ದಾಂಪತ್ಯ ಜೀವನಕ್ಕೆ ಕಾಲಿಟ್ಟ ತಮಿಳು ನಟ ಅಶೋಕ್ ಸೆಲ್ವನ್- ನಟಿ ಕೀರ್ತಿ ಪಾಂಡಿಯನ್‌ – ಇದೇ 16ರಂದು ಅದ್ಧೂರಿ ಆರತಕ್ಷತೆ

ದಾಂಪತ್ಯ ಜೀವನಕ್ಕೆ ಕಾಲಿಟ್ಟ ತಮಿಳು ನಟ ಅಶೋಕ್ ಸೆಲ್ವನ್- ನಟಿ ಕೀರ್ತಿ ಪಾಂಡಿಯನ್‌ – ಇದೇ 16ರಂದು ಅದ್ಧೂರಿ ಆರತಕ್ಷತೆ

ನ್ಯೂಸ್‌ ಆ್ಯರೋ : ಕಳೆದ ಕೆಲ ವರ್ಷಗಳಿಂದ ಡೇಟಿಂಗ್‌ನಲ್ಲಿದ್ದ ತಮಿಳು ನಟ ಅಶೋಕ್ ಸೆಲ್ವನ್ ಹಾಗೂ ನಟಿ ಕೀರ್ತಿ ಪಾಂಡಿಯನ್ ಅವರು ನಿನ್ನೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.

ಕುಟುಂಬದವರ ಸಮ್ಮುಖದಲ್ಲಿ ತಿರುನೆಲ್ವೇಲಿ ಸಮೀಪದ ಇಟ್ಟೇರಿಯಲ್ಲಿ ಮದುವೆ ಅದ್ದೂರಿಯಾಗಿ ನಡೆದಿದೆ. ಈ ಜೋಡಿ ಮದುವೆಯ ಸುಂದರ ಕ್ಷಣಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ನೂತನ ದಂಪತಿಗೆ ಅಭಿಮಾನಿಗಳು ಶುಭಾಶಯಗಳನ್ನು ತಿಳಿಸಿದ್ದಾರೆ.

ಕಳೆದ ವರ್ಷಗಳಿಂದ ಪ್ರೀತಿಯಲ್ಲಿದ್ದ ಈ ಜೋಡಿ ಕೊನೆಗೂ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಮದುವೆಯಲ್ಲಿ ಕೀರ್ತಿ-ಅಶೋಕ್‌ ಲೈಟ್‌ ಬಣ್ಣದ ಉಡುಗೆಯಲ್ಲಿ ಮಿಂಚಿದ್ದಾರೆ.

ಇದೇ 16ರಂದು ಚಿತ್ರರಂಗದ ಗಣ್ಯರಿಗೆ, ಆಪ್ತರಿಗಾಗಿ ಚೆನ್ನೈನಲ್ಲಿ ಅಶೋಕ್ ಸೆಲ್ವನ್ ದಂಪತಿ ಆರತಕ್ಷತೆ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ. ಅಶೋಕ್ ಸೆಲ್ವನ್ 2013ರಲ್ಲಿ ‘ಸೂಧುಕುವ್ವಂ’ ಚಿತ್ರದ ಮೂಲಕ ಬಣ್ಣದ ಬದುಕಿಗೆ ಪಾದಾರ್ಪಣೆ ಮಾಡಿದರು. ಸಾಕಷ್ಟು ತಮಿಳು ಸಿನಿಮಾಗಳಲ್ಲಿ ನಟಿಸಿದ ಅಶೋಕ್, ಕಳೆದ ವರ್ಷ ಸಾಲು ಸಾಲು 7 ಸಿನಿಮಾಗಳು ಬಿಡುಗಡೆಯಾಗಿದೆ.

Related post

11 ವರ್ಷಗಳ ದಾಂಪತ್ಯದಲ್ಲಿ ಬಿರುಕು; ಡಿವೋರ್ಸ್‌ ವಿಚಾರಕ್ಕೆ ಟ್ರೋಲ್‌ ಮಾಡಿದವರಿಗೆ ಖ್ಯಾತ ಸಂಗೀತ ನಿರ್ದೇಶಕ ಹೇಳಿದಿಷ್ಟು…!

11 ವರ್ಷಗಳ ದಾಂಪತ್ಯದಲ್ಲಿ ಬಿರುಕು; ಡಿವೋರ್ಸ್‌ ವಿಚಾರಕ್ಕೆ ಟ್ರೋಲ್‌ ಮಾಡಿದವರಿಗೆ ಖ್ಯಾತ…

ನ್ಯೂಸ್ ಆರೋ: ತಮಿಳಿನ ಖ್ಯಾತ ಮ್ಯೂಸಿಕ್ ಡೈರೆಕ್ಟರ್ ಜಿ.ವಿ ಪ್ರಕಾಶ್ ಕುಮಾರ್ ಈಗ ಸುದ್ದಿಯಲ್ಲಿದ್ದು,11 ವರ್ಷಗಳ ದಾಂಪತ್ಯಕ್ಕೆ ಅಂತ್ಯ ಹಾಡಿದ ಬೆನ್ನಲ್ಲೇ ಅವರ ವೈಯುಕ್ತಿಕ ವಿಚಾರಗಳನ್ನು ಟ್ರೋಲ್ ಮಾಡಲಾಗುತ್ತಿದೆ.…
ದೇವರ ನಾಡಿನಲ್ಲಿ ಮತ್ತೊಮ್ಮೆ ವೈರಸ್ ಆತಂಕ; ಕೊರೊನಾ, ನಿಫಾ ಬಳಿಕ ಆತಂಕ ಹೆಚ್ಚಿಸಿದ ವೆಸ್ಟ್‌ನೈಲ್‌

ದೇವರ ನಾಡಿನಲ್ಲಿ ಮತ್ತೊಮ್ಮೆ ವೈರಸ್ ಆತಂಕ; ಕೊರೊನಾ, ನಿಫಾ ಬಳಿಕ ಆತಂಕ…

ನ್ಯೂಸ್ ಆರೋ: ಕೊರೋನಾ ವೈರಸ್ ನ ಆತಂಕ ಮುಗಿಯುತ್ತಿದ್ದಂತೆ ಇದೀಗ ಮತ್ತೆ ಹೊಸದೊಂದು ವೈರಸ್ ಪತ್ತೆಯಾಗಿದೆ. ದಿನಕಳೆದಂತೆ ನಾನಾರೀತಿಯ ವೈರಸ್‌ಗಳು ಸೃಷ್ಠಿಯಾಗುತ್ತಿದ್ದು ಆತಂಕ ಹೆಚ್ಚಾಗುತ್ತಿದೆ. ಕೆಲವು ದಿನಗಳ ಹಿಂದಷ್ಟೇ ನೆರೆಯ…
ಮನೆಕೆಲಸದಾಕೆಯಿಂದ ನಟಿ ಛಾಯಾ ಸಿಂಗ್ ತಾಯಿ ಮನೆಯಲ್ಲಿ ಚಿನ್ನಾಭರಣ ಕಳ್ಳತನ; 66 ಗ್ರಾಂ ಚಿನ್ನ, 150 ಗ್ರಾಂ ಬೆಳ್ಳಿ ವಶ

ಮನೆಕೆಲಸದಾಕೆಯಿಂದ ನಟಿ ಛಾಯಾ ಸಿಂಗ್ ತಾಯಿ ಮನೆಯಲ್ಲಿ ಚಿನ್ನಾಭರಣ ಕಳ್ಳತನ; 66 ಗ್ರಾಂ…

ನ್ಯೂಸ್ ಆರೋ: ಕನ್ನಡ ಹಾಗೂ ಪರಭಾಷೆಯ ಸಿನಿಮಾಗಳಲ್ಲೂ ಮಿಂಚಿರುವ ನಟಿ ಛಾಯಾ ಸಿಂಗ್ ಅವರ ತಾಯಿ ಮನೆಯಲ್ಲಿ ಕಳ್ಳತನ ನಡೆದಿದೆ. ಚಿನ್ನಾಭರಣ ಕಳುವಾಗಿರುವ ಬಗ್ಗೆ ಛಾಯಾ ಸಿಂಗ್ ತಾಯಿ…

Leave a Reply

Your email address will not be published. Required fields are marked *