ಮಾ.ಆನಂದ್ ಪುತ್ರಿ ವಂಶಿಕಾ ಹೆಸರಲ್ಲಿ ಭಾರೀ ಮೋಸ – ಹಲವು ಮಕ್ಕಳ ಪಾಲಕರಿಂದ 40 ಲಕ್ಷ ರೂ. ಧೋಖಾ..!! ಏನಿದು ಪ್ರಕರಣ?

ಮಾ.ಆನಂದ್ ಪುತ್ರಿ ವಂಶಿಕಾ ಹೆಸರಲ್ಲಿ ಭಾರೀ ಮೋಸ – ಹಲವು ಮಕ್ಕಳ ಪಾಲಕರಿಂದ 40 ಲಕ್ಷ ರೂ. ಧೋಖಾ..!! ಏನಿದು ಪ್ರಕರಣ?

ನ್ಯೂಸ್ ಆ್ಯರೋ‌ : ನಟ, ನಿರೂಪಕ ಮಾಸ್ಟರ್ ಆನಂದ್ ಪುತ್ರಿ ವಂಶಿಕಾ (Vanishika Anjani Kashyapa) ಯಾರಿಗೆ ಗೊತ್ತಿಲ್ಲ ಹೇಳಿ? ಪಟ ಪಟ ಮಾತು, ಮನೋಜ್ಞ ಅಭಿನಯದ ಮೂಲಕ ಕನ್ನಡಿಗರ ಮನಸ್ಸು ಗೆದ್ದ ಪುಟಾಣಿ ಈಕೆ. ಇದೀಗ ಈಕೆಯ ಹೆಸರು ಹೇಳಿಕೊಂಡು ಹಣ ದೋಚುತ್ತಿದ್ದ ನಿಶಾ ನರಸಪ್ಪ ಎನ್ನುವವರನ್ನು ಪೊಲೀಸರು ಬಂಧಿಸಿದ್ದಾರೆ.

ಏನಿದು ಮೋಸದ ಜಾಲ?

ನಿಶಾ ನರಸಪ್ಪ

ವಂಶಿಕಾಗೆ ಅವಕಾಶ ಕೊಡಿಸಿದ ರೀತಿಯಲ್ಲಿಯೇ ನಿಮ್ಮ ಮಕ್ಕಳಿಗೂ ಅವಕಾಶ ಕೊಡಿಸುತ್ತೇವೆ. ನಿಮ್ಮ ಮಕ್ಕಳೂ ಟಿವಿ ಕಾರ್ಯಕ್ರಮಗಳಲ್ಲಿ ಕಾಣಿಸಿಕೊಳ್ಳುವಂತೆ ಮಾಡುತ್ತೇವೆ ಎಂದು ಹೇಳಿ ಪಾಲಕರಿಂದ ನಿಶಾ ಹಣ ದೋಚುತ್ತಿದ್ದರು ಎಂದು ಆರೋಪಿಸಲಾಗಿದೆ. ಈ ಬಗ್ಗೆ ವಂಶಿಕಾ ತಾಯಿ ಯಶಸ್ವಿನಿ ಆನಂದ್ ಮತ್ತು ಮೋಸ ಹೋದ ಪಾಲಕರು ಸದಾಶಿವನಗರ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

40 ಲಕ್ಷ ರೂ. ವಂಚನೆ

ಮಕ್ಕಳ ಟ್ಯಾಲೆಂಟ್ ಶೋ, ಮಾಡೆಲಿಂಗ್, ಇವೆಂಟ್ ಮ್ಯಾನೇಜ್‍ಮೆಂಟ್, ಮಕ್ಕಳ ಗ್ರೋಮಿಂಗ್ ತರಗತಿ ಇತ್ಯಾದಿ ನಡೆಸುವುದಾಗಿ ಹೇಳಿ ನಿಶಾ ಸುಮಾರು 40 ಲಕ್ಷ ರೂ. ವಸೂಲಿ ಮಾಡಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಮೋಸ ಹೋದವರು ಫೇಸ್ ಬುಕ್ ನಲ್ಲಿಯೂ ಬರೆದುಕೊಂಡಿದ್ದಾರೆ.

ನಿಶಾಗೆ ವಂಚನೆಯೇ ಉದ್ಯೋಗವಾಗಿತ್ತು. ವಂಶಿಕಾ ಮಾತ್ರವಲ್ಲ ಚಿತ್ರರಂಗದ ಹಲವರ ಹೆಸರಿನಲ್ಲಿ ಈಕೆ ಹಣ ಪಡೆಯುತ್ತಿದ್ದರು ಎನ್ನಲಾಗಿದೆ. ಇದೀಗ ಆಕೆಯನ್ನು ವಶಕ್ಕೆ ಪಡೆದು ಸದಾಶಿವನಗರ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Related post

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ ಮದುವೆ

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ…

ನ್ಯೂಸ್ ಆರೋ: ಬರೋಬ್ಬರಿ 25 ವರ್ಷಗಳಿಂದ ಪ್ರೀತಿಸುತ್ತಿದ್ದ ಜೋಡಿಯೊಂದು ಮಂತ್ರ ಮಾಂಗಲ್ಯ ಮೂಲಕ ಮದುವೆಯಾಗುವ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಟ್ಟಿರುವ ಅಪರೂಪದ ಘಟನೆ ತುಮಕೂರಲ್ಲಿ ನಡೆದಿದೆ. ಹೌದು ಜನಾಂದೋಲನದಲ್ಲಿ…
ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು! ಏನಿದು ವಿಷಯ?

ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು!…

ನ್ಯೂಸ್ ಆರೋ: ಎಷ್ಟೋ ಬಾರಿ ನಾವು ಈ ಹೊಟೇಲ್ ಗಳಿಗೆ ಹೋದಾಗ, ಅಲ್ಲಿ ಜನರು ವೆಜ್ ಮಂಚೂರಿಯನ್ನು ಆರ್ಡರ್ ಮಾಡಿದರೆ ಚಿಕನ್ ಮಂಚೂರಿ ತಂದು ಟೇಬಲ್ ಮೇಲೆ ಇಟ್ಟಿರುವ…
ಮದ್ವೆಗೂ ಮುಂಚೆಯೇ ಐದು ಮಂದಿ ತಾರೆಯರ ಜೊತೆ ಡೇಟ್ ಮಾಡಿದ್ದ ವಿರಾಟ್..!

ಮದ್ವೆಗೂ ಮುಂಚೆಯೇ ಐದು ಮಂದಿ ತಾರೆಯರ ಜೊತೆ ಡೇಟ್ ಮಾಡಿದ್ದ ವಿರಾಟ್..!

ನ್ಯೂಸ್ ಆರೋ: ಬಾಲಿವುಡ್‌ನ ಖ್ಯಾತ ನಟಿ ಅನುಷ್ಕಾ ಶರ್ಮಾ ಹಾಗೂ ಟೀಂ ಇಂಡಿಯಾದ ಖ್ಯಾತ ಕ್ರಿಕೆಟಿಗ ವಿರಾಟ್ ಕೊಹ್ಲಿ ಅವರ ಪರಿಚಯ ಯಾರಿಗೂ ಅಗತ್ಯವಿಲ್ಲ. ಇತ್ತೀಚೆಗಷ್ಟೇ ಅಂದರೆ ಮೇ…

Leave a Reply

Your email address will not be published. Required fields are marked *