Oppenheimer : ರಿಲೀಸ್ ದಿನವೇ ಭಾರತದ ಬಾಕ್ಸಾಫೀಸ್ ಚಿಂದಿ – ನಿರ್ದೇಶಕ ಕ್ರಿಸ್ಟೋಫರ್ ನೋಲನ್ ಚಿತ್ರ ಗಳಿಸಿದ್ದೆಷ್ಟು ಕೋಟಿ ಗೊತ್ತಾ?

Oppenheimer : ರಿಲೀಸ್ ದಿನವೇ ಭಾರತದ ಬಾಕ್ಸಾಫೀಸ್ ಚಿಂದಿ – ನಿರ್ದೇಶಕ ಕ್ರಿಸ್ಟೋಫರ್ ನೋಲನ್ ಚಿತ್ರ ಗಳಿಸಿದ್ದೆಷ್ಟು ಕೋಟಿ ಗೊತ್ತಾ?

ನ್ಯೂಸ್ ಆ್ಯರೋ : ಸಿನಿಮಾದ ಕಂಟೆಂಟ್ ಮತ್ತು ಮೇಕಿಂಗ್ ಚೆನ್ನಾಗಿ ಇದ್ದರೆ ಖಂಡಿತವಾಗಿಯೂ ಜನರು ಚಿತ್ರಮಂದಿರಕ್ಕೆ ಬರುತ್ತಾರೆ. ಅದಕ್ಕೆ ಲೇಟೆಸ್ಟ್ ಉದಾಹರಣೆ ಎಂದರೆ, ಆಪನ್ ಹೈಮರ್ ಸಿನಿಮಾ ಸಾಕ್ಷಿಯಾಗಿದೆ. ಹಾಲಿವುಡ್‌ನ ಈ ಚಿತ್ರಕ್ಕಾಗಿ ಜನರು ಮುಗಿಬಿದ್ದು ಟಿಕೆಟ್ ಬುಕ್ ಮಾಡುತ್ತಿದ್ದಾರೆ.

ಹೌದು.. ಕ್ರಿಸ್ಟೋಫರ್ ನೋಲನ್ ನಿರ್ದೇಶನದ ‘ಆಪನ್ ಹೈಮರ್’ ಸಿನಿಮಾ ಜು.21ರಂದು ತೆರೆಗೆ ಅಪ್ಪಳಿಸಿದ್ದು, ಕೆಲವು ಕಡೆಗಳಲ್ಲಿ ಟಿಕೆಟ್ ಬೆಲೆ ದುಬಾರಿ ಆಗಿದೆ. ಚಿತ್ರದ ಟಿಕೆಟ್‌ಗೆ 2 ಸಾವಿರ ರೂ. ಕೊಟ್ಟು ಖರೀದಿ ಮಾಡ್ತಿದ್ದಾರೆ. ಈ ಮಧ್ಯೆ ಮೊದಲ ದಿನದ ಗಳಿಕೆಯ ಬಗ್ಗೆ ಮಾಹಿತಿ ಹೊರಬಿದ್ದಿದ್ದು, ‘ಆಪನ್ ಹೈಮರ್’ ಹೊಸ ದಾಖಲೆ ಬರೆದಿದೆ.

ಸುಮಾರು 13.80 ಕೋಟಿ ರೂ ಗಳಿಕೆಯನ್ನು ಭಾರತದ ಬಾಕ್ಸ್ ಆಫೀಸ್ ನಲ್ಲಿ ಈ ಸಿನಿಮಾ ಮಾಡಿದ್ದು, ಈ ವರ್ಷ ಈವರೆಗೆ ಬಿಡುಗುಡೆ ಆದ ಯಾವ ಹಾಲಿವುಡ್ ಸಿನಿಮಾ ಇಷ್ಟು ದೊಡ್ಡ ಆದಾಯ ಗಳಿಸಿಲ್ಲ.

ಈ ಮೂಲಕ ಹಾಲಿವುಡ್ ಸಿನಿಮಾಗಳನ್ನೆಲ್ಲ ಹಿಂದಿಕ್ಕಿ ಮೊದಲ ದಿನ ಅತಿ ಹೆಚ್ಚು ಗಳಿಕೆ ಮಾಡಿದ ಹಾಲಿವುಡ್ ಸಿನಿಮಾ ಆಗಿ ಹೊರಹೊಮ್ಮಿದೆ. ಇದೇ ವರ್ಷ ಬಿಡುಗಡೆ ಆಗಿದ್ದ ‘ಡಾಕ್ಟರ್ ಸ್ಟ್ರೇಂಜ್’, ‘ಆಂಟ್ಮ್ಯಾನ್’, ‘ಗಾರ್ಡಿಯನ್ಸ್ ಆಫ್ ದಿ ಗ್ಯಾಲೆಕ್ಸಿ’, ‘ಫಾಸ್ಟ್ ಆಂಡ್ ಫ್ಯೂರಿಯಸ್ 10’, ಎರಡು ವಾರಗಳ ಹಿಂದಷ್ಟೆ ಬಿಡುಗಡೆ ಆದ ‘ಮಿಷನ್ ಇಂಪಾಸಿಬಲ್ 7’ ಸಿನಿಮಾಗಳ ದಾಖಲೆಯನ್ನು ‘ಆಪನ್ಹೈಮರ್’ ಸಿನಿಮಾ ಮುರಿದಿದ್ದು ಹೊಸ ದಾಖಲೆ ಬರೆದಿದೆ.

ಹಾಲಿವುಡ್‌ನ ಪ್ರತಿಭಾನ್ವಿತ ಡೈರೆಕ್ಟರ್ ಕ್ರಿಸ್ಟೋಫರ್ ನೋಲನ್ ಅವರು ಅಭಿಮಾನಿಗಳಿಗೆ ಹೊಸತನ ನೀಡಿದ್ದು, ಮೇಕಿಂಗ್ ವಿಚಾರದಲ್ಲಿ ಅವರು ಎಂದಿಗೂ ಕಾಂಪ್ರಮೈಸ್ ಆಗದೇ ಹೊಸ ವಿಚಾರವನ್ನೇ ತಮ್ಮ ಸಿನಿಮಾದಲ್ಲಿ ತೋರಿಸಿದ್ದಾರೆ.

ಈ ಸಿನಿಮಾದಲ್ಲಿ ಕಿಲಿಯನ್ ಮರ್ಫಿ, ರಾಬರ್ಟ್ ಡೌನಿ ಜೂನಿಯರ್, ಎಮಿಲಿ ಬ್ಲಂಟ್, ಮ್ಯಾಟ್ ಡೇಮನ್ ಅನೇಕರು ಅಭಿನಯಿಸಿದ್ದಾರೆ. ಜೆ.ರಾಬರ್ಟ್ ‘ಆಪನ್ ಹೈಪರ್’ ಅವರ ಪಾತ್ರವನ್ನು ಕಿಲಿಯನ್ ಮರ್ಫಿ ನಿಭಾಯಿಸಿದ್ದು, ರಾಬರ್ಟ್ ಡೌನಿ ಜೂನಿಯರ್ ಅವರು ಡಿಫರೆಂಟ್ ಗೆಟಪ್‌ನಲ್ಲಿ ಕಾಣಿಸಿಕೊಂಡಿದ್ದಾರೆ. ಹಾಗಾಗಿ ಸಿನಿಮಾ ಬಗ್ಗೆ ಕೌತುಕ ಮೂಡಿದ್ದು, ಈಗಾಗಲೇ ಲಕ್ಷಾಂತರ ಟಿಕೆಟ್‌ಗಳು ಭಾರತದಲ್ಲಿ ಸೋಲ್ಡ್ ಔಟ್ ಆಗಿದೆ.

ಇನ್ನು 2ನೇ ಮಹಾಯುದ್ಧದಲ್ಲಿ ಅಮೆರಿಕವು ಜಪಾನ್ ಮೇಲೆ 2 ಬಾರಿ ಆಟಂ ಬಾಂಬ್ ಹಾಕಿತ್ತು. ಅದರ ಹಿಂದಿರುವ ವಿವರಗಳನ್ನು ‘ಆಪನ್ ಹೈಮರ್’ ಸಿನಿಮಾದಲ್ಲಿ ತೋರಿಸಲಾಗುತ್ತಿದೆ. ಬೆಂಗಳೂರು ಮಾತ್ರವಲ್ಲದೇ ದೆಹಲಿ, ಮುಂಬೈನಲ್ಲೂ ಈ ಚಿತ್ರದ ಕ್ರೇಜ್ ಜೋರಾಗಿದೆ. ಟಿಕೆಟ್‌ಗಳು ಸೋಲ್ಡ್ ಔಟ್ ಆಗಿದೆ. ಒಂದು ವರದಿ ಪ್ರಕಾರ, ಮುಂಬೈನ ಕೆಲವು ಮಲ್ಟಿಫ್ಲೆಕ್ಸ್‌ನಲ್ಲಿ ಮೊದಲ ದಿನದ ಟಿಕೆಟ್‌ಗಳು 2,450 ರೂಗೆ ಸೇಲ್ ಆಗಿದ್ದು, ಬೆಂಗಳೂರಿನ ಪಿವಿಆರ್‌ನಲ್ಲಿ 2 ಸಾವಿರಕ್ಕೆ ಟಿಕೆಟ್ ಸೇಲ್ ಆಗುತ್ತಿದೆ.

Related post

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ ಮದುವೆ

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ…

ನ್ಯೂಸ್ ಆರೋ: ಬರೋಬ್ಬರಿ 25 ವರ್ಷಗಳಿಂದ ಪ್ರೀತಿಸುತ್ತಿದ್ದ ಜೋಡಿಯೊಂದು ಮಂತ್ರ ಮಾಂಗಲ್ಯ ಮೂಲಕ ಮದುವೆಯಾಗುವ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಟ್ಟಿರುವ ಅಪರೂಪದ ಘಟನೆ ತುಮಕೂರಲ್ಲಿ ನಡೆದಿದೆ. ಹೌದು ಜನಾಂದೋಲನದಲ್ಲಿ…
ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು! ಏನಿದು ವಿಷಯ?

ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು!…

ನ್ಯೂಸ್ ಆರೋ: ಎಷ್ಟೋ ಬಾರಿ ನಾವು ಈ ಹೊಟೇಲ್ ಗಳಿಗೆ ಹೋದಾಗ, ಅಲ್ಲಿ ಜನರು ವೆಜ್ ಮಂಚೂರಿಯನ್ನು ಆರ್ಡರ್ ಮಾಡಿದರೆ ಚಿಕನ್ ಮಂಚೂರಿ ತಂದು ಟೇಬಲ್ ಮೇಲೆ ಇಟ್ಟಿರುವ…
ಮದ್ವೆಗೂ ಮುಂಚೆಯೇ ಐದು ಮಂದಿ ತಾರೆಯರ ಜೊತೆ ಡೇಟ್ ಮಾಡಿದ್ದ ವಿರಾಟ್..!

ಮದ್ವೆಗೂ ಮುಂಚೆಯೇ ಐದು ಮಂದಿ ತಾರೆಯರ ಜೊತೆ ಡೇಟ್ ಮಾಡಿದ್ದ ವಿರಾಟ್..!

ನ್ಯೂಸ್ ಆರೋ: ಬಾಲಿವುಡ್‌ನ ಖ್ಯಾತ ನಟಿ ಅನುಷ್ಕಾ ಶರ್ಮಾ ಹಾಗೂ ಟೀಂ ಇಂಡಿಯಾದ ಖ್ಯಾತ ಕ್ರಿಕೆಟಿಗ ವಿರಾಟ್ ಕೊಹ್ಲಿ ಅವರ ಪರಿಚಯ ಯಾರಿಗೂ ಅಗತ್ಯವಿಲ್ಲ. ಇತ್ತೀಚೆಗಷ್ಟೇ ಅಂದರೆ ಮೇ…

Leave a Reply

Your email address will not be published. Required fields are marked *