11 ವರ್ಷಗಳ ದಾಂಪತ್ಯದಲ್ಲಿ ಬಿರುಕು; ಡಿವೋರ್ಸ್‌ ವಿಚಾರಕ್ಕೆ ಟ್ರೋಲ್‌ ಮಾಡಿದವರಿಗೆ ಖ್ಯಾತ ಸಂಗೀತ ನಿರ್ದೇಶಕ ಹೇಳಿದಿಷ್ಟು…!

11 ವರ್ಷಗಳ ದಾಂಪತ್ಯದಲ್ಲಿ ಬಿರುಕು; ಡಿವೋರ್ಸ್‌ ವಿಚಾರಕ್ಕೆ ಟ್ರೋಲ್‌ ಮಾಡಿದವರಿಗೆ ಖ್ಯಾತ ಸಂಗೀತ ನಿರ್ದೇಶಕ ಹೇಳಿದಿಷ್ಟು…!

ನ್ಯೂಸ್ ಆರೋ: ತಮಿಳಿನ ಖ್ಯಾತ ಮ್ಯೂಸಿಕ್ ಡೈರೆಕ್ಟರ್ ಜಿ.ವಿ ಪ್ರಕಾಶ್ ಕುಮಾರ್ ಈಗ ಸುದ್ದಿಯಲ್ಲಿದ್ದು,11 ವರ್ಷಗಳ ದಾಂಪತ್ಯಕ್ಕೆ ಅಂತ್ಯ ಹಾಡಿದ ಬೆನ್ನಲ್ಲೇ ಅವರ ವೈಯುಕ್ತಿಕ ವಿಚಾರಗಳನ್ನು ಟ್ರೋಲ್ ಮಾಡಲಾಗುತ್ತಿದೆ.

ಹೌದು ಬಾಲ್ಯದ ಗೆಳತಿ ಸೈಂಧವಿ ಜೊತೆ ಜಿ.ವಿ ಪ್ರಕಾಶ್ 2013ರಲ್ಲಿ ಮದುವೆಯಾದರು. ಈ ಜೋಡಿಗೆ ಅನ್ವಿ ಎಂಬ ಮಗಳಿದ್ದಾಳೆ. ಇದೇ ಮೇ 13ರಂದು ಡಿವೋರ್ಸ್ ಬಗ್ಗೆ ಸಂಗೀತ ನಿರ್ದೇಶಕ ಜಿ.ವಿ ಪ್ರಕಾಶ್ ಅಧಿಕೃತ ಮಾಹಿತಿ ನೀಡಿದ್ದರು.

ಈ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ವೈಯಕ್ತಿಕ ಜೀವನದ ಬಗ್ಗೆ ಹಲವು ಟೀಕೆಗಳು ಕೇಳಿ ಬಂದ ಬೆನ್ನಲ್ಲೇ ಸಂಗೀತ ನಿರ್ದೇಶಕ ಪ್ರತಿಕ್ರಿಯೆ ನೀಡಿದ್ದಾರೆ. ನಮ್ಮ ಖಾಸಗಿ ಜೀವನವನ್ನು ಗೌರವಿಸಿ ಎಂದು ವಿನಂತಿಸಿದ್ದಾರೆ.

ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಶೇರ್ ಮಾಡಿ, ಭಾವನೆಗಳನ್ನು ಗೌರವಿಸುವಂತೆ ಮನವಿ ಮಾಡಿದ್ದು, ಕಠಿಣ ಸಮಯವನ್ನು ಅರ್ಥಮಾಡಿಕೊಳ್ಳುವಂತೆಯೂ ನೆಟ್ಟಿಗರಲ್ಲಿ ಕೇಳಿಕೊಂಡಿದ್ದಾರೆ. ಪರಸ್ಪರ ಒಪ್ಪಿಗೆ ಮೇರೆಗೆ ತಾವು ಬೇರೆಯಾಗಲು ನಿರ್ಧರಿಸಿರುವುದಾಗಿ ತಿಳಿಸಿದ್ದಾರೆ.

“ಅನಗತ್ಯ ಹೇಳಿಕೆಗಳು ನಮ್ಮ ಮೇಲೆ ಪರಿಣಾಮ ಬೀರುತ್ತಿವೆ ಎಂಬುದನ್ನು ತಿಳಿಸಿದ್ದಾರೆ. ನೋವುಂಟು ಮಾಡುವ ಟೀಕೆಗಳು ಮತ್ತು ಟ್ರೋಲಿಂಗ್‌ಗಳನ್ನು ನಿಲ್ಲಿಸುವ ಸಲುವಾಗಿ ಪೋಸ್ಟ್ ಶೇರ್ ಮಾಡಿದ್ದಾರೆ. ಜನರು ಸರಿಯಾದ ಮಾಹಿತಿ ಅಥವಾ ತಿಳುವಳಿಕೆಯಿಲ್ಲದೇ ಇಬ್ಬರು ವ್ಯಕ್ತಿಗಳ ಪ್ರತ್ಯೇಕತೆಯ ಬಗ್ಗೆ ಚರ್ಚಿಸುವುದು ಅಸಮಾಧಾನಕರ ವಿಚಾರ. ಸೆಲೆಬ್ರಿಟಿ ಎಂಬ ಕಾರಣಕ್ಕಾಗಿ, ಖಾಸಗಿ ಜೀವನದ ಬಗ್ಗೆ ಟೀಕೆ ಮಾಡುವುದು ಸೂಕ್ತವಲ್ಲ. ತಮ್ಮ ಹೇಳಿಕೆಗಳು ಇತರರಿಗೆ ನೋವುಂಟು ಮಾಡಬಹುದು ಎಂಬುದನ್ನು ಮರೆತು ಬಿಡುವಷ್ಟು ತಮಿಳು ಜನರು ಘನತೆ ಕಳೆದುಕೊಂಡಿದ್ದಾರೆಯೇ?” ಎಂದು ಪ್ರಶ್ನಿಸಿದ್ದಾರೆ.

“ತಮ್ಮ ಡಿವೋರ್ಸ್ ಬಗ್ಗೆ ಅಸಲಿ ಕಾರಣವನ್ನು ನಮ್ಮ ಸ್ನೇಹಿತರು ಮತ್ತು ಕುಟುಂಬಕ್ಕೆ ತಿಳಿಸಲಾಗಿದೆ. ನಾವು ಈ ನಿರ್ಧಾರ ಕೈಗೊಳ್ಳುವ ಮೊದಲು ಸಾಕಷ್ಟು ಯೋಚಿಸಿದ್ದೇವೆ. ನಿಮ್ಮ ಟೀಕೆಗಳು ನೋವುಂಟು ಮಾಡುತ್ತವೆ ಎಂಬುದನ್ನು ನಿಮಗೆ ತಿಳಿಸಲು ನಾನು ಈ ಬರಹವನ್ನು ಬರೆಯುತ್ತಿದ್ದೇನೆ. ದಯವಿಟ್ಟು ಎಲ್ಲರ ಭಾವನೆಗಳ ಬಗ್ಗೆ ಗಮನವಿರಲಿ. ಸಹಾಯಕ್ಕಾಗಿ ನಾನು ಎಲ್ಲರಿಗೂ ಧನ್ಯವಾದ ಹೇಳಲು ಬಯಸುತ್ತೇನೆ” ಎಂದು ಬರೆದುಕೊಂಡಿದ್ದಾರೆ.

Related post

ದಿನ‌ ಭವಿಷ್ಯ 21-05-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 21-05-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ಮೇಷಸಂತೃಪ್ತಿಯ ಜೀವನಕ್ಕಾಗಿ ನಿಮ್ಮ ಮಾನಸಿಕ ದೃಢತೆಯನ್ನು ಸುಧಾರಿಸಿ. ನೀವು ಇಂದು ಗಣನೀಯ ಪ್ರಮಾಣದ ಹಣವನ್ನು ಸಹ ಹೊಂದಿರುತ್ತೀರಿ ಮತ್ತು ಅದರೊಂದಿಗೆ ಮನಸ್ಸಿನ ಶಾಂತಿ ಇರುತ್ತದೆ. ಸ್ನೇಹಿತರು ಸಂತೋಷದ ಸಂಜೆಗಾಗಿ…
ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ ಮದುವೆ

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ…

ನ್ಯೂಸ್ ಆರೋ: ಬರೋಬ್ಬರಿ 25 ವರ್ಷಗಳಿಂದ ಪ್ರೀತಿಸುತ್ತಿದ್ದ ಜೋಡಿಯೊಂದು ಮಂತ್ರ ಮಾಂಗಲ್ಯ ಮೂಲಕ ಮದುವೆಯಾಗುವ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಟ್ಟಿರುವ ಅಪರೂಪದ ಘಟನೆ ತುಮಕೂರಲ್ಲಿ ನಡೆದಿದೆ. ಹೌದು ಜನಾಂದೋಲನದಲ್ಲಿ…
ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು! ಏನಿದು ವಿಷಯ?

ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು!…

ನ್ಯೂಸ್ ಆರೋ: ಎಷ್ಟೋ ಬಾರಿ ನಾವು ಈ ಹೊಟೇಲ್ ಗಳಿಗೆ ಹೋದಾಗ, ಅಲ್ಲಿ ಜನರು ವೆಜ್ ಮಂಚೂರಿಯನ್ನು ಆರ್ಡರ್ ಮಾಡಿದರೆ ಚಿಕನ್ ಮಂಚೂರಿ ತಂದು ಟೇಬಲ್ ಮೇಲೆ ಇಟ್ಟಿರುವ…

Leave a Reply

Your email address will not be published. Required fields are marked *