ಪ್ರಭಾಸ್ ಮುಂದಿನ ಪ್ಯಾನ್ ಇಂಡಿಯಾ ಚಿತ್ರಕ್ಕೆ ಬೆಂಗಳೂರಿನ ಬೆಡಗಿ ನಾಯಕಿ – ಯಾರು ಆ ನಟಿ?

ಪ್ರಭಾಸ್ ಮುಂದಿನ ಪ್ಯಾನ್ ಇಂಡಿಯಾ ಚಿತ್ರಕ್ಕೆ ಬೆಂಗಳೂರಿನ ಬೆಡಗಿ ನಾಯಕಿ – ಯಾರು ಆ ನಟಿ?

ನ್ಯೂಸ್ ಆ್ಯರೋ‌ : ಟಾಲಿವುಡ್ ಸೂಪರ್ ಸ್ಟಾರ್ ಪ್ರಭಾಸ್ ಸದ್ಯ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಗುರುತಿಸಿಕೊಂಡಿದ್ದಾರೆ. ಬಾಹುಬಲಿ ಸರಣಿ ಬಳಿಕ ಅವರ ಖ್ಯಾತಿ ಇಡೀ ದೇಶಕ್ಕೆ ಹಬ್ಬಿದೆ. ಪ್ರಭಾಸ್ ಚಿತ್ರ ಸೆಟ್ಟೇರಿದಾಗಿನಿಂದಲೇ ಅಭಿಮಾನಿಗಳಲ್ಲಿ ನಿರೀಕ್ಷೆ ಮೂಡಿಸುತ್ತದೆ. ಸದ್ಯ ಬೇರೆ ಬೇರೆ ಚಿತ್ರಗಳಲ್ಲಿ ತೊಡಗಿಸಿಕೊಂಡಿರುವ ಪ್ರಭಾಸ್ ಹೊಸ ಚಿತ್ರದ ಅಪ್ ಡೇಟ್ ಹೊರ ಬಿದ್ದಿದೆ.

ಬೆಂಗಳೂರು ಮೂಲದ ನಟಿ ನಾಯಕಿ

ಟಾಲಿವುಡ್ ನಿರ್ದೇಶಕ ಮಾರುತಿ ಆ್ಯಕ್ಷನ್ ಕಟ್ ಹೇಳಲಿರುವ ಮುಂದಿನ ಚಿತ್ರ ‘ರಾಜಾ ಡಿಲಕ್ಸ್’ನಲ್ಲಿ ಪ್ರಭಾಸ್ ಗೆ ನಾಯಕಿಯಾಗಿ ಬೆಂಗಳೂರು ಮೂಲದ ನಿಧಿ ಅಗರ್ವಾಲ್ ಆಯ್ಕೆಯಾಗಿದ್ದಾರೆ. ಈಗಾಗಲೇ ತಮಿಳು, ತೆಲುಗು, ಹಿಂದಿ ಚಿತ್ರರಂಗಗಳಲ್ಲಿ ಗುರುತಿಸಿಕೊಂಡಿರುವ ನಿಧಿ ಮೊದಲ ಬಾರಿ ಪ್ರಭಾಸ್ ಜೊತೆ ಪ್ಯಾನ್ ಇಂಡಿಯಾ ಚಿತ್ರದಲ್ಲಿ ತೆರೆ ಹಂಚಿಕೊಳ್ಳಲಿದ್ದಾರೆ.

ಹಾರರ್-ಕಾಮಿಡಿ ಚಿತ್ರ ‘ರಾಜಾ ಡಿಲಕ್ಸ್’ನಲ್ಲಿ ಉತ್ತಮ ಲವ್ ಸ್ಟೋರಿಯೂ ಇದೆಯಂತೆ. ಆಗಸ್ಟ್ 17ರಂದು ನಿಧಿ ಹುಟ್ಟುಹಬ್ಬ ಹಿನ್ನಲೆಯಲ್ಲಿ ಮಾರುತಿ ‘ರಾಜಾ ಡಿಲಕ್ಸ್’ ನಾಯಕಿಯ ಘೋಷಣೆ ಮಾಡಿದ್ದಾರೆ.

ಸದ್ಯಕ್ಕಿಲ್ಲ

ಪ್ರಸ್ತುತ ಪ್ರಭಾಸ್ ದೀಪಿಕಾ ಪಡುಕೋಣೆ ಜೊತೆ ‘ಕಲ್ಕಿ 2898 ಎ.ಡಿ.’ ಚಿತ್ರದಲ್ಲಿ ನಟಿಸುತ್ತಿದ್ದು, ಬಳಿಕ ಕಾಲಿನ ಶಸ್ತ್ರಚಿಕಿತ್ಸೆಗೆ ಒಳಗಾಗಲಿದ್ದಾರೆ. ನಂತರ ‘ರಾಜಾ ಡಿಲಕ್ಸ್’ ಚಿತ್ರ ಕೈಗೆತ್ತಿಕೊಳ್ಳಲಿದ್ದಾರೆ ಎನ್ನಲಾಗಿದೆ.

ಹೈದರಾಬಾದ್ ನಲ್ಲಿ ಜನಿಸಿ ಬೆಂಗಳೂರಿನಲ್ಲಿ ಬೆಳೆದ ನಿಧಿ, 2017ರಲ್ಲಿ ‘ಮುನ್ನಾ ಮೈಕೆಲ್’ ಹಿಂದಿ ಚಿತ್ರದ ಮೂಲಕ ಸಿನಿಮಾ ರಂಗ ಪ್ರವೇಶಿಸಿದ್ದರು. 2018ರಲ್ಲಿ ಮೊದಲ ಬಾರಿ ತೆಲುಗಿನ ‘ಸವ್ಯಸಾಚಿ’ ಚಿತ್ರದಲ್ಲಿ ಅಭಿನಯಿಸಿದರು. 2021ರಲ್ಲಿ ‘ಈಶ್ವರನ್’ ಚಿತ್ರದ ಮೂಲ ತಮಿಳು ಚಿತ್ರರಂಗ ಪ್ರವೇಶಿಸಿದರು. ಸದ್ಯ ತೆಲುಗಿನ ‘ಹರಿ ಹರ ವೀರ ಮಲ್ಲು’ ಚಿತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

Related post

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ ಮದುವೆ

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ…

ನ್ಯೂಸ್ ಆರೋ: ಬರೋಬ್ಬರಿ 25 ವರ್ಷಗಳಿಂದ ಪ್ರೀತಿಸುತ್ತಿದ್ದ ಜೋಡಿಯೊಂದು ಮಂತ್ರ ಮಾಂಗಲ್ಯ ಮೂಲಕ ಮದುವೆಯಾಗುವ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಟ್ಟಿರುವ ಅಪರೂಪದ ಘಟನೆ ತುಮಕೂರಲ್ಲಿ ನಡೆದಿದೆ. ಹೌದು ಜನಾಂದೋಲನದಲ್ಲಿ…
ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು! ಏನಿದು ವಿಷಯ?

ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು!…

ನ್ಯೂಸ್ ಆರೋ: ಎಷ್ಟೋ ಬಾರಿ ನಾವು ಈ ಹೊಟೇಲ್ ಗಳಿಗೆ ಹೋದಾಗ, ಅಲ್ಲಿ ಜನರು ವೆಜ್ ಮಂಚೂರಿಯನ್ನು ಆರ್ಡರ್ ಮಾಡಿದರೆ ಚಿಕನ್ ಮಂಚೂರಿ ತಂದು ಟೇಬಲ್ ಮೇಲೆ ಇಟ್ಟಿರುವ…
ಮದ್ವೆಗೂ ಮುಂಚೆಯೇ ಐದು ಮಂದಿ ತಾರೆಯರ ಜೊತೆ ಡೇಟ್ ಮಾಡಿದ್ದ ವಿರಾಟ್..!

ಮದ್ವೆಗೂ ಮುಂಚೆಯೇ ಐದು ಮಂದಿ ತಾರೆಯರ ಜೊತೆ ಡೇಟ್ ಮಾಡಿದ್ದ ವಿರಾಟ್..!

ನ್ಯೂಸ್ ಆರೋ: ಬಾಲಿವುಡ್‌ನ ಖ್ಯಾತ ನಟಿ ಅನುಷ್ಕಾ ಶರ್ಮಾ ಹಾಗೂ ಟೀಂ ಇಂಡಿಯಾದ ಖ್ಯಾತ ಕ್ರಿಕೆಟಿಗ ವಿರಾಟ್ ಕೊಹ್ಲಿ ಅವರ ಪರಿಚಯ ಯಾರಿಗೂ ಅಗತ್ಯವಿಲ್ಲ. ಇತ್ತೀಚೆಗಷ್ಟೇ ಅಂದರೆ ಮೇ…

Leave a Reply

Your email address will not be published. Required fields are marked *