Chandrayan 3 : ಗೆದ್ದ ಎತ್ತಿನ ಬಾಲ ಹಿಡಿದ ನಟ ಪ್ರಕಾಶ್ ರಾಜ್ – ಈ ಬಾರಿ ನಟ ಇಸ್ರೋಗೆ ಹೇಳಿದ್ದೇನು? ನೆಟ್ಟಿಗರು ಹೇಗೆಲ್ಲಾ ಝಾಡಿಸಿದ್ರು ಗೊತ್ತಾ?

Chandrayan 3 : ಗೆದ್ದ ಎತ್ತಿನ ಬಾಲ ಹಿಡಿದ ನಟ ಪ್ರಕಾಶ್ ರಾಜ್ – ಈ ಬಾರಿ ನಟ ಇಸ್ರೋಗೆ ಹೇಳಿದ್ದೇನು? ನೆಟ್ಟಿಗರು ಹೇಗೆಲ್ಲಾ ಝಾಡಿಸಿದ್ರು ಗೊತ್ತಾ?

ನ್ಯೂಸ್ ಆ್ಯರೋ‌ : ಚಂದ್ರನ ದಕ್ಷಿಣ ಧ್ರುವದಲ್ಲಿ ಇಸ್ರೋ ಉಡಾವಣೆ ಮಾಡಿದ ಹೆಮ್ಮೆಯ ಚಂದ್ರಯಾನ-3 ನೌಕೆ ಯಶಸ್ವಿಯಾಗಿ ಲ್ಯಾಂಡಿಂಗ್ ಆಗುವ ಮೂಲಕ ಕೋಟ್ಯಾಂತರ ಭಾರತೀಯರ ಕನಸು ನನಸಾಗಿದೆ. ಈ ಮಧ್ಯೆ ಚಂದ್ರಯಾನ-3 ಬಗ್ಗೆ ಎಕ್ಸ್ (ಟ್ವಿಟರ್) ನಲ್ಲಿ ಪೋಸ್ಟ್ ಹಂಚಿಕೊಂಡಿದ್ದ ನಟ ಪ್ರಕಾಶ್ ರಾಜ್ ಟ್ರೋಲಿಗರಿಗೆ ಆಹಾರವಾಗುತ್ತಿದ್ದಾರೆ. ನೆಟ್ಟಿಗರು ಅಕ್ಷರಶಃ ಅವರನ್ನು ಬೆಂಡೆತ್ತುತ್ತಿದ್ದಾರೆ.

ಪ್ರಕಾಶ್ ರಾಜ್ ನೆಟ್ಟಿಗರ ಕೆಂಗಣ್ಣಿಗೆ ಗುರಿಯಾಗಿದ್ಯಾಕೆ?

ಆಗಸ್ಟ್ 20ರಂದು ಪ್ರಕಾಶ್ ರಾಜ್ ಹಂಚಿಕೊಂಡಿದ್ದ ಪೋಸ್ಟ್ ಮೂಲಕ ವಿವಾದ ಆರಂಭವಾಗಿತ್ತು. ಚಂದ್ರನ ಮೇಲೆ ಇಸ್ರೋ ಮಾಜಿ ಮುಖ್ಯಸ್ಥ ಕೆ.ಶಿವನ್ ಚಹಾ ಸುರಿಯುತ್ತಿರುವ ವ್ಯಂಗ್ಯ ಚಿತ್ರವನ್ನು ಹಂಚಿಕೊಂಡಿದ್ದರು. ಇದು ನೆಟ್ಟಿಗರನ್ನು ಕೆರಳಿಸಿತ್ತು. ಆಗಲೇ ನಟನ ವಿರುದ್ದ ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಲಾರಂಭಿಸಿದ್ದರು.

ಟ್ರೋಲ್, ವಿರೋಧ ಹೆಚ್ಚಾಗುತ್ತಿದ್ದಂತೆ ಸ್ಪಷ್ಟನೆ ನೀಡಿದ ಪ್ರಕಾಶ್ ರಾಜ್, ದ್ವೇಷಕ್ಕೆ ದ್ವೇಷ ಮಾತ್ರ ಕಾಣಿಸುತ್ತದೆ. ನಾನು ಮಾಡಿದ್ದು ಆರ್ಮ್ ಸ್ಟ್ರಾಂಗ್ ಕಾಲದ ಜೋಕ್. ನಿಮಗೆ ಜೋಕ್ ಅರ್ಥವಾಗದಿದ್ದರೆ ಅದು ನಿಮ್ಮ ಮೇಲೆಯೇ ನೀವು ಮಾಡಿದ ಜೋಕ್ ಆಗುತ್ತದೆ. ಬಾಲಿಶವಾಗಿ ವರ್ತಿಸುವುದನ್ನು ನಿಲ್ಲಿಸಿ ಎಂದು ಎಕ್ಸ್ ನಲ್ಲಿ ಬರೆದುಕೊಂಡಿದ್ದರು. ಇದು ವಿವಾದದ ಬೆಂಕಿಗೆ ಮತ್ತಷ್ಟು ತುಪ್ಪ ಸುರಿದಂತಾಗಿತ್ತು.

ವೈವಿಧ್ಯಮಯ ಟ್ರೋಲ್

ಇತ್ತ ನಿನ್ನೆ (ಆಗಸ್ಟ್ 23) ಚಂದ್ರಯಾನ ಯಶಸ್ವಿಯಾಗುತ್ತಿದ್ದಂತೆ ಪ್ರಕಾಶ್ ರಾಜ್ ಮತ್ತೆ ಪೋಸ್ಟ್ ಹಂಚಿಕೊಂಡು ಇಸ್ರೋಗೆ ಶುಭಾಶಯ ತಿಳಿಸಿದ್ದರು. ಭಾರತದ ಮನುಕುಲದ ಹೆಮ್ಮೆಯ ಕ್ಷಣ. ವಿಶಾಲ ವಿಶ್ವದ ಇನ್ನಷ್ಟು ವಿಸ್ಮಯಗಳನ್ನು ಅರಿಯಲು, ಸಂಭ್ರಮಿಸಲು ಇದು ದಾರಿಯಾಗಲಿ ಎಂದೆಲ್ಲ ಬರೆದುಕೊಂಡಿದ್ದರು. ಆದರೂ ನೆಟ್ಟಿಗರ ಕೋಪ ಕಡಿಮೆಯಾದಂತಿಲ್ಲ.

ಸಾಮಾಜಿಕ ಜಾಲತಾಣಗಳಲ್ಲಿ ಪ್ರಕಾಶ್ ರಾಜ್ ಅವರ ವಿವಿಧ ಡಿಸೈನ್ ಗಳ ಫೋಟೋ, ಕೆಲವು ಚಿತ್ರಗಳ ಸಾಂದರ್ಭಿಕ ಸನ್ನಿವೇಶಗಳ ವೀಡಿಯೋ ಶೇರ್ ಆಗುತ್ತಿದೆ. ಆ ಮೂಲಕ ಸತತ 3-4 ದಿನಗಳಿಂದ ಪ್ರಕಾಶ್ ರಾಜ್ ಸುದ್ದಿಯಲ್ಲಿದ್ದಾರೆ.

Related post

ದಿನ‌ ಭವಿಷ್ಯ 29-09-2023 ಶುಕ್ರವಾರ | ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 29-09-2023 ಶುಕ್ರವಾರ | ಇಂದಿನ ರಾಶಿಫಲ ಹೀಗಿದೆ..

ಮೇಷಮಕ್ಕಳ ನಿಮ್ಮ ಸಂಜೆಯನ್ನು ಉಲ್ಲಾಸಮಯವಾಗಿಸುತ್ತಾರೆ. ಮಂಕು ಕವಿದ ಮತ್ತು ಒತ್ತಡದ ದಿನಕ್ಕೆ ಮಂಗಳ ಹಾಡಲು ಒಂದು ಸಂತೋಷಕೂಟವನ್ನು ಯೋಜಿಸಿ. ಮಕ್ಕಳ ಸಾಂಗತ್ಯ ನಿಮ್ಮ ದೇಹವನ್ನು ಪುನಃಶ್ಚೇತನಗೊಳಿಸುತ್ತದೆ. ನೀವು ನಿಮ್ಮನ್ನು…
ಸುಬ್ರಹ್ಮಣ್ಯ : ವಿವಾಹಿತ ಮಹಿಳೆಯ ಜೊತೆ ಲಾಡ್ಜ್ ನಲ್ಲಿ ಕಾಮಕೇಳಿ, ಫೋಟೋ ವಿಡಿಯೋ ತೆಗೆದು ಬ್ಲ್ಯಾಕ್ ಮೇಲ್ – ಗ್ರಾಮ ಪಂಚಾಯತ್ ಮಾಜಿ ಸದಸ್ಯ ಪ್ರಶಾಂತ್ ಭಟ್ ಮಾಣಿಲ ಕಾರವಾರದಲ್ಲಿ ಅರೆಸ್ಟ್…!!

ಸುಬ್ರಹ್ಮಣ್ಯ : ವಿವಾಹಿತ ಮಹಿಳೆಯ ಜೊತೆ ಲಾಡ್ಜ್ ನಲ್ಲಿ ಕಾಮಕೇಳಿ, ಫೋಟೋ…

ನ್ಯೂಸ್ ಆ್ಯರೋ : ವಿವಾಹಿತ ಮಹಿಳೆಗೆ ಆರ್ಕೆಸ್ಟ್ರಾದಲ್ಲಿ ಅವಕಾಶ ಕೊಡಿಸುವುದಾಗಿ ನಂಬಿಸಿ ಲೈಂಗಿಕವಾಗಿ ಬಳಸಿಕೊಂಡಿದ್ದಲ್ಲದೇ ಆಕೆಯ ನಗ್ನ ಚಿತ್ರ ಸೆರೆಹಿಡಿದು ಹಲವರಿಗೆ ಶೇರ್ ಮಾಡಿದ್ದು, ಲಕ್ಷಾಂತರ ರೂಪಾಯಿ ಹಣ…
ಗೂಗಲ್‌ನಲ್ಲಿ ಆತ್ಮಹತ್ಯೆಗೆ ದಾರಿ ಹುಡುಕಾಡಿದ ಯುವಕ – ಸೈಬರ್‌ ಪೊಲೀಸರ ಬಲೆಗೆ ಬಿದ್ದವನ ಕಥೆ ಮುಂದೇನಾಯ್ತು ಗೊತ್ತಾ?

ಗೂಗಲ್‌ನಲ್ಲಿ ಆತ್ಮಹತ್ಯೆಗೆ ದಾರಿ ಹುಡುಕಾಡಿದ ಯುವಕ – ಸೈಬರ್‌ ಪೊಲೀಸರ ಬಲೆಗೆ…

ನ್ಯೂಸ್‌ ಆ್ಯರೋ : ಈ ಆಧುನಿಕ ಯುಗದಲ್ಲಿ ಎಲ್ಲನೂ ತಂತ್ರಜ್ಞಾನದ ಮೂಲಕವೇ ನಡೆಯುತ್ತದೆ. ಇನ್ನೂ ಗೂಗಲ್ ಮುಖೇನಾ ನಮಗೆ ಬೇಕಾದ ಎಲ್ಲ ವಿಷಯಗಳನ್ನು ತಿಳಿದುಕೊಳ್ಳಬಹುದಾಗಿದೆ. ಯಾವ ವಿಷಯದ ಬಗ್ಗೆನೂ…

Leave a Reply

Your email address will not be published. Required fields are marked *