ಸೂಪರ್ ಸ್ಟಾರ್ ರಜನಿಕಾಂತ್ ಅವರಿಗೆ 72ನೇ ಜನ್ಮದಿನದ ಸಂಭ್ರಮ – ತಲೈವಾ ಹುಟ್ಟುಹಬ್ಬದಂದೇ ಬಾಬಾ ಸಿನಿಮಾ ಮರುಬಿಡುಗಡೆ

ಸೂಪರ್ ಸ್ಟಾರ್ ರಜನಿಕಾಂತ್ ಅವರಿಗೆ 72ನೇ ಜನ್ಮದಿನದ ಸಂಭ್ರಮ – ತಲೈವಾ ಹುಟ್ಟುಹಬ್ಬದಂದೇ ಬಾಬಾ ಸಿನಿಮಾ ಮರುಬಿಡುಗಡೆ

ನ್ಯೂಸ್ ಆ್ಯರೋ : ಸೂಪರ್ ಸ್ಟಾರ್ ರಜನಿಕಾಂತ್ ಅವರಿಂದು 72ನೇ ಜನ್ಮದಿನ (Rajinikanth turns 72) ಆಚರಿಸಿಕೊಳ್ಳುತ್ತಿದ್ದು, ಸಾಮಾಜಿಕ‌ ಜಾಲತಾಣದಾದ್ಯಂತ ಅವರಿಗೆ ಹುಟ್ಟುಹಬ್ಬಕ್ಕೆ ಭಾರೀ ಶುಭ ಹಾರೈಕೆಗಳು ವ್ಯಕ್ತವಾಗುತ್ತಿವೆ.

ತಲೈವಾ ಜನ್ಮದಿನದಂದೇ ಅವರ ಸೂಪರ್ ಹಿಟ್ ಚಿತ್ರ ‘ಬಾಬಾ’ ಸಿನಿಮಾವನ್ನು ಮರು ಬಿಡುಗಡೆ ಮಾಡಲಾಗಿದೆ. ಚಿತ್ರವನ್ನು ಥೀಯಟರ್ ನಲ್ಲಿ ನೋಡಲು ಅಭಿಮಾನಗಳು ಕಾತುರರಾಗಿದ್ದಾರೆ. ರಜನಿಕಾಂತ್ ಅವರ ಆಪ್ತರು, ಸೆಲೆಬ್ರೆಟಿಗಳು ಕೂಡ ಹುಟ್ಟುಹಬ್ಬಕ್ಕೆ ಶುಭಾಶಯಗಳನ್ನು ತಿಳಿಸುತ್ತಾ, ಅವರ ಮುಂದಿನ ಸಿನಿಮಾಗಳಿಗೆ ಶುಭ ಹಾರೈಸಿದ್ದಾರೆ.

ಚಿತ್ರರಂಗದಲ್ಲಿ ತಮ್ಮದೆ ವಿಭಿನ್ನ ಶೈಲಿಯಲ್ಲಿಅಭಿನಯಿಸಿ 5 ದಶಕಗಳಿಂದಲೂ ಜನರನ್ನು ಮನರಂಜಿಸುತ್ತಿದ್ದಾರೆ. ರಜನಿಕಾಂತ್ ಅವರಿಗೆ ವಯಸ್ಸಾಗುತ್ತಿದ್ದರೂ ಅವರ ಉತ್ಸಾಹ ಮಾತ್ರ ಕಡಿಮೆಯಾಗಿಲ್ಲ. ಅವರ ಕೈಯಲ್ಲಿ ಸದ್ಯ ಜೈಲರ್, ಲಾಲ್ ಸಲಾಂ ಮುಂತಾದ ಸಿನಿಮಾಗಳಿವೆ. ‘ಬಾಬಾ’ ಮರು ಬಿಡುಗಡೆ ಮಾಡಲಾಗಿದ್ದು, ಹೊಸ ತಂತ್ರಜ್ಞಾನ ಬಳಸಿ ಸಿನಿಮಾವನ್ನು ಬಿಡುಗಡೆ ಮಾಡಲಾಗಿದೆ. ಇನ್ನು ಚಿತ್ರದಲ್ಲಿ ರಜನಿಕಾಂತ್ ಅವರಿಗೆ 2 ಶೇಡ್ ನ ಪಾತ್ರವಿದ್ದು, ಇದ್ಕಕೆ ತಲೈವಾ ಹೊಸದಾಗಿ ಡಬ್ಬಿಂಗ್ ಸಹ ಮಾಡಿದ್ದಾರೆ.

12 ಡಿಸೆಂಬರ್ 1950ರಂದು ಬೆಂಗಳೂರಿನಲ್ಲಿ ಜನಿಸಿದ ರಜನಿಕಾಂತ್ ಮರಾಠಿ ಕುಟುಂಬಕ್ಕೆ ಸೇರಿದವರು. ಬೆಂಗಳೂರಿನ ಹನುಮಂತನಗರದಲ್ಲಿ ನೆಲೆಸಿದ್ದ ಇವರ ಮೂಲ ಹೆಸರು ಶಿವಾಜಿರಾವ್ ಗಾಯಕ್ ವಾಡ್.

ಕಾಲೇಜು ಶಿಕ್ಷಣ ಮುಗಿಸಿದ ರಜನಿ ಕಂಡಕ್ಟರ್ ಆಗಿ ವೃತ್ತಿಜೀವನ ಆರಂಭಿಸಿದರು. ಆದರೆ, ಅವರಿಗಿದ್ದ ಸಿನಿಮಾದ ಸೆಳೆತ ಮದ್ರಾಸ್​ಗೆ ತೆರಳಿ ಅಲ್ಲಿ ಆ್ಯಕ್ಟಿಂಗ್ ತರಬೇತಿ ಪಡೆಯುವಂತೆ ಮಾಡಿತು.

1975ರಲ್ಲಿ ಬಿಡುಗಡೆಯಾದ ‘ಅಪೂರ್ವ ರಾಗಂಗಳ್’ ಚಿತ್ರದ ಮೂಲಕ ನಟನೆ ಪ್ರಾರಂಭಿಸಿದ ರಜನಿಕಾಂತ್ 160ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿದ್ದಾರೆ. ತಲೈವಾ ಅವರಿಗೆ ಅಪಾರ ಸಂಖ್ಯೆಯ ಅಭಿಮಾನಿ ಬಳಗವಿದ್ದು, 66 ಸಾವಿರ ನೋಂದಾಯಿತ ಅಭಿಮಾನಿ ಸಂಘಗಳನ್ನು ಹೊಂದಿದ್ದಾರೆ.

6 ಫಿಲ್ಮ್ ಫೇರ್ ಅವಾರ್ಡ್ ಜೊತೆಗೆ ಪದ್ಮಭೂಷಣ ಹಾಗೂ ಪದ್ಮವಿಭೂಷಣ ಪ್ರಶಸ್ತಿಗೆ ಭಾಜನರಾದ ರಜನಿಕಾಂತ್ ವಿಶ್ವ ಶ್ರೇಷ್ಠ ನಟನಾಗಿ ಖ್ಯಾತಿ ಗಳಿಸಿದ್ದಾರೆ.

Related post

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ : ಎಲ್ಲಾ ಕಛೇರಿಗಳಿಗೂ ಬೀಳುತ್ತೆ ಬೀಗ..!

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ…

ನ್ಯೂಸ್ ಆ್ಯರೋ : ಇನ್ನೆರಡೇ ದಿನಗಳು ಅಂದರೆ ಏಪ್ರಿಲ್ 26ರಂದು ಲೋಕಸಭಾ ಚುನಾವಣೆಗೆ ಮೊದಲ ಹಂತದ ಮತದಾನ ನಡೆಯಲಿದ್ದು, ಅಂದು ಎಲ್ಲಾ ಕಾರ್ಮಿಕರು, ಅರ್ಹ ಮತದಾರರು ಮತದಾನ ಮಾಡುವ…
ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮಲ್ಲಿ ಇಂದು ಚುರುಕುತನವನ್ನು ನೋಡಬಹುದು. ನಿಮ್ಮ ಆರೋಗ್ಯವು ಇಂದು ನಿಮ್ಮನ್ನು ಸಂಪೂರ್ಣವಾಗಿ ಬೆಂಬಲಿಸುತ್ತದೆ. ನಿಮ್ಮ ಹೂಡಿಕೆಗಳು ಬಗ್ಗೆ ನಿಮ್ಮ ಭವಿಷ್ಯದ ಗುರಿಗಳ ಬಗ್ಗೆ ರಹಸ್ಯಮಯವಾಗಿರಿ. ಮನೆ ಅಥವಾ ಸಾಮಾಜಿಕ…
ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮ ಕೋಪ ಕಡ್ಡಿಯನ್ನು ಗುಡ್ಡ ಮಾಡಬಹುದು-ಇದು ನಿಮ್ಮ ಕುಟುಂಬದ ಸದಸ್ಯರ ಅಸಮಾಧಾನಕ್ಕೆ ಕಾರಣವಾಗುತ್ತದೆ. ಕೋಪವನ್ನು ನಿಯಂತ್ರಣದಲ್ಲಿಡುವುದನ್ನು ಕಲಿತ ಆ ಮಹಾನ್ ಆತ್ಮಗಳೇ ಅದೃಷ್ಟಶಾಲಿಗಳು. ನಿಮ್ಮ ಕೋಪ ನಿಮ್ಮನ್ನು ಸುಡುವ…

Leave a Reply

Your email address will not be published. Required fields are marked *