ಮಹಾಭಾರತದ ‘ಶಕುನಿ ಮಾಮ’ ಇನ್ನಿಲ್ಲ – ಖ್ಯಾತ ನಟ ಗೂಫಿ ಪೈಂಟಲ್ ನಿಧನ

ಮಹಾಭಾರತದ ‘ಶಕುನಿ ಮಾಮ’ ಇನ್ನಿಲ್ಲ – ಖ್ಯಾತ ನಟ ಗೂಫಿ ಪೈಂಟಲ್ ನಿಧನ

ನ್ಯೂಸ್ ‌ಆ್ಯರೋ‌ : 1988ರಿಂದ 1990ರವರೆಗೆ ದೂರದರ್ಶನದಲ್ಲಿ ಪ್ರಸಾರವಾಗುತ್ತಿದ್ದ ಟಿವಿ ಸೀರಿಯಲ್ ‘ಮಹಾಭಾರತ’ದಲ್ಲಿ ಶಕುನಿ ಪಾತ್ರ ಮಾಡಿ ಎಲ್ಲರ ಗಮನ ಸೆಳೆದಿದ್ದ ನಟ ಗೂಫಿ ಪೈಂತಲ್ ಅವರು ನಿಧನ ಹೊಂದಿದ್ದಾರೆ. ಅವರಿಗೆ 79 ವರ್ಷ ವಯಸ್ಸಾಗಿತ್ತು. ಹಲವು ವರ್ಷಗಳಿಂದ ಗೂಫಿ ಅವರು ವಯೋ ಸಹಜ ಕಾಯಿಲೆಯಿಂದ ಬಳಲುತ್ತಿದ್ದರು.

ಮಹಾಭಾರತದಲ್ಲಿ ಶಕುನಿ ಪಾತ್ರಧಾರಿಯಾಗಿ ಗೂಫಿ ಪ್ರಾಮುಖ್ಯತೆ ಪಡೆದಿದ್ದರು. ಮಹಾಭಾರತದಲ್ಲಿ ʻಶಕುನಿ ಮಾಮಾʼ ಕುಳ್ಳಗಿನ ದೇಹ, ಒಂದು ಕಣ್ಣನ್ನು ಸಣ್ಣಗೆ ಮಾಡಿಕೊಂಡು ಕುಂಟುತ್ತಾ ಬರುವ ಆ ಪಾತ್ರವನ್ನು ಮರೆಯುವುದು ಅಸಾಧ್ಯವೆಂದೇ ಹೇಳಬೇಕು. ಇದೀಗ ಗುಫಿ ಪೈಂಟಲ್ ಬಾರದ ಲೋಕಕ್ಕೆ ಹೋಗಿದ್ದಾರೆ. ನಟ ಗುಫಿ ಪೈಂಟಲ್ ಅವರ ಸೋದರಳಿಯ ಹಿತೇನ್ ಪೈಂಟಲ್ ಮಾಧ್ಯಮಕ್ಕೆ ಈ ಬಗ್ಗೆ ಹೇಳಿಕೆ ನೀಡಿದ್ದಾರೆ ” ಗುಫಿ ಪೈಂಟಲ್ ದುರದೃಷ್ಟವಶಾತ್ ಜೂನ್‌ 5ರ ಬೆಳಗ್ಗೆ 9ಗಂಟೆ ಸುಮಾರಿಗೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಹೃದಯ ಮತ್ತು ಮೂತ್ರಪಿಂಡದ ಸಂಬಂಧಿತ ಸಮಸ್ಯೆಗಳಿಂದ ಆಸ್ಪತ್ರೆಗೆ ದಾಖಲಾಗಿದ್ದರುʼʼ ಎಂದು ಮಾಹಿತಿ ನೀಡಿದ್ದಾರೆ.

ಗೂಫಿ ಮೂಲತಃ ಪಂಜಾಬ್ ನವರು. ವೃತ್ತಿ ಬದುಕಿಗಾಗಿ ಮುಂಬೈಗೆ ಬಂದಿದ್ದರು. ಮುಂಬೈನಲ್ಲಿಯೇ ವಾಸವಿದ್ದು ಅನೇಕ ಸಿನಿಮಾ, ಧಾರಾವಾಹಿಗಳಲ್ಲಿ ಅಭಿನಯಿಸಿದ್ದರು. ಗುಫಿ ಪೈಂಟಲ್ ಹಿಂದಿ ಚಲನಚಿತ್ರಗಳ ಹೊರತಾಗಿ, 1980ರ ದಶಕದಲ್ಲಿ ಕೆಲವು ಟಿವಿ ಧಾರಾವಾಹಿಗಳಲ್ಲಿ ಕಾಣಿಸಿಕೊಂಡಿದ್ದರು. ನಟನೆಯ ಮೊದಲು ಎಂಜಿನಿಯರ್ ಆಗಿದ್ದರು. ಅವರು ತಮ್ಮ ವೃತ್ತಿಜೀವನವನ್ನು ಎಂಜಿನಿಯರಿಂಗ್‌ನಲ್ಲಿ ಪ್ರಾರಂಭಿಸಿದರು. 1975ರ ʻರಫೂ ಚಕ್ಕರ್ʼ ಸಿನಿಮಾ ಮೂಲಕ ಸಿನಿರಂಗಕ್ಕೆ ಪ್ರವೇಶ ಮಾಡಿದರು. ಶ್ರೀ ಚೈತನ್ಯ ಮಹಾಪ್ರಭು ಎಂಬ ಚಿತ್ರವನ್ನು ಸಹ ನಿರ್ದೇಶಿಸಿದ್ದಾರೆ.

ಜೂನ್ 5ರ ಸೋಮವಾರ ಸಂಜೆ 4 ಗಂಟೆಗೆ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ.

Related post

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ ಮದುವೆ

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ…

ನ್ಯೂಸ್ ಆರೋ: ಬರೋಬ್ಬರಿ 25 ವರ್ಷಗಳಿಂದ ಪ್ರೀತಿಸುತ್ತಿದ್ದ ಜೋಡಿಯೊಂದು ಮಂತ್ರ ಮಾಂಗಲ್ಯ ಮೂಲಕ ಮದುವೆಯಾಗುವ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಟ್ಟಿರುವ ಅಪರೂಪದ ಘಟನೆ ತುಮಕೂರಲ್ಲಿ ನಡೆದಿದೆ. ಹೌದು ಜನಾಂದೋಲನದಲ್ಲಿ…
ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು! ಏನಿದು ವಿಷಯ?

ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು!…

ನ್ಯೂಸ್ ಆರೋ: ಎಷ್ಟೋ ಬಾರಿ ನಾವು ಈ ಹೊಟೇಲ್ ಗಳಿಗೆ ಹೋದಾಗ, ಅಲ್ಲಿ ಜನರು ವೆಜ್ ಮಂಚೂರಿಯನ್ನು ಆರ್ಡರ್ ಮಾಡಿದರೆ ಚಿಕನ್ ಮಂಚೂರಿ ತಂದು ಟೇಬಲ್ ಮೇಲೆ ಇಟ್ಟಿರುವ…
ಮದ್ವೆಗೂ ಮುಂಚೆಯೇ ಐದು ಮಂದಿ ತಾರೆಯರ ಜೊತೆ ಡೇಟ್ ಮಾಡಿದ್ದ ವಿರಾಟ್..!

ಮದ್ವೆಗೂ ಮುಂಚೆಯೇ ಐದು ಮಂದಿ ತಾರೆಯರ ಜೊತೆ ಡೇಟ್ ಮಾಡಿದ್ದ ವಿರಾಟ್..!

ನ್ಯೂಸ್ ಆರೋ: ಬಾಲಿವುಡ್‌ನ ಖ್ಯಾತ ನಟಿ ಅನುಷ್ಕಾ ಶರ್ಮಾ ಹಾಗೂ ಟೀಂ ಇಂಡಿಯಾದ ಖ್ಯಾತ ಕ್ರಿಕೆಟಿಗ ವಿರಾಟ್ ಕೊಹ್ಲಿ ಅವರ ಪರಿಚಯ ಯಾರಿಗೂ ಅಗತ್ಯವಿಲ್ಲ. ಇತ್ತೀಚೆಗಷ್ಟೇ ಅಂದರೆ ಮೇ…

Leave a Reply

Your email address will not be published. Required fields are marked *