ಮದ್ಯ ವ್ಯಸನಿಯಾಗಿದ್ದರು ರಜನಿಕಾಂತ್ – ಕುಡಿದ ಮತ್ತಿನಲ್ಲಿ ಮಧ್ಯರಾತ್ರಿ 2 ಗಂಟೆಗೆ ಏನಾಗಿತ್ತು? ತಲೈವಾ ಬೇಜಾರಾಗಿದ್ದೇಕೆ?

ಮದ್ಯ ವ್ಯಸನಿಯಾಗಿದ್ದರು ರಜನಿಕಾಂತ್ – ಕುಡಿದ ಮತ್ತಿನಲ್ಲಿ ಮಧ್ಯರಾತ್ರಿ 2 ಗಂಟೆಗೆ ಏನಾಗಿತ್ತು? ತಲೈವಾ ಬೇಜಾರಾಗಿದ್ದೇಕೆ?

ನ್ಯೂಸ್ ಆ್ಯರೋ‌ : ರಜನಿಕಾಂತ್ ಚಿತ್ರ ಘೋಷಣೆಯಾದರೆ ಸಾಕು ಅಭಿಮಾನಿಗಳಲ್ಲಿ ನಿರೀಕ್ಷೆ ಗರಿಗೆದರುತ್ತದೆ. ಬಿಡುಗಡೆ ದಿನಾಂಕ ಹತ್ತಿರವಾಗುತ್ತಿದ್ದಂತೆ ಇದು ದುಪ್ಪಟ್ಟಾಗುತ್ತದೆ. ‘ಜೈಲರ್’ ಚಿತ್ರವೂ ಇದಕ್ಕೆ ಹೊರತಲ್ಲ. ಈ ಚಿತ್ರ ಆಗಸ್ಟ್ 10ರಂದು ತೆರೆ ಕಾಣಲಿದ್ದು, ಪ್ರಮೋಷನ್ ಕಾರ್ಯ ಬಿರುಸಿನಿಂದ ನಡೆಯುತ್ತಿದೆ. ಈ ಚಿತ್ರದ ಕಾವಾಲ ಹಾಡು ಈಗಾಗಲೇ ಸೂಪರ್ ಹಿಟ್ ಆಗಿದ್ದು ಅಭಿಮಾನಿಗಳು ಬಿಡುಗಡೆಯನ್ನೇ ಎದುರು ನೋಡುತ್ತಿದ್ದಾರೆ.

ಮದ್ಯ ವ್ಯಸನದ ಬಗ್ಗೆ ತಲೈವಾ ಹೇಳಿದ್ದೇನು?

ಇತ್ತೀಚೆಗೆ ‘ಜೈಲರ್’ ಚಿತ್ರದ ಆಡಿಯೋ ಲಾಂಚ್ ಸಮಾರಂಭದ ವೇಳೆ ರಜನಿಕಾಂತ್ ಮುಕ್ತವಾಗಿ ಮಾತನಾಡಿದ್ದಾರೆ. ನನ್ನ ಜೀವನದಲ್ಲಿ ಮಾಡಿದ ದೊಡ್ಡ ತಪ್ಪು ಎಂದರೆ ಮದ್ಯ ವ್ಯಸನಿಯಾಗಿದ್ದು ಎಂದು ಹೇಳಿದ್ದಾರೆ.

ಕೆಲವು ವರ್ಷಗಳ ಹಿಂದೆ ಒಮ್ಮೆ ನಾನು ಮದ್ಯ ಸೇವಿಸಿ ಮಧ್ಯರಾತ್ರಿ 2 ಗಂಟೆಗೆ ಮನೆಗೆ ತೆರಳಿದ್ದೆ. ಆಗ ನನ್ನ ಸಹೋದರನೊಬ್ಬ ಮದ್ಯ ಸೇವನೆ ಹವ್ಯಾಸ ಒಳ್ಳೆಯದಲ್ಲ. ಇದು ಸಂಭ್ರಮಾಚರಣೆಗೆ ಸೀಮಿತವಾಗಿದ್ದರೆ ಒಳ್ಳೆಯದು ಎಂದಿದ್ದರು. ಆಗಲೇ ನಾನು ಮದ್ಯದ ದಾಸ್ಯದಿಂದ ಹೊರ ಬಂದಿದ್ದರೆ ಇನ್ನೂ ಹೆಚ್ಚಿನದನ್ನು ಸಾಧಿಸುತ್ತಿದ್ದೆ ಎಂದು ತಲೈವಾ ಹೇಳಿಕೊಂಡಿದ್ದಾರೆ.

ಸದ್ಯ ರಜನಿಕಾಂತ್ ಮದ್ಯ ಸೇವನೆಯನ್ನು ಸಂಪೂರ್ಣ ತ್ಯಜಿಸಿದ್ದಾರೆ. ಅವರು ಈಗ ಬಿಡುವಿನ ಸಮಯವನ್ನು ಆಧ್ಯಾತ್ಮಿಕತೆಗೆ ಮೀಸಲಿಡುತ್ತಾರೆ ಎಂದು ಅವರ ಆಪ್ತ ಮೂಲಗಳು ತಿಳಿಸಿವೆ.

ನೆಲ್ಸನ್ ದಿಲೀಪ್ ಕುಮಾರ್ ಆ್ಯಕ್ಷನ್ ಕಟ್ ಹೇಳಿರುವ ‘ಜೈಲರ್’ ಚಿತ್ರದಲ್ಲಿ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್, ಮಾಲಿವುಡ್ ಸೂಪರ್ ಸ್ಟಾರ್ ಮೋಹನ್ ಲಾಲ್ ಬಣ್ಣ ಹಚ್ಚಿದ್ದಾರೆ. ತಮನ್ನಾ, ರಮ್ಯಾ ಕೃಷ್ಣ ಮತ್ತಿತರರು ಮುಖ್ಯ ಪಾತ್ರದಲ್ಲಿರುವ ಈ ಚಿತ್ರಕ್ಕೆ ಅನಿರುದ್ದ್ ರವಿಚಂದರ್ ಸಂಗೀತ ನೀಡಿದ್ದಾರೆ.

Related post

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ ಮದುವೆ

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ…

ನ್ಯೂಸ್ ಆರೋ: ಬರೋಬ್ಬರಿ 25 ವರ್ಷಗಳಿಂದ ಪ್ರೀತಿಸುತ್ತಿದ್ದ ಜೋಡಿಯೊಂದು ಮಂತ್ರ ಮಾಂಗಲ್ಯ ಮೂಲಕ ಮದುವೆಯಾಗುವ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಟ್ಟಿರುವ ಅಪರೂಪದ ಘಟನೆ ತುಮಕೂರಲ್ಲಿ ನಡೆದಿದೆ. ಹೌದು ಜನಾಂದೋಲನದಲ್ಲಿ…
ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು! ಏನಿದು ವಿಷಯ?

ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು!…

ನ್ಯೂಸ್ ಆರೋ: ಎಷ್ಟೋ ಬಾರಿ ನಾವು ಈ ಹೊಟೇಲ್ ಗಳಿಗೆ ಹೋದಾಗ, ಅಲ್ಲಿ ಜನರು ವೆಜ್ ಮಂಚೂರಿಯನ್ನು ಆರ್ಡರ್ ಮಾಡಿದರೆ ಚಿಕನ್ ಮಂಚೂರಿ ತಂದು ಟೇಬಲ್ ಮೇಲೆ ಇಟ್ಟಿರುವ…
ಮದ್ವೆಗೂ ಮುಂಚೆಯೇ ಐದು ಮಂದಿ ತಾರೆಯರ ಜೊತೆ ಡೇಟ್ ಮಾಡಿದ್ದ ವಿರಾಟ್..!

ಮದ್ವೆಗೂ ಮುಂಚೆಯೇ ಐದು ಮಂದಿ ತಾರೆಯರ ಜೊತೆ ಡೇಟ್ ಮಾಡಿದ್ದ ವಿರಾಟ್..!

ನ್ಯೂಸ್ ಆರೋ: ಬಾಲಿವುಡ್‌ನ ಖ್ಯಾತ ನಟಿ ಅನುಷ್ಕಾ ಶರ್ಮಾ ಹಾಗೂ ಟೀಂ ಇಂಡಿಯಾದ ಖ್ಯಾತ ಕ್ರಿಕೆಟಿಗ ವಿರಾಟ್ ಕೊಹ್ಲಿ ಅವರ ಪರಿಚಯ ಯಾರಿಗೂ ಅಗತ್ಯವಿಲ್ಲ. ಇತ್ತೀಚೆಗಷ್ಟೇ ಅಂದರೆ ಮೇ…

Leave a Reply

Your email address will not be published. Required fields are marked *