Shree Rapaka : ಭಾವೀ ಪತಿಯೊಂದಿಗೆ ದೇಹ ಹಂಚಿಕೊಳ್ಳಿ ಎಂದ ನಟಿ – ಆಕೆ ನೀಡಿದ ಕಾರಣ ನಿಜಕ್ಕೂ ಪರ್ಫೆಕ್ಟ್ ಅಂತೆ..!!

Shree Rapaka : ಭಾವೀ ಪತಿಯೊಂದಿಗೆ ದೇಹ ಹಂಚಿಕೊಳ್ಳಿ ಎಂದ ನಟಿ – ಆಕೆ ನೀಡಿದ ಕಾರಣ ನಿಜಕ್ಕೂ ಪರ್ಫೆಕ್ಟ್ ಅಂತೆ..!!

ನ್ಯೂಸ್ ಆ್ಯರೋ : ಭಾವೀ ಪತಿಯೊಂದಿಗೆ ದೇಹ ಹಂಚಿಕೊಳ್ಳಿ, ಆಗಲಷ್ಟೇ ಆತ ಸೆಕ್ಸ್ ಮಾಡಲು ಶಕ್ತನಾ ಅಥವಾ ಅಲ್ವಾ ಎಂಬುದು ತಿಳಿಯುತ್ತದೆ ಎಂದು ಹೇಳುವ ಮೂಲಕ ನಟಿ, ವಸ್ತ್ರ ವಿನ್ಯಾಸಕಿ ಶ್ರೀ ರಾಪಕಾ ವಿವಾದದ ಕಿಡಿ ಹೊತ್ತಿಸಿದ್ದಾರೆ.

ವಿವಾದಿತ ನಿರ್ದೇಶಕರೆಂದೇ ಖ್ಯಾತಿಯಾಗಿರುವ ರಾಮ್​ ಗೋಪಾಲ್​​ ವರ್ಮಾರ ನಗ್ನ ಸಿನಿಮಾದಲ್ಲಿ ಶ್ರೀ ರಾಪಕಾ ನಟಿಸಿದ್ದಾರೆ. ಅಲ್ಲದೆ, ದೇಶಮುದುರು, ಚಂದಮಾಮ ಮತ್ತು ನಚ್ಚವುಲೆ ಸೇರಿದಂತೆ ಕೆಲ ಸಿನಿಮಾಗಳಲ್ಲಿ ಫ್ಯಾಶನ್​ ಡಿಸೈನರ್​ ಆಗಿಯೂ ಕೆಲಸ ಮಾಡಿದ್ದಾರೆ.

ನಟಿ ಹೇಳಿದ್ದೇನು?
ಇತ್ತೀಚೆಗೆ ಸಂದರ್ಶನವೊಂದರಲ್ಲಿ ರಾಪಕಾ ಅವರು ಮದುವೆ ಹಾಗೂ ಸೆಕ್ಸ್ ಬಗ್ಗೆ ಮುಕ್ತವಾಗಿ ಮಾತನಾಡಿದ್ದಾರೆ. ಮದುವೆಗೂ ಮುಂಚೆ ಸೆಕ್ಸ್ ಮಾಡುವುದರಲ್ಲಿ ಯಾವುದೇ ತಪ್ಪಿಲ್ಲ ಎಂದಿದ್ದಾರೆ. ಅದಕ್ಕೆ ಕಾರಣವನ್ನೂ ನೀಡಿರುವ ರಾಪಕಾ, ಮದುವೆಯಾದ ಬಳಿಕ ನಿಮ್ಮ ಸಂಗಾತಿ ಗಂಡಸಲ್ಲ ಎಂದು ಗೊತ್ತಾದರೆ ನಿಮ್ಮ ಇಡೀ ಜೀವನವನ್ನು ಕಣ್ಣೀರಿನಲ್ಲಿ ಕಳೆಯಬೇಕಾಗುತ್ತದೆ ಎಂದರು. ಇಷ್ಟೇ ಅಲ್ಲದೆ, ತನ್ನ ಸ್ನೇಹಿತೆಯ ಜೀವನದಲ್ಲಿ ನಡೆದ ಘಟನೆಯನ್ನು ವಿವರಿಸಿ, ಉದಾಹರಣೆಯನ್ನೂ ನೀಡಿದರು.

ನನ್ನ ಸ್ನೇಹಿತೆ ವೈದ್ಯರೊಬ್ಬರನ್ನು ಮದುವೆ ಆಗಿದ್ದಳು. ಆಕೆಯ ಮೊಲದ ರಾತ್ರಿಯ ಸಮಯದಲ್ಲಿ ತನ್ನ ಗಂಡ ಓರ್ವ ಸಲಿಂಗಕಾಮಿ ಎಂಬುದು ಆಕೆಗೆ ತಿಳಿದು ಬಹಳ ದುಃಖಿತಳಾದಳು. ಹೀಗಾಗಿ ಮದುವೆಗೂ ಮುಂಚೆ ಸೆಕ್ಸ್​ ಮಾಡಿದರೆ ತನ್ನ ಸಂಗಾತಿ ಸಲಿಂಗಕಾಮಿಯೋ? ಇಲ್ಲವೋ? ಎಂಬುದು ತಿಳಿಯುತ್ತದೆ. ನನ್ನ ದೃಷ್ಟಿಕೋನದಲ್ಲಿ ಪ್ರತಿಯೊಬ್ಬ ವ್ಯಕ್ತಿಗೂ ಸೆಕ್ಸ್​ ತುಂಬಾ ಮುಖ್ಯ. ಅದನ್ನು ಕೊಡಲಾಗದವನ್ನು ಮದುವೆಯಾಗಿ ಪಶ್ಚಾತ್ತಾಪ ಪಡುವುದು ಸರಿಯಲ್ಲ ಎಂದು ರಾಪಕಾ ಹೇಳಿದ್ದಾರೆ.

ಸದ್ಯ ರಾಪಕಾ ಅವರ ಬೋಲ್ಡ್​ ಹೇಳಿಕೆ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದ್ದು, ಪರ-ವಿರೋಧ ಚರ್ಚೆಗೆ ದಾರಿ ಮಾಡಿಕೊಟ್ಟಿದೆ. ಕೆಲವರು ಆಕೆಯನ್ನು ಬೆಂಬಲಿಸುತ್ತಿದ್ದರೆ, ಇನ್ನು ಕೆಲವರು ಆಕೆಯ ಕಾಮೆಂಟ್‌ಗಳನ್ನು ವಿರೋಧಿಸುತ್ತಿದ್ದಾರೆ. ಸಿನಿಮಾದಲ್ಲಿ ಅವಕಾಶಗಳು ಸಿಗದಿದ್ದರೆ ಮುಖ್ಯವಾಹಿನಿಯಲ್ಲಿ ಇರಲು ಇಂತಹ ಕಾಮೆಂಟ್​ಗಳನ್ನು ಮಾಡುತ್ತಾರೆ ಎಂದು ಕೆಲವರು ಟೀಕಿಸಿದ್ದಾರೆ.

Related post

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ ಮದುವೆ

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ…

ನ್ಯೂಸ್ ಆರೋ: ಬರೋಬ್ಬರಿ 25 ವರ್ಷಗಳಿಂದ ಪ್ರೀತಿಸುತ್ತಿದ್ದ ಜೋಡಿಯೊಂದು ಮಂತ್ರ ಮಾಂಗಲ್ಯ ಮೂಲಕ ಮದುವೆಯಾಗುವ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಟ್ಟಿರುವ ಅಪರೂಪದ ಘಟನೆ ತುಮಕೂರಲ್ಲಿ ನಡೆದಿದೆ. ಹೌದು ಜನಾಂದೋಲನದಲ್ಲಿ…
ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು! ಏನಿದು ವಿಷಯ?

ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು!…

ನ್ಯೂಸ್ ಆರೋ: ಎಷ್ಟೋ ಬಾರಿ ನಾವು ಈ ಹೊಟೇಲ್ ಗಳಿಗೆ ಹೋದಾಗ, ಅಲ್ಲಿ ಜನರು ವೆಜ್ ಮಂಚೂರಿಯನ್ನು ಆರ್ಡರ್ ಮಾಡಿದರೆ ಚಿಕನ್ ಮಂಚೂರಿ ತಂದು ಟೇಬಲ್ ಮೇಲೆ ಇಟ್ಟಿರುವ…
ಮದ್ವೆಗೂ ಮುಂಚೆಯೇ ಐದು ಮಂದಿ ತಾರೆಯರ ಜೊತೆ ಡೇಟ್ ಮಾಡಿದ್ದ ವಿರಾಟ್..!

ಮದ್ವೆಗೂ ಮುಂಚೆಯೇ ಐದು ಮಂದಿ ತಾರೆಯರ ಜೊತೆ ಡೇಟ್ ಮಾಡಿದ್ದ ವಿರಾಟ್..!

ನ್ಯೂಸ್ ಆರೋ: ಬಾಲಿವುಡ್‌ನ ಖ್ಯಾತ ನಟಿ ಅನುಷ್ಕಾ ಶರ್ಮಾ ಹಾಗೂ ಟೀಂ ಇಂಡಿಯಾದ ಖ್ಯಾತ ಕ್ರಿಕೆಟಿಗ ವಿರಾಟ್ ಕೊಹ್ಲಿ ಅವರ ಪರಿಚಯ ಯಾರಿಗೂ ಅಗತ್ಯವಿಲ್ಲ. ಇತ್ತೀಚೆಗಷ್ಟೇ ಅಂದರೆ ಮೇ…

Leave a Reply

Your email address will not be published. Required fields are marked *