತ್ರಿಷಾ ತಮ್ಮ ಅಭಿಮಾನಿಗಳಿಗೆ ಸಿಹಿ ಸುದ್ದಿ ನೀಡಲು ಸಜ್ಜಾಗಿದ್ದಾರೆ. ಖ್ಯಾತ ಮಲಯಾಳಂ ಚಿತ್ರ ನಿರ್ಮಾಪಕರೊಂದಿಗೆ ಹೊಸ ಬಾಳಿಗೆ ಕಾಲಿಡಲು ಸಿದ್ದವಾಗಿರುವ ಸುದ್ದಿ ಈಗ ಕಾಲಿವುಡ್ ಗಲ್ಲಿಯಲ್ಲಿ ಸದ್ದು ಮಾಡುತ್ತಿದೆ.

ಮಲಯಾಳಂನ ಖ್ಯಾತ ನಿರ್ಮಾಪಕನ ಜೊತೆ ಎಂಗೇಜ್ ಆಗಿರುವ 40 ವರ್ಷದ ತ್ರಿಷಾ ಸದ್ಯದಲ್ಲೇ ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ. ಆದರೆ ವರ ಯಾರು ಎಂಬ ಬಗ್ಗೆ ಯಾವುದೇ ಮಾಹಿತಿ ಸಿಕ್ಕಿಲ್ಲ. ಗುರು ಹಿರಿಯರ ಸಮ್ಮತಿಯಿಂದಲೇ ಇವರಿಬ್ಬರ ಮದುವೆ ಫಿಕ್ಸ್ ಆಗಿದೆ.

ಈ ಹಿಂದೆ 2015ರಲ್ಲಿ ಉದ್ಯಮಿ ವರುಣ್ ಜೊತೆ ಅದ್ದೂರಿಯಾಗಿ ನಿಶ್ಚಿತಾರ್ಥ ಮಾಡಿಕೊಂಡಿದ್ದರು ತ್ರಿಷಾ. ಆದರೆ ಹಲವು ಭಿನ್ನಾಭಿಪ್ರಾಯಗಳಿಂದ ಈ ಸಂಬಂಧ ಮುರಿದು ಬಿದ್ದಿತ್ತು.

ಚಿತ್ರ ರಂಗದ ಉತ್ತುಂಗದಲ್ಲಿ ಇರುವಾಗಲೇ ನಟಿ ತ್ರಿಷಾ ಹಸೆಮಣೆ ಏರುತ್ತಿರುವುದು ಅಭಿಮಾನಿಗಳಿಗೂ ಖುಷಿಕೊಟ್ಟಿದೆ. ಆದರೆ ವರ ಯಾರು ಎನ್ನುವುದು ಇನ್ನೂ ಗೊತ್ತಾಗಿಲ್ಲ. ಶೀಘ್ರದಲ್ಲೇ ಉತ್ತರ ದೊರೆಯುವ ನಿರೀಕ್ಷೆಯಿಂದ ಅಭಿಮಾನಿಗಳು ಕಾಯುತ್ತಿದ್ದಾರೆ.

Related post

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ ಮದುವೆ

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ…

ನ್ಯೂಸ್ ಆರೋ: ಬರೋಬ್ಬರಿ 25 ವರ್ಷಗಳಿಂದ ಪ್ರೀತಿಸುತ್ತಿದ್ದ ಜೋಡಿಯೊಂದು ಮಂತ್ರ ಮಾಂಗಲ್ಯ ಮೂಲಕ ಮದುವೆಯಾಗುವ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಟ್ಟಿರುವ ಅಪರೂಪದ ಘಟನೆ ತುಮಕೂರಲ್ಲಿ ನಡೆದಿದೆ. ಹೌದು ಜನಾಂದೋಲನದಲ್ಲಿ…
ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು! ಏನಿದು ವಿಷಯ?

ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು!…

ನ್ಯೂಸ್ ಆರೋ: ಎಷ್ಟೋ ಬಾರಿ ನಾವು ಈ ಹೊಟೇಲ್ ಗಳಿಗೆ ಹೋದಾಗ, ಅಲ್ಲಿ ಜನರು ವೆಜ್ ಮಂಚೂರಿಯನ್ನು ಆರ್ಡರ್ ಮಾಡಿದರೆ ಚಿಕನ್ ಮಂಚೂರಿ ತಂದು ಟೇಬಲ್ ಮೇಲೆ ಇಟ್ಟಿರುವ…
ಮದ್ವೆಗೂ ಮುಂಚೆಯೇ ಐದು ಮಂದಿ ತಾರೆಯರ ಜೊತೆ ಡೇಟ್ ಮಾಡಿದ್ದ ವಿರಾಟ್..!

ಮದ್ವೆಗೂ ಮುಂಚೆಯೇ ಐದು ಮಂದಿ ತಾರೆಯರ ಜೊತೆ ಡೇಟ್ ಮಾಡಿದ್ದ ವಿರಾಟ್..!

ನ್ಯೂಸ್ ಆರೋ: ಬಾಲಿವುಡ್‌ನ ಖ್ಯಾತ ನಟಿ ಅನುಷ್ಕಾ ಶರ್ಮಾ ಹಾಗೂ ಟೀಂ ಇಂಡಿಯಾದ ಖ್ಯಾತ ಕ್ರಿಕೆಟಿಗ ವಿರಾಟ್ ಕೊಹ್ಲಿ ಅವರ ಪರಿಚಯ ಯಾರಿಗೂ ಅಗತ್ಯವಿಲ್ಲ. ಇತ್ತೀಚೆಗಷ್ಟೇ ಅಂದರೆ ಮೇ…

Leave a Reply

Your email address will not be published. Required fields are marked *