OMG 2 Movie : ಅಕ್ಷಯ್ ಕುಮಾರ್ ಗೆ ಕಪಾಳಮೋಕ್ಷ ಮಾಡಿದ್ರೆ 10 ಲಕ್ಷ ಬಹುಮಾನ – ಹಿಂದೂ ಸಂಘಟನೆಯ ಈ ಘೋಷಣೆ ಏಕೆ?

OMG 2 Movie : ಅಕ್ಷಯ್ ಕುಮಾರ್ ಗೆ ಕಪಾಳಮೋಕ್ಷ ಮಾಡಿದ್ರೆ 10 ಲಕ್ಷ ಬಹುಮಾನ – ಹಿಂದೂ ಸಂಘಟನೆಯ ಈ ಘೋಷಣೆ ಏಕೆ?

ನ್ಯೂಸ್ ‌ಆ್ಯರೋ‌ : ಇತ್ತೀಚೆಗಷ್ಟೇ ಬಿಡುಗಡೆಯಾದ ‘ಓ ಮೈ ಗಾಡ್ 2’ (OMG-2) ಸಿನಿಮಾದಲ್ಲಿ ಶಿವನ ಪಾತ್ರ ನಿರ್ವಹಿಸಿದ್ದ ಬಾಲಿವುಡ್ ನಟ ಅಕ್ಷಯ್ ಕುಮಾರ್ ವಿರುದ್ಧ ಹಿಂದೂಗಳ ಭಾವನೆಗಳಿಗೆ ಧಕ್ಕೆ ತಂದ ಆರೋಪ ಕೇಳಿಬಂದಿತ್ತು.

ಇದೀಗ ಅಕ್ಷಯ್ ಕುಮಾರ್ ಗೆ ಮತ್ತೊಂದು ಸಂಕಷ್ಟ ಎದುರಾಗಿದ್ದು, ಓ ಮೈ ಗಾಡ್ 2 ಚಿತ್ರದ ಬಗ್ಗೆ ವಿಪರೀತ ನಿರೀಕ್ಷೆ ಇಟ್ಟುಕೊಂಡಿರುವ ನಟ ಅಕ್ಷಯ್ ಕುಮಾರ್‌ಗೆ ಆರಂಭಿಕ ವಿಘ್ನಗಳು ಎದುರಾಗತೊಡಗಿವೆ.

ಹೌದು.. ಚಿತ್ರದಲ್ಲಿ ಹಿಂದೂಗಳ ಧಾರ್ಮಿಕ ಭಾವನೆಗೆ ಧಕ್ಕೆ ತರಲಾಗಿದೆ ಎಂದು ಆರೋಪಿಸಿರುವ ಹಿಂದೂ ಸಂಘಟನೆಯೊಂದು ನಟ ಅಕ್ಷಯ್ ಕುಮಾರ್ ಗೆ ಕಪಾಳಮೋಕ್ಷ ಮಾಡಲು ಕರೆ ನೀಡಿದೆ.

ಶಿವನ ಸಂದೇಶವಾಹಕನ ಪಾತ್ರದಲ್ಲಿ ನಟಿಸಿರುವ ಅಕ್ಷಯ್‌ ಕುಮಾರ್ ಜನರ ಭಾವನೆಗಳನ್ನು ಘಾಸಿಗೊಳಿಸಿದ್ದಾರೆ ಎಂದು ರಾಷ್ಟ್ರೀಯ ಹಿಂದೂ ಪರಿಷತ್ ಭಾರತ್ ಸಂಘಟನೆಯ ಅಧ್ಯಕ್ಷ ಗೋವಿಂದ್ ಪರಾಶರ್ ಆರೋಪಿಸಿದ್ದಾರೆ.

ಅಕ್ಷಯ್ ಕಪಾಳಕ್ಕೆ ಯಾರಾದರೂ ಬಾರಿಸಿದರೆ ತಾನು 10 ಲಕ್ಷ ರೂಗಳನ್ನು ಬಹುಮಾನವಾಗಿ ನೀಡುವುದಾಗಿ ಅವರು ಘೋಷಿಸಿದ್ದಾರೆ.

ಆಗ್ರಾದಲ್ಲಿ ಸಿನೆಮಾದ ವಿರುದ್ಧ ಹಿಂದುತ್ವವಾದಿ ಸಂಘಟನೆ ಗುರುವಾರ ಪ್ರತಿಭಟನೆ ನಡೆಸಿದ್ದು, ಅಕ್ಷಯ್ ಕುಮಾರ್ ಪ್ರತಿಕೃತಿ ದಹಿಸಿ ಆಕ್ರೋಶ ಹೊರ ಹಾಕಿದೆ. ಚಿತ್ರದ ಕೆಲವು ದೃಶ್ಯಗಳಿಗೆ ಆಕ್ಷೇಪ ವ್ಯಕ್ತಪಡಿಸಿದ ಗೋವಿಂದ್ ಪರಾಶರ್, ಇದು ದೇವರ ಪ್ರತಿಷ್ಠೆಗೆ ಧಕ್ಕೆ ತರುತ್ತಿದೆ ಎಂದಿದ್ದಾರೆ.

ಚಿತ್ರದ ಪೋಸ್ಟರ್‌ಗಳನ್ನು ಸುಟ್ಟು ಹಾಕಿ ಆಕ್ರೋಶ ಹೊರಹಾಕಿರುವ ಪ್ರತಿಭಟನಾಕಾರರು, ಚಿತ್ರವನ್ನು ನಿಷೇಧಿಸುವಂತೆ ಸೆನ್ಸಾರ್ ಮಂಡಳಿ ಮತ್ತು ಕೇಂದ್ರ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ. ಇಲ್ಲದಿದ್ದರೆ ದೊಡ್ಡ ಮಟ್ಟದ ಹೋರಾಟ ನಡೆಸುವ ಎಚ್ಚರಿಕೆ ನೀಡಿದ್ದಾರೆ.

Related post

ದಿನ‌ ಭವಿಷ್ಯ 21-05-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 21-05-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ಮೇಷಸಂತೃಪ್ತಿಯ ಜೀವನಕ್ಕಾಗಿ ನಿಮ್ಮ ಮಾನಸಿಕ ದೃಢತೆಯನ್ನು ಸುಧಾರಿಸಿ. ನೀವು ಇಂದು ಗಣನೀಯ ಪ್ರಮಾಣದ ಹಣವನ್ನು ಸಹ ಹೊಂದಿರುತ್ತೀರಿ ಮತ್ತು ಅದರೊಂದಿಗೆ ಮನಸ್ಸಿನ ಶಾಂತಿ ಇರುತ್ತದೆ. ಸ್ನೇಹಿತರು ಸಂತೋಷದ ಸಂಜೆಗಾಗಿ…
ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ ಮದುವೆ

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ…

ನ್ಯೂಸ್ ಆರೋ: ಬರೋಬ್ಬರಿ 25 ವರ್ಷಗಳಿಂದ ಪ್ರೀತಿಸುತ್ತಿದ್ದ ಜೋಡಿಯೊಂದು ಮಂತ್ರ ಮಾಂಗಲ್ಯ ಮೂಲಕ ಮದುವೆಯಾಗುವ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಟ್ಟಿರುವ ಅಪರೂಪದ ಘಟನೆ ತುಮಕೂರಲ್ಲಿ ನಡೆದಿದೆ. ಹೌದು ಜನಾಂದೋಲನದಲ್ಲಿ…
ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು! ಏನಿದು ವಿಷಯ?

ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು!…

ನ್ಯೂಸ್ ಆರೋ: ಎಷ್ಟೋ ಬಾರಿ ನಾವು ಈ ಹೊಟೇಲ್ ಗಳಿಗೆ ಹೋದಾಗ, ಅಲ್ಲಿ ಜನರು ವೆಜ್ ಮಂಚೂರಿಯನ್ನು ಆರ್ಡರ್ ಮಾಡಿದರೆ ಚಿಕನ್ ಮಂಚೂರಿ ತಂದು ಟೇಬಲ್ ಮೇಲೆ ಇಟ್ಟಿರುವ…

Leave a Reply

Your email address will not be published. Required fields are marked *