OTTಗೆ ಬಂತು ಜಗ್ಗೇಶ್ ಅಭಿನಯದ ‘ರಾಘವೇಂದ್ರ ಸ್ಟೋರ್ಸ್’ ಚಿತ್ರ – ಬಿಡುಗಡೆಯಾದ 20 ದಿನಗಳಲ್ಲೇ ಒಟಿಟಿಯಲ್ಲಿ ಸ್ಟ್ರೀಮಿಂಗ್..!!

OTTಗೆ ಬಂತು ಜಗ್ಗೇಶ್ ಅಭಿನಯದ ‘ರಾಘವೇಂದ್ರ ಸ್ಟೋರ್ಸ್’ ಚಿತ್ರ – ಬಿಡುಗಡೆಯಾದ 20 ದಿನಗಳಲ್ಲೇ ಒಟಿಟಿಯಲ್ಲಿ ಸ್ಟ್ರೀಮಿಂಗ್..!!

ನ್ಯೂಸ್ ಆ್ಯರೋ‌ : ನವರಸ ನಾಯಕ ಜಗ್ಗೇಶ್ ಅಭಿನಯದ, ಸಂತೋಷ್ ಆನಂದ ರಾಮ್ ನಿರ್ದೇಶನದ ‘ರಾಘವೇಂದ್ರ ಸ್ಟೋರ್ಸ್’ ಚಿತ್ರವು ಎ. 28ರಂದು ಚಿತ್ರಮಂದಿರಗಳಲ್ಲಿ ತೆರೆ ಕಂಡಿತ್ತು. ಜಗ್ಗೇಶ್ ಅಭಿಮಾನಿಗಳ ಗಮನ ಸೆಳೆದ ಈ ಚಿತ್ರ ಇದೀಗ ಸದ್ದಿಲ್ಲದೆ ಓಟಿಟಿಯಲ್ಲಿ ಬಿಡುಗಡೆಯಾಗಿದೆ.

ಹೊಂಬಾಳೆ ಫಿಲಂಸ್ ಬ್ಯಾನರಿನಲ್ಲಿ ನಿರ್ಮಾಣವಾಗಿದ್ದ ಕಾಮಿಡಿ ಕಥಾ ಹಂದರ ಹೊಂದಿರುವ ಈ ಚಿತ್ರವು ಇದೀಗ ಅಮೆಜಾನ್ ಪ್ರೈಮ್ ನಲ್ಲಿ ರಿಲೀಸ್ ಆಗಿದೆ.

ಮದುವೆ ಆಗದ ವ್ಯಕ್ತಿಯೊಬ್ಬನ ಕಥೆಯನ್ನು ಸಂತೋಷ್ ಆನಂದ್ ರಾಮ್ ತೆರೆಗೆ ತಂದಿದ್ದರು. ಚಿತ್ರದಲ್ಲಿ ಜಗ್ಗೇಶ್ ಜೋಡಿಯಾಗಿ ಶ್ವೇತಾ ಶ್ರೀವಾಸ್ತವ್ ಕಾಣಿಸಿಕೊಂಡಿದ್ದು, ತಂದೆ ಪಾತ್ರದಲ್ಲಿ ದತ್ತಣ್ಣ, ಸ್ನೇಹಿತರ ಪಾತ್ರದಲ್ಲಿ ರವಿಶಂಕರ್‌ ಗೌಡ, ಮಿತ್ರಾ ಅಭಿನಯಿಸಿದ್ದಾರೆ. ಅಚ್ಯುತ್‌ ಕುಮಾರ್ ಕೂಡ ಮುಖ್ಯ ಪಾತ್ರದಲ್ಲಿ ಗಮನ ಸೆಳೆದಿದ್ದಾರೆ.

ಇನ್ನೂ ಹಲವು ಚಿತ್ರಮಂದಿರಗಳಲ್ಲಿ ಪ್ರದರ್ಶನ ಕಾಣುತ್ತಿರುವ ಚಿತ್ರವನ್ನು ಸದ್ದಿಲ್ಲದೆ ಓಟಿಟಿ ವೇದಿಕೆಯಲ್ಲಿ ಬಿಡುಗಡೆ ಮಾಡಿರುವುದು ಅಚ್ಚರಿಗೆ ಕಾರಣವಾಗಿದೆ. ಬಿಡುಗಡೆಯಾದ 20 ದಿನಗಳಲ್ಲೇ ಓಟಿಟಿಗೆ ಬಂದಿರುವುದು ವಿಶೇಷ.

Related post

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ : ಎಲ್ಲಾ ಕಛೇರಿಗಳಿಗೂ ಬೀಳುತ್ತೆ ಬೀಗ..!

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ…

ನ್ಯೂಸ್ ಆ್ಯರೋ : ಇನ್ನೆರಡೇ ದಿನಗಳು ಅಂದರೆ ಏಪ್ರಿಲ್ 26ರಂದು ಲೋಕಸಭಾ ಚುನಾವಣೆಗೆ ಮೊದಲ ಹಂತದ ಮತದಾನ ನಡೆಯಲಿದ್ದು, ಅಂದು ಎಲ್ಲಾ ಕಾರ್ಮಿಕರು, ಅರ್ಹ ಮತದಾರರು ಮತದಾನ ಮಾಡುವ…
ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮಲ್ಲಿ ಇಂದು ಚುರುಕುತನವನ್ನು ನೋಡಬಹುದು. ನಿಮ್ಮ ಆರೋಗ್ಯವು ಇಂದು ನಿಮ್ಮನ್ನು ಸಂಪೂರ್ಣವಾಗಿ ಬೆಂಬಲಿಸುತ್ತದೆ. ನಿಮ್ಮ ಹೂಡಿಕೆಗಳು ಬಗ್ಗೆ ನಿಮ್ಮ ಭವಿಷ್ಯದ ಗುರಿಗಳ ಬಗ್ಗೆ ರಹಸ್ಯಮಯವಾಗಿರಿ. ಮನೆ ಅಥವಾ ಸಾಮಾಜಿಕ…
ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮ ಕೋಪ ಕಡ್ಡಿಯನ್ನು ಗುಡ್ಡ ಮಾಡಬಹುದು-ಇದು ನಿಮ್ಮ ಕುಟುಂಬದ ಸದಸ್ಯರ ಅಸಮಾಧಾನಕ್ಕೆ ಕಾರಣವಾಗುತ್ತದೆ. ಕೋಪವನ್ನು ನಿಯಂತ್ರಣದಲ್ಲಿಡುವುದನ್ನು ಕಲಿತ ಆ ಮಹಾನ್ ಆತ್ಮಗಳೇ ಅದೃಷ್ಟಶಾಲಿಗಳು. ನಿಮ್ಮ ಕೋಪ ನಿಮ್ಮನ್ನು ಸುಡುವ…

Leave a Reply

Your email address will not be published. Required fields are marked *